ನನ್ನ ಕುಟುಂಬದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದರೆ ನಿಮ್ಮ ಮನೆಗೇ ಬರುತ್ತೇನೆ ಎಚ್ಚರ: ಬಾಲಚಂದ್ರ ಜಾರಕಿಹೊಳಿ - Vistara News

ಕರ್ನಾಟಕ

ನನ್ನ ಕುಟುಂಬದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದರೆ ನಿಮ್ಮ ಮನೆಗೇ ಬರುತ್ತೇನೆ ಎಚ್ಚರ: ಬಾಲಚಂದ್ರ ಜಾರಕಿಹೊಳಿ

Balachandra Jarakiholi: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಮತದಾರರ ಅಭಿನಂದನಾ ಸಮಾವೇಶವನ್ನು ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದರು. ಈ ವೇಳೆ ತಮ್ಮ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವವರ ಮನೆಗೆ ಬಂದು ಪ್ರಶ್ನೆ ಮಾಡುತ್ತೇನೆ ಎಂದು ಗುಡುಗಿದ್ದಾರೆ.

VISTARANEWS.COM


on

balachandra jarakiholi in belagavi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ನನ್ನನ್ನು ವೈಯಕ್ತಿಕವಾಗಿ ಏನಾದರೂ ಟೀಕೆ ಮಾಡಿ. ಆದರೆ, ನನ್ನ ಕುಟುಂಬವನ್ನು ಟೀಕೆ ಮಾಡಿದರೆ ನಾನು ನಿಮ್ಮನ್ನು ಸುಮ್ಮನೆ ಬಿಡಲ್ಲ. ವಾಟ್ಸಪ್‌, ಫೇಸ್‌ಬುಕ್‌ನಲ್ಲಿ ಏನಾದರೂ ತೇಜೋವಧೆ ಆಗುವಂತಹ ಪೋಸ್ಟ್‌ ಹಾಕಿದರೆ ನಿಮ್ಮ ಮನೆಗೇ ಬಂದುಬಿಡುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಏರ್ಪಡಿಸಿದ್ದ ಮತದಾರರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ನನ್ನ ಕುಟುಂಬದ ಬಗ್ಗೆ ನೀವೇನಾದರೂ ಪೋಸ್ಟ್‌ ಮಾಡಿದರೆ, ನಿಮ್ಮ ಮನೆಗೆ ಬರುತ್ತೇನೆ. ಯಾಕೆ ಹೀಗೆ ಹಾಕಿದ್ದೀರಿ ಎಂದು ಕೇಳುತ್ತೇನೆ. ನೀವು ಉತ್ತರ ಕೊಡಬೇಕು. ನನ್ನದು ತಪ್ಪಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಿಮ್ಮದು ತಪ್ಪಿದ್ದರೆ ನೀವು ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

ಎಲ್ಲೋ ಮೂಲೆಯಲಿ ಕುಳಿತು ನಾಲ್ಕೈದು ಜನ ಫೇಸ್‌ಬುಕ್‌, ವಾಟ್ಸಪ್‌ನಲ್ಲಿ ಪೋಸ್ಟ್ ಮಾಡುತ್ತಾ ಕುಳಿತುಕೊಂಡಿರುತ್ತಾರೆ. ಅವರ ಮನಸ್ಸಿಗೆ ಬಂದಂತೆ ಪೋಸ್ಟ್‌ ಹಾಕುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka CM: ಕೊನೆಗೂ ಹೈಕಮಾಂಡ್ ಬುಲಾವ್‌ಗೆ ಮಣಿದ ಡಿಕೆಶಿ, ಇಂದು ದಿಲ್ಲಿಯಲ್ಲಿ ಅಂತಿಮ ತೀರ್ಮಾನ

ಕಟೀಲ್‌ಗೆ ಗೇಟ್ ಪಾಸ್? ಯಾರಾಗಲಿದ್ದಾರೆ ಮುಂದಿನ ರಾಜ್ಯಾಧ್ಯಕ್ಷ?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಬಿಜೆಪಿಗೆ (BJP Karnataka) ಭಾರಿ ಹಿನ್ನಡೆಯಾದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಪಕ್ಷದ ನಾಯಕತ್ವ ಬದಲಾಯಿಸುವ ಬಗ್ಗೆ ಪಕ್ಷದೊಳಗೆ ಜೋರಾಗಿ ಚರ್ಚೆ ನಡೆದಿದೆ.

