ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು (Exam Time Table) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯಂತೆ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 2 ರಿಂದ ಮಾರ್ಚ್ 22 ರವರೆಗೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ.
ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 1 ರಿಂದ ಡಿ. 15 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ chairpersonkseab@gmail.com ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ದ್ವಿತೀಯ ಪಿಯುಸಿ ವೇಳಾಪಟ್ಟಿ
ಮಾರ್ಚ್ 2: ಕನ್ನಡ, ಅರೇಬಿಕ್
ಮಾರ್ಚ್ 4: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 5: ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್, ಹೆಲೇಕೇರ್, ಬ್ಯೂಟಿ & ವೆಲ್ನೆಸ್
ಮಾರ್ಚ್ 6: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಾರ್ಚ್ 7: ಹಿಂದಿ
ಮಾರ್ಚ್ 9: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 11: ಇಂಗ್ಲೀಷ್
ಮಾರ್ಚ್ 12: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 13: ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್
ಮಾರ್ಚ್ 14: ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್ 16: ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ
ಮಾರ್ಚ್ 18: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಮೂಲ ಗಣಿತ
ಮಾರ್ಚ್ 20: ಐಚ್ಛಿಕ ಕನ್ನಡ, ಅಕೌಂಟನ್ಸಿ, ಜಿಯೋಲಜಿ, ಗೃಹ ವಿಜ್ಞಾನ
ಮಾರ್ಚ್ 22: ಅರ್ಥಶಾಸ್ತ್ರ
ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್ನ್ಯೂಸ್; ಗೃಹ ಸಚಿವಾಲಯದ 995 ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 25: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ ಸಿಇಆರ್ಟಿ), ಸಂಸ್ಕೃತ.
ಮಾರ್ಚ್ 27: ಸಮಾಜ ವಿಜ್ಞಾನ
ಮಾರ್ಚ್ 30: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ/ ಕರ್ನಾಟಕ ಸಂಗೀತ
ಏಪ್ರಿಲ್ 2: ಗಣಿತ, ಸಮಾಜ ಶಾಸ್ತ್ರ,
ಏಪ್ರಿಲ್ 3: ಎಲಿಮೆಂಟ್ಸ್ ಆಫ್ ಎಲೆಕ್ನಿಕಲ್ ಎಂಜಿನಿಯರಿಂಗ್ – IV
ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಆಯಂಡ್ ಎಲೆಕ್ನಿಕಲ್ ಇಂಜಿನಿಯರಿಂಗ್-2
ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್- IV
ಎಂಜಿನಿಯರಿಂಗ್ ಗ್ರಾಫಿಕ್ಸ್ – 2
ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ – IV
ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್
ಪ್ರೊಗ್ರಾಮಿಂಗ್ ಇನ್ ANSI ‘C’
ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್
ಅರ್ಥಶಾಸ್ತ್ರ
ಏಪ್ರಿಲ್ 4: ತೃತೀಯ ಭಾಷೆ {ಹಿಂದಿ (ಎನ್ಸಿಇಆರ್ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು}
ಎನ್ಎಸ್ಕ್ಯೂಎಫ್ ಸಬ್ಜೆಕ್ಟ್ ( ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ & ವೆಲ್ ನೆಸ್, ಅಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್)
ಏಪ್ರಿಲ್ 6: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