Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ - Vistara News

ಹುಬ್ಬಳ್ಳಿ

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Neha Murder case : ಹುಬ್ಬಳ್ಳಿಯಲ್ಲಿ ಪಾಗಲ್‌ ಪ್ರೇಮಿಯ ಅಟ್ಟಹಾಸಕ್ಕೆ ಕಾಲೇಜು ವಿದ್ಯಾರ್ಥಿನಿ ಹಾಡಹಗಲೇ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಳು. ಈ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇತ್ತ ನೇಹಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕಣ್ಣೀರ ಕೋಡಿ ಹರಿಸಿದ್ದಾರೆ.

VISTARANEWS.COM


on

Neha Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ (Neha Murder Case) ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು. ಪ್ರತಿಭಟನಾಕಾರರಿಂದ ದುಃಖ, ಆಕ್ರೋಶ ಎಲ್ಲವೂ ಒಟ್ಟೊಟ್ಟಿಗೆ ಬಂದಿತ್ತು. ನೇಹಾಳನ್ನು ಕೊಂದ ಆರೋಪಿ ಫಯಾಜ್‌ ವಿರುದ್ಧ ಶೂಟೌಟ್ ಆರ್ಡರ್‌ ಮಾಡಿ, ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ರಸ್ತೆ ತಡೆದು ಆಕ್ರೋಶ

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು. ಬೆಳಗಾವಿಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂಕೇಶ್ವರ-ಸವದತ್ತಿ ಹೆದ್ದಾರಿ ತಡೆದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜೆಡಿಎಸ್ ನಾಯಕ ಸೌರಬ್ ಛೋಪ್ರಾ ವಿರೂಪಾಕ್ಷ ಮಾಮನಿ ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸಲು ಒತ್ತಾಯಿಸಿದಲ್ಲದೇ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎದುರು ದಲಿತ ವಿಮೋಚನಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೊಲೆಗಡುಕನಿಗೆ ಕಠಿಣ ಶಿಕ್ಷೆ ನೀಡಬೇಕು, ಎನ್‌ಕೌಂಟರ್ ಮಾಡಿ ಎಂದು ಘೋಷಣೆ ಕೂಗಿದರು. ಹುಬ್ಬಳ್ಳಿ- ಧಾರವಾಡ‌ ರಸ್ತೆ ಸಂಚಾರ ಬಂದ್ ಮಾ‌ಡಿ‌ ಕಿಡಿಕಾರಿದರು. ಇತ್ತ ಹತ್ಯೆ ಖಂಡಿಸಿ ರಾಯಚೂರು ‌ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ ನಡೆಸಿತು. ಕಾಲೇಜು ಕ್ಯಾಂಪಸ್ ಬಳಿ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದಲ್ಲದೆ, ಪ್ರಕರಣವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು.

ಬಳ್ಳಾರಿಯ ರೈಲ್ವೇ ನಿಲ್ದಾಣದ ಪಕ್ಕ ಇರುವ ಗಾಂಧಿ ಪ್ರತಿಮೆ ಬಳಿ ವಿವಿಧ ಸಂಘಟನೆಯ ನೂರಾರು ಸದಸ್ಯರಿಂದ ಪ್ರತಿಭಟಿಸಿದರು. ಆರೋಪಿ ಫಯಾಜ್‌ನನ್ನು ಗಲ್ಲಿಗೆ ಏರಿಸುವಂತೆ ಒತ್ತಾಯಿಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೂಡಲೇ ಕೊಲೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್ ಮಾಡಬೇಕು ಎಂದು ವೀರಶೈವ ಸಮಾಜದ ಮುಖಂಡ ಮಹೇಶ್ವರ ಸ್ವಾಮಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಯಾವ ದಾಕ್ಷಿಣ್ಯ ಇಟ್ಟುಕೊಳ್ಳದೇ ಮುಕ್ತ ವಿಚಾರಣೆ ಆಗಲಿ

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದರು. ಈ ಕೊಲೆ ನಿಜಕ್ಕೂ ದುರಂತದ ಘಟನೆ ನಾನು ಸಿಸಿಟಿವಿಯನ್ನು ನೋಡಿದ್ದೇನೆ. ಚಾಕು ಇರಿದಾಗ ಈ ಹುಡುಗಿಯ ನೋವು ಹೇಗಿರಬಹುದು? ಅದನ್ನ ನೋಡಿದ ತಂದೆ ಮತ್ತು ತಾಯಿಗೆ ಹೇಗೆ ಸಂಕಟ ಆಗಿರಬಹುದು. ಯಾವ ದಾಕ್ಷಿಣ್ಯ ಇಟ್ಟುಕೊಳ್ಳದೇ ಪೊಲೀಸರು ಮುಕ್ತವಾಗಿ ವಿಚಾರಣೆ ನಡೆಸಬೇಕು. ಒಂದೊಂದು ಜೀವವೂ ಕೂಡ ಅಮೂಲ್ಯ, ಈ ರೀತಿಯ ದುರುಳರಿಗೆ ಕಠಿಣ ಶಿಕ್ಷೆಯಾಗಬೇಕು. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

ಮುದ್ದು ಮಗಳಿಗೆ ಕಣ್ಣೀರ ವಿದಾಯ

ಬಸವ ನಗರದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಅಂತಿಮ ಯಾತ್ರೆ ಮೂಲಕ ಮಂಟೂರು ರಸ್ತೆಯಲ್ಲಿರುವ ಸ್ಮಶಾನಕ್ಕೆ ಪಾರ್ಥಿವ ಶರೀರ ತರಲಾಯಿತು. ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿವಿಧಾನದ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ ನೇಹಾ ತನ್ನ ಸಹಪಾಠಿ ಫಯಾಜ್‌ನಿಂದಲೇ ಹತ್ಯೆಗಿಡಾಗಿದ್ದಳು. ವೀರಶೈವ ಜಂಗಮ ವಿಧಿವಿಧಾನಗಳಂತೆ ನೇಹಾ ಹಿರೇಮಠ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ.

ಬಿಕ್ಕಿ ಬಿಕ್ಕಿ ಅತ್ತ ದಿಂಗಾಲೇಶ್ವರ ಸ್ವಾಮೀಜಿ

ಇಂತಹ ಹೇಯ ಕೃತ್ಯವನ್ನು ಖಂಡಿಸುತ್ತೇನೆ, ಯಾವುದೇ ಕಾರಣಕ್ಕೂ ಈ ರೀತಿ ಘಟನೆ ನಡೆಯಬಾರದು. ನೇಹಾ ಅಪ್ಪಟ ನನ್ನ ಭಕ್ತಲಾಗಿದ್ದಳು, ಐಎಎಸ್ ಆಗಬೇಕು ನೀನು ಎಂದು ಹೇಳಿದ್ದೆ. ಆದರೆ ಇಂತಹ ಘಟನೆಯಿಂದ ಏನು ಹೇಳಬೇಕು ಎನ್ನುವುದೇ ನನಗೆ ತಿಳಿಯುತ್ತಿಲ್ಲ. ತಕ್ಷಣವೇ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಮೃತ ನೇಹಾಳನ್ನು ನೆನೆದು ದಿಂಗಾಲೇಶ್ವರ ಸ್ವಾಮೀಜಿ ಬಿಕ್ಕಿ ಬಿಕ್ಕಿ ಅತ್ತರು. ಇದೇ ವೇಳೆ ಮೂರು ಸಾವಿರ ಮಠದ ಶ್ರೀ ಗುರುಸಿದ್ದರಾಜಯೋಗಿಂದ್ರ ಸ್ವಾಮೀಜಿ ನೇಹಾಳ ಅಂತಿಮ ದರ್ಶನ ಪಡೆದರು.

ಮನೆ ಖಾಲಿ ಮಾಡಿದ ಆರೋಪಿ ಕುಟುಂಬಸ್ಥರು

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನವಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಇತ್ತ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯ ಮುನವಳ್ಳಿಯ ಸಾಯಿನಗರದಲ್ಲಿರುವ ಆರೋಪಿ ಫಯಾಜ್‌ ಮನೆಗೆ ಬಿಗಿ ಭದ್ರತೆ ವಹಿಸಲಾಗಿತ್ತು. ಪೊಲೀಸರ ಸೂಚನೆ ಮೇರೆಗೆ ಮನೆ ಖಾಲಿ ಮಾಡಿ ಫಯಾಜ್‌ ಕುಟುಂಬಸ್ಥರು ಸಂಬಂಧಿಕರ ಮನೆಗೆ ತೆರಳಿದರು. ಆರೋಪಿಯ ಮನೆಯ ಬಳಿ ಓರ್ವ ಎಎಸ್ಐ, ಪೇದೆ ನೇಮಕ ಮಾಡಲಾಗಿತ್ತು.

