Murder case | ಕಾಲಿಗೆ ಹಗ್ಗ ಕಟ್ಟಿ ಕೆರೆಗೆ ಎಸೆದು ಯುವಕನ ಕೊಲೆ: ಮಾನವ ಹಕ್ಕು ಹೋರಾಟಗಾರನಾ? - Vistara News

ಕರ್ನಾಟಕ

Murder case | ಕಾಲಿಗೆ ಹಗ್ಗ ಕಟ್ಟಿ ಕೆರೆಗೆ ಎಸೆದು ಯುವಕನ ಕೊಲೆ: ಮಾನವ ಹಕ್ಕು ಹೋರಾಟಗಾರನಾ?

ರಾಮನಗರದ ಬಿಡದಿಯ ನಲ್ಲಿಗುಡ್ಡೆ ಕೆರೆಯಲ್ಲಿ ಮಾನವ ಹಕ್ಕು ಹೋರಾಟಗಾರರೊಬ್ಬರ ಮೃತದೇಹ ಪತ್ತೆಯಾಗಿದೆ. ಇದು ಕೊಲೆ (Murder case) ಎಂದು ಶಂಕಿಸಲಾಗಿದೆ.

VISTARANEWS.COM


on

Raju BN death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಬಿಡದಿಯ ನಲ್ಲಿಗುಡ್ಡೆ ಕೆರೆಯಲ್ಲಿ ಯುವಕನೊಬ್ಬನ ಶವ (Murder case) ಪತ್ತೆಯಾಗಿದೆ. ಮೃತದೇಹದ ಜತೆಗಿದ್ದ ಗುರುತಿನ ಚೀಟಿ ಆಧಾರದಲ್ಲಿ ಆತನನ್ನು ರಾಜು ಬಿ.ಎನ್‌. ಎಂದು ಗುರುತಿಸಲಾಗಿದೆ. ಸುಮಾರು ೨೫ ವರ್ಷ ಪ್ರಾಯದ ಯುವಕನಂತೆ ಕಾಣುತ್ತಾರೆ.

ನಲ್ಲಿಗುಡ್ಡೆ ಕೆರೆಯ ಪಕ್ಕದಲ್ಲಿ ಒಂದು ಆಲ್ಟೋ ಕಾರು ಮತ್ತು ಅದರೊಳಗೆ ಒಂದು ಲ್ಯಾಪ್‌ಟಾಪ್‌ ಇತ್ತು. ಯಾರದ್ದಿದು ಎಂದು ಜನರು ಕುತೂಹಲದಿಂದ ನೋಡುತ್ತಿದ್ದರು. ಈ ನಡುವೆ, ಕೆರೆಯಲ್ಲಿ ಶವ ಪತ್ತೆಯಾಗಿದೆ. ಕಾಲಿಗೆ ಹಗ್ಗ ಬಿಗಿದು ಕೊಲೆ ಮಾಡಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿತ್ತು. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಹಕಾರದಿಂದ ಶವವನ್ನು ಮೇಲೆತ್ತಲಾಗಿದೆ.

ಸ್ಥಳಕ್ಕೆ ಬಿಡದಿ ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಹೊರ ತೆಗೆಸಿದರು. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ತಡೆ ವೇದಿಕೆ ಎಂಬ ಸಂಘಟನೆಯ ಕರ್ನಾಟಕ ರಾಜ್ಯದ ಕಾನೂನು ವಿಭಾಗದ ಕಾರ್ಯದರ್ಶಿ ಎಂದು ರಾಜು ಬಿಎಂ ಗುರುತಿನ ಚೀಟಿ ಹೊಂದಿದ್ದಾರೆ. ಈ ಸಂಘಟನೆ ನಿಜಕ್ಕೂ ನೋಂದಾಯಿತ ಸಂಸ್ಥೆಯೇ? ಇದು ಏನು ಕೆಲಸ ಮಾಡುತ್ತದೆ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

ಯಾರೋ ದುಷ್ಕರ್ಮಿಗಳು ರಾಜು ಅವರನ್ನು ಕೊಲೆ ಮಾಡಿರುವುದು ಖಚಿತವಾಗಿದೆ. ಆದರೆ, ಯಾವ ಕಾರಣಕ್ಕೆ ಕೊಲೆ ಮಾಡಿದರು. ಮಾನವ ಹಕ್ಕುಗಳ ಹೋರಾಟದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ? ಅಥವಾ ಬೇರೆ ವೈಯಕ್ತಿಕ ಕಾರಣಗಳಿವೆಯೇ ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ.

ರಾಜು ಅವರನ್ನು ಕೊಂದು ತಂದು ಕೆರೆಗೆ ಹಾಕಲಾಗಿದೆಯೇ ಅಥವಾ ಕಾಲು ಕಟ್ಟಿ ಕೆರೆಗೆ ಹಾಕಲಾಯಿತೇ ಎನ್ನುವುದನ್ನು ಮರಣೋತ್ತರ ಪರೀಕ್ಷಾ ವರದಿ ಹೇಳಬೇಕಾಗಿದೆ.

ಇದನ್ನೂ ಓದಿ | Murder Case | ಗಂಡನನ್ನು ಬಿಟ್ಟು ಪ್ರೇಮಕಾವ್ಯ ಬರೆಯಲು ಹೋದವಳು ಪ್ರಿಯಕರನಿಂದಲೇ ಕೊಲೆಯಾದಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

Supreme Court Sc St Quota: ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯಡಿ, ರಾಜ್ಯ ಸರ್ಕಾರಗಳಿಗೆ ಒಳಮೀಸಲು ನೀಡುವ ಅಧಿಕಾರವಿದೆಯಾ ಎಂಬ ಸೂಕ್ಷ್ಮ ಸಂಗತಿಯ ವಿಚಾರಣೆಯನ್ನು ನಡೆಸಿದ ಸರ್ವೋಚ್ಚ ನ್ಯಾಯಾಲಯ ಇದೀಗ ರಾಜ್ಯ ಸರ್ಕಾರಗಳಿಗೆ ಈ ಹೊಣೆ ಹೊರಿಸಿ ತೀರ್ಪಿತ್ತಿದೆ.

VISTARANEWS.COM


on

Supreme Court SC ST Quota
Koo

ಬೆಂಗಳೂರು: ಎಸ್‌ಸಿ- ಎಸ್‌ಟಿ ಸಮುದಾಯಗಳ ಒಳಮೀಸಲು (Supreme Court SC ST Quota) ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಹೆಗಲಿಗೆ ವರ್ಗಾಯಿಸಿ ಪಾರಾಗಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಸುಪ್ರೀಂ ಕೋರ್ಟ್‌ ತೀರ್ಪು ಶಾಕ್‌ ನೀಡಿದೆ. ಒಳಮೀಸಲು (SC ST Reservation Sub-Classification) ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್‌ (Supreme Court) ನೀಡಿರುವ ತೀರ್ಪಿನಿಂದಾಗಿ, ಚೆಂಡು ಮತ್ತೆ ರಾಜ್ಯ ಸರ್ಕಾರದ ಅಂಗಳದಲ್ಲಿ ಬಂದು ಬಿದ್ದಿದೆ.

ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯಡಿ, ರಾಜ್ಯ ಸರ್ಕಾರಗಳಿಗೆ ಒಳಮೀಸಲು ನೀಡುವ ಅಧಿಕಾರವಿದೆಯಾ ಎಂಬ ಸೂಕ್ಷ್ಮ ಸಂಗತಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯದ 7 ಸದಸ್ಯರ ಪೀಠ ಕಳೆದ ವರ್ಷ ಆರಂಭಿಸಿತ್ತು.. ಕರ್ನಾಟಕವೂ ಸೇರಿದಂತೆ ಇಡೀ ದೇಶದ ಮೇಲೆ ಪರಿಣಾಮ ಬೀರುವ ಅರ್ಜಿ ವಿಚಾರಣೆಯನ್ನು, ಸರ್ವೋಚ್ಚ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠ ಕೈಗೆತ್ತಿಕೊಂಡಿತ್ತು. ಇದೀಗ ರಾಜ್ಯ ಸರ್ಕಾರಗಳಿಗೆ ಈ ಹೊಣೆ ಹೊರಿಸಿ ಕೋರ್ಟ್‌ ತೀರ್ಪಿತ್ತಿದೆ.

2020ರಲ್ಲಿ ಪಂಚಸದಸ್ಯರ ಪೀಠ, ಪ್ರಕರಣವನ್ನು ಸಪ್ತಸದಸ್ಯರ ಬೃಹತ್ ಪೀಠಕ್ಕೆ ವರ್ಗಾಯಿಸಲು ಶಿಫಾರಸು ಮಾಡಿತ್ತು. ಪಂಜಾಬ್ ಸರ್ಕಾರ, ತನ್ನ ಪರಿಶಿಷ್ಟ ಜಾತಿ-ಪಂಗಡಗಳ 2006ರ ಕಾಯ್ದೆಯಡಿ, ವಾಲ್ಮೀಕಿಗಳು ಮತ್ತು ಮಝಾಬಿ ಸಿಖ್ಖರಿಗೆ ಶೇ.50 ಒಳಮೀಸಲು ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಶುರುವಾಗಿತ್ತು. ಇದರ ವಿರುದ್ಧ ಹಲವರು ಪಂಜಾಬ್ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಉಚ್ಚ ನ್ಯಾಯಾಲಯ ಈ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಇದು ಅಸಾಂವಿಧಾನಿಕ, ಸಂವಿಧಾನದ 14ನೇ ವಿಧಿಯನ್ನು (ಸಮಾನತೆಯ ಹಕ್ಕು) ಉಲ್ಲಂಘಿಸುತ್ತದೆ. ಮಾತ್ರವಲ್ಲ 2004ರಲ್ಲಿ ಇ.ವಿ.ಚಿನ್ನಯ್ಯ ಮತ್ತು ಆಂಧ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ, ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿತ್ತು.

ಇದನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ, 2011ರಂದು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಐವರು ಸದಸ್ಯರ ಸರ್ವೋಚ್ಚ ಪೀಠ, 7 ಸದಸ್ಯರ ವಿಸ್ತೃತ ಪೀಠಕ್ಕೆ ಅರ್ಜಿಯನ್ನು ವರ್ಗಾಯಿಸಿತ್ತು. ಕೋರ್ಟ್‌, ಪಂಜಾಬ್‌ ಸರಕಾರದ ಪರ ತೀರ್ಪು ನೀಡಿದೆ. ಅಂದರೆ, ಉಪವರ್ಗೀಕರಣ ನೀಡುವ ಅಧಿಕಾರ ರಾಜ್ಯ ಸರಕಾರಗಳಿಗೆ ಇದೆ ಎಂದರ್ಥವಾಗುತ್ತದೆ. ಇದೂ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಹಾಗೆಯೇ ಕೇಂದ್ರ ಸರಕಾರಕ್ಕೂ ಅನ್ವಯವಾಗಲಿದೆ.

ಕೇಂದ್ರಕ್ಕೆ ಶಿಫಾರಸು ಮಾಡಿದ ರಾಜ್ಯ ಸರಕಾರ

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಪರಿಶಿಷ್ಟ ಎಡಗೈ ಸಮುದಾಯದ ಸಚಿವರು, ಮುಖಂಡರು ಪಟ್ಟು ಹಿಡಿದಿದ್ದರು.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದರು. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಒಳಮೀಸಲು ಬಗ್ಗೆ ಒತ್ತಡ ಹೆಚ್ಚಾಗಿತ್ತು. ʼಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ. ಕೇಂದ್ರ ಸರ್ಕಾರವು ಸಂವಿಧಾನದ 341ನೇ ವಿಧಿಗೆ ಹೊಸತಾಗಿ ಖಂಡ (3) ಸೇರಿಸಿದರೆ ಮಾತ್ರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಅವಕಾಶವಿದೆ. ಒಳ ಮೀಸಲಾತಿ ಕೇಂದ್ರದ ಅಧಿಕಾರ ವ್ಯಾಪ್ತಿಯಲ್ಲಿದೆʼ ಎಂದು ರಾಜ್ಯ ಸರ್ಕಾರ ಈ ಹಿಂದೆ ಪ್ರತಿಪಾದಿಸಿತ್ತು. ಇದೀಗ ಆ ವಾದ ಬಿದ್ದುಹೋಗಲಿದೆ.

ಮಾಧುಸ್ವಾಮಿ ಸಮಿತಿ

ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಒಳ ಮೀಸಲಾತಿ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಅಂದಿನ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿತ್ತು. ಒಳ ಮೀಸಲಾತಿ ಕಲ್ಪಿಸುವ ಪ್ರಕ್ರಿಯೆಯು ಪರಿಶೀಲನೆಯಲ್ಲಿರುವಾಗಲೇ 2022ರಲ್ಲಿ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ ರೂಪಿಸಿದ ಸರ್ಕಾರ, ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಹೆಚ್ಚಿಸಿತು.

ಸಂಪುಟ ಉಪ ಸಮಿತಿ 2011ರ ಜನಗಣತಿಯಂತೆ ಒಟ್ಟು 101 ಪರಿಶಿಷ್ಟ ಜಾತಿಗಳ ಜಾತಿವಾರು ಜನಸಂಖ್ಯೆಯನ್ನು ಪರಿಗಣಿಸಿ ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಅನುಷ್ಠಾನ ಮಾಡುವಂತೆ ಸಚಿವ ಸಂಪುಟ ಸಭೆಗೆ ಶಿಫಾರಸು ಮಾಡಿತ್ತು. ಗುಂಪುಗಳ ವರ್ಗೀಕರಣ, ಶೇಕಡವಾರು ಮೀಸಲಾತಿ ನಿಗದಿಪಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಣಯಿಸಿತ್ತು. 2023ರ ಮಾರ್ಚ್ 28 ಮತ್ತು 31ರಂದು ಈ ಪ್ರಸ್ತಾವ ಕೇಂದ್ರಕ್ಕೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ: Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Continue Reading

ಮಳೆ

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain : ಕೊಪ್ಪಳದ ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತಗೊಂಡಿದೆ. ಯಾದಗಿರಿ-ರಾಯಚೂರು ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

By

karnataka Rain
Koo

ಕೊಪ್ಪಳ: ಭಾರಿ ಮಳೆ (Karnataka Rain) ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತಗೊಂಡಿದೆ. ಕೇಶಮುಂಡನ ಮಾಡುವ ಕೋಣೆಯು ನೀರಿನಲ್ಲಿ ಮುಳುಗಿದೆ. ತುಂಗಭದ್ರಾ ನದಿ ದಡದಲ್ಲಿರುವ ದೇವಸ್ಥಾನ ಇದಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಅನೇಕ ಅಂಗಡಿಗಳು ಜಲಾವೃತ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ಸಮೀಪ ಭಕ್ತರಿಗೆ ನಿಷೇಧಿಸಲಾಗಿದೆ.

ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಯಾದಗಿರಿಯಲ್ಲಿ ನಾರಾಯಣಪುರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೃಷ್ಣಾ ನದಿ ಪ್ರವಾಹದಿಂದ ಈಗಾಗಲೇ ಕೊಳ್ಳುರು ಸೇತುವೆ ಹಾಗೂ ಗುರ್ಜಾಪುರ ಸೇತುವೆ ಸಂಪರ್ಕ ಕಡಿತಗೊಂಡಿದೆ. ಅದೆ ರೀತಿ ವಡಗೇರಾ ತಾಲೂಕಿನ ಗುಂಡ್ಲುರು ಹೊರಭಾಗದ ಗುರ್ಜಾಪುರ ಸೇತುವೆ ಜಲಾವೃತಗೊಂಡಿವೆ. ಸೇತುವೆ ಜಲಾವೃತದಿಂದ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಡಿತವಾಗಿದೆ.

ಬೆಳಗಾವಿಯಲ್ಲಿ ಮತ್ತೆ ಲೊಳಸೂರ ಸೇತುವೆ ಬಂದ್‌

ಬೆಳಗಾವಿಯ ಲೊಳಸೂರ ಸೇತುವೆ ಮೇಲೆ ಮತ್ತೆ ಘಟಪ್ರಭೆ ಆವರಿಸಿದೆ. ನಿನ್ನೆಯಷ್ಟೆ ನೀರು ಕಡಿಮೆಯಾಗಿ ಓಪನ್ ಆಗಿದ್ದ ಲೊಳಸೂರ ಸೇತುವೆ, ಇದೀಗ ಮತ್ತೆ ಬಂದ್‌ ಆಗಿದೆ. ಸಂಕೇಶ್ವರ ಧಾರವಾಡ ರಾಜ್ಯ ಹೆದ್ದಾರಿಯಲ್ಲಿರುವ ಬೃಹತ್ ಸೇತುವೆ ಇದಾಗಿದೆ. ಲೊಳಸೂರು ಗೋಕಾಕ ಸಂಪರ್ಕ ಸೇತುವೆ ಬಂದ್‌ ಆಗಿದೆ.

ನೀರುಪಾಲಾದ ಹುಂಡಿ ಹಣ

ಕೋಲಾರ‌ ಜಿಲ್ಲೆಯ ಮುಳಬಾಗಿಲು ಪ್ರಸಿದ್ಧ ಕುರುಡುಮಲೆಯ ಹುಂಡಿ ಹಣ ನೀರು ಪಾಲಾಗಿದೆ. ಮುಜರಾಯಿ ಇಲಾಖೆ ಸಿಬ್ಬಂದಿ ನೋಟುಗಳನ್ನು ಬಿಸಿಲಲ್ಲಿ ಒಣಗಿಸಿದ್ದಾರೆ. ದೇವಸ್ಥಾನದ ಚಾವಣಿ ಕೆಲಸ ನಡೆಯುತ್ತಿದ್ದು, ಮಳೆ ಬಿದ್ದ ಪರಿಣಾಮ ನೀರುಪಾಲಾಗಿದೆ.

ಇದನ್ನೂ ಓದಿ: Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಕುಮಟಾ-ಶಿರಸಿ ರಸ್ತೆಯಲ್ಲಿ ಮತ್ತೆ ಗುಡ್ಡಕುಸಿತ

ಭಾರೀ ಮಳೆಗೆ ಕುಮಟಾ-ಶಿರಸಿ ರಸ್ತೆಯ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡಕುಸಿತ ಉಂಟಾಗಿದೆ. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕಳೆದೆರಡು ವಾರಗಳ ಹಿಂದೆ ಗುಡ್ಡ ಕುಸಿದು 5 ದಿನ ಸಂಚಾರ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಕುಸಿತದಿಂದ ವಾಹನ ಸವಾರರು ಆತಂಕದಲ್ಲಿದ್ದಾರೆ. ಹಿಟಾಚಿ ಮೂಲಕ ಗುಡ್ಡ ತೆರವು ಕಾರ್ಯ ಆರಂಭಿಸಲಾಗುತ್ತಿದೆ.

ಮಲಪ್ರಭಾ ನದಿ ತಟದಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಿಂದಲೂ ಪ್ರವಾಹ ಭೀತಿ ಶುರುವಾಗಿದೆ. ಬೆಳಗಾವಿಯ ರಾಮದುರ್ಗ ತಾಲೂಕಿನ ಸುರೇಬಾನ್ ಬೆನ್ನೂರ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಸೇತುವೆ ಮುಳುಗಡೆಯಿಂದ ಚಿಕ್ಕತಡಸಿ, ಹಿರೇ ತಡಸಿ, ಬೆನ್ನೂರ ಗ್ರಾಮಗಳ ಸಂಪರ್ಕ ಕಟ್ ಆಗಿದೆ. 14 ಸಾವಿರ ಕ್ಯೂಸೆಕ್ ನಷ್ಟು ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಮಲಪ್ರಭಾ ನದಿ ತಟದಲ್ಲಿ ಪ್ರವಾಹದ ಪರಿಸ್ಥಿತಿ ಇದೆ. ಈಗಾಗಲೇ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಜಲಾವೃತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

Karnataka Rain: ಕರಾವಳಿ-ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯು ಜನರನ್ನು ತತ್ತರಿಸುವಂತಾಗಿದೆ. ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಡ್ಯಾಂನಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಿರುವುದರಿಂದ ತಿ. ನರಸೀಪುರ ತಲಕಾಡು ಸಂಚಾರ ಬಂದ್ ಆಗಿದ್ದು, ಸುತ್ತೂರು ಸೇತುವೆ ಮುಳುಗಡೆಯಾಗಿದೆ. ಮಳೆ ಅಬ್ಬರಕ್ಕೆ ಎಲ್ಲಿಲ್ಲಿ ಅನಾಹುತ ಸಂಭವಿಸಿದೆ ಇಲ್ಲಿದೆ ಮಾಹಿತಿ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ (Karnataka Rain) ನಿಲ್ಲುವಂತೆ ಕಾಣುತ್ತಿಲ್ಲ. ವರುಣಾರ್ಭಟಕ್ಕೆ ಮನೆಯ ಮೇಲೆ ಭೂ ಕುಸಿತ ಉಂಟಾಗಿದೆ. ಮನೆಯ ಹಿಂಬದಿಯ ಗುಡ್ಡ ಕುಸಿದು ಸಂಪೂರ್ಣ ಹಾನಿಯಾಗಿದೆ. ಕಳಸ ತಾಲೂಕಿನ ಸಂಸೆ ಗ್ರಾ.ಪಂ ವ್ಯಾಪ್ತಿಯ ಕುನ್ನಿ ಹಳ್ಳ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದಾಗ ಹಾಸಿಗೆಗೆ ನೀರು ಬಂದಾಗ ಕುಟುಂಬಸ್ಥರು ಎಚ್ಚರಗೊಂಡು, ಗುಡ್ಡ ಕುಸಿತದ ಶಬ್ದಕ್ಕೆ ಮನೆಯಿಂದ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಮನೆಯ ಗೋಡೆ ಕುಸಿದು ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ಮನೆ ಬಿರುಕು ಬಿಟ್ಟಿದ್ದು, ಅಧಿಕಾರಿಗಳಿಗೆ ವಿಷಯ ಮುಟ್ಟಿಸಲು ನೆಟ್‌ವರ್ಕ್ ಇಲ್ಲದೆ ಪರದಾಡುತ್ತಿದ್ದಾರೆ.

ಇನ್ನೂ ಧರೆ ಕುಸಿದು 50 ಗಂಟೆ ಕಳೆದರೂ ಮಣ್ಣು ತೆರವಾಗಿಲ್ಲ. ಇದರಿಂದಾಗಿ ಕಲ್ಗುಡ್ಡೆ, ಹೊರನಾಡು, ಮೆಣಸಿನ ಹಾಡ್ಯ ರಸ್ತೆ ಬಂದ್ ಆಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕೊಗ್ರೆ, ಸಾತ್ ಕೊಡಿಗೆ ಸಮೀಪ ಎರಡು ದಿನದ ಹಿಂದೆ ರಸ್ತೆಗೆ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿತ್ತು. ರಸ್ತೆ ಮೇಲೆ ಮತ್ತಷ್ಟು ಗುಡ್ಡದ ಮಣ್ಣು ಕುಸಿಯುತ್ತಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ರಣ ಭೀಕರ ಮಳೆಗೆ ಕಳಸ ತಾಲೂಕಿನ ಹೊರನಾಡು ಬಳಿ ಇರುವ ಸಿಮೆಂಟ್ ರಸ್ತೆ ಕೊಚ್ಚಿಹೋಗಿದೆ. ಹೊರನಾಡಿನಿಂದ ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಸ್ತೆಯಲ್ಲಿದ್ದ ತಡೆಗೋಡೆ ಪೈಪ್ ಎಲ್ಲವೂ ನೀರುಪಾಲಾಗಿದೆ. ಇತ್ತ ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ನಲುಗಿದೆ. ನದಿ ತಟದ ತೋಟಗಳು, ರಸ್ತೆ ಎಲ್ಲವೂ ಮುಳುಗಡೆಯಾಗಿದೆ. ಪಟ್ಟಣದ ಮುಖ್ಯ ಭಾರತಿ ತೀರ್ಥ ರಸ್ತೆಯನ್ನು ನೀರು ಆವರಿಸಿದೆ.

ಶಿರಸಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಚಾವಣಿ

ಉತ್ತರ ಕನ್ನಡದ ಶಿರಸಿ ನಗರದ ಗಣೇಶ ನಗರದ ವಾರ್ಡ್ ನಂ.2 ರಲ್ಲಿ ಭಾರಿ ಮಳೆಗೆ ಬೆಳಗಿನ ಜಾವದಲ್ಲಿ ಮನೆಯ ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾವಣಿ ಕುಸಿಯುವ ಸದ್ದು ಕೇಳಿ ಎಚ್ಚರಗೊಂಡ ಕುಟುಂಬಸ್ಥರು ಹೊರಗೆ ಓಡಿದ್ದಾರೆ. ಚಾವಣಿ ಕುಸಿದ ಪರಿಣಾಮ ಮನೆಯ ಗೋಡೆಗೂ ಹಾನಿಯಾಗಿದೆ. ಸ್ಥಳಕ್ಕೆ ನಗರಸಭಾ ಸದಸ್ಯೆ ನೇತ್ರಾವತಿ, ಮಾರುತಿ ವಡ್ಡರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನದಲ್ಲಿ ಮಳೆ ನಿಂತರೂ ನಿಲ್ಲದ ಅವಾಂತರಗಳು

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ, ಕಣತೂರು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಕೆರೆಯ ಕೋಡಿ ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ಅಡಿಕೆ, ಶುಂಠಿ ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ. ಗ್ರಾಮದ ಸುಪ್ರೀತ್, ಉಮೇಶ್, ಶಾಂತಕುಮಾರ್, ಬಾಲಲೋಚನಾ ಎಂಬುವವರ ಜಮೀನಿಗೆ ನೀರು ನುಗ್ಗಿದೆ. ಹಾಸನ ಜಿಲ್ಲೆಯಲ್ಲಿ ಮಳೆ‌ ನಿಂತರೂ ನಿಲ್ಲದ ಮಳೆಯ ಅವಾಂತರಗಳು ಕಡಿಮೆ ಆಗುತ್ತಿಲ್ಲ. ಕೆರೆ ಒಡೆದು ಅಪಾರ ಪ್ರಮಾಣದ ನೀರು ಹರಿದ ಪರಿಣಾಮ ಐವತ್ತುಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿದೆ. ಹಾಸನದ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದೆ. ಗದ್ದೆಯ ಮಣ್ಣು ಸಮೇತ ನೀರಿನಲ್ಲಿ ಭತ್ತದ ಸಸಿಗಳು ನೀರುಪಾಲಾಗಿವೆ. ಗ್ರಾಮದ ವೀರಭದ್ರ ಶೆಟ್ಟಿ, ಅಣ್ಣಪ್ಪಶೆಟ್ಟಿ, ಬಸವರಾಜು, ಹರೀಶ್, ಇಂದ್ರೇಶ್, ವೆಂಕಟೇಶ್, ರುಕ್ಮಣಮ್ಮ, ತಿಮ್ಮೇಗೌಡ ಎಂಬುವವರಿಗೆ ಸೇರಿದ ಗದ್ದೆಗಳು ಹಾಳಾಗಿವೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ

ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದ್ದು, ನದಿಗೆ 1,67,443 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಮತ್ತೆ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಕಂಪ್ಲಿ ಸೇತುವೆ ಮುಳುಗಡೆಯಾದ ಕಾರಣಕ್ಕೆ ಬಳ್ಳಾರಿ- ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಿಂದ ಮೂರು ಅಡಿ ನೀರು ಹರಿಯುತ್ತಿದೆ. ಹೀಗಾಗಿ ಕಂಪ್ಲಿ ಕೋಟೆಯ ಪ್ರದೇಶಕ್ಕೆ ನದಿ ನೀರು ನುಗ್ಗಿದೆ. ಕಂಪ್ಲಿ ಕೋಟೆ ಪ್ರದೇಶದ ಹೊಳೆ ಆಂಜನೇಯ, ಪ್ರಸನ್ನ ವೆಂಕಟರಮಣ ದೇವಸ್ಥಾನ ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕೋಟೆ ಪ್ರದೇಶದ ಜನರನ್ನ ಸ್ಥಳಾಂತರ ಮಾಡಲಾಗಿತ್ತು.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ವಿಜಯನಗರ ಜಿಲ್ಲೆಯಲ್ಲಿ ರಸ್ತೆ, ಭತ್ತದ ಗದ್ದೆಗಳು ಜಲಾವೃತವಾಗಿದೆ. ಮಕರಬ್ಬಿ-ಬ್ಯಾಲಾಹುಣಸೆ ಗ್ರಾಮದ ರಸ್ತೆ ಸಂಪೂರ್ಣ ಬಂದ್ ಆಗಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಗ್ರಾಮಗಳ ಹತ್ತಾರು ಎಕರೆ ಭತ್ತದ ಜಮೀನಿಗೆ ನೀರು ನುಗ್ಗಿದ್ದರಿಂದ ಸಂಪೂರ್ಣ ನೀರು ಪಾಲಾಗಿದೆ. ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಿದೆ. ನದಿಪಾತ್ರದ 22 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