ನಾಯಕರ ವಲಯದಲ್ಲೂ, ಕಾರ್ಯಕರ್ತರಲ್ಲೂ ಈ ಬಗ್ಗೆ ಚರ್ಚೆ ಶುರುವಾಗಿದ್ದು, ರಾಜ್ಯ ಘಟಕ ರಥಕ್ಕೆ ಹೊಸ ಸಾರಥಿ ಆಯ್ಕೆಯಾಗಲಿದ್ದಾರೆ ಎಂಬ ಗುಸುಗುಸು ಹರಡಿದೆ. ನಳಿನ್‌ಕುಮಾರ್‌ ಕಟೀಲ್‌ ಅವರು ಪಕ್ಷದ ಸಂಘಟನೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲಿಲ್ಲ. ಹೀಗಾಗಿ ಈ ಚುನಾವಣಾ ಸೋಲಿನ ಹೊಣೆಯನ್ನು ರಾಜ್ಯಾಧ್ಯಕ್ಷರೇ ಹೊತ್ತುಕೊಳ್ಳಬೇಕು ಎಂದು ಇತರ ಕೆಲ ನಾಯಕರು ಆಗ್ರಹಿಸಿದ್ದಾರೆ.

ಮುಂದೆ ಪ್ರಬಲ ಸಮುದಾಯಕ್ಕೆ ರಾಜ್ಯ ಘಟಕದ ಜವಾಬ್ದಾರಿ ಕೊಡುವ ಬಗ್ಗೆ ಚರ್ಚೆ ನಡೆದಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವುದರಿಂದ, ಆದಷ್ಟು ಬೇಗನೆ ಅಧ್ಯಕ್ಷರನ್ನು ಬದಲಿಸುವಂತೆ ಕಾರ್ಯಕರ್ತರ ವಲಯದಲ್ಲಿ ಆಗ್ರಹ ಕೇಳಿಬಂದಿದೆ. ಈ ನಡುವೆ ರಾಜ್ಯಾಧ್ಯಕ್ಷರ ಹುದ್ದೆಗೆ ಸಾಲು ಸಾಲು ನಾಯಕರ ಪೈಪೋಟಿಯಿದೆ. ಬಿ.ವೈ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ, ಸುನಿಲ್ ಕುಮಾರ್ ಸೇರಿದಂತೆ ಹಲವರ ಹೆಸರು ಚರ್ಚೆಯಾಗುತ್ತಿದೆ.

ಅಹಿಂದ ಮತಕ್ಕೆ ಗಾಳ

ವಿಪಕ್ಷ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಬಹುತೇಕ ಪಕ್ಕಾ ಆಗಿರುವುದರಿಂದ, ಒಕ್ಕಲಿಗ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಹುದ್ದೆ ಸಿಗುವ ಸಾಧ್ಯತೆ ಇದೆ. ಆದರೆ, ಅಹಿಂದ ಮತ ಸೆಳೆಯಲು ಅಹಿಂದ ಸಮುದಾಯದ ನಾಯಕನನ್ನು ನೇಮಿಸುವ ಬಗ್ಗೆ ಸಹ ಚರ್ಚೆ ಇದೆ. ಸುನಿಲ್ ಕುಮಾರ್ ಆದರೆ ಅಹಿಂದ ಸಮುದಾಯದ ಮತ ಸೆಳೆಯಬಹುದು ಅನ್ನುವ ಲೆಕ್ಕಾಚಾರವಿದೆ.

ಇದನ್ನೂ ಓದಿ: Karnataka Election : ಪಕ್ಷ ನನಗೆ ದೇವರು, ಹೇಳಿದಂತೆ ಕೇಳುವೆ; ಸಿಎಂ ಪಟ್ಟು ಬಿಟ್ಟು ಕೊಟ್ಟರಾ ಡಿಕೆಶಿ?

