ಹುಬ್ಬಳ್ಳಿ ಅಪಘಾತ: ಮಡಿದವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ - Vistara News

ಹುಬ್ಬಳ್ಳಿ

ಹುಬ್ಬಳ್ಳಿ ಅಪಘಾತ: ಮಡಿದವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹುಬ್ಬಳ್ಳಿಯ ಭೀಕರ ಅಪಘಾತದಲ್ಲಿ ಮರಣ ಹೊಂದಿದವರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ.

VISTARANEWS.COM


on

PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಭವಿಸಿದ ಅಪಘಾತದಿಂದ ಇಲ್ಲಿವರೆಗೆ 8 ಜನರು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಸಂತ್ರಸ್ತ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಕುರಿತು ಮೋದಿ ಟ್ವೀಟ್‌ ಮಾಡಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡವರಿಗೆ ₹50 ಸಾವಿರ ನೀಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ʼಹುಬ್ಬಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಗಳಿಗೆ ಪಿಎಂಎನ್‌ಆರ್‌ಎಫ್‌ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೂ ತಲಾ 50,000 ರೂ. ನೀಡಲಾಗುವುದು.ʼ ಎಂದು ಕನ್ನಡದಲ್ಲಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಲಾರಿ-ಖಾಸಗಿ ಬಸ್‌ ಡಿಕ್ಕಿಯಾಗಿ 8 ಮಂದಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಛತ್ರಿ ಇಲ್ಲದೇ ಹೊರಗೆ No Entry; ಇದು ಸೂರ್ಯನ ಟಾರ್ಚರ್‌

Dry Weather: ಉತ್ತರ ಒಳನಾಡಿನಿಂದ ದಕ್ಷಿಣ ಒಳನಾಡವರೆಗೂ, ಕರಾವಳಿಯಿಂದ ಮಲೆನಾಡವರೆಗೆ ಗರಿಷ್ಠ ತಾಪಮಾನ ಏರಿಕೆ ಆಗಲಿದೆ ಎಂದು ಹವಾಮಾನ ತಜ್ಞರು (Karnataka Weather Forecast) ಸೂಚಿಸಿದ್ದಾರೆ.

VISTARANEWS.COM


on

By

Dry weather likely to prevail over the State
Koo

ಬೆಂಗಳೂರು: ಸೂರ್ಯ ನೆತ್ತಿಗೆ ಬರುವ ಮುನ್ನವೇ ಜನರು ಹೊರಗಿನ ಕೆಲಸವನ್ನೆಲ್ಲ ಮುಗಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಕಾಲಿಟ್ಟರೆ ಸುಡುವ ಸೂರ್ಯನನ್ನು ಹೆದರಿಸಲು ಕೈಯಲ್ಲಿ ಛತ್ರಿ ಹಿಡಿದೆ ಹೊರಬರಬೇಕು ಎಂಬಂತಾಗಿದೆ. ಗರಿಷ್ಠ ತಾಪಮಾನ ಏರಿಕೆಗೆ ಎಲ್ಲ ವಯೋಮಾನದವರು ತತ್ತರಿಸಿ ಹೋಗಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಸಾಮಾನ್ಯಕ್ಕಿಂತ ತಾಪಮಾನ ದುಪ್ಪಟ್ಟು ಆಗಲಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಪಟ್ಟು ಹೆಚ್ಚಾಗಲಿದೆ. ಇನ್ನೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.

ರಾಜಧಾನಿಯಲ್ಲೂ ಬಿಸಿಲ ಧಗೆ

ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಮಧ್ಯಾಹ್ನ ಸಮಯ ಬಿಸಿಲ ಧಗೆ ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Drowned in Pond : ಕೃಷಿ ಹೊಂಡಕ್ಕೆ ಬಿದ್ದು ಮೂವರು ಸಾವು; ದೇವರ ಊಟ ಮಾಡಿ ಕೈ ತೊಳೆಯುವಾಗ ದುರಂತ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 35 ಡಿ.ಸೆ – 21 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Road Accident : ಟೆಂಪೋಗೆ ಸ್ಕೂಟರ್‌ ಡಿಕ್ಕಿ; ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

Road Accident : ಸ್ಕೂಟ‌ರ್ ಮತ್ತು ಟೆಂಪೋ ಮಧ್ಯೆ ಅಪಘಾತ ಸಂಭವಿಸಿದೆ. ಸ್ಕೂಟರ್‌ ಓಡಿಸುತ್ತಿದ್ದ ಯುವಕ ಮೃತಪಟ್ಟರೆ, ಜತೆಗಿದ್ದ ತಾಯಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Scooter collides with tempo Son dies in front of mother
Koo

ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.

ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್‌ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಅಮ್ಮ-ಮಗ ಸ್ಕೂಟರ್‌ನಲ್ಲಿ ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೆಂಪೋಗೆ ಸ್ಕೂಟರ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅಪಘಾತದಲ್ಲಿ ಗಾಯಗೊಂಡ ಮುಫ್ರೀನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

ಹೊಲದಲ್ಲಿ ನೇಣಿಗೆ ಶರಣಾದ ಕೊಪ್ಪಳದ ರೈತ

ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ಘಟನೆ ನಡೆದಿದೆ. ದ್ಯಾಮ ನಾಯಕ (30) ಮೃತ ದುರ್ದೈವಿ.

ದ್ಯಾಮ ನಾಯಕ ಬ್ಯಾಂಕ್, ಸ್ವ ಸಹಾಯ ಗುಂಪಿನಲ್ಲಿ 40 ಸಾವಿರ ಸಾಲ ಮಾಡಿದ್ದರು. ಸಾಲ ತೀರಿಸಲು ಆಗದೇ ಮನನೊಂದಿದ್ದ. ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕುರಿಗಾಹಿಗೆ ಥಳಿತ

ಸಂಚಾರಿ ಕುರಿಗಾಹಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊನ್ನಪ್ಪ ಕುರಿ ಎನ್ನುವ ಕುರಿಗಾಹಿ ಮೇಲೆ ಕೀರೆಸೂರು ಗ್ರಾಮದ ವೆಂಕಟೇಶ್‌ ಸೋಮನಗೌಡ್ರ ಎಂಬಾತ ಹಲ್ಲೆ ನಡೆಸಿದ್ದಾನೆ. ಹೊಲದಲ್ಲಿ ಕುರಿ ಮೇಯಿಸಿದ ಎಂಬ ಕಾರಣಕ್ಕೆ ಕೋಲಿನಿಂದ ಥಳಿಸಿದ್ದಾನೆ. ಸದ್ಯ ಗಾಯಾಳು ಹೊನ್ನಪ್ಪ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಕುರುಬರಿಗೆ ಎಸ್‌ಟಿ ಮೀಸಲಾತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಪ್ರಲ್ಹಾದ್‌ ಜೋಶಿ ಭರವಸೆ

ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಧಾರವಾಡ ಲೋಕಸಭಾ ಕ್ಷೇತ್ರದ ಕುರುಬ ಸಮುದಾಯದ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿದ್ದಾರೆ.

VISTARANEWS.COM


on

Pralhad Joshi
Koo

ಹುಬ್ಬಳ್ಳಿ: ಕುರುಬ ಸಮುದಾಯ ಕರ್ನಾಟಕದಲ್ಲಿ ಮೂರನೇ ಅತಿದೊಡ್ಡ ಸಮುದಾಯವಾಗಿದೆ. ಹೀಗಾಗಿ ಕುರುಬರಿಗೆ ಎಸ್‌ಟಿ ಮೀಸಲಾತಿ (ST Reservation) ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಭರವಸೆ ನೀಡಿದರು.

ನಗರದಲ್ಲಿ ಶನಿವಾರ ನಡೆದ ಧಾರವಾಡ ಲೋಕಸಭಾ ಕ್ಷೇತ್ರದ ಕುರುಬ ಸಮುದಾಯದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಕೊಡುವ ಸಂಬಂಧ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಹೇಳಿದರು.

ಪಕ್ಷದಲ್ಲಿ ಸ್ಥಾನಮಾನ ಕಲ್ಪಿಸಿದೆ

ಕುರುಬ ಸಮಾಜದವರಿಗೆ ಈಗಾಗಲೇ ಬಿಜೆಪಿಯಲ್ಲಿ ವಿವಿಧ ಸ್ಥಾನಮಾನಗಳನ್ನು ನೀಡಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸ್ಥಾನಮಾನಗಳನ್ನು ಪಕ್ಷದೊಳಗೆ ಕಲ್ಪಿಸುತ್ತೇವೆ ಎಂದೂ ಸಚಿವ ಜೋಶಿ ತಿಳಿಸಿದರು.