ಇದನ್ನೂ ಓದಿ:Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ಕಾಲೇಜು ಕ್ಯಾಂಪೆಸ್‌ನಲ್ಲೇ ಅಟ್ಯಾಕ್‌ ಮಾಡಿ ಕೊಂದಿದ್ದ

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇತ್ತ ಹತ್ಯೆ ಮಾಡಿ ಎಸ್ಕೇಪ್‌ ಆಗುತ್ತಿದ್ದ ಫಯಾಜ್‌ನನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಫ್ಲೈ-91 ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ: ಹುಬ್ಬಳ್ಳಿ ಆಗಸದಲ್ಲಿ ಪ್ರಯಾಣಿಕರ ತಳಮಳ

VISTARANEWS.COM


on

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಫ್ಲೈ-91 (Fly91) ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಕಾಣಿಸಿಕೊಂಡಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರು ಎರಡು ಗಂಟೆಗಳ ಕಾಲ ಆಗಸದಲ್ಲೇ ಜೀವ ಬಿಗಿಹಿಡಿದು ಕುಳಿತುಕೊಳ್ಳುವಂತಾದ ಘಟನೆ ನಡೆದಿದೆ. ಮಂಗಳವಾರ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 ಸಂಖ್ಯೆಯ ವಿಮಾನವು ನಿಗದಿತ ಸಮಯದಂತೆ 6:50ಕ್ಕೆ ಹುಬ್ಬಳ್ಳಿ ತಲುಪಿತ್ತಾದರೂ, ತಾಂತ್ರಿಕ ಕಾರಣಗಳಿಂದಾಗಿ ರನ್‌ವೇ ಮೇಲೆ ಇಳಿಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ವಿಮಾನವು ಸತತ ಎರಡು ಗಂಟೆಗಳ ಕಾಲ ನಗರದ ಆಗಸದಲ್ಲೇ ಸುತ್ತಾಟ ನಡೆಸಬೇಕಾಯಿತು, ಅಂತಿಮವಾಗಿ ರಾತ್ರಿ 9:15ಕ್ಕೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು.

ಕೇವಲ ಐದು ದಿನಗಳ ಅಂತರದಲ್ಲಿ ಫ್ಲೈ-91 ಸಂಸ್ಥೆಯ ವಿಮಾನಕ್ಕೆ ಎದುರಾದ ಎರಡನೇ ಲ್ಯಾಂಡಿಂಗ್ ಸಮಸ್ಯೆ ಇದಾಗಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ವಾರವಷ್ಟೇ ಹೈದರಾಬಾದ್‌ನಿಂದ ಬಂದಿದ್ದ ಇದೇ ಸಂಸ್ಥೆಯ ವಿಮಾನವು ಹವಾಮಾನ ವೈಪರಿತ್ಯದ ನೆಪವೊಡ್ಡಿ ಮೂರು ಗಂಟೆಗಳ ಕಾಲ ಹಾರಾಟ ನಡೆಸಿತ್ತು. ಆದರೆ ಮಂಗಳವಾರದ ಘಟನೆಯ ವೇಳೆ ವಿಮಾನ ನಿಲ್ದಾಣದಲ್ಲಿ ಹವಾಮಾನವು ಸಹಜವಾಗಿಯೇ ಇತ್ತು. ಅದೇ ಸಮಯದಲ್ಲಿ ಇತರ ಸಂಸ್ಥೆಗಳ ವಿಮಾನಗಳು ಯಾವುದೇ ಅಡೆತಡೆಯಿಲ್ಲದೆ ಟೇಕಾಫ್ ಮತ್ತು ಲ್ಯಾಂಡಿಂಗ್ ನಡೆಸುತ್ತಿದ್ದುದು, ಫ್ಲೈ-91 ವಿಮಾನಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಅನುಮಾನಗಳನ್ನು ಹುಟ್ಟುಹಾಕಿದೆ.

ವಿಮಾನವು ಆಗಸದಲ್ಲೇ ಗಿರಕಿ ಹೊಡೆಯುತ್ತಿದ್ದಾಗ ಒಳಗಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿ ದೇವರ ಮೊರೆ ಹೋಗಿದ್ದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗುವವರೆಗೆ ಪ್ರಯಾಣಿಕರು ಅನುಭವಿಸಿದ ಮಾನಸಿಕ ಒತ್ತಡವು ವಿಮಾನ ನಿಲ್ದಾಣದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಮಾನಯಾನ ಸಂಸ್ಥೆಯ ನಿರ್ವಹಣಾ ಲೋಪವೇ ಅಥವಾ ತಾಂತ್ರಿಕ ದೋಷವೇ ಎಂಬ ಪ್ರಶ್ನೆ ಕಾಡುತ್ತಿದ್ದು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ ಬಗ್ಗೆ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest15 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest20 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest20 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