ಮೂರು ಸಮುದಾಯಕ್ಕೆ ಮಣೆ?

ಒಕ್ಕಲಿಗ ಸಮುದಾಯಕ್ಕೆ ರಾಜ್ಯಾಧ್ಯಕ್ಷ, ಲಿಂಗಾಯತ ಸಮುದಾಯಕ್ಕೆ ವಿಪಕ್ಷ ನಾಯಕ ಹಾಗೂ ಅಹಿಂದ ಸಮುದಾಯಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನ ಕೊಡುವ ಬಗ್ಗೆ ಚರ್ಚೆ ಆಗುತ್ತಿದೆ. ಮೂರೂ ಸಮುದಾಯಗಳನ್ನು ಪರಿಗಣಿಸಿ ಸೂಕ್ತ ಸ್ಥಾನ ನೀಡಿ 2024ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಅನುಕೂಲ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆಯಾಗುತ್ತಿದೆ ಎಂದು ಮೂಲಗಳು ತಿಳಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Vijayanagara News: ವಿಜಯನಗರ ಜಿಲ್ಲೆಯಲ್ಲಿ ಬಳಕೆಯಾಗದೇ ಇರುವ ಕೊಳವೆ ಬಾವಿಗಳಿಂದ ಆಗುವ ಅಪಾಯ ತಡೆಗಟ್ಟುವ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಿಸಿ ಎಂ.ಎಸ್. ದಿವಾಕರ್‌ ಅವರು ಅಧಿಕಾರಿಗಳ ಸಭೆ ನಡೆಸಿದರು.

VISTARANEWS.COM


on

Take action to close failed borewell says Vijayanagara DC MS Diwakar
Koo

ಹೊಸಪೇಟೆ: ಅನಧಿಕೃತ ಕೊಳವೆ ಬಾವಿಗಳು ಹಾಗೂ ವಿಫಲ ಕೊಳವೆ ಬಾವಿಗಳನ್ನು (Borewell) ಮುಚ್ಚಲು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ (Vijayanagara News) ನೀಡಿದರು.

ಜಿಲ್ಲೆಯಲ್ಲಿ ಬಳಕೆಯಾಗದೆ ಇರುವ ಕೊಳವೆ ಬಾವಿಗಳಿಂದ ಆಗುವ ಅಪಾಯ ತಡೆಗಟ್ಟುವ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಅನಧಿಕೃತ ಕೊಳವೆ ಬಾವಿಗಳು ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರ್‌ಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಗ್ರಾಮೀಣ ಪ್ರದೇಶದ ಜನರಿಗೆ ವಿಫಲ ಕೊಳವೆ ಬಾವಿಗಳನ್ನು ವ್ಯವಸ್ಥಿತವಾಗಿ ಮುಚ್ಚಲು ನಿರ್ದೇಶನ ನೀಡಬೇಕು. ವಿಫಲ ಕೊಳವೆ ಬಾವಿಗಳಿಂದ ಜನರಿಗೆ ತೊಂದರೆಯಾಗದಂತೆ ಸಂಪೂರ್ಣವಾಗಿ ಮುಚ್ಚಲು ತಿಳಿಸಬೇಕು. ಜಿಲ್ಲೆಯಲ್ಲಿ ಇರುವ ಅನಧಿಕೃತ ಕೊಳವೆ ಬಾವಿಗಳನ್ನು ಮುಚ್ಚಿರುವುದನ್ನು ಪತ್ರದ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲು ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬೇಕು. ಅನಧಿಕೃತ ಕೊಳವೆಬಾವಿಗಳನ್ನು ಕೊರೆದರೆ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ 525 ಕೊಳವೆಬಾವಿಗಳು, ಕೊಟ್ಟೂರು ತಾಲೂಕಿನಲ್ಲಿ 264, ಹರಪ್ಪನಹಳ್ಳಿ ತಾಲೂಕಿನಲ್ಲಿ 1149, ಹೂವಿನಹಡಗಲಿ ತಾಲೂಕಿನಲ್ಲಿ 507, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 294, ಹೊಸಪೇಟೆ ತಾಲೂಕಿನಲ್ಲಿ 292 ಕೊಳವೆ ಬಾವಿಗಳಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿನ ಕೆಲವು ವಿಫಲ ಕೊಳವೆಬಾವಿಗಳನ್ನು ಮುಚ್ಚಲು ಈಗಾಗಲೇ ಎಲ್ಲ ರೀತಿಯ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಇದನ್ನೂ ಓದಿ: Ballari News: ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