ಹಿಂದೆ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಕಾಕಾ ಕಾಲೇಲ್ಕರ್​ ಹಾಗೂ ಮಂಡಲ್​ ವರದಿಯನ್ನು ತಿರಸ್ಕರಿಸಲಾಗಿತ್ತು. ಆದರೆ, ನಮ್ಮ ಕೇಂದ್ರ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸುವ ಮೂಲಕ ಒಬಿಸಿ ಸಮುದಾಯದ ಹಿತರಕ್ಷಣೆ ಮಾಡುತ್ತಿದೆ ಎಂದು ಹೇಳಿದರು.

ಕೇಂದ್ರದಲ್ಲಿ ಶೇ.60ರಷ್ಟು ಒಬಿಸಿ ಸಂಸದರಿದ್ದಾರೆ ಎಂದ ಸಚಿವರು, ಕುರುಬ ಸಮುದಾಯಕ್ಕೆ ಆದಾಯ ಪ್ರಮಾಣ ಪತ್ರದ ಮಿತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸಿದ್ದೇವೆ. ಇನ್ನು ಕನಕ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಕುರುಬ ಸಮುದಾಯಕ್ಕೆ ಕೇಂದ್ರದಿಂದ ಸಲ್ಲಬೇಕಾದ ಸೌಲಭ್ಯಗಳನ್ನು ಯಾವುದೇ ತಾರತಮ್ಯವಿಲ್ಲದೆ ಪ್ರಾಮಾಣಿಕವಾಗಿ ತಲುಪಿಸುವ ಹೊಣೆ ತಮ್ಮದು ಎಂದು ಆಶ್ವಾಸನೆ ನೀಡಿದ ಅವರು, ಕುರುಬ ಸಮುದಾಯ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ವಿಭಿನ್ನ ರೀತಿಯಲ್ಲಿ ನೀಡುತ್ತಾ ಬಂದಿದೆ. ಇಂಥ ಸಮುದಾಯದ ಏಳಿಗೆಗೆ ಓರ್ವ ಜನಪ್ರತಿನಿಧಿಯಾಗಿ ಸಹಕರಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.

ಇದನ್ನೂ ಓದಿ | Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮಾಜಿ ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ, ಸೀಮಾ ಮಸೂತಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಿಗಿ, ರಾಜ್ಯ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ರವಿ ತಂಡಿನ, ಹಾಲುಮತ ಸಮಾಜದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಸಮಾಜದ ಮುಖಂಡರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

ಸಿದ್ದರಾಮಯ್ಯ ಅಸಮರ್ಥ ಸಿಎಂ, ಇವ್ರಿಗೆ ರಾಜ್ಯದ ಆಂತರಿಕ ಭದ್ರತೆ ಕಾಪಾಡಲೂ ಸಾಧ್ಯವಾಗ್ತಿಲ್ಲ: ಪ್ರಲ್ಹಾದ್‌ ಜೋಶಿ ಕಿಡಿ

ಆಂತರಿಕ ಭದ್ರತೆ ಕಾಪಾಡಿಕೊಳ್ಳುವಲ್ಲಿ ಕಾಂಗ್ರೆಸ್, ವಿಫಲ ಆಡಳಿತ ಪಕ್ಷವಾಗಿರುವುದು ಮತ್ತೆ ಸಾಬೀತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ ಕಿಡಿಕಾರಿದ್ದಾರೆ.

