Site icon Vistara News

BS Yediyurappa: ಕಾಂಗ್ರೆಸ್‌ ಗ್ಯಾರಂಟಿ ಜಾರಿ ಬಗ್ಗೆ ನನಗೆ ಗ್ಯಾರಂಟಿ ಇದೆ: ಬಿ.ಎಸ್‌. ಯಡಿಯೂರಪ್ಪ

B S Yediyurappa On Opposition Leader Selection

BJP Do Not Elect Karnataka Leader Of Opposition, BSY Says Will Take Two More Days

ಬೆಂಗಳೂರು: ಕಾಂಗ್ರೆಸ್‌ನವರು ಶನಿವಾರ ಸಂಪುಟ ಸಭೆಯಲ್ಲಿ ಗ್ಯಾರಂಟಿ ಜಾರಿ ಬಗ್ಗೆ ಒಪ್ಪಿಗೆ ಪಡೆದಿದ್ದಾರೆ. ಈಗಾಗಲೇ ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆಜ್ಞೆಗಳನ್ನು ಹೊರಡಿಸಿದ್ದಾರೆ. ನಾನು ಅನಗತ್ಯವಾಗಿ ಟೀಕೆ ಟಿಪ್ಪಣಿ ಮಾಡಲು ಹೋಗಲ್ಲ. ಅವರು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ವಿಶ್ವಾಸ ನನಗೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಎಸ್.‌ ಯಡಿಯೂರಪ್ಪ, ಕಾಂಗ್ರೆಸ್ ಗ್ಯಾರಂಟಿ ಭರವಸೆಗಳು ನಮ್ಮ ಹಿನ್ನಡೆಗೆ ಬಹುಮುಖ್ಯ ಕಾರಣವಾಗಿದೆ. ಈಗಾಗಲೇ ಅವೆಲ್ಲ ಭರವಸೆಗಳನ್ನು ಈಡೇರಿಸುವುದಾಗಿ ಅವರು ಹೇಳಿದ್ದಾರೆ. ಅವರು ಅದನ್ನು ಅನುಷ್ಠಾನಕ್ಕೆ ತರಲಿ. ಒಟ್ಟಾರೆಯಾಗಿ ಜನರಿಗೆ ಒಳ್ಳೆಯದಾಗಲಿ ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: UR Sabhapati: ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನ; ಕರಾವಳಿ ಭಾಗದ ಪ್ರಭಾವಿ ನಾಯಕ ಇನ್ನಿಲ್ಲ

ಕಾಂಗ್ರೆಸ್‌ನವರ ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಅನಗತ್ಯವಾಗಿ ಟೀಕೆ ಮಾಡಲು ಹೋಗುವುದಿಲ್ಲ. ಬೇರೆಯವರು ಮಾತನಾಡಿದಂತೆ ನಾನು ಮಾತನಾಡಲ್ಲ ಎಂದು ಬಿ.ಎಸ್.‌ ಯಡಿಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್‌ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್‌. ಯಡಿಯೂರಪ್ಪ, ಅವರು ರೀತಿಯ ಹೇಳಿಕೆ ಕೊಟ್ಟಿರೋದು ಸ್ವಾಭಾವಿಕವಾಗಿದೆ. ಇಂಥ ಹೇಳಿಕೆಗಳ ಬಗ್ಗೆ ನಾವು ಚಿಂತೆ ಮಾಡುವುದಿಲ್ಲ. ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ, ನಾವು ಚಿಂತೆ ಮಾಡಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.