ಬರ ನಿರ್ವಹಣೆ

ಹೊಸಪೇಟೆ ನಗರ ಸೇರಿದಂತೆ ಪಟ್ಟಣ ಪ್ರದೇಶ ಮತ್ತು ಜಿಲ್ಲೆಯ ಎಲ್ಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬರ ನಿರ್ವಹಣೆಯ ಕ್ರಮದ ಬಗ್ಗೆ ಡಿಸಿ ಪರಿಶೀಲಿಸಿದರು.

ವಿಜಯನಗರ ಜಿಲ್ಲೆಯು ಈಗಾಗಲೇ ಬರಪೀಡಿತ ಜಿಲ್ಲೆ ಎಂದು ಘೋಷಿತವಾಗಿದೆ. ಬೇಸಿಗೆಯ ಬಿಸಿಲು ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಡಿಸಿ ಎಲ್ಲ ತಹಸೀಲ್ದಾರ್‌ಗಳು ಮತ್ತು ತಾ.ಪಂ. ಇಒಗಳು ಹಾಗೂ ಕೃಷಿ, ಪಶುಪಾಲನೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯ. ಯಾವುದೇ ತಾಲೂಕಿನಲ್ಲಿ ಮೇವಿನ ಕೊರತೆ ಕಂಡುಬಂದರೆ ಕೂಡಲೇ ಮೇವು ದಾಸ್ತಾನಿಗೆ ವ್ಯವಸ್ಥೆ ಮಾಡಬೇಕು. ನೀರಿನ ಅಭಾವ ಎದುರಾಗದಂತೆ ನೀರನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಜನಜಾಗೃತಿ ಮತ್ತು ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಉದ್ಯೋಗ

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Job Alert: ಒಂದೊಳ್ಳೆ ಉದ್ಯೋಗ ಬೇಕು ಎಂದು ಹುಡುಕಾಡುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್‌ 19. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ (Anganwadi Worker And Helper Recruitment 2024). ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 19 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ.

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್‌.ಇ.ಆರ್‌.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್‌, ಜೆ.ಒ.ಸಿ. ಕೋರ್ಸ್‌, ಎನ್‌.ಟಿ.ಟಿ. ಕೋರ್ಸ್‌ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೆಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ.

ಅಂಗನವಾಡಿ ಸಹಾಯಕಿ: ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ / ಮುಕ್ತ ವಿದ್ಯಾಲಯಗಳಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರು. ಇವರು ಪ್ರಥಮ / ದ್ವಿತೀಯ ಭಾಷೆಯಾಗಿ ಕನ್ನಡ ಮತ್ತು ಸಾಮಾನ್ಯ ಗಣಿತ, ಸಮಾಜ ಶಾಸ್ತ್ರ / ಸಮಾಜ ವಿಜ್ಞಾನಗಳನ್ನು ಕಡ್ಡಾಯವಾಗಿ ಓದಿರಬೇಕು. ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ಓದಿದವರೂ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಲ್ಲಿ ಕೇಳಲಾಗುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿ.
  • ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎನ್ನುವುದನ್ನು ಆಯ್ಕೆ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳಿಗೆ ಏ. 25ರೊಳಗೆ ಅರ್ಜಿ ಸಲ್ಲಿಸಿ

