I am not in the race for CM Dont worry about CM post mallikarjuna Kharge warns Siddaramaiah and DK Shivakumar Karnataka Election 2023 updates Karnataka Election 2023: ನಾನು ಸಿಎಂ ರೇಸ್‌ನಲ್ಲಿ ಇಲ್ಲ; ಮುಖ್ಯಮಂತ್ರಿ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಸಿದ್ದು, ಡಿಕೆಶಿಗೆ ಖರ್ಗೆ ಖಡಕ್‌ ವಾರ್ನಿಂಗ್ - Vistara News

ಕರ್ನಾಟಕ

Karnataka Election 2023: ನಾನು ಸಿಎಂ ರೇಸ್‌ನಲ್ಲಿ ಇಲ್ಲ; ಮುಖ್ಯಮಂತ್ರಿ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಸಿದ್ದು, ಡಿಕೆಶಿಗೆ ಖರ್ಗೆ ಖಡಕ್‌ ವಾರ್ನಿಂಗ್

Assembly Election: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ತಂತ್ರ, ರಣತಂತ್ರವನ್ನು ಹೆಣೆಯುತ್ತಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ನೀಡುತ್ತಿರುವ ಹೇಳಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದು, ಜನರ ಬಗ್ಗೆ ತಲೆಕೆಡಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

VISTARANEWS.COM


on

AICC president mallikarjun Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಯಾರೇ ಮುಖ್ಯಮಂತ್ರಿಯಾಗಲಿ, ನನಗೆ ಅದು ಬೇಕಿಲ್ಲ. ನನಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ನಾಯಕರು ಮುಖ್ಯಮಂತ್ರಿ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಜನರ ಬಗ್ಗೆ ತಲೆಕೆಡಿಸಿಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ನಾಯಕರಿಗೆ ಖಡಕ್‌ ಸೂಚನೆಯನ್ನು ನೀಡಿದ್ದಾರೆ. ಈ ಮೂಲಕ ಪಕ್ಷವನ್ನು ಗೆಲ್ಲಿಸಿಕೊಂಡು ಬರುವಲ್ಲಿ ಶ್ರಮವಹಿಸಿ ಎಂಬ ಸಂದೇಶವನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಅಭಿಲಾಷೆ ವ್ಯಕ್ತಪಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಇನ್ನಿತರ ನಾಯಕರಿಗೆ ನೀಡಿದ್ದಾರೆ.

ಕೋಲಾರದಲ್ಲಿ ಏರ್ಪಡಿಸಲಾಗಿದ್ದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರವನ್ನು ಹಿಡಿಯುವ ಕೆಲಸ ಆಗಬೇಕು. ನಾನಂತೂ ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ ಎಂದು ಸ್ಪಷ್ಟ ಸಂದೇಶವನ್ನು ಪಕ್ಷದ ನಾಯಕರಿಗೆ ನೀಡಿದರು.

ಇದನ್ನೂ ಓದಿ: Karnataka Election 2023: ಪಕ್ಷ ಸ್ಥಾನಮಾನ ಕೊಟ್ಟಿದ್ದರೂ ಯಡಿಯೂರಪ್ಪ ಏಕೆ ಕೆಜೆಪಿ ಕಟ್ಟಿದ್ದರು: ಬಿಎಸ್‌ವೈಗೆ ಶೆಟ್ಟರ್‌ ತಿರುಗೇಟು

ಕೋಲಾರ ಬಂಗಾರದ ಜಿಲ್ಲೆಯಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ಕೆಸಿ ವ್ಯಾಲಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಈ ಭಾಗದ ನೂರಾರು ಕೆರೆಗಳು ತುಂಬಿವೆ. ಇದರಿಂದ ನೀರಾವರಿ ಕೃಷಿ ಆಗುತ್ತಿದೆ ಎಂದು ತಿಳಿಸಿದರು.

