Site icon Vistara News

Terrorists In Bengaluru: ಬೆಂಗಳೂರಿನಲ್ಲಿ ಭಾರಿ ಸ್ಫೋಟಕ ಪತ್ತೆ; ಮೂವರ ಬಂಧನ, ಉಗ್ರರ ಜತೆ ನಂಟು ಶಂಕೆ

Bengaluru Explosives Suspects

Huge explosive found in Bengaluru; Terror Link Suspected

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನದಂದು ಹಿಂದು ಮುಖಂಡರು ಸೇರಿ ಹಲವರು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಿದ ಐವರು ಶಂಕಿತ ಉಗ್ರರನ್ನು (Terrorists In Bengaluru) ಸಿಸಿಬಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ನಗರದ ಹಲವೆಡೆ ಭಾರಿ ಪ್ರಮಾಣದ ಸ್ಫೋಟಕ ವಸ್ತು ಪತ್ತೆಯಾಗಿದೆ. ಹಾಗಾಗಿ, ಇವರು ಶಂಕಿತ ಉಗ್ರರ ಜತೆ ನಂಟು ಹೊಂದಿರುವ ಕುರಿತು ಶಂಕೆ ವ್ಯಕ್ತವಾಗಿದೆ.

ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ನಗರದ ಸೋಲದೇವನಹಳ್ಳಿ ಪೊಲೀಸರು ಶೋಧ ನಡೆಸಿದ್ದು, ಅನುಮತಿ ಇಲ್ಲದೆ ಮನೆಯಲ್ಲಿ ಆಡಗಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಎರಡೂ ಮನೆಗಳಲ್ಲಿ ಸ್ಫೋಟಕ ಪತ್ತೆಹಚ್ಚಿರುವ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಲ್ಲುಗುಡ್ಡದಹಳ್ಳಿಯ ಶಂಕರ್ ಹಾಗೂ ದಾಸೇನಹಳ್ಳಿ ಬಳಿಯ ಕುಮಾರ್‌ ಎಂಬುವರ ಮನೆಯಲ್ಲಿ ಸ್ಫೋಟಕ ಪತ್ತೆಯಾಗಿದೆ. ಎರಡೂವರೆ ಕೆ.ಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್ ಜೆಲ್, 45 ಕೆ.ಜಿ ಪೊಟ್ಯಾಶಿಯಂ ನೈಟ್ರೇಟ್ ವೈಟ್ ಪೌಡರ್ ಹಾಗೂ ಸ್ಫೋಟಕ ಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Terrorists in Bengaluru: 2024ರ ಚುನಾವಣೆ ಉಗ್ರರ ಟಾರ್ಗೆಟ್;‌ ಒಂದು ಕೋಮಿನ ಜನ ಕಡಿಮೆ ಇರುವೆಡೆ ಸ್ಫೋಟಕ್ಕೆ ಪ್ಲ್ಯಾನ್‌!

ಅಲ್ಲದೆ, ದಾಸೇನಹಳ್ಳಿಯ ರಾಘವೇಂದ್ರ ಲೇಔಟ್‌ನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದು, ಶ್ರೀನಿವಾಸ್ ಎಂಬುವರ ಬಾಡಿಗೆ ಮನೆಯಲ್ಲಿ ಶೋಧ ನಡೆಸಿದ್ದಾರೆ. ಅಲ್ಲೂ ಕೆ.ಜಿಗಟ್ಟಲೆ ಸ್ಫೋಟಕ ಪತ್ತೆಯಾಗಿದೆ. 1.860 ಕೆ.ಜಿ ತೂಕದ 15 Rex ಎಕ್ಸ್‌ಪ್ಲೋಸಿವ್ ಜೆಲ್, 1.950 ಗ್ರಾಂ ಕಾರ್ಕೋಲ್ ಪೌಡರ್, 7.850 ಗ್ರಾಂ ಸಲ್ಫರ್ ಪೌಡರ್, 13 ಕೆ.ಜಿ ಪೊಟ್ಯಾಶಿಯಂ ನೈಟ್ರೇಟ್ ಪತ್ತೆಯಾಗಿದೆ. ಶ್ರೀನಿವಾಸ್‌ನನ್ನೂ ಬಂಧಿಸಿರುವ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕಲ್ಲು ಕ್ವಾರಿಗಾಗಿ ಸಂಗ್ರಹ ಮಾಡಿದ್ದಾಗಿ ತಿಳಿಸಿದ್ದಾರೆ.

Exit mobile version