Continue Reading

ಕಲಬುರಗಿ

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Lok Sabha Election 2024: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಭಂಕೂರ್ ಮತ್ತು ರಾವೂರ್ ಮಹಾಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಸಂಸದ ಡಾ. ಉಮೇಶ್ ಜಾಧವ್ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Kalaburagi MP Dr. Umesh Jadav spoke in booth level workers meeting Chittapur assembly constituency
Koo

ಕಲಬುರಗಿ: ಸಂಸತ್ತಿನಲ್ಲಿ ಪರಿಶಿಷ್ಟ ವರ್ಗ ಮೀಸಲಾತಿ ಚರ್ಚೆಯ ಸಂದರ್ಭದಲ್ಲಿ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಬಗ್ಗೆ ಮಾತನಾಡುವ ಅವಕಾಶವಿದ್ದರೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಆ ದಿನ ರಾಜ್ಯಸಭೆಗೆ ಬಹಿಷ್ಕಾರ ಹಾಕಿ ಹೊರ ನಡೆದದ್ದು ಕೋಲಿ ಸಮಾಜದವರಿಗೆ ಮಾಡಿದ ಮಹಾ ಮೋಸ ಎಂದು ಸಂಸದ ಡಾ. ಉಮೇಶ್ ಜಾಧವ್ (Lok Sabha Election 2024) ಆರೋಪಿಸಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಭಂಕೂರ್ ಮತ್ತು ರಾವೂರ್ ಮಹಾಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ಕೋಲಿ ಸಮುದಾಯದವರನ್ನು ಎಸ್‌ಟಿ ಪಂಗಡಕ್ಕೆ ಸೇರಿಸಲು ಸಂಸತ್ತಿನಲ್ಲಿ ಚರ್ಚೆಗೆ ಬಂದಾಗ ನಾನು ದಾಖಲೆ ಪತ್ರಗಳ ಸಹಿತ ಚರ್ಚೆ ಮಾಡಿ ವಿಷಯ ಪ್ರಸ್ತಾಪಿಸಿದ ಬಗ್ಗೆ ಪಾರ್ಲಿಮೆಂಟಿನ ಕಡತದಲ್ಲಿ ದಾಖಲಾಗಿದೆ. ಆದರೆ, ಮಲ್ಲಿಕಾರ್ಜುನ ಖರ್ಗೆಯವರು ಈ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಪಾಲ್ಗೊಳ್ಳದೆ ಬಹಿಷ್ಕಾರ ಹಾಕಿರುವುದರಿಂದ ಕೋಲಿ ಸಮುದಾಯದವರಿಗೆ ನ್ಯಾಯ ಒದಗಿಸುವ ವಿಶೇಷ ಅವಕಾಶವನ್ನು ಕಳೆದುಕೊಂಡರು. ಈ ಬಗ್ಗೆ ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರು ಖರ್ಗೆಯವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದರು ಎಂದು ಜಾಧವ್ ನೇರವಾಗಿ ಆರೋಪಿಸಿದರು.