VISTARANEWS.COM


on

Siddaramaiah is an incompetent CM says Pralhad Joshi
Koo

ಬೆಂಗಳೂರು: ರಾಜ್ಯದ ಆಂತರಿಕ ಭದ್ರತೆಯನ್ನೂ ಕಾಪಾಡಿಕೊಳ್ಳಲು ಕಾಂಗ್ರೆಸ್ ಅಶಕ್ತ ಮತ್ತು ಅಸಮರ್ಥವಾಗಿದೆ. ಸಿದ್ದರಾಮಯ್ಯ ಒಬ್ಬ ಅಸಮರ್ಥ ಸಿಎಂ ಆಗಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ‌ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ನಡೆದ ಸ್ಫೋಟದ (Blast in Bengaluru) ಬಗ್ಗೆ ಟ್ವಿಟ್ ಮಾಡಿರುವ ಸಚಿವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಆಂತರಿಕ ಭದ್ರತೆ ಕಾಪಾಡಿಕೊಳ್ಳುವಲ್ಲಿ ಕಾಂಗ್ರೆಸ್, ವಿಫಲ ಆಡಳಿತ ಪಕ್ಷವಾಗಿರುವುದು ಮತ್ತೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಪರಿಸ್ಥಿತಿ ಇಂದು ಎಲ್ಲಿಗೆ ಬಂದಿದೆ? ಎಂದರೆ ಜನ ಸದಾ ಆತಂಕದಲ್ಲೇ ಇರುವಂಥ ಸನ್ನಿವೇಶ ಕಾಂಗ್ರೆಸ್ ಆಡಳಿತದಲ್ಲಿ ಉದ್ಭವಿಸಿದೆ. ಶಾಸಕಾಂಗದ ದೇವಾಲಯ ಎಂದೇ ಕರೆಯಲ್ಪಡುವ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ‘ಕೈ’ ಎತ್ತಿ ಜೈಕಾರ ಕೂಗಿದರು. ಅದರ ಬೆನ್ನಲ್ಲೇ ಈಗ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ! ಇದು ನಿಜಕ್ಕೂ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಸ್ಥಿತಿಯನ್ನು ಉಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ | Blast in Bengaluru: ಬಾಂಬ್‌ ಇಟ್ಟು ಇಡ್ಲಿ ತಿಂದ; 1 ಗಂಟೆಗೆ ಟೈಮರ್‌ ಇಟ್ಟ: ಪಿನ್‌ ಟು ಪಿನ್‌ ಮಾಹಿತಿ ಬಿಚ್ಚಿಟ್ಟ ಡಿಕೆಶಿ

ಆಡಳಿತ ವೈಫಲ್ಯಕ್ಕೆ ʼಕೈ’ಗನ್ನಡಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸಮರ್ಥ ಆಡಳಿತ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಈ ಎರಡೂ ಪ್ರಕರಣಗಳು ಕೈಗನ್ನಡಿ. ಇನ್ನು ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಉಳಿಸಿಕೊಳ್ಳಲು ತೋರಿದ ದಕ್ಷತೆಯನ್ನು ರಾಜ್ಯದ ಆಂತರಿಕ ಭದ್ರತೆ ಬಗ್ಗೆ ತೋರಿಲ್ಲ. ರಾಜ್ಯ ಕಂಡ ಅತೀ ಅಸಮರ್ಥ ಆಡಳಿತಗಾರ ಎಂದರೆ ಅದು ಸಿದ್ದರಾಮಯ್ಯ ಎಂಬುದು ಇದರಿಂದ ಸಾಬೀಗುತ್ತಿದೆ ಎಂದು ಹರಿ ಹಾಯ್ದಿದ್ದಾರೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್;‌ NIA ತನಿಖೆಗೆ ಈಗಲೇ ಕೊಡಿ; ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

