Site icon Vistara News

Pralhad Joshi : ಜೈಶಂಕರ್, ನಿರ್ಮಲಾ ಸ್ಪರ್ಧೆ ಖಚಿತ ಎಂದ ಪ್ರಹ್ಲಾದ್‌ ಜೋಶಿ; ಯಾವ ಕ್ಷೇತ್ರ?

Pralhad Joshi Jaishankar Nirmala Seetaraman

ಹುಬ್ಬಳ್ಳಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ (Foriegn Minister Jaishankar) ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Seetaraman) ಈ ಬಾರಿ ಲೋಕಸಭೆ ಚುನಾವಣೆಯಲ್ಲಿ (Parliament Elections 2024) ಸ್ಪರ್ಧಿಸುವುದು ನಿಚ್ಚಳವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಆದರೆ, ಯಾವ ಕ್ಷೇತ್ರದಿಂದ ಎನ್ನುವುದು ಫೈನಲ್‌ ಆಗಿಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿ, ಈ ಇಬ್ಬರೂ ಪ್ರಭಾವಿ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಗ್ಯಾರೆಂಟಿ. ಅದರೆ ಎಲ್ಲಿಂದ? ಎನ್ನುವುದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದರು. ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಅಥವಾ ಬೇರೆ ರಾಜ್ಯದ ಕ್ಷೇತ್ರಗಳಿಂದಲೂ ಸ್ಪರ್ಧಿಸಬಹುದು. ಕ್ಷೇತ್ರದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಜೋಶಿ ತಿಳಿಸಿದರು.

ವಿದೇಶಾಂಗ ಸಚಿವ ಜೈ ಶಂಕರ್‌ ಅವರು ಹಾಲಿ ತೇಜಸ್ವಿ ಸೂರ್ಯ ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಚರ್ಚೆ ದೊಡ್ಡ ಮಟ್ಟದಲ್ಲಿದೆ. ನಿರ್ಮಲಾ ಸೀತಾರಾಮನ್‌ ಅವರು ಕೂಡಾ ಬೆಂಗಳೂರಿನ ಯಾವುದಾದರೂ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : Sumalatha Ambarish : ಮಂಡ್ಯ ಬಿಡುವ ಪ್ರಶ್ನೆಯೇ ಇಲ್ಲ, ಸ್ವತಂತ್ರ ಸ್ಪರ್ಧೆ ಇಲ್ಲ: ಸುಮಲತಾ ಖಡಕ್‌ ನುಡಿ

Pralhad Joshi : ಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಜೋಶಿ ವಿಶ್ವಾಸ

ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ. ಅಂತೆಯೇ ಜೆಡಿಎಸ್ ನಿಂದಲೂ ಅಂಥ ಸಮಸ್ಯೆಯಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಬಗೆಹರಿಸಲಿದ್ದಾರೆ ಎಂದು ಮಾಧ್ಯಮಗಳ ಜತೆ ಮಾತನಾಡುತ್ತಾ ತಿಳಿಸಿದರು.

parliament Election Sumalatha Ambarish Mandya

ಒಂದು ಮನೆಯಲ್ಲೇ ಕೆಲವೊಮ್ಮೆ ಹೊಂದಾಣಿಕೆ ಕಷ್ಟವಾಗಿರುತ್ತದೆ. ಹಾಗಿರುವಾಗ ದೊಡ್ಡ ಪಕ್ಷ, ಲಕ್ಷಾಂತರ ಮುಖಂಡರು, ಕಾರ್ಯಕರ್ತರು ಇರುವಾಗ ಸಮಸ್ಯೆ ಸಹಜ. ಆದರೆ, ಅದೆಲ್ಲ ಬಗೆಹರಿಯುತ್ತದೆ ಎಂದು ಹೇಳಿದರು. ಮಂಡ್ಯ ಸಂಸದೆ ಸುಮಲತಾ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಬ್ಬರ ಸಹಕಾರದಿಂದ ಟಿಕೆಟ್ ಹಂಚಿಕೆ ವಿವಾದ ಅಂತ್ಯ ಕಾಣಲಿದೆ ಎಂದು ಜೋಶಿ ವಿಶ್ವಾಸ ವ್ಯಕ್ತಡಿಸಿದರು.

Exit mobile version