ಇದನ್ನೂ ಓದಿ: UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಕೋಲಿ ಸಮಾಜದವರನ್ನು ಎಸ್ ಟಿ ಪಂಗಡಕ್ಕೆ ಸೇರಿಸಲು ಜಾಧವ್ ಅವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಿರುವವರು ಕೋಲಿ ಸಮುದಾಯದವರಿಗೆ ಎಸ್‌ಟಿಗೆ ಸೇರಿಸುವ ವಿಚಾರ ಪ್ರಸ್ತಾಪ ಮಾಡಲು ಅವಕಾಶ ಬಳಸದೆ ರಾಜ್ಯಸಭೆಯಿಂದ ಹೊರ ನಡೆದ ಖರ್ಗೆಯವರು ಕೋಲಿ ಸಮುದಾಯಕ್ಕೆ ಉತ್ತರ ನೀಡಬೇಕು. ಹೊರತಾಗಿ ಜಾಧವ್ ಏನು ಮಾಡಿದ್ದಾರೆ ಎಂದು ಪದೇ ಪದೆ ಕೇಳುವ ಬದಲು ಪಾರ್ಲಿಮೆಂಟಿನ ಕಡತದಲ್ಲಿ ಎಸ್‌ಟಿಗೆ ಸೇರಿಸಬೇಕೆಂದು ದಾಖಲೆ ಪತ್ರ ಹಾಗೂ ವಿಚಾರ ಮಂಡಿಸಿದ ಬಗ್ಗೆ ನೋಡಿ ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಕೋಲಿ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಸುರಿಸಿ ಕೇವಲ ಅನುಕಂಪ ಪಡೆಯಲು ಕಾಂಗ್ರೆಸ್ ಈ ರೀತಿಯ ನಾಟಕವನ್ನು ಮಾಡುತ್ತಿದೆ. ಹಿಂದುಳಿದ ವರ್ಗಗಳ ಬಗ್ಗೆ ನಿಜವಾದ ಕಾಳಜಿ ಬಿಜೆಪಿಗಿದ್ದು ಆ ಕೆಲಸವನ್ನು ಮಾಡುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಮೋದಿ ಕೆಲಸ ಏನು? ಜಾಧವ್ ಕೆಲಸ ಏನು? ಎಂದು ಪ್ರಶ್ನಿಸುವ ಕಾಂಗ್ರೆಸ್‌ನವರು 60 ವರ್ಷಗಳಲ್ಲಿ ಮಾಡಿದ ಕೆಲಸದ ಲೆಕ್ಕವನ್ನು ಕೊಡಲಿ ಎಂದು ತಿಳಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

1972 ರಿಂದ ಬರಗಾಲ ಕಾಡಿದ ನಮ್ಮ ಭಾಗದಲ್ಲಿ ಎಂಎಸ್‌ಕೆ ಮಿಲ್, ಶಹಾಬಾದಿನ ಸಿಮೆಂಟ್ ಕಾರ್ಖಾನೆಗಳು ಮುಚ್ಚಿದ್ದು, ಈ ಭಾಗದಿಂದ ಉದ್ಯೋಗಕ್ಕಾಗಿ ವಲಸೆ ಹೋಗುವುದು ಹೆಚ್ಚಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲಕ್ಷ ನೇರ ಮತ್ತು ಎರಡು ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಯ ಮೆಗಾ ಜವಳಿ ಪಾರ್ಕ್ ಕೊಡುಗೆ ನೀಡಿದ್ದಾರೆ. 1575 ಕೋಟಿ ರೂಪಾಯಿ ವೆಚ್ಚದ ಸೂರತ್-ಚೆನ್ನೈ ಭಾರತ್ ಮಾಲ್ ರಸ್ತೆ, 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಮೃತ ಭಾರತ್ ಸ್ಟೇಷನ್ ಅಭಿವೃದ್ಧಿ ಅಡಿಯಲ್ಲಿ ವಾಡಿ, ಶಹಾಬಾದ್‌, ಕಲಬುರಗಿ ಮತ್ತು ಸ್ಟೇಷನ್ ಗಾಣಗಾಪುರ ರೈಲು ನಿಲ್ದಾಣಗಳ ಅಭಿವೃದ್ಧಿ, 68 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಗಿಣಾ ನದಿಗೆ ಮಳಖೇಡದಲ್ಲಿ ಸೇತುವೆ, ಹುಮ್ನಾಬಾದ್ ಬೇಸ್‌ನಿಂದ ರಾಮಮಂದಿರದವರೆಗೆ 58 ಕೋಟಿ ರೂಪಾಯಿ ವೆಚ್ಚದ ಸರ್ವಿಸ್ ರಸ್ತೆ, ನಂದೂರು (ಕೆ) ಕೈಗಾರಿಕಾ ಪ್ರದೇಶದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಗತಿ ಶಕ್ತಿ ಯೋಜನೆಯಲ್ಲಿ ಬಿಪಿಸಿಎಲ್ ಕಂಪೆನಿಯ ಪೆಟ್ರೋಲಿಯಂ ತೈಲಾಗಾರ ಸಂಗ್ರಹ ಮತ್ತು ಅಲ್ಲಿವರೆಗೆ ರೈಲು ಹಳಿ ವಿಸ್ತರಣೆ, ಇಎಸ್ಐ ಆಸ್ಪತ್ರೆಯಲ್ಲಿ ರಕ್ತ ನಿಧಿ ಕೇಂದ್ರ, ವಿವಿಧ ಕೋರ್ಸ್‌ಗಳ ಆರಂಭ, ದ್ರವೀಕೃತ ಆಮ್ಲಜನಕ ಘಟಕ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡರು ಕಾಂಗ್ರೆಸ್‌ನವರಿಗೆ ಮಾತ್ರ ಯಾವುದು ಕಣ್ಣಿಗೆ ಕಾಣುತ್ತಿಲ್ಲ. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಮತ್ತು ಎರಡನೇ ಬಾರಿಗೆ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿದರೆ ಈ ಹಿಂದಿನ ಬಡ್ಡಿ ಸಮೇತ ಜನಸೇವೆ ಮಾಡಲು ಸಿದ್ಧ. 18ನೇ ಲೋಕಸಭಾ ಚುನಾವಣೆ ಬಹಳ ಮಹತ್ವಪೂರ್ಣವಾಗಿದ್ದು ಸನಾತನ ಧರ್ಮದ ರಕ್ಷಣೆ, ದೇಶದ ಸುಂದರ ಭವಿಷ್ಯಕ್ಕಾಗಿ ನಿಮ್ಮ ವೋಟಿನ ಶಕ್ತಿ ಮೋದಿಯವರಿಗೆ ಶಕ್ತಿ ತುಂಬುತ್ತದೆ ಎಂದು ಹೇಳಿದರು.

