ರಾಮನಗರ: ಟಿಪ್ಪರ್ ಲಾರಿಗೆ ಇಟ್ಟಿಗೆ ಲೋಡ್ ಮಾಡುವ ವೇಳೆ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು (labourers death) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಲೋಡ್ ಮಾಡುವಾಗ ಲಾರಿಯ ಹೈಡ್ರಾಲಿಕ್ ಪ್ರೆಸ್ ಏಕಾಏಕಿಯಾಗಿ ಕುಸಿದು ದುರಂತ ಸಂಭವಿಸಿದೆ. ಮತ್ತೊಬ್ಬ ಕಾರ್ಮಿಕನಿಗೆ ಗಂಭೀರ ಗಾಯವಾಗಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಬಳಿ ಆರ್ ಕೆ ಬಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಆಂಧ್ರ ಪ್ರದೇಶದ ಮೂಲದ ಮಹೇಶ್(30), ತುಮಕೂರು ಮೂಲದ ಕಾಂತರಾಜು(45) ಸಾವು ಮೃತಪಟ್ಟಿದ್ದಾರೆ. ನರಸಿಂಹಮೂರ್ತಿ ಎಂಬಾತನಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾಪೋಕ್ಲುವಿನ ಬಟ್ಟೆ ಮಳಿಗೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೊಡಗು: ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಆರ್.ಎಚ್. ಬಟ್ಟೆ ಮಳಿಗೆ ನಡೆಸುತ್ತಿದ್ದ ಎಚ್.ಕೆ. ಸಂದೀಪ್ (೪೦) ಎಂಬ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಪೋಕ್ಲು ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಸಂದೀಪ್ ಅವರು ಅಲ್ಲೇ ಸಾವಿಗೆ ಶರಣಾಗಿದ್ದಾರೆ.
ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಡ್ಲಹಳ್ಳಿ ಗ್ರಾಮದ ನಿವಾಸಿಯಾದ ಸಂದೀಪ್ ಅವರು ನಾಪೋಕ್ಲುವಿನಲ್ಲಿ ಬಟ್ಟೆ ಅಂಗಡಿ ಮಾಡಿಕೊಂಡಿದ್ದರು. ಇತ್ತೀಚೆಗೆ ವ್ಯಾಪಾರದಲ್ಲಿ ನಷ್ಟ ಹೊಂದಿದ್ದರು, ಅಂಗಡಿಯನ್ನು ಮುಚ್ಚಿದ್ದರು. ಅದಾದ ಬಳಿಕ ಅವರು ಬದುಕು ಸಾಗಿಸಲು ಕಷ್ಟಪಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಶುಕ್ರವಾರ ಬೆಳಗ್ಗೆ 7.30ಕ್ಕೆ ಸ್ನೇಹಿತ ಸಂದೇಶ್ ಎಂಬುವರಿಗೆ ಕರೆ ಮಾಡಿ 9 ಗಂಟೆಗೆ ಮನೆಗೆ ಬರಲು ತಿಳಿಸಿದ್ದರು ಸಂದೀಪ್. ಆದರೆ, ಬಂದು ನೋಡಿದಾಗ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದರು. ಸಂದೇಶ್ ಅವರು ಮಾಹಿತಿ ನೀಡಿದ ಬಳಿಕ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : Mass Suicide : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ತಂದೆ-ತಾಯಿ ಜತೆ ವಿವಾಹಿತ ಮಗಳ ದುರಂತ ಅಂತ್ಯ