ಕೃಷ್ಣಪ್ಪ ಅವರ ಕಾಲದಲ್ಲಿ ಹಾಲಿನ ಡೈರಿಯನ್ನು ಶುರು ಮಾಡಲಾಗಿತ್ತು. ಕೋಲಾರ ಹಾಲು, ನೀರು, ರೇಷ್ಮೆ , ಬಂಗಾರಕ್ಕೆ ಪ್ರಸಿದ್ಧವಾಗಿದೆ. ಇಂತಹ ನಾಡಿನಿಂದ ಚುನಾವಣಾ ಪ್ರಚಾರವನ್ನು ಶುರು ಮಾಡುತ್ತಿದ್ದೇವೆ. ರಾಜ್ಯದಲ್ಲಿ ಜನರು 40 ಪರ್ಸೆಂಟ್‌ ಕಮಿಷನ್ ವಿರುದ್ಧ ಬೇಸತ್ತು ಬಿಜೆಪಿ ಬಿಟ್ಟು ಬಂದು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಡಿಕೆಶಿ, ಸಿದ್ದರಾಮಯ್ಯಗೆ ಪರೋಕ್ಷವಾಗಿ ಖರ್ಗೆ ನೀಡಿದ ಸೂಚನೆ ಏನು?

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹೋದ ಕಡೆಯಲ್ಲೆಲ್ಲ ಕಾಂಗ್ರೆಸ್‌ಗೆ ಬೈದುಕೊಂಡು ಒಂಬತ್ತು ವರ್ಷಗಳ ಕಾಲ‌ ಕಳೆದರು. ಕಾಂಗ್ರೆಸ್‌ ನಾಯಕರ ಕಾಲದಲ್ಲಿ ಪಬ್ಲಿಕ್ ಸೆಕ್ಟರ್ ಬಂತು. ಆದರೆ, ಇವರು ಉದ್ಯಮಿ ಗೌತಮ್ ಅದಾನಿಗೆ ಅನುಕೂಲ ಮಾಡಿಕೊಟ್ಟರು. ಇನ್ನು ಅದಾನಿ ಆದಾಯ ಹೇಗೆ ಹೆಚ್ಚಳ ಆಯಿತು? ಮೋದಿಯವರೇ ನೀವು ಹೊರಗಡೆ ಹೋದಾಗ ನಿಮ್ಮನ್ನು ಅದಾನಿ ಎಲ್ಲೆಲ್ಲಿ ಭೇಟಿಯಾಗಿದ್ದರು? ಪಾರ್ಲಿಮೆಂಟ್‌ನಲ್ಲಿ 1 ಗಂಟೆಗೆ 28 ನಿಮಿಷಗಳ ಮಾತನಾಡಿದ್ದೆ. ಬಿಜೆಪಿ ಸಂಸದರು ಗಲಾಟೆ ಮಾಡಿದರು. ಮೋದಿ ಅಲ್ಲಿಯೇ ಕುಳಿತು, ತಮ್ಮ ಸಂಸದರಿಗೆ ಗಲಾಟೆ ಮಾಡಬೇಡಿ, ಸುಮ್ಮನೆ ಇರಿ ಎಂದು ಹೇಳಿಲ್ಲ ಎಂದು ಹೇಳಿದರು.

ರಾಹುಲ್‌ ಗಾಂಧಿ ಮನೆ ಕಿತ್ತುಕೊಂಡರು

ಇದೇ ಕೋಲಾರದಲ್ಲಿ ರಾಹುಲ್‌ ಗಾಂಧಿಯವರು ಮಾತನಾಡಿದ್ದರು. ಆದರೆ, ಈ ಬಗ್ಗೆ ಗುಜರಾತ್‌ನಲ್ಲಿ ಎಫ್‌ಐಆರ್ ಹಾಕಲಾಯಿತು. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುತ್ತಿದ್ದಂತೆ 24 ಗಂಟೆಯಲ್ಲಿ ರಾಹುಲ್‌ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಯಿತು. ಮನೆ, ಟೆಲಿಫೋನ್ ಎಲ್ಲವನ್ನೂ ಕಿತ್ತುಕೊಂಡರು ಎಂದು ಖರ್ಗೆ ಕಿಡಿಕಾರಿದರು.

ಇದನ್ನೂ ಓದಿ: Karnataka Election 2023: ಚಾಮರಾಜನಗರ ಬಂಡಾಯ ಶಮನಗೊಳಿಸಿದ ಬಿ.ಎಲ್‌. ಸಂತೋಷ್‌; ಸೋಮಣ್ಣಗೆ ಬೆಂಬಲ ಘೋಷಿಸಿದ ನಾಗಶ್ರೀ

