ಬೆಳಗಾವಿ: ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫೀರ್ಜಾದೆ (೩೯) ಆತ್ಮಹತ್ಯೆ (Suicide case) ಮಾಡಿಕೊಂಡಿದ್ದಾರೆ. ಅವರು ಬೆಳಗಾವಿಯ ಅಜಂ ನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಅವರು ಸೋಮವಾರ ಮಧ್ಯಾಹ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾಹಿತಿ ತಿಳಿದ ಪೊಲೀಸರು ಮೃತದೇಹವನ್ನು ಬಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಇದೀಗ ಶವವನ್ನು ಶವಾಗಾರದಲ್ಲಿ ಇಡಲಾಗಿದೆ.
ಜಾಫರ್ ಫೀರ್ಜಾದೆ ಅವರು ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಡಿಟಿಐನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದರು. ಉತ್ತಮ ದೇಹದಾರ್ಢ್ಯ ಹೊಂದಿದ್ದ ಅವರು ದೇಹ ದಂಡನೆಗೆ ಹೆಸರಾಗಿದ್ದರು.
ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬ ಬಗ್ಗೆ ನಿಖರ ಮಾಹಿತಿಗಳಿಲ್ಲ. ಪತ್ನಿ ರೇಷ್ಮಾ ತಾಳಿಕೋಟಿ ಅವರು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಈ ಕೃತ್ಯ ನಡೆದಿದೆ. ಇದೀಗ ಕುಟುಂಬಿಕರು ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ತನಿಖೆ ಆರಂಭಗೊಂಡಿದೆ.
ಇದನ್ನೂ ಓದಿ : Teacher suicide: ಶಿಕ್ಷಕ ಆತ್ಮಹತ್ಯೆ ವಿರುದ್ಧ ಬೀದಿಗಳಿದ ಶಿಕ್ಷಕರು, ಸಂಬಂಧಿಕರು; ಬಿಇಒ ಸೇರಿ ನಾಲ್ವರು ಸಸ್ಪೆಂಡ್