ಬಿಜೆಪಿಯ ನಗರ ಅಧ್ಯಕ್ಷ ಚಂದು ಪಾಟೀಲ್ ಮಾತನಾಡಿ, ಕಾಂಗ್ರೆಸ್‌ನವರ ಅನ್ಯಾಯವನ್ನು ತಾಳಿಕೊಂಡು ಚಿತ್ತಾಪುರದಲ್ಲಿ ಸತತವಾಗಿ ಬಿಜೆಪಿಗೆ ಬೆಂಬಲಿಸಿದ್ದೀರಿ. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತ ನೀಡಿ ಮೂರನೇ ಬಾರಿ ಪ್ರಧಾನಿಯವರಿಗೆ ಅವಕಾಶ ನೀಡಬೇಕು ಮತ್ತು ಎರಡನೇ ಬಾರಿ ಜಾದವ್ ಅವರನ್ನು ಸಂಸತ್ತಿಗೆ ಕಳಿಸಿ, ಅವರನ್ನು ಸಚಿವರನ್ನಾಗಿ ನಾವೆಲ್ಲ ಕಾಣಬೇಕು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಇದೇ ವೇಳೆ ಮಾಜಿ ಸಚಿವ ದಿ. ಗುರುನಾಥ್ ಅವರ ಪುತ್ರಿ ಜ್ಯೋತಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಇವರನ್ನು ಸಂಸದ ಡಾ. ಉಮೇಶ್ ಜಾಧವ್, ಬಿಜೆಪಿ ಉಸ್ತುವಾರಿ ಶರಣಪ್ಪ ತಳವಾರ್ ಸೇರಿದಂತೆ ನಾಯಕರು ಬಿಜೆಪಿ ಶಾಲು ಹಾಕಿ, ಪಕ್ಷಕ್ಕೆ ಬರಮಾಡಿಕೊಂಡರು.

Continue Reading

ಮಂಡ್ಯ

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024: ಮದ್ದೂರು ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಮದ್ದೂರು ಶಾಸಕ ಉದಯ್ ಚುನಾವಣಾ ಪ್ರಚಾರ ನಡೆಸಿದರು.

