ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದಲ್ಲಿ (Neha Murder Case) ರಾಜ್ಯ ಸರ್ಕಾರ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಲಿ. ತುಷ್ಟೀಕರಣದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಕಾಲೇಜ್ ಕ್ಯಾಂಪಸ್ ಅಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕಾರಣದಲ್ಲಿ ಸರ್ಕಾರ ದಿಕ್ಕು ತಪ್ಪಿಸದಿರಲಿ ಎಂದು ಹೇಳಿದರು.
ಇದನ್ನೂ ಓದಿ: Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ, ಹಿಂದೂ ಸಂಘಟನೆಗಳಿಂದ ಮನವಿ
ಮಗಳ ಹತ್ಯೆ ಲವ್ ಜಿಹಾದ್ ಪ್ರಕರಣ ಎಂಬ ಬಗ್ಗೆ ನೇಹಾ ಕುಟುಂಬವೇ ಬಲವಾದ ಶಂಕೆ ವ್ಯಕ್ತಪಡಿಸುತ್ತಿದೆ. ಫಯಾಜ್ ಜತೆ ಇನ್ನೂ ನಾಲ್ವರು ಇದ್ದಾರೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಅವರೇ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಇಬ್ಬರೂ ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ಎಂದು ಹೇಳಿದ್ದಾರೆ. ಏನು ಹೇಳುತ್ತಿದ್ದಾರೆ ಇವರು? ಪ್ರಕರಣಕ್ಕೆ ಯಾವ ವೇ ತೋರುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ಈ ಹಿಂದಿನ ಘಟನಾವಳಿಗಳಲ್ಲೂ ಇದೇ ರೀತಿ ಸತ್ಯಾಸತ್ಯತೆಯನ್ನೇ ಅಲ್ಲಗಳೆಯುವ ರೀತಿ ವರ್ತನೆ ತೋರಿದರು. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿಯೇ ಇಲ್ಲ ಎಂದರು, ಎಫ್‌ಎಸ್‌ಎಲ್ ವರದಿ ಬಂದು ದೃಢಪಡಿಸಿದರೂ ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ ಇವರು ಎಂದು ಆರೋಪಿಸಿದ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಿಲೆಂಡರ್ ಸ್ಫೋಟ ಎಂಬ ಬಣ್ಣ ಬಳಿಯಲು ಮುಂದಾಗಿದ್ದರು. ಈಗ ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸಲ್ಲೂ ಅದೇ ರೀತಿ ವರ್ತನೆ ತೋರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಹರಿಹಾಯ್ದರು.
ಇದನ್ನೂ ಓದಿ: Tata Motors: ಮ್ಯಾಜಿಕ್ ಬೈ-ಫ್ಯುಯೆಲ್ ವ್ಯಾನ್ ಬಿಡುಗಡೆ ಮಾಡಿದ ಟಾಟಾ ಮೋಟರ್ಸ್
ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್‌ಗಾಗಿ ಸತ್ಯ ಮರೆ ಮಾಚುವ ಯತ್ನ ನಡೆಸುತ್ತಿದ್ದು, ತುಷ್ಟೀಕರಣದ ರಾಜಕಾರಣದಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದರು.