Site icon Vistara News

Election Boycott: ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ; ಹುಂಚದಕಟ್ಟೆ ಗ್ರಾಪಂನಲ್ಲಿ ನಿರ್ಧಾರ

Election Boycott ripponpet Hunchadakatte

#image_title

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಹದಗೆಟ್ಟಿದೆ. ಇದು 2 ದಶಕದ ವ್ಯಥೆಯಾಗಿದ್ದು, ಜನಪ್ರತಿನಿಧಿಗಳು ಬಂದಾಗಲೆಲ್ಲ ದುರಸ್ತಿಗಾಗಿ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆಕ್ರೋಶಗೊಂಡಿರುವ ಗ್ರಾಮದ ನಾಗರಿಕರು ಚುನಾವಣಾ ಬಹಿಷ್ಕಾರಕ್ಕೆ (Election Boycott) ಮುಂದಾಗಿದ್ದಾರೆ.

ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಬ್ಳೆಬೈಲು, ಮಾದ್ಲುಮನೆ, ಸಣ್ಣಮನೆ, ಹೊಸಕೊಪ್ಪ, ಕಪ್ಪೆಹೊಂಡ, ಆಲೂರು, ಹತ್ತಳ್ಳಿ, ಚಿಕ್ಕಮತ್ತಿಗ, ಕಲ್ಲಳ್ಳಿ, ಶಿವಳ್ಳಿಕೊಪ್ಪ, ದೇಮ್ಲಾಪುರ, ಮಳಲಿಮಕ್ಕಿ, ಕೋಣಂದೂರು ಸಂಪರ್ಕಿಸುವ ನಾಲ್ಕೈದು ಕಿ.ಮೀ. ರಸ್ತೆಯು ಸಂಪೂರ್ಣ ಹದಗೆಟ್ಟ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟವಾಗಿದೆ.

ಇದನ್ನೂ ಓದಿ: Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್‌. ಯಡಿಯೂರಪ್ಪ

ತುರ್ತು ಪರಿಸ್ಥಿತಿಯಲ್ಲಿ ಯಾವ ಆಟೋ ಚಾಲಕರು, ಆ್ಯಂಬುಲೆನ್ಸ್, ಶಾಲಾ ವಾಹನಗಳು, ಈ ರಸ್ತೆಯಲ್ಲಿ ಬರಲು ಒಪ್ಪದೆ ಇರುವುದರಿಂದ ನಿತ್ಯ ಸಂಕಷ್ಟದಲ್ಲಿ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕು ಸಾಮಾನುಗಳನ್ನು ತಲೆ ಮೇಲೆ ಹೊತ್ತುಕೊಂಡು ಹೋಗುವ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

Exit mobile version