ಉಕ್ಕಡಗಾತ್ರಿ ಅಜ್ಜಯನ ದೇವಸ್ಥಾನಕ್ಕೂ ಜಲದಿಗ್ಬಂಧನ

ದಾವಣಗೆರೆಯಲ್ಲಿ ಅಪಾಯ ಮಟ್ಟದಲ್ಲಿ ತುಂಗಾಭದ್ರಾ ನದಿ ಹರಿಯುತ್ತಿದ್ದು, ತುಂಗಾ, ಭದ್ರ ಅಣೆಕಟ್ಟುಗಳಿಂದ 1 ಲಕ್ಷ 20 ಸಾವಿರಕ್ಕೂ ಅಧಿಕ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಪುಣ್ಯಕ್ಷೇತ್ರ ಉಕ್ಕಡಗಾತ್ರಿ ಕರಿಬಸವೇಶ್ವರ ದೇವಾಲಯಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನದ ಹಣ್ಣು,ಕಾಯಿ ಅಂಗಡಿಗಳು ಸೇರಿ 30 ಕ್ಕೂ ಅಧಿಕ ಅಂಗಡಿ ಮುಂಗಟ್ಟು ಮುಳುಗಡೆಯಾಗಿದೆ. ಉಕ್ಕಡಗಾತ್ರಿ ಅಜ್ಜಯನ ದೇವಸ್ಥಾನದ ಪಾದಗಟ್ಟೆ, ಜವಳ ಘಟ್ಟ, ಸ್ನಾನಘಟ್ಟಗಳು ಮುಳುಗಡೆಯಾಗಿದೆ. ಭಕ್ತರು ನದಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬ್ಯಾರಿಕೇಡ್ ಹಾಕಿ ಯಾರು ನದಿಗೆ ಇಳಿಯದಂತೆ ಬಂದ್ ಮಾಡಿದ್ದಾರೆ.

ಪಲ್ಗುಣಿ ನದಿ ಅಬ್ಬರಕ್ಕೆ ಪಡುಶೆಡ್ಡೆ ಗ್ರಾಮ ಜಲಾವೃತ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪಲ್ಗುಣಿ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆಯ ಸುಮಾರು 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ನೆರೆ ಬಾಧಿತ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರು ಏರಿಕೆ ಆಗುತ್ತಿದ್ದು, ನದಿ ತೀರದ ಹಲವು ಮನೆಗಳು, ಕೃಷಿ ಭೂಮಿಗಳು ಜಲಾವೃತಗೊಂಡಿದೆ. ಪಲ್ಗುಣಿ ನದಿಯ ಮಧ್ಯ ಭಾಗದಲ್ಲಿ ಡ್ರೆಜ್ಜಿಂಗ್ ಬೋಟ್ ಸಿಲುಕಿದೆ. ರಾತ್ರಿ ಸುರಿದ ಮಹಾಮಳೆಗೆ ಪಲ್ಗುಣಿ ನದಿ ಉಕ್ಕಿದ್ದು, ಬಂಟ್ವಾಳ ತಾಲೂಕಿನ ಅಮ್ಮುಂಜೆಯ ಏಳು ಮನೆಗಳು ಜಲಾವೃತಗೊಂಡು, ಅಮ್ಮುಂಜೆ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀರು ನುಗ್ಗಿದೆ. ಬಂಟ್ವಾಳ ಸಿದ್ಧಕಟ್ಟೆ ಸಮೀಪದ ಅಂಗಾರಕರಿಯ ಸೇತುವೆ ಮೇಲೆ ನೀರು ಹರಿದಿದೆ.

ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ

ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತಗೊಂಡಿದೆ. ಕೇಶಮುಂಡನ ಮಾಡುವ ಕೋಣೆಯು ನೀರಿನಲ್ಲಿ ಮುಳುಗಿದೆ. ತುಂಗಭದ್ರಾ ನದಿ ದಡದಲ್ಲಿರುವ ದೇವಸ್ಥಾನ ಇದಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಅನೇಕ ಅಂಗಡಿಗಳು ಜಲಾವೃತ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ಸಮೀಪ ಭಕ್ತರಿಗೆ ನಿಷೇಧಿಸಲಾಗಿದೆ.

ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಯಾದಗಿರಿಯಲ್ಲಿ ನಾರಾಯಣಪುರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೃಷ್ಣಾ ನದಿ ಪ್ರವಾಹದಿಂದ ಈಗಾಗಲೇ ಕೊಳ್ಳುರು ಸೇತುವೆ ಹಾಗೂ ಗುರ್ಜಾಪುರ ಸೇತುವೆ ಸಂಪರ್ಕ ಕಡಿತಗೊಂಡಿದೆ. ಅದೆ ರೀತಿ ವಡಗೇರಾ ತಾಲೂಕಿನ ಗುಂಡ್ಲುರು ಹೊರಭಾಗದ ಗುರ್ಜಾಪುರ ಸೇತುವೆ ಜಲಾವೃತಗೊಂಡಿವೆ. ಸೇತುವೆ ಜಲಾವೃತದಿಂದ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಡಿತವಾಗಿದೆ.

ಬೆಳಗಾವಿಯಲ್ಲಿ ಮತ್ತೆ ಲೊಳಸೂರ ಸೇತುವೆ ಬಂದ್‌

ಬೆಳಗಾವಿಯ ಲೊಳಸೂರ ಸೇತುವೆ ಮೇಲೆ ಮತ್ತೆ ಘಟಪ್ರಭೆ ಆವರಿಸಿದೆ. ನಿನ್ನೆಯಷ್ಟೆ ನೀರು ಕಡಿಮೆಯಾಗಿ ಓಪನ್ ಆಗಿದ್ದ ಲೊಳಸೂರ ಸೇತುವೆ, ಇದೀಗ ಮತ್ತೆ ಬಂದ್‌ ಆಗಿದೆ. ಸಂಕೇಶ್ವರ ಧಾರವಾಡ ರಾಜ್ಯ ಹೆದ್ದಾರಿಯಲ್ಲಿರುವ ಬೃಹತ್ ಸೇತುವೆ ಇದಾಗಿದೆ. ಲೊಳಸೂರು ಗೋಕಾಕ ಸಂಪರ್ಕ ಸೇತುವೆ ಬಂದ್‌ ಆಗಿದೆ.