ಜಗತ್ತಿನಲ್ಲಿಯೇ ಐತಿಹಾಸಿಕ ಕಾರ್ಯಕ್ರಮ

ರಾಹುಲ್ ಗಾಂಧಿ ಧೈರ್ಯವಾಗಿ ಮಾತನಾಡುತ್ತಾರೆ. ದೇಶದಲ್ಲಿ ಯಾರಾದರೂ ಧೈರ್ಯವಾಗಿ ಮಾತನಾಡುತ್ತಿದ್ದಾರೆಂದರೆ ಅದು ರಾಹುಲ್ ಗಾಂಧಿ ಮಾತ್ರ. ಪಾರ್ಲಿಮೆಂಟ್‌ನಲ್ಲಿ ಆಡಳಿತ ಪಕ್ಷದವರ ತಲೆಕೆಳಗಾಗುವಂತೆ ಮಾತನಾಡುತ್ತಾರೆ. ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ನೆರವೇರಿಸಿದರು. ರೈತರು, ಮಹಿಳೆಯರು, ಪತ್ರಕರ್ತರು, ಯುವಕರನ್ನು ಭೇಟಿ ಮಾಡಿದ್ದಾರೆ. ಇದು ದೇಶದಲ್ಲಷ್ಟೇ ಅಲ್ಲ, ಜಗತ್ತಿನಲ್ಲಿಯೇ ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡು ಮಹಿಳೆಗೆ ಗುದ್‌ ಬಿಟ್ಟೆ ಎಂದು ಚಿತ್ರ ನಿರ್ದೇಶಕ ನಾಗಶೇಖರ್‌ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

I lost control of my eyes while driving the car Film director Nagashekhar
Koo

ಬೆಂಗಳೂರು: ನಿನ್ನೆ ಶುಕ್ರವಾರ ಚಿತ್ರ ನಿರ್ದೇಶಕ ನಾಗಶೇಖರ್ (Nagashekar) ಕಾರು (Road Accident) ಅಪಘಾತವಾಗಿತ್ತು. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ ಸಂಭವಿಸಿತ್ತು. ರಭಸವಾಗಿ ಬಂದ ಕಾರು ಮರಕ್ಕೆ ಗುದ್ದಿತ್ತು. ಇತ್ತ ಫುಟ್‌ಪಾತ್‌ ಮೇಲೆ ನಿಂತಿದ್ದ ಮಹಿಳೆಗೂ ಕಾರು ಡಿಕ್ಕಿ ಹೊಡೆದಿತ್ತು.

ಈ ಸಂಬಂಧ ಜ್ಞಾನಭಾರತಿ ಸಂಚಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿರುವ ನಾಗಶೇಖರ್, ಕಾರು ಓಡಿಸಿಕೊಂಡು ಬರುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ. ಬಳಿಕ ಕಾರನ್ನು ಫುಟ್‌ಪಾತ್‌ ಮೇಲೆ ಹತ್ತಿಸಿದೆ . ಫುಟ್‌ಪಾತ್ ಮೇಲೆ ನಿಂತಿದ್ದ ಲಕ್ಷ್ಮಿ ಎಂಬ ಮಹಿಳೆಗೆ ಸಣ್ಣ-ಪುಟ್ಟ ಗಾಯವಾಗಿದೆ. ನಾನೇ ಮಹಿಳೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೇನೆ. ಆ ಮಹಿಳೆ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಸದ್ಯ ಅಪಘಾತದ ಸಂಬಂಧ ಸಂಚಾರಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ. ಸೆಲ್ಪ್ ಆಕ್ಸಿಡೆಂಟ್ ಹಿನ್ನೆಲೆಯಲ್ಲಿ ಇನ್ಸೂರೆನ್ಸ್ ಕ್ಲೈಮ್ ಮಾಡಲು ಒಂದು ಮೆಮೋ ಕಾಪಿ ಕೊಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನೂ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೆಲ್ಡಿಂಗ್ ಬಿಟ್ಟಿದ್ದ ಹಳಿಯಲ್ಲಿ ಬರುತ್ತಿದ್ದ ರೈಲು ನಿಲ್ಲಿಸಿ ದುರಂತ ತಪ್ಪಿಸಿದ್ದಾರೆ. ಉತ್ತರಕನ್ನಡದ ಕುಮಟಾ ಹೊನ್ನಾವರದ ಕೊಂಕಣ ರೈಲ್ವೇ ಮಾರ್ಗದಲ್ಲಿ ಘಟನೆ ನಡೆದಿದೆ. ಮಹಾದೇವ್ ರೈಲು ದುರಂತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಆಗಿದ್ದಾರೆ.

