Site icon Vistara News

Pralhad Joshi : ಪಾಕಿಸ್ತಾನ್ ಜಿಂದಾಬಾದ್‌‌ ದೇಶದ್ರೋಹಿ ಘೋಷಣೆಗೆ ಏನಂತಾರೆ ರಾಹುಲ್ ಗಾಂಧಿ? ; ಜೋಶಿ ಪ್ರಶ್ನೆ

Sedition Case Pralhad Joshi

ಹುಬ್ಬಳ್ಳಿ: ಕಾಂಗ್ರೆಸ್ ಸಂಸದರು ಒಬ್ಬೊಬ್ಬರೇ ದೇಶ ಒಡೆಯುವ ಮತ್ತು ದೇಶ ದ್ರೋಹಿ ಘೋಷಣೆ (Sedition Case) ಕೂಗುತ್ತಿದ್ದು, ರಾಹುಲ್ ಗಾಂಧಿ (Rahul Gandhi) ಈ ಬಗ್ಗೆ ಏನು? ಹೇಳುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ.

ಲೋಕಸಭೆ ಅಧಿವೇಶನದ ವೇಳೆ ನೋಡಿದರೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (DK Suresh) ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ್ದರು. ಈಗ ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ನಾಸಿರ್ ಹುಸೇನ್ ಗೆದ್ದ ಮರು ಕ್ಷಣವೇ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು ಜೈಕಾರ ಹಾಕಿದ್ದಾರೆ. ಇಂಥ ದೇಶ ದ್ರೋಹದ ಕೃತ್ಯಕ್ಕೆ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಏನು ಹೇಳುತ್ತಾರೆ? ಸಚಿವ ಜೋಶಿ ಪ್ರಶ್ನಿಸಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆದ್ದಾಕ್ಷಣ ಕರ್ನಾಟಕ ವಿಧಾನಸೌಧ ಒಳಗಡೆ ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಜೈಕಾರ ಘೋಷಣೆ ಕೂಗಿರುವುದು ಸಾಮಾನ್ಯ ಸಂಗತಿಯಲ್ಲ. ಇದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ದೇಶ ದ್ರೋಹಕ್ಕೆ ಕುಮ್ಮಕ್ಕು

ಕಾಂಗ್ರೆಸ್ ಪಕ್ಷ ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ದೇಶದಲ್ಲಿ ಯಾವಾಗಲೆಲ್ಲ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕರ್ನಾಟಕ ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಸಚಿವ ಜೋಶಿ ಆರೋಪಿಸಿದರು.

ಕಾಂಗ್ರೆಸ್‌ಗೆ ಕರ್ನಾಟಕದ ಮುಖ್ಯಮಂತ್ರಿಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಪಾಕಿಸ್ತಾನ ಜಿಂದಾಬಾದ್ ಘೋಷಣೆಕೋರರನ್ನು ಒದ್ದು ಒಳಗೆ ಹಾಕಲಿ ಎಂದು ಸಚಿವ ಪ್ರಹ್ಲಾದ ಆಗ್ರಹಿಸಿದ್ದಾರೆ.

ಇದನ್ನೂ ಓದಿ : Sedition Case : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಆರೋಪ ; ಕಾಂಗ್ರೆಸ್‌ ವಾದವೇನು?

ಪೊಲೀಸ್‌ ಇಲಾಖೆಯಿಂದ ತನಿಖೆಗೆ ಆಗ್ರಹ

ಕರ್ನಾಟಕ ವಿಧಾನ ಸೌಧದೊಳಗೆ ಅದೂ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಕೇಳಿ ಬಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಬಗ್ಗೆ ಮುಖ್ಯಮಂತ್ರಿ, ಗೃಹ ಇಲಾಖೆ ತನಿಖೆಗೆ ಅದೇಶಿಸಬೇಕು. ರಾಜ್ಯ ಪೊಲೀಸ್ ಇಲಾಖೆ ದೇಶ ದ್ರೋಹಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳಲಿ: ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದೂ ಜೋಶಿ ಆಗ್ರಹಿಸಿದ್ದಾರೆ.

Exit mobile version