VISTARANEWS.COM


on

Maddur MLA Uday election campaign in various places of Maddur taluk
Koo

ಮದ್ದೂರು: ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದ್ದು ಎಲ್ಲರಿಗೂ ತಲುಪುತ್ತಿವೆ, ಈ ಬಾರಿ ಚುನಾವಣೆಯಲ್ಲಿ (Lok Sabha Election 2024) ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ, ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದು ಮದ್ದೂರು ಶಾಸಕ ಉದಯ್ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ನಿಮಗೆ ಜಿಲ್ಲೆಯ ಮಗ ಬೇಕಾ? ಅಥವಾ ಹೊರಗಿನಿಂದ ಬಂದವರು ಬೇಕಾ? ಸಿಎಂ ಆಗಿ ಅಧಿಕಾರದಲ್ಲಿದ್ದಾಗಲೇ ಜಿಲ್ಲೆಗೆ ಏನು ಕೊಡುಗೆ ನೀಡಿಲ್ಲ. ಅನುಕಂಪ ಗಿಟ್ಟಿಸಿಕೊಳ್ಳಲು ಭಾವನಾತ್ಮಕ ಮಾತಿಗೆ ಜಿಲ್ಲೆಯ ಜನ ಮರುಳಾಗಬಾರದು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ನಾವು ರೈತರ ಮಕ್ಕಳು ಅಂತಾರೆ, ಆದರೆ ಒಂದು ನಾಲೆಯನ್ನೂ ಅಭಿವೃದ್ಧಿ ಮಾಡಿಲ್ಲ, ಕಾವೇರಿಗೆ ನ್ಯಾಯ ಕೊಡಿಸಲಿಲ್ಲ. ಅವರು ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡುವುದಿಲ್ಲ ಎಂದು ಆರೋಪಿಸಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ರಾಜಕೀಯ ಮಾಡಲು ಬಂದಿಲ್ಲ, ಜನಸೇವೆ ಮಾಡಲು ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಜಾರಿ ಮಾಡಲಾಗಿದ್ದು ಎಲ್ಲರಿಗೂ ತಲುಪುತ್ತಿದೆ. ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದು ಕರೆಕೊಟ್ಟರು.

Continue Reading
Advertisement
Take action to close failed borewell says Vijayanagara DC MS Diwakar
ವಿಜಯನಗರ6 mins ago

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Job Alert
ಉದ್ಯೋಗ7 mins ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Kalaburagi MP Dr. Umesh Jadav spoke in booth level workers meeting Chittapur assembly constituency
ಕಲಬುರಗಿ10 mins ago

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Maddur MLA Uday election campaign in various places of Maddur taluk
ಮಂಡ್ಯ13 mins ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024 HD DeveGowda Congress cries out at HD DeveGowda Complaint to Election Commission
Lok Sabha Election 202417 mins ago

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

jain monk
ಪ್ರಮುಖ ಸುದ್ದಿ24 mins ago

Viral Video: ಮೆರವಣಿಗೆಯಲ್ಲಿ ಸಾಗಿ 200 ಕೋಟಿ ರೂ. ಜನರ ಮೇಲೆ ಸುರಿದ ಜೈನ ದಂಪತಿ; ವಿಡಿಯೊ ವೈರಲ್​

Summer Fashion
ಫ್ಯಾಷನ್24 mins ago

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌

Ram Navami
ಧಾರ್ಮಿಕ48 mins ago

Ram Navami: ನಾಳೆ ದೇಶಾದ್ಯಂತ ರಾಮ ನವಮಿ ಸಂಭ್ರಮ; ಈ ದಿನದ ಮಹತ್ವವೇನು ಗೊತ್ತೇ ?

Indian stock market
ವಾಣಿಜ್ಯ53 mins ago

Indian stock market: ಸೆನ್ಸೆಕ್ಸ್ ಕುಸಿತ: ಭಾರತೀಯ ಷೇರು ಮಾರುಕಟ್ಟೆಗೆ ಭಾರಿ ಹೊಡೆತ

Air India
ದೇಶ57 mins ago

Air India: ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಏರ್​ ಇಂಡಿಯಾ ವಿಮಾನಗಳ ಹಾರಾಟ; ಅಧಿಕಾರಿಗಳು ಹೇಳಿದ್ದೇನು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ13 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