Beef Smuggling : ಅಕ್ರಮ ಗೋಮಾಂಸ ಸಾಗಣೆ; ಹೊಡೆಯಲು ಬಂದವರ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮಸೇನೆ ಕಾರ್ಯಕರ್ತರು - Vistara News

ಕರ್ನಾಟಕ

Beef Smuggling : ಅಕ್ರಮ ಗೋಮಾಂಸ ಸಾಗಣೆ; ಹೊಡೆಯಲು ಬಂದವರ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮಸೇನೆ ಕಾರ್ಯಕರ್ತರು

Beef Smuggling : ಗೂಡ್ಸ್‌ ವಾಹನಗಳಲ್ಲಿ ಟನ್‌ ಗಟ್ಟಲೆ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಾಡಿಯನ್ನು ತಡೆದಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿದ್ದಾರೆ.

VISTARANEWS.COM


on

Beef Smuggling in Bengaluru rural
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ಇಲ್ಲಿನ ಐಬಿ‌ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ (Beef Smuggling) ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವನ್ನು ಶ್ರೀರಾಮಸೇನೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ.

ಗಾಡಿಗಳನ್ನು ತಡೆದ ವೇಳೆ‌‌ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಕಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಗೋಮಾಂಸ ಬರುತ್ತಿತ್ತು. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 20 ಕ್ಕೂ ಅಧಿಕ ಕಾರ್ಯಕರ್ತರ ವಿಚಾರಣೆ ನಡೆಸುತ್ತಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಸ್ಥಳದಲ್ಲೆ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಮೊಕ್ಕಾಂ ಹೂಡಿದ್ದಾರೆ. ಜತೆಗೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳಲ್ಲಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟ‌ನೆಯ ಬಗ್ಗೆ ಇಂಚಿಂಚಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದಕ್ಕೆ ಮುಖಂಡರ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಮಗಳೂರು

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy King of Blackmail and DK Shivakumar is back
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರು “ಕಿಂಗ್ ಆಫ್ ಬ್ಲ್ಯಾಕ್‌ಮೇಲ್” ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ರೆಸ್ಟ್‌ ಮಾಡಲು ಬಂದಿದ್ದೇನೆ

ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ಕರ್ನಾಟಕ

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Hoskote News: ಬಿಜೆಪಿ ಸರ್ಕಾರದ ಅವಧಿಯಲ್ಲೂ ಹೊಸಕೋಟೆಯ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ನೇಮಿಸಲಾಗಿತ್ತು. ಹೀಗಾಗಿ ಜನರನ್ನು ಬಿಜೆಪಿ ನಾಯಕರು ತಪ್ಪುದಾರಿಗೆಳೆಯುವ ಕೆಲಸ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Hoskote News
Koo

ಹೊಸಕೋಟೆ: ನಗರದ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪತ್ತನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿಮ್ಮದೇ ಸರ್ಕಾರ ಇದ್ದಾಗ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ನಾಯಕರೇ… ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳುವಿರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳುತ್ತೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಏನು ಹೇಳಿತ್ತು?

ಹೊಸಕೋಟೆಯ ಅವಿಮುಕ್ಷೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ನೇಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ರಾಜ್ಯ ಬಿಜೆಪಿ, ದೇವಸ್ಥಾನದ ಬ್ರಹ್ಮೋತ್ಸವದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಪ್ರಯತ್ನಿಸಿದ ನಂತರ, ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿತ್ತು.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹಿಂದುಗಳ ಹಕ್ಕುಗಳನ್ನು ಕಸಿದುಕೊಳ್ಳುವ, ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ತೋರುತ್ತಿದೆ. ಇಂದು ಇದು ಕರ್ನಾಟಕದಲ್ಲಿ ಕೇವಲ ಒಂದು ದೇವಾಲಯ, ನಾಳೆ ಅದು ಭಾರತದ ಪ್ರತಿಯೊಂದು ದೇವಾಲಯವಾಗಬಹುದು. ಕಾಂಗ್ರೆಸ್ ಬಗ್ಗೆ ಎಚ್ಚರವಿರಲಿ ಎಂದು ಬಿಜೆಪಿ ತಿಳಿಸಿತ್ತು.