Blast in Bengaluru Rameswaram Cafe BY Vijayendra demands NIA investigation

ಬೆಂಗಳೂರು: ಇಲ್ಲಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು (Blast in Rameshwaram Cafe) ನಾಗರಿಕರನ್ನು ತಲ್ಲಣಗೊಳಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ರಾಜ್ಯ ಬಿಜೆಪಿ ಘಟಕದಿಂದ ಕಟುವಾಗಿ ಟೀಕೆಗಳು ವ್ಯಕ್ತವಾಗಿವೆ. ಇದು ರಾಜ್ಯ ಸರ್ಕಾರದ ವೈಫಲ್ಯ ಎಂದು ಕಿಡಿಕಾರಲಾಗಿದೆ. “ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ” ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೆ, ಈ ಪ್ರಕರಣದ ತನಿಖೆಯನ್ನು ಕೂಡಲೇ ಎನ್‌ಐಎಗೆ ವಹಿಸುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ‌ ಬಂದ‌ ಬಳಿಕ ಒಂದಾದ ಮೇಲೆ ಒಂದು ಸರಣಿ ಘಟನೆಗಳು ನಡೆಯುತ್ತಿವೆ. ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್‌ನಿಂದ ಹಿಡಿದು ಶಿವಮೊಗ್ಗದಲ್ಲಿ ಹಿಂದುಗಳ ಮನೆಗಳ ಮೇಲ ಕಲ್ಲು ತೂರುವವರೆಗೂ ನಡೆದಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ಮಾಜಿ ಶಾಸಕನ ಮನೆ ಮೇಲೆ ದಾಳಿ ನಡೆಯಿತು. ಅಮಾಯಕರ ಮೇಲೆ ಹಾಕಿರುವ ಕೇಸ್ ವಾಪಸ್ ಪಡೆಯಬೇಕೆಂದು ಆರೋಪಿಗಳ ಪರವಾಗಿ ಕಾಂಗ್ರೆಸ್ ಶಾಸಕರೇ ಮನವಿ ಮಾಡಿದ್ದಾರೆ. ಈಗ ಬೆಂಗಳೂರಿನಲ್ಲಿ ಸ್ಫೋಟ ಆಗಿದೆ. ಹಾಗಾಗಿ ಈ ಸ್ಫೋಟದ ತನಿಖೆಯನ್ನು ಕೂಡಲೇ ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಟ್ವಿಟರ್‌ನಲ್ಲೂ ಆಕ್ರೋಶ

ಇದಕ್ಕೂ ಮೊದಲು ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದ ಬಿ.ವೈ. ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸರ್ಕಾರವನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಗುಡುಗಿದ್ದರು. ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.

ಬಿ.ವೈ. ವಿಜಯೇಂದ್ರ ಪೋಸ್ಟ್‌ನಲ್ಲೇನಿದೆ?

“ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ.

ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣಿ ರೂಪದಲ್ಲಿ ವರದಿಯಾಗುತ್ತಲೇ ಇವೆ. ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಟಿಸಿದೆ.

ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಯನ್ನು ಬಗ್ಗುಬಡಿಯುವಲ್ಲಿ ಮೀನಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೆ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ” ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಕಾಂಗ್ರೆಸ್‌ದು ತುಘಲಕ್‌ ದರ್ಬಾರ್;‌ ಬಿಜೆಪಿ ಕಟು ಟೀಕೆ

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಬಗ್ಗೆ ಕರ್ನಾಟಕ ಬಿಜೆಪಿ ಘಟಕ ಕಿಡಿಕಾರಿದ್ದು, ಇದು ಕಾಂಗ್ರೆಸ್‌ನ ತುಘಲಕ್‌ ದರ್ಬಾರ್‌ನ ಪರಿಣಾಮವಾಗಿದೆ ಎಂದು ಹೇಳಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬಿಜೆಪಿ ಪೋಸ್ಟ್‌ ಮಾಡಿದೆ.

ಬಿಜೆಪಿ ಪೋಸ್ಟ್‌ನಲ್ಲೇನಿದೆ?

ಪಾ’ಕೈ’ಸ್ತಾನ್ ಜಿಂದಾಬಾದ್ ಎಂದವರ ರಕ್ಷಣೆ, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದವ ಬ್ರದರ್, ಡಿಜಿ ಹಳ್ಳಿ- ಕೆಜಿ ಹಳ್ಳಿಯ ಪಿಎಫ್ಐ ಗಲಭೆಕೋರರು ಅಮಾಯಕರು ಎನ್ನುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ತುಘಲಕ್ ದರ್ಬಾರಿನ ಪರಿಣಾಮವೇ ಇಂದು ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಲು ಕಾರಣ.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರಂತೂ ರಾಜ್ಯದಲ್ಲಿ ಅರಾಜಕತೆಯನ್ನೇ ಸೃಷ್ಟಿ ಮಾಡಿದ್ದಾರೆ. ಬಂಧಿತ ಭಯೋತ್ಪಾದಕರನ್ನು ಈಗಲೇ ಉಗ್ರರೆಂದು ಹೇಳಲು ಸಾಧ್ಯವಿಲ್ಲ ಎನ್ನುವ ಮೂಲಕ ಹಂತಕರ ರಕ್ಷಣೆಗೆ ಮೊದಲು ಬುನಾದಿ ಹಾಕಿದ್ದಾರೆ. ಅಧಿಕಾರಕ್ಕೆ ಬಂದ 9 ತಿಂಗಳಲ್ಲಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಶಾಂತಿಯ ಬೀಡನ್ನಾಗಿ ಮಾಡಿದೆ” ಎಂದು ಬಿಜೆಪಿ ಟ್ವೀಟ್‌ ಮೂಲಕ ಆಕ್ರೋಶವನ್ನು ಹೊರಹಾಕಿದೆ.

