ಬೆಳಗಾವಿ: ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನವಾಗಿ (IAF Fighter Jets Crash) ಮೃತಪಟ್ಟಿದ್ದ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮನೆಗೆ ವಿವಿಧ ರಾಜಕೀಯ ನಾಯಕರು, ಗಣ್ಯರು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್ ವಾಯುನೆಲೆಯಿಂದ ಶನಿವಾರ ಬೆಳಗ್ಗೆ ಹೊರಟಿದ್ದ ಸುಖೋಯ್ 30 ಹಾಗೂ ಮಿರಾಜ್ 2000 ಯುದ್ಧವಿಮಾನಗಳು ಪತನಗೊಂಡಿದ್ದವು. ಇದರಲ್ಲಿ ಸುಖೋಯ್ ಯುದ್ಧ ವಿಮಾನ ಮಧ್ಯಪ್ರದೇಶದ ಮೊರೆನಾದಲ್ಲಿ ಬಿದ್ದಿದ್ದರೆ, ರಾಜಸ್ಥಾನದ ಭರತ್‌ಪುರದಲ್ಲಿ ಮಿರಾಜ್ ಯುದ್ಧ ವಿಮಾನ ನೆಲಕ್ಕುರುಳಿತ್ತು. ಸುಖೋಯ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಮಿರಾಜ್ ಯುದ್ಧ ವಿಮಾನದಲ್ಲಿದ್ದ ಬೆಳಗಾವಿಯ ವಿಂಗ್ ಕಮಾಂಡರ್ ಆರ್.ಸಾರಥಿ ಕೊನೆಯುಸಿರೆಳೆದಿದ್ದರು.
ಬೆಳಗಾವಿ ನಗರದ ಗಣೇಶಪುರದ ಸಂಭಾಜೀ ನಗರದ ಹನುಮಂತರಾವ್ ಸಾರಥಿ ಅವರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ರಾಜಕೀಯ ನಾಯಕರು ಹಾಗೂ ಗಣ್ಯರು ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ | IAF Fighter Jets Crash: ಮಧ್ಯಪ್ರದೇಶದಲ್ಲಿ ಐಎಎಫ್ ವಿಮಾನ ಪತನ; ಮೃತಪಟ್ಟಿದ್ದು ಬೆಳಗಾವಿ ಮೂಲದ ವಿಂಗ್ ಕಮಾಂಡರ್