ಕೊಡಗು: ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಸೇರಿದ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಐಎನ್‌ಎಕ್ಸ್ ಮೀಡಿಯಾ ಪ್ರಕರಣ ಜಾಡು ಹಿಡಿದು ಕೊಡಗಿಗೆ ಆಗಮಿಸಿದ್ದ ಇ.ಡಿ. ಅಧಿಕಾರಿಗಳು (ED Raid) , ಕಾಂಗ್ರೆಸ್ ನಾಯಕ ಹಾಗೂ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸೇರಿದ 11.04 ಕೋಟಿ ರೂಪಾಯಿ ಮೌಲ್ಯದ 3 ಚರಾಸ್ತಿ ಹಾಗೂ 1 ಸ್ಥಿರಾಸ್ತಿಯನ್ನು ಜಪ್ತಿ ಮಾಡಿದ್ದಾರೆ.
2019ರ ಅಕ್ಟೋಬರ್ 16ರಂದು ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರ ಪುತ್ರನನ್ನೂ ಈ ಹಿಂದೆ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಕೊಡಗಿನಲ್ಲಿ ಹೊಂದಿದ್ದ ಆಸ್ತಿಯನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದು, ದಾಳಿ ಮತ್ತು ಆಸ್ತಿ ಜಪ್ತಿಯ ಬಗ್ಗೆ ಅಧಿಕೃತ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ | Suspicious Death: ಯಾದಗಿರಿಯ ಹುಣಸಗಿಯಲ್ಲಿ ಯುವತಿ ಅನುಮಾನಾಸ್ಪದ ಸಾವು; ಅಂಕೋಲಾದಲ್ಲಿ ಕೇಸ್ ದಾಖಲು