Road Accident
Road Accident

ಬೆಳಗ್ಗೆ 5 ಗಂಟೆಗೆ ತಿರುವನಂತಪುರದಿಂದ ನವದೆಹಲಿಗೆ ರಾಜಧಾನಿ ಎಕ್ಸಪ್ರೆಸ್ ರೈಲು ಹೊರಟಿತ್ತು. ಇದೇ ವೇಳೆ ಕುಮಟಾ ಸಮೀಪ ಹಳಿಯಲ್ಲಿ ವೆಲ್ಡಿಂಗ್ ಬಿಟ್ಟಿದ್ದನ್ನು ಮಹಾದೇವ ಗಮನಿಸಿದ್ದರು. ಹೊನ್ನಾವರ ಸ್ಟೇಷನ್ ಮಾಸ್ಟರ್‌ಗೆ ಕರೆಮಾಡಿ ರೈಲು ನಿಲ್ಲಿಸಲು ಮಾಹಿತಿ ನೀಡಿದ್ದರು. ರೈಲು ನಿಲ್ದಾಣ ದಾಟಿದ್ದರಿಂದ ಹಳಿಯಲ್ಲಿ 500 ಮೀಟರ್ ಓಡಿ ರೈಲಿಗೆ ಕೆಂಪು ಬಾವುಟ ತೋರಿಸಿ ನಿಲ್ಲಿಸಿದ್ದಾರೆ. ಟ್ರ್ಯಾಕ್‌ಮ್ಯಾನ್ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Self Harming : ಪತಿಗೆ ಬೇರೆಯವರ ಜತೆಗೆ ಅನೈತಿಕ ಸಂಬಂಧವಿದೆ ಎಂದು ಮನನೊಂದ ಪತ್ನಿ ಮೈ ಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಕಿ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

VISTARANEWS.COM


on

By

her husband was having an illicit relationship Suicide by setting herself on fire
Koo

ಬೆಂಗಳೂರು ಗ್ರಾಮಾಂತರ: ಹುಳಿಮಾವು ಸಮೀಪದ ಅಕ್ಷಯನಗರದಲ್ಲಿ ಮಹಿಳೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾ ಮೃತ ದುರ್ದೈವಿ. ಎರಡು‌ ದಿನದ ಹಿಂದೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಅನುಷಾಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಬೆಂಕಿ ಕೆನ್ನಾಲಿಗೆ ಸುಟ್ಟು ಕರಕಲಾಗಿದ್ದ ಅನುಷಾ ಸಾವು-ಬದುಕಿನ ಮಧ್ಯೆ ಹೋರಾಡಿ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅನುಷಾ ಐದು ವರ್ಷಗಳ ಹಿಂದೆ ಶ್ರೀಹರಿ ಎಂಬಾತನ ಜತೆಗೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವೂ ಇದೆ. ಇತ್ತೀಚೆಗೆ ಪತಿ ಶ್ರೀಹರಿಗೆ ಮತ್ತೊಬ್ಬಳ ಜತೆಗೆ ಅನೈತಿಕ ಸಂಬಂಧ ಇದೆ ಎಂದು ಅನುಷಾ ಅನುಮಾನಿಸಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ, ಆಗಾಗ ಜಗಳ ನಡೆಯುತ್ತಿತ್ತು. ಮೊನ್ನೆಯೂ ಇದೇ ವಿಚಾರಕ್ಕೆ ಗಲಾಟೆ ಆಗಿದ್ದು, ಇದರಿಂದ ಮನನೊಂದ ಅನುಷಾ ಬಾತ್ ರೂಂನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.

ಆಕೆಯ ಕಿರುಚಾಟ ಕೇಳಿ ಬಂದ ಕುಟುಂಬಸ್ಥರು ಕೂಡಲೇ ಬಾಗಿಲು ಮುರಿದು ಬೆಂಕಿ ನಂದಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅನುಷಾ ಮೃತಪಟ್ಟಿದ್ದಾಳೆ.

ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆಯನ್ನು‌ ನಡೆಸುತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಾಯಿ ಇಲ್ಲದೆ ಮಗುವು ತಬಲಿಯಾಗಿದೆ.

ದರ್ಶನ್‌ ಎರಡನೇ ಮದುವೆ ಆಗಿಲ್ವಾ? ನಾನು ಮಾಡಿಕೊಂಡ್ರೆ ತಪ್ಪೇನು?

ಹುಳಿಮಾವು ಅಕ್ಷಯನಗರದಲ್ಲಿ ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಷ ತಂದೆ ಹೇಮಂತ್ ಪ್ರತಿಕ್ರಿಯಿಸಿದ್ದು, ಕಳೆದ ಮೂರು ತಿಂಗಳಿನಿಂದ ಜಗಳ ಹೆಚ್ಚಾಗಿದೆ. ನನ್ನ ಮಗಳಿಗೆ ಮಹಿಳೆ ಠಾಣೆಗೆ ದೂರು ಕೊಡೋಣಾ ಅಂದಿದ್ದೆ. ಇಲ್ಲ ಬೇಡ ನನ್ನ ಸಂಸಾರನ ಸರಿ ಮಾಡಿಕೊಳ್ಳುತ್ತಿನಿ ಅಂತಿದ್ದಳು. ಮಗಳು ಬೆಂಕಿ ಕೊಳ್ಳುವಾಗ ಅವನು ಮನೆಲೇ ಇದ್ದಾನೆ, ಆದರೂ ಕಾಪಾಡಿಲ್ಲ. ರೂಮ್‌ನ ವಾಶ್ ರೂಂನಲ್ಲಿ ವಾಟ್ಸಪ್ ವಿಡಿಯೋ ಕಾಲ್ ಮಾಡಿಕೊಂಡೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಮೊದಲೇ ಪೆಟ್ರೋಲ್ ತೆಗೆದುಕೊಂಡು ಬಂದು ಮನೇಲಿ ಇಟ್ಟಿದ್ದಾಳೆ. ವೀಡಿಯೊ‌ ಕಾಲ್ ರಿಸೀವ್ ಮಾಡಿ ಸುಮ್ಮನೆ ಇದ್ದಾನೆ. ಈ ಬಗ್ಗೆ ಕೇಳಿದ್ದರೆ, ನಟ ದರ್ಶನ್ ಎರಡನೆ ಮದುವೆ ಆಗಿದ್ದಾನೆ ಆತ ಸಂತೋಷವಾಗಿಲ್ವಾ? ನಾನು ಎರಡನೇ ಮದುವೆ ಆದರೆ ತಪ್ಪೇನು ಅಂತ ಮರು ಪ್ರಶ್ನೆ ಹಾಕಿದ್ದನಂತೆ.

ವಿಡಿಯೊ ಕಾಲ್‌ನಲ್ಲೇ ಬೆಂಕಿ ಹಚ್ಚಿಕೊಂಡ ಅನುಷಾ

ಅನುಷಾ ಗಂಡನಿಗೆ ವಾಟ್ಸಪ್ ಕಾಲ್ ಮಾಡುತ್ತಲೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಅದನ್ನೂ ಕಂಡರೂ ಶ್ರೀಹರಿ ಸುಮ್ಮನಾಗಿದ್ದ. ಮೂರು ತಿಂಗಳಿನಿಂದ ಡಿವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ನನಗೆ ಬೇರೆ ಸಂಬಂಧ ಇದೆ ನನ್ನ ಬಿಟ್ಟು ಬಿಡು ಅಂತಿದ್ದ. ಆಕೆ ಬೆಂಕಿ ಹಚ್ಚಿಕೊಂಡಾಗ ಕಾಪಾಡಬಹುದಿತ್ತು, ಆದರೆ ಸಾಯಲಿ ಅಂತಾನೇ ಸುಮ್ಮನೆ ಇದ್ದಾನೆ. ಮದುವೆ ಆದಾಗಿನಿಂದಲೂ ಚಿತ್ರಹಿಂಸೆ ನೀಡುತ್ತಾನೆ ಇದ್ದ ಎಂದು ಮೃತಳ ಅಕ್ಕ ಉಷಾ ಆಕ್ರೋಶ ಹೊರಹಾಕಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Karnataka Weather Forecast : ರಾಜ್ಯಾದ್ಯಂತ ಸೆ.6ರಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ (Rain News) ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಗಾಳಿಯೊಂದಿಗೆ ಮಳೆ ಅಬ್ಬರ

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ನಟ ದರ್ಶನ್‌ನನ್ನು ಬಂಧಿಸುವಾಗ ಪೊಲೀಸರಿಗೆ ದಾರಿ ತಪ್ಪಿಸಿದ್ದ ಹೋಟೆಲ್‌ ಸಿಬ್ಬಂದಿ!

Actor Darshan: ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್‌ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಪೊಲೀಸರಿಗೆ ದಾರಿ ತಪ್ಪಿಸಿದ್ದರು.

VISTARANEWS.COM


on

By

Hotel staff misleads police while arresting actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಂಧಿಸುವಾಗ (Actor Darshan) ನಾನಾ ಸಮಸ್ಯೆಯನ್ನು ಎದುರಿಸಬೇಕಾಯಿತು. ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್‌ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಹೋಟೆಲ್‌ನಲ್ಲಿ ಕೆಲಕಾಲ ಕಾದಿದ್ದ ಪೊಲೀಸರಿಗೆ, ದಿಢೀರನೆ ಮೂವರು ಬಾಡಿ ಗಾರ್ಡ್ಸ್ ಬಂದಿದ್ದರು. ಪೊಲೀಸರನ್ನು ಕಂಡು ತುರಾತುರಿಯಲ್ಲಿ ದರ್ಶನ್ ಕಾರಿನಲ್ಲಿ ಹೋಗುತ್ತಿದ್ದ ಬಾಡಿ ಗಾರ್ಡ್ಸ್‌ ಅಡ್ಡ ಹಾಕಿ ಮೊಬೈಲ್ ಪಡೆದಿದ್ದರು. ದರ್ಶನ್ ರೂಂ ತೋರಿಸುವಂತೆ ಬಾಡಿ ಗಾರ್ಡ್ಸ್‌ಗೆ ಪೊಲೀಸರು ಗದರಿಸಿದ್ದರು.

ಬಳಿಕ ರೂಮ್ ತೋರಿಸಲು ಕರೆದುಕೊಂಡು ಹೋಗಿದ್ದರು. ಮತ್ತೊಂದು ಕೀ ಬಳಸಿ ದರ್ಶನ್ ಇದ್ದ ರೂಮ್ ಓಪನ್ ಮಾಡಿದ್ದರು. ಈ ವೇಳೆ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ನಟ ದರ್ಶನ್ ಎರಡೇ ನಿಮಿಷದಲ್ಲಿ ಬಾತ್ ರೂಮ್‌ನಿಂದ ಹೊರ ಬಂದಿದ್ದರು. ಪೊಲೀಸರು ನಮ್ಮ ಜತೆಗೆ ಬರಬೇಕು ಎಂದಾಗ ಬಟ್ಟೆ ಹಾಕಿಕೊಂಡು ಬರುತ್ತೇನೆ ಸಾರ್ ಎಂದಿದ್ದರು. ಬಳಿಕ ದರ್ಶನ್‌ನನ್ನು ಎಸಿಪಿ ಚಂದನ್ ಹಾಗೂ ಇನ್‌ಸ್ಪೆಕ್ಟರ್‌ ಗಿರೀಶ್ ನಾಯ್ಕ್ ಪೊಲೀಸ್ ಜೀಪ್ ಹತ್ತಿಸಿಕೊಂಡು ಬೆಂಗಳೂರಿಗೆ ಕರೆತಂದಿದ್ದರು.

ಇದನ್ನೂ ಓದಿ:

ಏಳು ಸಂಪುಟಗಳಾಗಿ ವಿಂಗಡಿಸಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ
ಸಂಪುಟ -1
ಚಾರ್ಜ್ ಶೀಟ್ ಮತ್ತು ಪೂರಕವಾದ ದಾಖಲೆಗಳು
ಸಂಪುಟ-2
ತನಿಖಾ ಕಾಲದಲ್ಲಿ ಸಂಗ್ರಹಿಸಲಾದ ಸಿಡಿಆರ್ ಡೇಟಾ
ಸಂಪುಟ 3
ತನಿಖಾ ಕಾಲದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ ಮಾಲು ಪಟ್ಟಿ ಮತ್ತು ಮಹಜರು ದಾಖಲೆ
ಸಂಪುಟ 3ಎ
ಮಾಲುಪಟ್ಟಿ ಮತ್ತು ಪಂಚನಾಮೆ ರಿಟ್ರೀವ್ ಪಂಚನಾಮೆಗಳು
ಸಂಪುಟ 4
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆ ಸಿಆರ್ ಪಿಸಿ 161 ಹಾಗೂ 164 ಹೇಳಿಕೆಗಳು
ಸಂಪುಟ 5
ತನಿಖಾ ಕಾಲದಲ್ಲಿ ಸಂಗ್ರಹಿಸಿದ ದಾಖಲೆಗಳು
ಸಂಪುಟ 5ಎ
ತನಿಖಾ ಕಾಲದಲ್ಲಿ ಸಂಗ್ರಹಿಸಿದ ಡಿಜಿಟಲ್ ಮತ್ತು ಟೆಕ್ನಿಕಲ್ ದಾಖಲೆಗಳು
ಸಂಪುಟ 6
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ, ವೈದ್ಯರ ಅಭಿಪ್ರಾಯ ಮತ್ತು ತಜ್ಞರ ವರದಿ
ಸಂಪುಟ 7
ಆರೋಪಿಗಳು ಬಳಸುತ್ತಿದ್ದ ಮೊಬೈಲ್ ರಿಟ್ರೀವ್ ವರದಿ, ಡೇಟಾ ವರದಿ, ಡೇಟಾ ಅನಾಲಿಸಿಸ್ ವರದಿ ಹಾಗೂ ಸ್ವಇಚ್ಚೆ ಹೇಳಿಕೆಗಳು