ಮತ್ತೆ ಕುಸಿದ ಚರಂಡಿ

ಧಾರವಾಡದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮನಸೂರ ಗ್ರಾಮದ ಬಳಿ ಚರಂಡಿ ಕುಸಿದಿದೆ. ಕಳಪೆ ಮಟ್ಟದ ಕಾಮಗಾರಿ ಆಗಿದ್ದಕ್ಕೆ ಚರಂಡಿ ಕುಸಿದಿದೆ ಎಂದು ರೈತರು ಆರೋಪಿಸಿದ್ದಾರೆ. ಚರಂಡಿ ಕುಸಿದು ಪಕ್ಕದಲ್ಲೇ ಇದ್ದ ಮೆಕ್ಕೆಜೋಳ ಹಾಗೂ ಭತ್ತದ ಜಮೀನಿಗೆ ನುಗ್ಗಿದ ನೀರು ನುಗ್ಗಿ, ಹಾಳಾಗಿದೆ.

ತಿ. ನರಸೀಪುರ ತಲಕಾಡು ಸಂಚಾರ ಬಂದ್

ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಡುಗಡೆ ಆಗುತ್ತಿದೆ. ಹೀಗಾಗಿ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ತಿ. ನರಸೀಪುರ ತಲಕಾಡು ಸಂಚಾರ ಬಂದ್ ಮಾಡಲಾಗಿದೆ. ಸೇತುವೆ ಮೇಲೆ ಎರಡು ಅಡಿಗಳಷ್ಟು ನೀರು ಹರಿಯುತ್ತಿದ್ದು, ಒಂದೇ ವಾರದ ಅಂತರದಲ್ಲಿ ಎರಡು ಭಾರಿ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಸೇತುವೆ ಎರಡು ಭಾಗದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಸುತ್ತೂರು ಸೇತುವೆ ಮುಳುಗಡೆ

ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಟ್ಟ ಹಿನ್ನೆಲೆಯಲ್ಲಿ ಮೈಸೂರು ತಾಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಮೈಸೂರು ಸುತ್ತೂರು ಮಾರ್ಗದ ಸಂಚಾರ ಬಂದ್ ಆಗಿದೆ. ಸುತ್ತೂರು ಸೇರಿದಂತೆ ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಅಕ್ಕ ಪಕ್ಕದ ತೆಂಗಿನ ತೋಟಕ್ಕೂ ನೀರು ನುಗ್ಗಿದೆ.

ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆಗೆ ಹಾನಿ

ಕೆಆರ್‌ಎಸ್ ನಿಂದ 1.70 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಮಂಡ್ಯ ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಳಿ ಹಾನಿಯಾಗಿದೆ. ನೀರಿನ ರಭಸಕ್ಕೆ ತಡೆಗೋಡೆ ಕೊಚ್ಚಿ ಹೋಗಿದೆ. ಕಾವೇರಿ ನದಿ ಬಳಿಯ ಎರಡೂ ಬದಿಗಳಲ್ಲಿನ‌ ತಡೆಗೋಡೆ ಕೊಚ್ಚಿ ಹೋಗಿದ್ದು, ವಿದ್ಯುತ್ ಕಂಬಗಳು ಪಳೆಯುಳಿಕೆಯಂತಾಗಿದೆ. ಚೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬಗಳು ಬೀಳದಂತೆ ಭದ್ರ ಮಾಡಿದ್ದಾರೆ. 1804 ರಲ್ಲಿ ಸಂಪೂರ್ಣ ಕಲ್ಲಿನಿಂದ ವೆಲ್ಲೆಸ್ಲಿ‌ ಸೇತುವೆ ನಿರ್ಮಿಸಲಾಗಿದ್ದು, 2 ಶತಮಾನಗಳಿಂದಲೂ ಭದ್ರವಾಗಿ ನೆಲೆಯೂರಿದೆ. ಇತಿಹಾಸದಲ್ಲಿ ನಿನ್ನೆಯೂ ಸೇರಿ ನಾಲ್ಕು ಭಾರಿ ಸೇತುವೆ ಮುಳುಗಡೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

Karnataka Rain : ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಡುಗಡೆ ಆಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಗ್ರಾಮಗಳು ನಲುಗಿ ಹೋಗಿವೆ.

VISTARANEWS.COM


on

By

karnataka Rain
Koo

ಮಂಡ್ಯ/ಮೈಸೂರು: ಭಾರಿ ಮಳೆಗೆ (Karnataka Rain) ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಡುಗಡೆ ಆಗುತ್ತಿದೆ. ಹೀಗಾಗಿ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ತಿ. ನರಸೀಪುರ ತಲಕಾಡು ಸಂಚಾರ ಬಂದ್ ಮಾಡಲಾಗಿದೆ. ಸೇತುವೆ ಮೇಲೆ ಎರಡು ಅಡಿಗಳಷ್ಟು ನೀರು ಹರಿಯುತ್ತಿದ್ದು, ಒಂದೇ ವಾರದ ಅಂತರದಲ್ಲಿ ಎರಡು ಭಾರಿ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಸೇತುವೆ ಎರಡು ಭಾಗದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ತಿ.ನರಸೀಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನರಸೀಪುರ ಪಟ್ಟಣದ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಮೆಟ್ಟಿಲುಗಳು ಮುಳುಗಡೆಯಾಗಿದೆ. ಶ್ರೀನಿವಾಸ ಕಲ್ಯಾಣ ಮಂಟಪ ಜಲಾವೃತವಾಗಿದ್ದು, ಸಂತೆಮಾಳ ಬಳಿಯ ಕಾಲೇಜಿನ ಆವರಣಕ್ಕೂ ನೀರು ನುಗ್ಗಿದೆ. ಹಲವು ಜಮೀನುಗಳು ಕೂಡ ನೀರಿನಲ್ಲಿ ಜಲಾವೃತವಾಗಿದೆ.

