ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2023 ವೇಳಾಪಟ್ಟಿ ಪ್ರಕಟವಾಗಿದೆ. ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ (2nd PUC Exam) ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಎಸ್‌ಇಎಬಿ ವೆಬ್‌ಸೈಟ್ ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ
ಮೇ 22- ಕನ್ನಡ, ಅರೇಬಿಕ್
ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 24 – ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋ ಮೋಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್)
ಮೇ 25- ಸಮಾಜಶಾಸ್ತ್ರ , ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ,
ಮೇ 27- ಹಿಂದಿ (ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್),
ಮೇ 29- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತ ಶಾಸ್ತ್ರ
ಮೇ 30- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂ.1 ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂ.2- ಅರ್ಥಶಾಸ್ತ್ರ, ಜೀವಶಾಸ್ತ್ರ
ಇದನ್ನೂ ಓದಿ | School stationery rate: ಸ್ಕೂಲ್ ಫೀಸ್ ಆಯ್ತು, ಈಗ ನೋಟ್ ಬುಕ್ಸ್ ರೇಟ್ ಹೈಕ್; ಪೋಷಕರಿಗೆ ಮತ್ತೊಂದು ಮಂಡೆ ಬಿಸಿ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವವರೂ ಸಿಇಟಿ ಬರೆಯಬೇಕು: ಕೆಇಎ
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವವರು ಕೂಡ ಸಿಇಟಿ (KCET 2023) ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಮೇ 20 ಮತ್ತು 21 ರಂದು ಸಿಇಟಿ-2023 ನಡೆಯಲಿದ್ದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಬರೆಯಲು ತೀರ್ಮಾನಿಸಿದ್ದರೂ ಸಿಇಟಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಏ.21ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ನಂತರ, ನಿರೀಕ್ಷೆಗಿಂತ ಕಡಿಮೆ ಅಂಕ ಪಡೆದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಿಇಟಿ-2023ಕ್ಕೆ ಹಾಜರಾಗಲು ಅರ್ಹತೆಯ ಮಾನದಂಡಗಳ ಬಗ್ಗೆ ಕೆಇಎ ಸ್ಪಷ್ಟನೆ ನೀಡಿದೆ.
ಸಿಇಟಿ-2023ಕ್ಕೆ ನೋಂದಣಿ ಮಾಡಿ ಶುಲ್ಕ ಪಾವತಿಸಿರುವ ಎಲ್ಲ ಅಭ್ಯರ್ಥಿಗಳು, ಮೇ 20 ಮತ್ತು 21 ರಂದು ನಡೆಸಲಾಗುವ ಸಿಇಟಿ-2023 ಪರೀಕ್ಷೆಗೆ ಹಾಜರಾಗಬೇಕು. ಈ ಹಿಂದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಆಯಾ ವರ್ಷದ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರೆ ಮಾತ್ರ ನಿಯಮಗಳ ಪ್ರಕಾರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತಿತ್ತು. ಅದೇ ನಿಯಮವನ್ನು ಈ ಬಾರಿಯೂ ಪಾಲಿಸಲಾಗುತ್ತದೆ ಎಂದು ಅಭ್ಯರ್ಥಿಗಳು ಮತ್ತು ಪೋಷಕರ ಗಮನಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಂದಿದೆ.
ಇದನ್ನೂ ಓದಿ | ರಾಜ ಮಾರ್ಗ ಅಂಕಣ : ಐಕಾನ್‌ಗಳು ಎರಡೆರಡು ಬಾರಿ ಹುಟ್ಟುತ್ತಾರೆ! ಆಶ್ಚರ್ಯ ಆಯ್ತಾ? ಇದನ್ನು ಓದಿ!
ಮೇ 20, 21 ರಂದು ಸಿಇಟಿ
ಈ ಬಾರಿ ಮೇ 20, 21 ಮತ್ತು 22ರಂದು ಸಿಇಟಿ-2023 ನಡೆಯಲಿದೆ ಎಂದು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಲ್ಲದೆ ಪರೀಕ್ಷೆಯ ವೇಳಾ ಪಟ್ಟಿಯನ್ನು (CET Exam Time table) ಪ್ರಕಟಿಸಿದ್ದು, ಯಾವಾಗ ಯಾವ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ಒದಗಿಸಿದೆ.
ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ,
ಮೇ 20- ಜೀವಶಾಸ್ತ್ರ ಮತ್ತು ಗಣಿತ
ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ
ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಈ ಪರೀಕ್ಷೆ ನಡೆಯಲಿದೆ.