ವಿಚಾರಣೆ ವೇಳೆ ಕಣ್ಣೀರು ಹಾಕುತ್ತಿದ್ದ ಪವಿತ್ರಾಗೌಡ

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸಿಲುಕಿದ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ದಿನನಿತ್ಯ ಕಣ್ಣೀರು ಹಾಕುತ್ತಿದ್ದರು ಎನ್ನಲಾಗಿದೆ. ಪೊಲೀಸರ ಮುಂದೆ ಕೈ ಕಟ್ಟಿ ನಿಲುತ್ತಿದ್ದ ಪವಿತ್ರಾಗೌಡ ಅಳುತ್ತಲೇ ಘಟನೆ ಬಗ್ಗೆ ಹೇಳುತ್ತಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
I lost control of my eyes while driving the car Film director Nagashekhar
ಬೆಂಗಳೂರು1 hour ago

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

her husband was having an illicit relationship Suicide by setting herself on fire
ಬೆಂಗಳೂರು ಗ್ರಾಮಾಂತರ2 hours ago

Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Karnataka weather Forecast
ಮಳೆ9 hours ago

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Dina bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Hotel staff misleads police while arresting actor Darshan
ಸ್ಯಾಂಡಲ್ ವುಡ್23 hours ago

Actor Darshan: ನಟ ದರ್ಶನ್‌ನನ್ನು ಬಂಧಿಸುವಾಗ ಪೊಲೀಸರಿಗೆ ದಾರಿ ತಪ್ಪಿಸಿದ್ದ ಹೋಟೆಲ್‌ ಸಿಬ್ಬಂದಿ!

Darshan Brutality revealed in chargesheet
ಸ್ಯಾಂಡಲ್ ವುಡ್23 hours ago

Actor Darshan : ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಾ ದರ್ಶನ್! ಚಾರ್ಜ್‌ಶೀಟ್‌ನಲ್ಲಿ ಕ್ರೌರ್ಯದ ಅನಾವರಣ

Why did Darshans fan Raghavendra refuse to surrender
ಸ್ಯಾಂಡಲ್ ವುಡ್23 hours ago

Actor Darshan:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗು ಎಂದಾಗ ದರ್ಶನ್‌ ಅಭಿಮಾನಿ ರಾಘವೇಂದ್ರ ನಿರಾಕರಿಸಿದ್ದೇಕೆ?

actor darshan
ಸ್ಯಾಂಡಲ್ ವುಡ್24 hours ago

Actor Darshan : ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ಜೀವ ಬಿಟ್ಟಿದ್ದ ರೇಣುಕಾಸ್ವಾಮಿ!; ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು?

Haryana Naxal caught by police after coming to see girlfriend in Bengaluru
ಬೆಂಗಳೂರು1 day ago

Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌

Actor Darshan says he is not married to Pavithra Gowda
ಸ್ಯಾಂಡಲ್ ವುಡ್1 day ago

Actor Darshan : ನಾವಿಬ್ಬರು ಮದುವೆ ಆಗಿಲ್ಲ.. ಜಸ್ಟ್‌ ಲಿವಿಂಗ್‌ ಟುಗೆದರ್‌ನಲ್ಲಿ ಇದ್ದೀವಿ- ವಿಚಾರಣೆಯಲ್ಲಿ ನಟ ದರ್ಶನ್‌ ಹೇಳಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್7 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