Illicit Liquor : ಯುಗಾದಿ ಹಬ್ಬದ ದಿನವೇ ನಕಲಿ ಮದ್ಯ ಸೇವಿಸಿ ಸಾವು, ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ - Vistara News

ಕರ್ನಾಟಕ

Illicit Liquor : ಯುಗಾದಿ ಹಬ್ಬದ ದಿನವೇ ನಕಲಿ ಮದ್ಯ ಸೇವಿಸಿ ಸಾವು, ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗ್ರಾಮವೊಂದರಲ್ಲಿ ಯುಗಾದಿ ದಿನವೇ ವ್ಯಕ್ತಿಯೊಬ್ಬರು ನಕಲಿ ಮದ್ಯಕ್ಕೆ ಬಲಿಯಾಗಿದ್ದಾರೆ. ಊರಿನ ಜನ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

VISTARANEWS.COM


on

Chikkamagaluru liquor death
ನಕಲಿ ಮದ್ಯ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ನಾಡಿನೆಲ್ಲೆಡೆ ಯುಗಾದಿ ಸಂಭ್ರಮ ಮನೆ ಮಾಡಿದ್ದರೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರಿನ ಹಿತ್ಲೆಗುಳಿ ಗ್ರಾಮದಲ್ಲಿ ಶೋಕಾಚರಣೆ ಕಾಣಿಸಿಕೊಂಡಿದೆ. ಯಾಕೆಂದರೆ, ಇಲ್ಲಿ ವ್ಯಕ್ತಿಯೊಬ್ಬರು ಯುಗಾದಿ ಹಬ್ಬದ ದಿನವೇ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

ಗ್ರಾಮದಲ್ಲಿ ನಕಲಿ ಮದ್ಯ ಹಾವಳಿ ಹೆಚ್ಚಾಗಿದ್ದು, ಅದರ ವಿರುದ್ದ ಜನಾಕ್ರೋಶ ಜೋರಾಗಿದೆ. ಆದರೆ, ಅದನ್ನು ತಡೆಯಲು ಸಾಧ್ಯವಾಗದೆ ಜನರು, ಅದರಲ್ಲೂ ಮಹಿಳೆಯರು ಹತಾಶರಾಗಿದ್ದಾರೆ. ಇದೀಗ ಗ್ರಾಮದ ಪುಟ್ಟೇಗೌಡ ಎಂಬವರು ಯುಗಾದಿ ದಿನವೇ ನಕಲಿ ಮದ್ಯ ಸೇವಿಸಿ ಮೃತಪಟ್ಟ ಹಿನ್ನೆಲೆಯಲ್ಲಿ ಆಕ್ರೋಶ ಮತ್ತೊಮ್ಮೆ ಭುಗಿಲೆದ್ದಿದೆ.

ಕೊಪ್ಪ ತಾಲೂಕಿನ ಮೇಗೂರಿನ ಹಿತ್ಲೆಗುಳಿ ಗ್ರಾಮದಲ್ಲಿ ಪುಟ್ಟೇಗೌಡ ಸೇರಿ ಕಳೆದ ಕೆಲವು ಸಮಯದಲ್ಲಿ ಮೂವರು ನಕಲಿ ಮದ್ಯಕ್ಕೆ ಬಲಿಯಾದಂತಾಗಿದೆ. ನಕಲಿ ಮದ್ಯ ಕುರಿತು ಜಿಲ್ಲಾಧಿಕಾರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ಜನರ ಆಕ್ರೋಶ.

ನಕಲಿ ಮದ್ಯ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಹೀಗಾಗಿ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಆಗಮಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದು, ಅವರು ಬರುವವರೆಗೆ ಮೃತದೇಹ ವಿಲೇವಾರಿ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲೇಬೇಕು, ನಮ್ಮ ಊರಿಗೆ ಮದ್ಯ ವ್ಯಾಪಾರ ಬೇಡ ಎಂದು ಜನರು ಘೋಷಣೆಗಳನ್ನು ಕೂಗಿದರು. ಮಹಿಳೆಯರೇ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದಾರೆ. ಪೊಲೀಸರು ಈಗಾಗಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಮತ್ತು ಎಸ್ಪಿ ಬರಲೇಬೇಕು ಎಂದು ಜನರು ಹಠ ಹಿಡಿದಿದ್ದಾರೆ.