Continue Reading

ತುಮಕೂರು

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Heavy Rain: ಶಿರಾ ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಭಾರೀ ಗಾಳಿ-ಮಳೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಗಡಿನ ಶೀಟಿನ ಚಾವಣಿ ಕುಸಿದು ಬಿದ್ದಿರುವ ಘಟನೆ ಜರುಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

Heavy Rain
Koo

ಶಿರಾ: ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ (Heavy Rain) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಗಡಿನ ಶೀಟಿನ ಚಾವಣಿ ಕುಸಿದು ಬಿದ್ದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಇದನ್ನೂ ಓದಿ: Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

2022-23ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ತಗಡಿನ ಚಾವಣಿ ಹಾಕಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಕುಸಿದು ಬಿದ್ದು ಹಾನಿ ಸಂಭವಿಸಿದೆ ಎಂದು ಎಂದು ಗ್ರಾಮಸ್ಥರು ದೂರಿದ್ದಾರೆ. ಭಾರೀ ಗಾಳಿ ಮಿಶ್ರಿತ ಮಳೆಗೆ ತಗಡಿನ ಚಾವಣಿಗಳು ಹಾರಿ ಶಾಲೆಯ ಆವರಣ ಬಿದ್ದಿವೆ. ಶಾಲೆಗೆ ರಜೆ ಇರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Continue Reading

ಕರ್ನಾಟಕ

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

State Education Policy: 2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳ ಅನ್ವಯ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

VISTARANEWS.COM


on

State Education Policy
Koo

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ (State Education Policy) ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ವರ್ಷಗಳ ಪದವಿಯನ್ನು ಕೈಬಿಟ್ಟು, ಈ ಹಿಂದೆ ಇದ್ದ ಮೂರು ವರ್ಷಗಳ ಪದವಿಯನ್ನೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಎನ್‌ಇಪಿ ರದ್ದು ಪಡಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರೊ. ಸುಖ್‌ದೇವ್‌ ಥೋರಟ್‌ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿತ್ತು. ಆಯೋಗವು ಇತ್ತೀಚೆಗೆ ಸಲ್ಲಿಸಿದ ಮಧ್ಯಂತರ ವರದಿಯ ಶಿಫಾರಸುಗಳ ಅನ್ವಯ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿದೆ.

ಆದೇಶದಲ್ಲಿ ಏನಿದೆ?

ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರೊ.ಸುಖದೇವ್ ಥೋರಟ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿರುತ್ತದೆ. ಈ ನೀತಿಯು ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ನೋಂದಣಿಯನ್ನು ವೃದ್ಧಿಸಲು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು, ಪ್ರತಿಯೊಬ್ಬರಿಗೂ ಗುಣಾತ್ಮಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನವನ್ನು ಸದೃಢಗೊಳಿಸಲು, ಶಾಲಾ ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಲು ಮತ್ತು ಪ್ರಜಾಸತ್ತಾತ್ಮಕ ಮತ್ತು ನಾಗರೀಕ/ನೈತಿಕ ಮೌಲ್ಯಗಳನ್ನು ಬೆಳೆಸುವ ಗುರಿ ಹೊಂದಿದೆ.

ಇದನ್ನೂ ಓದಿ | Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಆಯೋಗವು ಆಗಸ್ಟ್ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದು, ಪ್ರಸ್ತುತ ಕೆಲವು ಶಿಫಾರಸುಗಳೊಂದಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರವು ಆಗಸ್ಟ್ 2021ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಆದೇಶವನ್ನು ಹೊರಡಿಸಿತ್ತು. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಸೂಚಿಸಿದೆ.

ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಸಂಯೋಜನೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಈ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2024-25ರ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕೆಳಕಂಡಂತೆ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಕಾಲಾವಧಿ ಮತ್ತು ಪಠ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಬದಲಾವಣೆಗಳು:

ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಉನ್ನತ ಶಿಕ್ಷಣದ ಪದವಿ ಕಾರ್ಯಕ್ರಮದಲ್ಲಿ ಮತ್ತು ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಹಾಗೂ ಸಂಯೋಜಿತ ಕಾಲೇಜುಗಳ ಪಠ್ಯಕ್ರಮದಲ್ಲಿ ಕೆಳಕಂಡ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ.

1.ಪದವಿ ಕಾರ್ಯಕ್ರಮದ ಕಾಲಾವಧಿ: ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ 3 ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು.
2. ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಪಠ್ಯಕ್ರಮದ ಸ್ವರೂಪ: ಮೂರು ಬೇರೆಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು (CFW) ಪ್ರಸ್ತಾಪಿಸಿ ಅಂಗೀಕರಿಸಲಾಗಿದ್ದು, ಅವು ಈ ಕೆಳಗಿನಂತಿವೆ:

a. ಎಲ್ಲ 6 ಸೆಮಿಸ್ಮರ್‌ಗಳಲ್ಲಿ 3 ಮೇಜರ್‌ಗಳೊಡನೆ ಸಾಮಾನ್ಯ ಪದವಿ, ಅಥವಾ
b. 4ನೇ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೇ ಸೆಮಿಸ್ಟರ್ ಗಳಲ್ಲಿ 1 Subject ನಲ್ಲಿ ವಿಶೇಷಜ್ಞತೆ (Specialization).
c. ಮೊದಲನೇ ಸೆಮಿಸ್ಟರ್ ನಿಂದ ಮೈನರ್ Subject ಗಳ ಜೊತೆಗೆ 1 Subject ನಲ್ಲಿ ವಿಶೇಷತೆ (Specialization) (ಉದಾ: ಬಿ.ಕಾಂ, ಬಿಬಿಎ, ಬಿಸಿಎ, ಬಿಎ/ಬಿಎಸ್ಸಿ) ಪಠ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.

3.ಬಹು ಆಗಮನ/ನಿರ್ಗಮನ ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೇ ವರ್ಷದ ನಂತರ ಡಿಪ್ಲೊಮಾ ನೀಡುವ (ಬಹು ಆಗಮನ/ನಿರ್ಗಮನು ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಲ್ಲ.
4. ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು 5. Apprenticeship-embedded degree courses ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ತಂಡಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಬದಲಾವಣೆಗಳು 2021-22, 2022-23, 2023-24 ನೇ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪದವಿ ಕಾರ್ಯಕ್ರಮಗಳಿಗೆ 2021-22, 2022-23 ಮತ್ತು 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಕಾಲಾವಧಿ ಹಾಗೂ ಪಠ್ಯಕ್ರಮದ ಕುರಿತು ಸದ್ಯಕ್ಕೆ ಜಾರಿಯಲ್ಲಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ-1), ದಿನಾಂಕ: 07-08-2021ರ ಅನುಸಾರವಾಗಿಯೇ ವಿದ್ಯಾಭ್ಯಾಸ ಮಾಡುತ್ತಾರೆ.

ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇದನ್ನೂ ಓದಿ | Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

2024-25ನೇ ಸಾಲಿನ ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು

ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರ್ಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟಿಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ದಿನಾಂಕ 09.05.2024 ರಂದು UUCMS ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ.

Continue Reading
Advertisement
K Vasantha Bangera
ಪ್ರಮುಖ ಸುದ್ದಿ18 seconds ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ45 mins ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್49 mins ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ53 mins ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Prajwal Revanna Case HD Kumaraswamy King of Blackmail and DK Shivakumar is back
ಚಿಕ್ಕಮಗಳೂರು53 mins ago

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Hoskote News
ಕರ್ನಾಟಕ56 mins ago

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Heavy Rain
ತುಮಕೂರು1 hour ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Fried Oil
ಆರೋಗ್ಯ1 hour ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ1 hour ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್2 hours ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ22 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