ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದ ಪ್ರಕರಣವನ್ನು ಹೈಕೋರ್ಟ್ ರಾತ್ರಿ 10 ಗಂಟೆಗೆ ವಿಚಾರಣೆ ನಡೆಸಲಿದೆ. ಮಧ್ಯಾಹ್ನ ಹೈಕೋರ್ಟ್ನ ಏಕಸದಸ್ಯ ಪೀಠ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ ಪಾಲಿಕೆ ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿತ್ತು. ಅಲ್ಲದೆ, ಚಾಮರಾಜಪೇಟೆ ಈದ್ಗಾ ಮೈದಾನದ ವಿಚಾರಣೆ ಸುಪ್ರೀಮ್ ಕೋರ್ಟ್ ಮುಂದಿದ್ದು, ಅಲ್ಲಿನ ತೀರ್ಪಿನ ಆಧಾರದಲ್ಲಿ ಆದೇಶವನ್ನು ಮರು ಪರಿಶೀಲನೆ ಮಾಡಬೇಕು ಎಂದು ಅನಿಸಿದರೆ ಬರಬಹುದು ಎಂದು ಅರ್ಜಿದಾರರಿಗೆ ಹೇಳಿತ್ತು. ಅಂತೆಯೇ ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಹೇಳಿದ ಸುಪ್ರೀಮ್ ಕೋರ್ಟ್‌ನ ತ್ರಿಸದಸ್ಯ ಪೀಠ, ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಅರ್ಜಿದಾರರು ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಆ ಅರ್ಜಿಯನ್ನು ಕೋರ್ಟ್ ರಾತ್ರಿ ೧೦ ಗಂಟೆಗೆ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಲಿದೆ.
ಇದನ್ನೂ ಓದಿ | ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್