ಸುತ್ತೂರು ಸೇತುವೆ ಮುಳುಗಡೆ

ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಟ್ಟ ಹಿನ್ನೆಲೆಯಲ್ಲಿ ಮೈಸೂರು ತಾಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಮೈಸೂರು ಸುತ್ತೂರು ಮಾರ್ಗದ ಸಂಚಾರ ಬಂದ್ ಆಗಿದೆ. ಸುತ್ತೂರು ಸೇರಿದಂತೆ ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಅಕ್ಕ ಪಕ್ಕದ ತೆಂಗಿನ ತೋಟಕ್ಕೂ ನೀರು ನುಗ್ಗಿದೆ.

ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆಗೆ ಹಾನಿ

ಕೆಆರ್‌ಎಸ್ ನಿಂದ 1.70 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಮಂಡ್ಯ ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಳಿ ಹಾನಿಯಾಗಿದೆ. ನೀರಿನ ರಭಸಕ್ಕೆ ತಡೆಗೋಡೆ ಕೊಚ್ಚಿ ಹೋಗಿದೆ. ಕಾವೇರಿ ನದಿ ಬಳಿಯ ಎರಡೂ ಬದಿಗಳಲ್ಲಿನ‌ ತಡೆಗೋಡೆ ಕೊಚ್ಚಿ ಹೋಗಿದ್ದು, ವಿದ್ಯುತ್ ಕಂಬಗಳು ಪಳೆಯುಳಿಕೆಯಂತಾಗಿದೆ. ಚೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬಗಳು ಬೀಳದಂತೆ ಭದ್ರ ಮಾಡಿದ್ದಾರೆ. 1804 ರಲ್ಲಿ ಸಂಪೂರ್ಣ ಕಲ್ಲಿನಿಂದ ವೆಲ್ಲೆಸ್ಲಿ‌ ಸೇತುವೆ ನಿರ್ಮಿಸಲಾಗಿದ್ದು, 2 ಶತಮಾನಗಳಿಂದಲೂ ಭದ್ರವಾಗಿ ನೆಲೆಯೂರಿದೆ. ಇತಿಹಾಸದಲ್ಲಿ ನಿನ್ನೆಯೂ ಸೇರಿ ನಾಲ್ಕು ಭಾರಿ ಸೇತುವೆ ಮುಳುಗಡೆಯಾಗಿದೆ.

ಇದನ್ನೂ ಓದಿ: Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ

ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತಗೊಂಡಿದೆ. ಕೇಶಮುಂಡನ ಮಾಡುವ ಕೋಣೆಯು ನೀರಿನಲ್ಲಿ ಮುಳುಗಿದೆ. ತುಂಗಭದ್ರಾ ನದಿ ದಡದಲ್ಲಿರುವ ದೇವಸ್ಥಾನ ಇದಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಅನೇಕ ಅಂಗಡಿಗಳು ಜಲಾವೃತ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ಸಮೀಪ ಭಕ್ತರಿಗೆ ನಿಷೇಧಿಸಲಾಗಿದೆ.

ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಯಾದಗಿರಿಯಲ್ಲಿ ನಾರಾಯಣಪುರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೃಷ್ಣಾ ನದಿ ಪ್ರವಾಹದಿಂದ ಈಗಾಗಲೇ ಕೊಳ್ಳುರು ಸೇತುವೆ ಹಾಗೂ ಗುರ್ಜಾಪುರ ಸೇತುವೆ ಸಂಪರ್ಕ ಕಡಿತಗೊಂಡಿದೆ. ಅದೆ ರೀತಿ ವಡಗೇರಾ ತಾಲೂಕಿನ ಗುಂಡ್ಲುರು ಹೊರಭಾಗದ ಗುರ್ಜಾಪುರ ಸೇತುವೆ ಜಲಾವೃತಗೊಂಡಿವೆ. ಸೇತುವೆ ಜಲಾವೃತದಿಂದ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಡಿತವಾಗಿದೆ.

ಬೆಳಗಾವಿಯಲ್ಲಿ ಮತ್ತೆ ಲೊಳಸೂರ ಸೇತುವೆ ಬಂದ್‌

ಬೆಳಗಾವಿಯ ಲೊಳಸೂರ ಸೇತುವೆ ಮೇಲೆ ಮತ್ತೆ ಘಟಪ್ರಭೆ ಆವರಿಸಿದೆ. ನಿನ್ನೆಯಷ್ಟೆ ನೀರು ಕಡಿಮೆಯಾಗಿ ಓಪನ್ ಆಗಿದ್ದ ಲೊಳಸೂರ ಸೇತುವೆ, ಇದೀಗ ಮತ್ತೆ ಬಂದ್‌ ಆಗಿದೆ. ಸಂಕೇಶ್ವರ ಧಾರವಾಡ ರಾಜ್ಯ ಹೆದ್ದಾರಿಯಲ್ಲಿರುವ ಬೃಹತ್ ಸೇತುವೆ ಇದಾಗಿದೆ. ಲೊಳಸೂರು ಗೋಕಾಕ ಸಂಪರ್ಕ ಸೇತುವೆ ಬಂದ್‌ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Supreme Court SC ST Quota
ಪ್ರಮುಖ ಸುದ್ದಿ11 mins ago

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

karnataka Rain
ಮಳೆ13 mins ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ32 mins ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ43 mins ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

Stock Market
ವಾಣಿಜ್ಯ53 mins ago

Stock Market: ಷೇರುಪೇಟೆಯಲ್ಲಿ ಗೂಳಿ ಜಿಗಿತ; ಮೊದಲ ಬಾರಿ 82,000 ಗಡಿ ದಾಟಿದ ಸೆನ್ಸೆಕ್ಸ್

ಕ್ರೀಡೆ1 hour ago

Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

police firing gadag
ಕ್ರೈಂ1 hour ago

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

Pushpa 2 Allu Arjun climax leaked Fans urge producers to take action
ಟಾಲಿವುಡ್1 hour ago

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Supreme Court Sc St Quota
ದೇಶ2 hours ago

Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ13 mins ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ32 mins ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ43 mins ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