Site icon Vistara News

Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

Road Accident in Hubballi

ಹುಬ್ಬಳ್ಳಿ: ಹುಬ್ಬಳ್ಳಿಯ ಅಂಚಟಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬ ಗಾಯಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನೂ ಮೃತರ ಗುರುತುಗಳು ಪತ್ತೆಯಾಗಿಲ್ಲ, ಪೊಲೀಸರು ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಜೇಲಂ ನದಿಯಲ್ಲಿ (Jhelum River) ಮಂಗಳವಾರ (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು (Boat Capsize), ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ಹಡಗು ಮಗುಚಿದೆ.

ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸೆಳವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version