ಯಾದಗಿರಿ: ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಯಾದಗಿರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ (Model district) ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಗಳಾದ ಗುರು ಪಾಟೀಲ, ಡಾ. ಎ. ಬಿ. ಮಾಲಕರೆಡ್ಡಿ ಅವರ ಪರ ಚುನಾವಣಾ ಪ್ರಚಾರ ಕೈಗೊಂಡು ಬಳಿಕ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಶಹಾಪುರ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಜಾರಿಗೆ ತರಲಾಗುತ್ತದೆ. ಕೆಂಭಾವಿ ತಾಲೂಕು ಕೇಂದ್ರವನ್ನಾಗಿ ಮಾಡಿ ಅಭಿವೃದ್ಧಿ ಮಾಡಿ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.
ಇದನ್ನೂ ಓದಿ: dk shivakumar : ಹೆಲಿಕಾಪ್ಟರ್ ಅಪಘಾತ; ಡಿ ಕೆ ಶಿವಕುಮಾರ್ ಸ್ವಲ್ಪದರಲ್ಲಿಯೇ ಪಾರು
ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ವಾಗ್ದಾಳಿ
ಶಹಾಪುರದ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರಣ ಬಸಪ್ಪಗೌಡ ದರ್ಶನಾಪುರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಅಭ್ಯರ್ಥಿ ಶರಣ ಬಸಪ್ಪಗೌಡ ದರ್ಶನಾಪುರ ಅವರು ಪಕ್ಷಾಂತರ ಮಾಡಿ ಕಾಂಗ್ರೆಸ್ ಸೇರಿದವರು ಅವರು, ಡಿಸಿಸಿ ಬ್ಯಾಂಕ್ ಬರ್ಬಾದ್ ಮಾಡಿದ್ದಾರೆ. ಅದೆ ರೀತಿ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದರು. ಅವರು ಮೈತ್ರಿ ಸರ್ಕಾರದಲ್ಲಿ ನಾನು ಸಿಎಂ ಆಗಿದ್ದಾಗ ಹಣ ಸಂಪಾದನೆ ಮಾಡಿಕೊಂಡು ಜೆಡಿಎಸ್‌ಗೆ ಟೋಪಿ ಹಾಕಿ ಬಿಜೆಪಿಗೆ ಸೇರಿದರು ಎಂದು ಆರೋಪಿಸಿದರು.
ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡಿ ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Congress Manifesto : ಸಪ್ತ ಭಾಗ್ಯ, ಮೀಸಲಾತಿ ಏರಿಕೆ, ಬಜರಂಗದಳ ನಿಷೇಧ; ಕಾಂಗ್ರೆಸ್‌ನ TOP 25 ಭರವಸೆಗಳು
ಸಮಾವೇಶದಲ್ಲಿ ಜೆಡಿಎಸ್ ಅಭ್ಯರ್ಥಿ ಗುರು ಪಾಟೀಲ ಅವರು ಜನಸಾಗರ ಕಂಡು ಜನರ ಅಭಿಮಾನಕ್ಕೆ ಮನ ಸೋತು ,ವೇದಿಕೆಯಲ್ಲಿ ಶಿರಸಾಷ್ಟಾಂಗ ಹಾಕಿದರು.
ಈ ವೇಳೆ ಜೆಡಿಎಸ್ ಅಭ್ಯರ್ಥಿ ಗುರು ಪಾಟೀಲ ಮಾತನಾಡಿ, ಸೂರ್ಯ ಹುಟ್ಟುವದು ಎಷ್ಟು ಸತ್ಯವೋ ಕುಮಾರಸ್ವಾಮಿ ಸಿಎಂ ಆಗುವದು ಅಷ್ಟೇ ಸತ್ಯ,ನನ್ನನ್ನು ಜೆಡಿಎಸ್ ಶಾಸಕನಾಗಿ ಆಯ್ಕೆ ಮಾಡಿದರೆ, ಶಹಾಪುರ ಕ್ಷೇತ್ರ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು. ಕುಮಾರಸ್ವಾಮಿ ಸಿಎಂ ಆದ 24 ಗಂಟೆಯೊಳಗೆ ಕೆಂಭಾವಿ ತಾಲೂಕಾ ಕೇಂದ್ರವನ್ನಾಗಿ ಮಾಡುತ್ತೇನೆ ಎಂದರು.