Site icon Vistara News

Physical Abuse : ನೌಕರಿ ಆಮಿಷ ತೋರಿಸಿ ಮಂಚಕ್ಕೆ ಕರೆದ ಹುಬ್ಬಳ್ಳಿಯ ರೈಲ್ವೆ ಇಲಾಖೆ ಕ್ಲರ್ಕ್!

ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೆ ಇಲಾಖೆ (physical Abuse) ಕ್ಲರ್ಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿದೆ. ನೌಕರಿ ಆಮಿಷ ತೋರಿಸಿ ಮಂಚಕ್ಕೆ ಕರೆದಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ. ಕ್ಲರ್ಕ್ ನದೀಂ ಎಂಬಾತ ವಿರುದ್ಧ ಕೇಶ್ವಾಪುರದ ಮಹಿಳೆ ದೂರು ನೀಡಿದ್ದಾರೆ.

ರೈಲ್ವೆ ಇಲಾಖೆ ನೌಕರಿ ಬೇಕು ಅಂದರೆ ಮಂಚ ಏರಬೇಕೆಂದು ಕಿರುಕುಳ ನೀಡಿದ್ದಾನೆ. ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳ ಗೆಸ್ಟ್ ಹೌಸ್‌ಗೆ ಈ ನದೀಂ ಕರೆದಿದ್ದನಂತೆ. ಸದ್ಯ ನದೀಂ ವಿರುದ್ಧ ಕೇಶ್ವಾಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಗೆಸ್ಟ್ ಹೌಸ್‌ನಲ್ಲಿದ್ದ ನದೀಂನನ್ನು ಸ್ಥಳೀಯರು ಕೂಡಿಹಾಕಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಕೇಶ್ವಾಪುರ ಠಾಣೆ ಪೊಲೀಸರು ನದೀಂನನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಅತ್ಯಾಚಾರ ಆರೋಪ ವಿದೇಶಿ ಮಹಿಳೆಯಿಂದ ದೂರು

ಚಿಕ್ಕಮಗಳೂರು: ಅತ್ಯಾಚಾರದ ಆರೋಪದ (Physical Abuse) ಮೇಲೆ ಯೋಗ ಗುರು ಬಂಧನವಾಗಿದೆ. ಪ್ರದೀಪ್ ಉಲ್ಲಾಳ್ (53) ಬಂಧಿತ ಆರೋಪಿ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಉಲ್ಲಾಳ್ ಮಲ್ಲೇನಹಳ್ಳಿಯಲ್ಲಿ ಯೋಗ ಶಾಲೆ ನಡೆಸುತ್ತಿದ್ದ. ಯೋಗ ತರಬೇತಿಗೆಂದು ಕ್ಯಾಲಿಫೋರ್ನಿಯಾದಿಂದ ಮಹಿಳೆಯೊಬ್ಬರು ಬಂದಿದ್ದರು.

ಕಳೆದ 4 ವರ್ಷದಿಂದಲೂ ಯೋಗ ಗುರು ಜತೆ ಮಹಿಳೆ ಸಂಬಂಧ ಹೊಂದಿದ್ದರು. ಬೇರೆ ಮಹಿಳೆಯರ ಜತೆಯೂ ಗುರುವಿನ ಸಂಬಂಧ ತಿಳಿದ ಮಹಿಳೆ ಜಗಳವಾಡಿದ್ದರು. ವಿದೇಶಿ ಮಹಿಳೆಯಿಂದ ಯೋಗ ಗುರು ಪ್ರದೀಪ್‌ ಸುಮಾರು 20 ಲಕ್ಷ ರೂ. ಹಣ ಕಿತ್ತಿದ್ದ ಎಂಬ ಆರೋಪವು ಇದೆ. ಇದೇ ವಿಚಾರವಾಗಿ ಯೋಗ ಗುರು ಹಾಗು ಕ್ಯಾಲಿಫೋರ್ನಿಯಾ ಮಹಿಳೆಗೂ ಜಗಳವಾಗಿತ್ತು.

ವಿದೇಶಿ ಮಹಿಳೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗ ಗುರುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Gold Smuggling: ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ; ಶ್ರೀಲಂಕಾದಿಂದ ಬಂದವರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲಾಕ್‌

ಅರ್ಥವಾಗದ ಪಾಠವನ್ನು ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಕರೆಸಿ ಅತ್ಯಾಚಾರವೆಸಗಿದ ಉಪನ್ಯಾಸಕ

ಶಿವಮೊಗ್ಗ : ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಉಪನ್ಯಾಸಕನೊಬ್ಬ ಮದುವೆ ಆಗುವುದಾಗಿ (Physical Abuse) ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನಾಗಿರುವ ಪುನೀತ್ ಬಂಧಿತ ಆರೋಪಿಯಾಗಿದ್ದಾನೆ.

ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ
ಸ್ನೇಹ ಬೆಳೆಸಿದ್ದ. ಸ್ನೇಹ ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಅತ್ಯಾಚಾರ ಕುರಿತು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಉಪನ್ಯಾಸಕ ಪುನೀತ್ ವಶಕ್ಕೆ ಪಡೆದ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

Exit mobile version