ಇದನ್ನೂ ಓದಿ : Road accident : ಮದ್ಯ ಸಾಗಿಸುತ್ತಿದ್ದ ಲಾರಿ ಅದಿರು ಸಾಗಾಟದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಮೃತ್ಯುವಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Lok Sabha Election 2024: ಸಂವಿಧಾನ ಉಳಿಸಲು ಕಾಂಗ್ರೆಸ್‌ ಗೆಲ್ಲಿಸಿ; ಈ. ತುಕಾರಾಂ

Lok Sabha Election 2024 ಬಳ್ಳಾರಿ ಜಿಲ್ಲಾ ಡಾ.ಬಿ.ಆರ್.‌ ಅಂಬೇಡ್ಕರ್‌ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿಗಳ ಮತ್ತು ಸಂಘಟನೆಗಳ ಸಭೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ ಮತ ಯಾಚಿಸಿದರು.

VISTARANEWS.COM


on

Ballari Lok Sabha Constituency Congress candidate E Tukaram election campaign in Ballari
Koo

ಬಳ್ಳಾರಿ: ಇದು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ. ಸಂವಿಧಾನದ ಉಳಿಸುವ ಚುನಾವಣೆಯಾಗಿದೆ (Lok Sabha Election 2024) ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ ತಿಳಿಸಿದರು.

ನಗರದ ಬಳ್ಳಾರಿ ಜಿಲ್ಲಾ ಡಾ. ಬಿ.ಆರ್.‌ ಅಂಬೇಡ್ಕರ್‌ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿಗಳ ಮತ್ತು ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಸಮಾಜ, ವರ್ಗದ ಕಲ್ಯಾಣಕ್ಕಾಗಿ ದುಡಿದ ಪಕ್ಷ ಕಾಂಗ್ರೆಸ್‌. ಸಮಾನ ಮನಸ್ಕರು ಒಂದಾಗಿ ಪಕ್ಷ ಗೆಲ್ಲಿಸೋಣ. ಸಮ ಸಮಾಜ ಕಟ್ಟೋಣ ಎಂದು ಅವರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

ಈ ಸಂದರ್ಭದಲ್ಲಿ ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ, ಮುಖಂಡರಾದ ಕೆ.ಎಸ್‌.ಎಲ್‌. ಸ್ವಾಮಿ, ಮುಂಡರಗಿ ನಾಗರಾಜ್, ಮಾನಯ್ಯ ಸೇರಿದಂತೆ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

ಕಮ್ಮ ಸಮುದಾಯದ ಸಭೆಯಲ್ಲಿ ಮತಯಾಚನೆ

ಬಳ್ಳಾರಿಯ ಕಮ್ಮ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಈ. ತುಕಾರಾಂ, ತಮಗೆ ಈ ಬಾರಿಯ ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಒದಿ: World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ಎಲ್.ಸ್ವಾಮಿ, ಮುಖಂಡ ಬಿ.ಎಂ. ಪಾಟೀಲ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Latest

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Lok Sabha Election 2024: ಲೋಕಸಭಾ ಚುನಾವಣೆ-2024ರ ಎರಡನೇ ಹಂತದ ಮತದಾನ ಶುಕ್ರವಾರ ನಡೆಯಲಿದ್ದು, ಕಣಕ್ಕೆ ಇಳಿದಿರುವ 1,120 ಮಂದಿ ಅಭ್ಯರ್ಥಿಗಳಲ್ಲಿ 10 ಮಂದಿ ಕೋಟ್ಯಾಧಿಪತಿಗಳಲ್ಲಿ ಐವರು ಕರ್ನಾಟಕದವರಾಗಿದ್ದಾರೆ.

VISTARANEWS.COM


on

By

Lok Sabha Election-2024
Koo

ಲೋಕಸಭಾ ಚುನಾವಣೆ-2024ರಲ್ಲಿ (Lok Sabha Election 2024) ಶುಕ್ರವಾರ ನಡೆಯುವ ಮತದಾನ (voting) ಪ್ರಕ್ರಿಯೆಯಲ್ಲಿ ಒಟ್ಟು 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 1,120 ಮಂದಿ ತಮ್ಮ ಅದೃಷ್ಟವನ್ನು ಪರೀಕ್ಷೆಯನ್ನು ಮಾಡಲಿದ್ದಾರೆ. ಈ ಬಾರಿ ಹಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿ ಇದ್ದು, ಇವರಲ್ಲಿ ಹೆಚ್ಚು ಶ್ರೀಮಂತ (richest) ಅಭ್ಯರ್ಥಿಗಳೂ (candidate) ಸೇರಿದ್ದಾರೆ.

ಶುಕ್ರವಾರ ನಡೆಯುವ ಎರಡನೇ ಹಂತದ ಚುನಾವಣೆಯ ಕಣದಲ್ಲಿರುವ ಕೆಲವು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ​​​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಭಾಗವಹಿಸುತ್ತಿರುವ 1,210 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದ್ದು, 390 ಅಭ್ಯರ್ಥಿಗಳು ‘ಕೋಟ್ಯಧಿಪತಿಗಳು’ ಎಂದು ಹೇಳಿದೆ. ಇವರಲ್ಲಿ ಶೇ. 21ರಷ್ಟು ಅಭ್ಯರ್ಥಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!


1. ವೆಂಕಟರಮಣ ಗೌಡ

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 622 ಕೋಟಿ ರೂ. ಗೂ ಅಧಿಕ ಆಸ್ತಿ ಹೊಂದಿದ್ದಾರೆ.


2. ಡಿ.ಕೆ. ಸುರೇಶ್

ಎರಡನೇ ಸ್ಥಾನವು ಕಾಂಗ್ರೆಸ್‌ನ ಅಭ್ಯರ್ಥಿ ಡಿ.ಕೆ. ಸುರೇಶ್‌ಗೆ ಸೇರಿದೆ. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂ.


3. ಹೇಮಾ ಮಾಲಿನಿ

ಖ್ಯಾತ ನಟಿ ಹೇಮಾ ಮಾಲಿನಿ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶದ ಮಥುರಾದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ. ಇವರು 278.9 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.


4. ಸಂಜಯ್ ಶರ್ಮಾ

ಮಧ್ಯಪ್ರದೇಶದ ಹೋಶಂಗಾಬಾದ್‌ನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸಂಜಯ್ ಶರ್ಮಾ ಅವರ ಆಸ್ತಿ 232 ಕೋಟಿ ರೂ.


5. ಎಚ್.ಡಿ. ಕುಮಾರಸ್ವಾಮಿ

ಬಿಜೆಪಿಯೊಂದಿಗೆ ಸಮ್ಮಿಶ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರ ಆಸ್ತಿ 217 ಕೋಟಿ ರೂ.


6. ಕನ್ವರ್ ಸಿಂಗ್ ತನ್ವಾರ್

ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಕಣಕ್ಕಿಳಿದಿದ್ದು, 214 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


7. ಎಂ ಎಸ್ ರಕ್ಷಾ ರಾಮಯ್ಯ

ಕರ್ನಾಟಕದ ಚಿಕ್ಕಬಳ್ಳಾಪುರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಎಂ.ಎಸ್. ರಕ್ಷಾ ರಾಮಯ್ಯ ಸ್ಪರ್ಧಿಸುತ್ತಿದ್ದು, 169 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


8. ಸುಖಬೀರ್ ಸಿಂಗ್

ಬಿಜೆಪಿಯಿಂದ ಬಂದಿರುವ ಸುಖಬೀರ್ ಸಿಂಗ್ ಜೌನಪುರಿಯಾ ಅವರು ರಾಜಸ್ಥಾನದ ಟೊಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸುತ್ತಿದ್ದು, 142 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


9. ಪ್ರೊ. ಎಂ ವಿ ರಾಜೀವ್ ಗೌಡ

ಪ್ರೊಫೆಸರ್ ಎಂ.ವಿ. ರಾಜೀವ್ ಗೌಡ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಕರ್ನಾಟಕದ ಬೆಂಗಳೂರು ಉತ್ತರದಿಂದ ಕಣಕ್ಕಿಳಿದಿರುವ ಅವರು 134 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ.


10, ಉದೈಲಾಲ್ ಅಂಜನಾ

ಟಾಪ್‌ 10ನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಉದಯಲಾಲ್ ಅಂಜನಾ ಅವರು ರಾಜಸ್ಥಾನದ ಚಿತ್ತೋರ್‌ಗಢದಿಂದ ಸ್ಪರ್ಧಿಸುತ್ತಿದ್ದಾರೆ. ಆಕೆಯ ಆಸ್ತಿ 118 ಕೋಟಿ ರೂ.

Continue Reading

ಕೋರ್ಟ್

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Chemistry paper leak: ಭಾರಿ ಚರ್ಚೆಗೆ ಗ್ರಾಸವಾಗಿ ರಾಜ್ಯದ ಗಮನ ಸೆಳೆದಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಗಳನ್ನು ಖುಲಾಸೆಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

VISTARANEWS.COM


on

By

Chemistry paper leak case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ (Chemistry paper leak) ಪ್ರಕರಣದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

2016ರ ಮಾ.21ರಂದು ನಡೆದಿದ್ದ ದ್ವಿತೀಯ ಪಿಯು ರಸಾಯನಶಾಸ್ತ್ರದ ಪ್ರಶ್ನೆಪತ್ರಿಕೆಯು ಅದೇ ದಿನ ದಿನ ಬೆಳಗ್ಗೆ 7.30ಕ್ಕೆ ಸೋರಿಕೆಯಾಗಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳ ಒತ್ತಾಯಕ್ಕೆ ಮಣಿದು ಆಗೀನ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಬಳಿಕ ತನಿಖೆ ನಡೆಸಿದ್ದ ಸಿಐಡಿ‌ ಅಧಿಕಾರಿಗಳು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ವೇಳೆ ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದರು. ಉಳಿದ ಆರೋಪಿಗಳನ್ನು ನ್ಯಾಯಾಲಯವು ಇಂದು ಗುರುವಾರ (ಏ.25) ಖುಲಾಸೆಗೊಳಿಸಿದೆ.

