ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಜೂನ್ 20ರಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮೇ 23ರಿಂದ 3 ಜೂನ್‌ವರೆಗೆ ನಡೆದಿದ್ದ ಪೂರಕ ಪರೀಕ್ಷೆ (2nd PUC Supplementary Result) ನಡೆದಿತ್ತು. ಇದರ ಫಲಿತಾಂಶವನ್ನು ಮಂಡಳಿಯ ಜಾಲತಾಣದಲ್ಲಿ http://karresults.nic.in ಪ್ರಕಟಿಸಲಾಗುತ್ತದೆ.
ಮಾರ್ಚ್ 9ರಿಂದ 29ರವರೆಗೆ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಅದರ ಫಲಿತಾಂಶವನ್ನು ಏಪ್ರಿಲ್ 21ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (kseeb) ಪ್ರಕಟಿಸಿತ್ತು. ಈ ಬಾರಿ ಶೇ.74.67 ಮಂದಿ ಉತ್ತೀರ್ಣರಾಗಿದ್ದರು. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇ. 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ.74.67 ಮಂದಿ ಉತ್ತೀರ್ಣರಾಗಿದ್ದರು. ಕಳೆದ ಬಾರಿ ಶೇ. 61.88 ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿಯದ್ದು ಇಲ್ಲಿಯವರೆಗಿನ ದಾಖಲೆಯಾಗಿದೆ.
ಇದನ್ನೂ ಓದಿ | KPSC Recruitment : ಕಾರ್ಯಪಾಲಕ ಎಂಜಿನಿಯರ್ ನೇಮಕಕ್ಕೆ ಪರೀಕ್ಷೆ; ಕೀ ಉತ್ತರ ಪ್ರಕಟ
ಏಪ್ರಿಲ್ 21ರಂದು ಬಿಡುಗಡೆಯಾದ ಫಲಿತಾಂಶದಲ್ಲಿ ಅನುತ್ತೀರ್ಣರಾದ ಹಾಗೂ ತಾವು ಗಳಿಸಿದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶ ಮಂಗಳವಾರ ಬಿಡುಗಡೆಯಾಲಿದೆ.