ಮಡಿಕೇರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ. ಇದರಲ್ಲಿ ಡೌಟೇ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮದೇ ಶೈಲಿಯಲ್ಲಿ ಹೇಳಿದ್ದಾರೆ.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸಿಎಂ ಮಾಡುವ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರ ತಳ್ಳಿಕೊಂಡು ಹೋಗುತ್ತಿದ್ದೇವೆ ಎಂಬ ಸಚಿವ ಮಾದುಸ್ವಾಮಿ ಅವರೇ ಹೇಳಿಕೆ ನೀಡಿದ್ದಾರೆ. ಮಾಧುಸ್ವಾಮಿ ಸತ್ಯ ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇಲ್ಲವೇ ಇಲ್ಲ. ಈ ಸರ್ಕಾರದಲ್ಲಿ ವೀಕ್ ಚೀಫ್ ಮಿನಿಸ್ಟರ್ ಇದ್ದು, ಸರ್ಕಾರದಲ್ಲಿ ಜೀವವೇ ಇಲ್ಲ. ಇನ್ನೆಲ್ಲಿ ಇದು ನಡೆಯೋದು.
ರಾಜ್ಯದ 5.೨೩ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದೆ. ರಾಜ್ಯದ 5.೨೩ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಇವತ್ತಿನವರೆಗೆ ಸರ್ವೇ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೊಡಗಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ. 2018, 19, 20ರಲ್ಲಿ ಆದ ಮಳೆ ಹಾನಿಗೆ ಈ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ | ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಮೈಸೂರಿನಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