ಇನ್ನೂ ತನಿಖೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿತ್ತು. ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿತ್ತು. ಹೀಗಾಗಿ ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಯನ್ನೂ ನಡೆಸಿದ್ದರು.

2016ರ ಮಾರ್ಚ್ 21ರಂದು ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಮಾರ್ಚ್ 31ರಂದು ಮರು ಪರೀಕ್ಷೆ ನಡೆಸಿದಾಗಲೂ ಎರಡು ಬಾರಿಯೂ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Modi in Karnataka: ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ. ಈ ವೇಳೆ ಮೋದಿ ಪ್ರವಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

VISTARANEWS.COM


on

Modi in Karnataka Pm Modi to visit Karnataka on April 28 and 29 Raichur conference maybe cancelled
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ನಾಲ್ಕು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿ, ಮಧ್ಯಾಹ್ನ 12 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಹಾಗೂ ಸಂಜೆ 4 ಗಂಟೆಗೆ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನರೇಂದ್ರ ಮೋದಿ ಮತ ಬೇಟೆ ನಡೆಸಲಿದ್ದಾರೆ. ಈ ಬೃಹತ್‌ ಸಮಾವೇಶಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ, ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ಜನರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ. ಕಾರಣ ಆ ಭಾಗಗಳಲ್ಲೂ ಎರಡನೇ ಹಂತದ ಚುನಾವಣೆ ನಡೆಯುವುದರಿಂದ ಮೋದಿ ಮಾತು ಕೆಲಸ ಮಾಡಲಿದೆ ಎಂಬ ನಿಟ್ಟಿನಲ್ಲಿ ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ ಎನ್ನಲಾಗಿದೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ತಂತ್ರ ರೂಪಿಸಲಾಗಿದೆ.

ರಾಯಚೂರು ಸಮಾವೇಶ ರದ್ದು?

ಈ ಮೊದಲು ಏಪ್ರಿಲ್‌ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಇತ್ತು. ಆದರೆ, ಬಳ್ಳಾರಿಯಲ್ಲಿ ಏಪ್ರಿಲ್‌ 28ರಂದೇ ಪ್ರಚಾರ ಭಾಷಣ ಮಾಡಲಿರುವ ಮೋದಿ, ಮರುದಿನ ಬಾಗಲಕೋಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಬೃಹತ್‌ ಸಭೆಯಲ್ಲಿ ಮಾತನಾಡಲಿದ್ದಾರೆ. ಆದರೆ, ಮುಂದೆ ಯಾವ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂಬ ಬಗ್ಗೆ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ, ರಾಯಚೂರು ಪ್ರವಾಸವನ್ನು ರದ್ದು ಮಾಡಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರಚಾರ ನಡೆಸಬಹುದು ಎಂದು ಅಂದಾಜಿಸಲಾಗುತ್ತಿದೆ.

2ನೇ ಹಂತದ ಚುನಾವಣೆಗೆ ಬಿಜೆಪಿ ಪ್ಲ್ಯಾನ್‌ ರೆಡಿ

ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading
Advertisement
ಫ್ಯಾಷನ್10 mins ago

Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

Lok sabaha election
ಪ್ರಮುಖ ಸುದ್ದಿ25 mins ago

Narendra Modi : ತಮ್ಮನ್ನು ನಿಂದಿಸಿದ ರಾಹುಲ್​ಗೆ ಪ್ರತ್ಯುತ್ತರ ಕೊಟ್ಟ ಮೋದಿ; ಇಲ್ಲಿದೆ ವಿಡಿಯೊ

Ballari Lok Sabha Constituency Congress candidate E Tukaram election campaign in Ballari
ರಾಜಕೀಯ36 mins ago

Lok Sabha Election 2024: ಸಂವಿಧಾನ ಉಳಿಸಲು ಕಾಂಗ್ರೆಸ್‌ ಗೆಲ್ಲಿಸಿ; ಈ. ತುಕಾರಾಂ

Lok Sabha Election-2024
Latest41 mins ago

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Viral Video
ವೈರಲ್ ನ್ಯೂಸ್47 mins ago

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

deadly murder
Latest1 hour ago

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Chemistry paper leak case
ಕೋರ್ಟ್1 hour ago

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Ranji Trophy
ಪ್ರಮುಖ ಸುದ್ದಿ2 hours ago

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

Fire Tragedy
ದೇಶ2 hours ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

World Malaria Day April 25
ಆರೋಗ್ಯ2 hours ago

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ3 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ6 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20248 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