ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (ರಾಣಿ ಚೆನ್ನಮ್ಮ ಮೈದಾನ) ಮಾ.9 ರಿಂದ 11ರವರೆಗೆ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಗೆ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | Holi 2023: ಬಣ್ಣಗಳ ಹಬ್ಬವೆಂದರೆ ತಿನಿಸುಗಳ ಸಂಭ್ರಮವೂ ಹೌದು!
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಟಿಪ್ಪು ಜಯಂತಿ ಆಚರಣೆ, ಈದ್ಗಾ ಮೈದಾನದ ಹೆಸರು ಬದಲಾವಣೆ ಬಳಿಕ ಈಗ ರಂಗ ಪಂಚಮಿ ಪ್ರಯುಕ್ತ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಾಮದಹನಕ್ಕೆ ಅನುಮತಿ ನೀಡಲಾಗಿದೆ. 10 ಸಾವಿರ ಶುಲ್ಕದೊಂದಿಗೆ ಕೆಲ ಷರತ್ತುಗಳನ್ನು ವಿಧಿಸಿ ಮಂಡಳಿಗೆ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಲಾಗಿದೆ.