ಹುಬ್ಬಳ್ಳಿ, ಕರ್ನಾಟಕ: ಬಸವರಾಜ ಬೊಮ್ಮಾಯಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಡ್ಡಾ ಅವರು ನನ್ನ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟು ಒಳ್ಳೆಯ ಮಾತು ಹೇಳಿದ್ದಾರೆ. ಅಮಿತ್ ಶಾ ಅವರು ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು(Karnataka Election 2023).
ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಗೆದ್ದ ಬಳಿಕ, ಕೇಂದ್ರ ಸಂಸದೀಯ ಮಂಡಳಿ ಮತ್ತು ಶಾಸಕರು ಸಿಎಂ ಆಯ್ಕೆ ಮಾಡ್ತಾರೆ. ನಡ್ಡಾ ಅವರು ಹೇಳಿದ ಮಾತಿಗೆ ನಾನು ಚಿರಋಣಿಯಾಗಿರುತ್ತೇನೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪ್ರವಾಹದ ಸಂದರ್ಭದಲ್ಲಿ ಮೋದಿ ರಾಜ್ಯಕ್ಕೆ ಬಂದಿಲ್ಲ ಎಂಬುದು ರಾಜಕೀಯ ಆರೋಪವಾಗಿದೆ. ಪ್ರವಾಹ ಬಂದಾಗ ಹೆಚ್ಚಿನ ಅನುದಾನ ಕೊಟ್ಟಿದ್ದೇ ಮೋದಿ ಸರ್ಕಾರ. ಪ್ರಿಯಾಂಕಾ ಗಾಂಧಿಯವರ ಸರ್ಕಾರದ ಇದ್ದಾಗ ಮನೆ ಬಿದ್ದರೆ 2 ಸಾವಿರ ರೂ. ಕೊಡುತ್ತಿದ್ದರು ಎಂದರು.
ಅತಿವೃಷ್ಟಿ ಪರಿಹಾರ ಮೋದಿ ಕಾಲದಲ್ಲಿ ಹೆಚ್ಚಿಸಲಾಗಿದೆ. ಅತಿಹೆಚ್ಚು ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ. ಕರ್ನಾಕಟದ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಿಯಾಂಕಾ, ರಾಹುಲ್ ಬಂದೋದ್ರಾ? ಯಾವುದು ಸೂಕ್ತವಲ್ಲವೋ ಅದನ್ನು ಮಾತನಾಡಿ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ. ಜನತೆಗೆ ಗೊತ್ತಿರುವ ಮಾಹಿತಿ ಇದು. ಪ್ರಿಯಾಂಕಾ ಗಾಂದಿಗೆ ಕಾಂಗ್ರೆಸ್ ಸರಿಯಾದ ಮಾಹಿತಿ ನೀಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ: Karnataka Election : ಬಸವರಾಜ ಬೊಮ್ಮಾಯಿಯೇ ಮುಂದಿನ ಸಿಎಂ; ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ
ರಾಜ್ಯದ ಸುಮಾರು 50 ನಾಯಕರ ಮೇಲೆ ದಾಳಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿಕೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಳ್ಳನ ಜೀವ ಹುಳ್ಳುಳ್ಳಗೆ ಎಂದು ವ್ಯಂಗ್ಯವಾಡಿದರು. ಜಗದೀಶ್ ಶೆಟ್ಟರ್ ಎಲ್ಲಾ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಮೋದಿಯವರಿಗೆ ದಿನಕ್ಕೆ ಐದು ಕಡೆ ಪ್ರಚಾರ ಮಾಡುವ ಶಕ್ತಿ ಇದೆ, ಮಾಡ್ತಾರೆ. ದೇವೇಗೌಡರು ಯಾವ ರಾಷ್ಟ್ರೀಯ ಪಕ್ಷದವರು ಮೈತ್ರಿಗೆ ಮುಂದಾಗಿದ್ದಾರೆ ಬಹಿರಂಗವಾಗಿ ಹೇಳಲಿ ಎಂದು ಬೊಮ್ಮಾಯಿ ಅವರು ಹೇಳಿದರು.