ಬೆಂಗಳೂರು, ಕರ್ನಾಟಕ: ಬಾಗಲಕೋಟೆ ಜಿಲ್ಲೆಯ ಹುನಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಿಜಯಾನಂದ ಕಾಶಪ್ಪನ್ನವರ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅವರು 76875 ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ದೊಡ್ಡನಗೌಡ ಪಾಟೀಲ್ ಅವರು 47404 ಮತಗಳನ್ನು ಪಡೆದುಕೊಂಡಿದ್ದಾರೆ.
2023ರ ಚುನಾವಣೆಯ ಅಭ್ಯರ್ಥಿಗಳು
ಹಾಲಿ ಶಾಸಕ ದೊಡ್ಡನಗೌಡ್ ಪಾಟೀಲ್ ಅವರು ಮತ್ತೆ ಆಯ್ಕೆ ಬಯಸಿ ಬಿಜೆಪಿಯಿಂದ ಕಣದಲ್ಲಿದ್ದರು. ಕಾಂಗ್ರೆಸ್‌ನಿಂದ ವಿಜಯಾನಂದ ಕಾಶಪ್ಪನ್ನವರ್ ಮತ್ತು ಜೆಡಿಎಸ್‌ನಿಂದ ಶಿವಪ್ಪ ಎಂ ಬೋಲಿ ಅವರು ಸ್ಪರ್ಧೆಯಲ್ಲಿದ್ದರು.
ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಬಿ.ವೈ.ವಿಜಯೇಂದ್ರ ಗೆಲುವಿನ ‘ಶಿಕಾರಿ’
2018ರ ಚುನಾವಣೆ ಫಲಿತಾಂಶ ಏನಾಗತ್ತು?
ಹುನಗುಂದ ಕ್ಷೇತ್ರವು ಬಾಗಲಕೋಟೆ ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ಷೇತ್ರ ಆರಂಭದಿಂದಲೂ ಕಾಂಗ್ರೆಸ್ ಪ್ರಾಬಲ್ಯ ಮೆರೆದಿದೆ. ಒಂದರ್ಥದಲ್ಲಿ ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2004ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮೆರೆಯುತ್ತಾ ಬಂದಿದೆ. 2018ರ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡನಗೌಡ ಪಾಟೀಲ್ ಅವರು 65012 ಮತಗಳನ್ನು ಪಡೆದುಕೊಂಡು 5227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ವಿಜಯಾನಂದ ಕಾಶಪ್ಪನ್ನವರ್ ಅವರು 59785 ಮತಗಳನ್ನು ಪಡೆದುಕೊಂಡಿದ್ದರು.