Continue Reading
Advertisement
R Ashok Bangalore blastNew Project
ರಾಜಕೀಯ5 mins ago

R AShok : ಕರ್ನಾಟಕದಲ್ಲಿ ಪಾಕಿಸ್ತಾನದ ಮಕ್ಕಳು ಹುಟ್ಟಿಕೊಳ್ತಿದ್ದಾರೆ ಎಂದ ಅಶೋಕ್‌

Murder by friends over love affair
ಕಲಬುರಗಿ8 mins ago

Murder Case : ಪ್ರೀತಿ ವಿಚಾರಕ್ಕೆ ಕಿತ್ತಾಟ; ಯುವಕನ ಕೊಲೆಯಲ್ಲಿ ಅಂತ್ಯ

modi
ದೇಶ16 mins ago

Narendra Modi: ತೆಲಂಗಾಣ, ಒಡಿಶಾಕ್ಕೆ ಮೋದಿ ಭೇಟಿ; 26,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

KSRTC to operate special buses for Mahashivratri
ಮಹಾ ಶಿವರಾತ್ರಿ33 mins ago

Maha Shivratri : ಮಹಾಶಿವರಾತ್ರಿಗೆ ಕೆಎಸ್‌ಆರ್‌ಟಿಸಿಯಿಂದ ಸ್ಪೆಷಲ್‌ ಬಸ್‌; ಶೇ.10ರಷ್ಟು ಡಿಸ್ಕೌಂಟ್‌!

Stones pelted at 3 Vande Bharat train in a single day
ರಾಜಕೀಯ45 mins ago

Vande Bharat Train: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ​; ಒಂದೇ ದಿನ 2 ಟ್ರೈನ್‌ ಮೇಲೆ 3 ಕಡೆ ದಾಳಿ!

Sedition Case BY Vijayendra
ಬೆಳಗಾವಿ53 mins ago

BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ

elon musk
ವಾಣಿಜ್ಯ1 hour ago

World’s Richest Person: ವಿಶ್ವದ ಅತ್ಯಂತ ಸಿರಿವಂತ ವ್ಯಕ್ತಿ ಪಟ್ಟ ಕಳೆದುಕೊಂಡ ಎಲಾನ್‌ ಮಸ್ಕ್‌; ಈಗ ಯಾರು ನಂ. 1 ಶ್ರೀಮಂತ?

Guest Lecturers salarys
ನೌಕರರ ಕಾರ್ನರ್1 hour ago

Guest Lecturers : ಅತಿಥಿ ಉಪನ್ಯಾಸಕರ ವೇತನ 8000 ರೂ. ಹೆಚ್ಚಳ, ಪಾಠದ ಅವಧಿಯೂ ಜಾಸ್ತಿ

Is there a drinking water problem in your area Call this helpline number
ಬೆಂಗಳೂರು1 hour ago

Water Crisis : ನಿಮ್ಮ ಏರಿಯಾದಲ್ಲಿ ಕುಡಿಯುವ ನೀರಿನ ಸಮಸ್ಯೆನಾ?; ಈ ಹೆಲ್ಪ್‌ಲೈನ್‌ ನಂಬರ್‌ಗೆ ಕಾಲ್‌ ಮಾಡಿ

soumya shetty
ಸಿನಿಮಾ1 hour ago

Soumya Shetty: ಗೆಳತಿಯ ಮನೆಯಿಂದಲೇ ಚಿನ್ನ ಕದ್ದು ಸಿಕ್ಕಿಬಿದ್ದ ತೆಲುಗು ನಟಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ19 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ23 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