ಚಿಕ್ಕಬಳ್ಳಾಪುರ: ಈ ಹಿಂದೆ ಶಾಸಕ ಕೆ. ಶ್ರೀನಿವಾಸಗೌಡ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡಿದರೆ ನನ್ನ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧ ಎಂದು ಹೇಳಿದ್ದರು. ಈಗ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಉತ್ಸಾಹ ತೋರಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಆಸಕ್ತಿ ತೋರಿರುವುದಾಗಿ ಹೇಳಿರುವ ಶಾಸಕ ಸುಬ್ಬಾರೆಡ್ಡಿ,ಅವರು ನನ್ನ ಕ್ಷೇತ್ರದಲ್ಲಿ ಸ್ಪರ್ಧಿಸುವುದು ನನ್ನ ಸೌಭಾಗ್ಯ ಎಂದಿದ್ದಾರೆ. ಬಾಗೇಪಲ್ಲಿ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧನಾಗಿರುವುದಾಗಿ ಗುಡಿಬಂಡೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಈ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವೇ ಅಥವಾ ಇದು ಕೇವಲ ಸುಬ್ಬಾರೆಡ್ಡಿ ಅವರ ಹೇಳಿಕೆಯೇ ಎಂಬುದು ಮಾತ್ರ ತಿಳಿದುಬಂದಿಲ್ಲ.