ನನ್ನ, ಸಿದ್ದರಾಮಯ್ಯ ಮನೆ ಸುತ್ತೋದು, ಚಾಡಿ ಹೇಳೋದು ಬಿಡಿ; ಡಿಕೆಶಿ ಖಡಕ್‌ ವಾರ್ನಿಂಗ್‌

ʻʻಇಲ್ಲಿ ವ್ಯಕ್ತಿಗಿಂತಲೂ ಪಕ್ಷ ಮುಖ್ಯ. ನಾವೆಲ್ಲರೂ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಗಾಂಧಿ ಕುಟುಂಬದವರು, ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳಿದ್ದಾರೋ ಅದೇ ನಮಗೆ ವೇದ ವಾಕ್ಯʼʼ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಅದರ ಜತೆಗೇ ಇನ್ನೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ʻನನ್ನ ಮನೆ, ಸಿದ್ದರಾಮಯ್ಯನವರ (Siddaramaiah) ಮನೆ ಅಂತ ಸುತ್ತಾಡೋದನ್ನು ಬಿಡಿ, ಇಲ್ಲಿದ್ದನ್ನು ಅಲ್ಲಿ, ಅಲ್ಲಿದ್ದನ್ನು ಇಲ್ಲಿ ಹೇಳುವುದನ್ನು ಬಿಡಿʼʼ ಎಂದು ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಈ ಮೂಲಕ ಒಬ್ಬರ ವಿಷಯವನ್ನು ಇನ್ನೊಬ್ಬರ ಬಳಿ ಹೇಳಿ ಜಗಳಕ್ಕೆ ಕಾರಣವಾಗುವ ಚಾಳಿಯನ್ನು ಬಿಡಬೇಕು, ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ (Rajeev Gandhi) ಅವರ ಪುಣ್ಯತಿಥಿ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಚಂದ್ರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಭಾಗವಹಿಸಿದ್ದರು. ಗಣ್ಯರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ತ್ಯಾಗ ನೆನಪಿಟ್ಟುಕೊಳ್ಳಿ

ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ತ್ಯಾಗವನ್ನು ನಾವು ನೆನಪಿಟ್ಟುಕೊಳ್ಳಬೇಕು, ಗಾಂಧಿ ಕುಟುಂಬದ ತ್ಯಾಗವನ್ನು ನಾವು ಯಾವತ್ತೂ ಮರೆಯುವ ಹಾಗಿಲ್ಲ. ಅಂಥ ತ್ಯಾಗವನ್ನು ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್‌ ಹೇಳಿದರು.

ʻʻನನ್ನ ಮತ್ತು ಸಿದ್ದರಾಮಯ್ಯ ಅವರನ್ನು ಕೂರಿಸಿ ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ನಮಗೆ ಖರ್ಗೆ ಮತ್ತು ಗಾಂಧಿ ಕುಟುಂಬದವರು ಏನು ಹೇಳಿದ್ದಾರೋ ಅದೇ ವೇದ ವಾಕ್ಯ. ಇಲ್ಲಿ ವ್ಯಕ್ತಿಗಿಂತಲೂ ಪಕ್ಷ ಮುಖ್ಯ. ನಾವು ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕುʼʼ ಎಂದು ಶಿವಕುಮಾರ್‌ ನುಡಿದರು.

ಅಧಿಕಾರಕ್ಕಾಗಿ ಸಿದ್ದರಾಮಯ್ಯ ಮತ್ತು ತಮ್ಮ ಮನೆಗೆ ಓಡಾಡುವುದನ್ನು ಬಿಡಿ ಎಂದ ಅವರು, ʻʻತಾಳ್ಮೆಯಿಂದ ಇರಿ.. ಎಲ್ಲರಿಗೂ ಅಧಿಕಾರ ಸಿಗುತ್ತದೆʼʼ ಎಂದರು. ನಮಗೆಲ್ಲರಿಗೂ ಈಗ 2024ರ ಚುನಾವಣೆಯೇ ಮುಖ್ಯ. ಈಗ ಅಧಿಕಾರದ ವಿಚಾರ ಬಿಡಿ, ಮೊದಲು ಬೂತ್‌ ಗಟ್ಟಿ ಮಾಡಿʼʼ ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ: IPL 2023 : ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದ ಎಲ್​ಎಸ್​ಜಿ, ಆರ್​ಸಿಬಿ ಭವಿಷ್ಯವೇನು?

ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ಹೇಳೋದನ್ನು ನಿಲ್ಲಿಸಿ. ನಾನು ಯಾರ ಮಾತುಗಳನ್ನೂ ಕಿವಿಗೆ ಹಾಕಿಕೊಳ್ಳುವುದಿಲ್ಲ. 35 ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇನೆ. ಯಾರು ಯಾವುದನ್ನು ಯಾಕೆ ಹೇಳುತ್ತಾರೆ ಎಂದು ನನಗೆ ಗೊತ್ತಾಗುತ್ತದೆʼʼ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

Exit mobile version