Independence day 2023 : ಅಭಿವೃದ್ಧಿಗೆ ಕರ್ನಾಟಕ ಮಾದರಿ; ಗ್ಯಾರಂಟಿ ಸಮರ್ಥನೆ ಮಾಡಿದ ಸಿದ್ದರಾಮಯ್ಯ - Vistara News

ಕರ್ನಾಟಕ

Independence day 2023 : ಅಭಿವೃದ್ಧಿಗೆ ಕರ್ನಾಟಕ ಮಾದರಿ; ಗ್ಯಾರಂಟಿ ಸಮರ್ಥನೆ ಮಾಡಿದ ಸಿದ್ದರಾಮಯ್ಯ

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದಲ್ಲೇ ಕರ್ನಾಟಕವು ಅಭಿವೃದ್ಧಿಗೆ ಮಾದರಿಯಾಗಿದೆ. ಹೊಸತನ, ಹೊಸ ಚಿಂತನೆಗಳೊಂದಿಗೆ ಮುನ್ನಡೆಯುತ್ತಿರುವ ರಾಜ್ಯವು ಎಲ್ಲರನ್ನು ಒಳಗೊಂಡು ಬೆಳೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಅವರು ಮಾತನಾಡಿದರು. ತಮ್ಮ ಭಾಷಣದಲ್ಲಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅದು ಮಾಡಿದ ಕ್ರಾಂತಿಯನ್ನು ಉಲ್ಲೇಖಿಸಿದರು.

ಮುಖ್ಯಮಂತ್ರಿಗಳ 77ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ಪೂರ್ಣ ಪಾಠ ಇಲ್ಲಿದೆ.

ಆತ್ಮೀಯ ನಾಡ ಬಾಂಧವರೆ,

  1. ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.
  2. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ.
  3. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು.
  4. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ.
  5. ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ ಎಂದು ಭಾವಿಸಿ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು. ಸ್ವಾತಂತ್ರ್ಯವೇನೊ ಲಭಿಸಿತು. ಆದರೆ ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10 ರಷ್ಟು ಜನ ಶೇ.78 ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ. ಬ್ರಿಟಿಷ್ ಭಾರತದಲ್ಲಿ ನಮ್ಮ ದೇಶದ ಸಂಪತ್ತನ್ನು ಬ್ರಿಟಿಷರು ಹೊತ್ತೊಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ ಅಭಿವೃದ್ಧಿ ಸಾಧ್ಯವೆ? ಕುವೆಂಪು ಅವರು ತಮ್ಮದೊಂದು ಪದ್ಯದಲ್ಲಿ:

“ಕತ್ತಿ ಪರದೇಶಿಯಾದರೆ ಮಾತ್ರ ನೋವೆ?
ನಮ್ಮವರೆ ಹದಹಾಕಿ ತಿವಿದರದು ಹೂವೆ?” ಎಂದು ಪ್ರಶ್ನಿಸಿದ್ದಾರೆ.

  1. ಇದನ್ನೆಲ್ಲ ಮನಗಂಡೆ ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮತ್ರ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ.
  2. ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ.
  3. Gandhi’s talisman ಎಂದು ಹೆಸರಾದ ಚಿಂತನೆಯ ನೆರಳಲ್ಲೇ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಯಾವುದೇ ಯೋಜನೆ ಜಾರಿಗೊಳಿಸುವಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇದರಿಂದ ಅನುಕೂಲವಾಗುವುದೇ? ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ? ಎಂದು ಯೋಚಿಸಿಯೇ ಮುಂದಡಿಯಿಡುವುದು ನಮ್ಮ ಆಡಳಿತದ ಅಂತಃಸತ್ವವಾಗಿದೆ.
  4. ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರμÁ್ಟಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ [Universal Basic income] ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ.
  5. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ.
  6. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ
    50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದುವರೆಗೆ
    38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
  7. ಎರಡನೇ ಗ್ಯಾರಂಟಿ ಯೋಜನೆ, 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ. ಈ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್‍ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ನಾವು ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸುತ್ತಿದ್ದೇವೆ.
  8. ಹಸಿವು ಮುಕ್ತ ಕರ್ನಾಟಕದ ಕಲ್ಪನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಜಾರಿಗೊಳಿಸಿರುವ ಮತ್ತೊಂದು ಗ್ಯಾರಂಟಿ ಯೋಜನೆ ‘ಅನ್ನ ಭಾಗ್ಯʼ. ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ.
  9. ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.
  10. ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಕೂಡಲೇ ಉದ್ಯೋಗ ದೊರೆಯದಿದ್ದರೆ, ನಿರಾಶರಾಗದಂತೆ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ, ಬೆಂಬಲ ನೀಡುವ ಯೋಜನೆ ಯುವನಿಧಿ. ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ.
  11. ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.
  12. ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ. ಈ ಕೋಟಿ, ಕೋಟಿ ಜನರಿಗೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ. ಮತ್ತು ಸಮಗ್ರ ಮಹಿಳಾ ಸಶಕ್ತೀಕರಣ ಸಾಧ್ಯವಾಗಲಿದೆ. ಇದರಿಂದ ಕರ್ನಾಟಕ ಮಾದರಿ ಅಭಿವೃದ್ಧಿ ವ್ಯಾಖ್ಯಾನವು ಪ್ರಾರಂಭವಾಗಲಿದೆ. ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲಗಳನ್ನು ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹವು ಸಹ ಶಕ್ತಿಯುತವಾಗಿದೆ.
  13. ಡಾ.ಬಿ.ಆರ್. ಅಂಬೇಡ್ಕರ್ ಅವರು “ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿದೆ. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ಬದುಕಿನ ತತ್ವಗಳೆಂದು ಗುರುತಿಸುವ ಜೀವನ ವಿಧಾನವಾಗಿದೆ” ಎಂದು ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವ ಗಟ್ಟಿಯಾಗಿರಬೇಕಾದರೆ ಅದರ ತಳಹದಿಯಾದ ಸಾಮಾಜಿಕ ಪ್ರಜಾಪ್ರಭುತ್ವವು ಸುಭದ್ರವಾಗಿರಬೇಕು ಎಂಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದೆ.
  14. ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.
  15. ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.
  16. ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ.
  17. ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ಡ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರೆ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.
  18. ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.
  19. ‘ಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು.
  20. ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ/ ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು.
  21. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವನ್ನು ಕೈಗೊಳ್ಳಲು 200 ಕೋಟಿ ರೂ. ಒದಗಿಸಲಾಗಿದೆ. ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನಿಸಿದ್ದೇವೆ.
  22. ನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ. ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದೇವೆ. ಅಗತ್ಯ ಇರುವೆಡೆ ಹೊಸ ಬಸ್ಸುಗಳನ್ನು ಒದಗಿಸಲು ಸಿದ್ಧರಿದ್ದೇವೆ.
  23. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಿದ್ದೇವೆ.
  24. ಹೈನುಗಾರಿಕೆಯನ್ನು ಉತ್ತೇಜಿಸಿ ಗ್ರಾಮೀಣ ಆರ್ಥಿಕತೆಗೆ ಚೈತನ್ಯ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿಗಳಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ರೈತರಿಗೆ ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಕ್ಷೇತ್ರದ ಬಲವರ್ಧನೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ.
  25. ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳನ್ನು ಬಲ ಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಎಂಆರ್‍ಐ/ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ವಿಸ್ತರಿಸುವ ಮೂಲಕ ಬಡ ರೋಗಿಗಳಿಗೆ ಉಚಿತ ಮತ್ತು ಉತ್ತಮ ಪರೀಕ್ಷೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಜೊತೆಗೆ ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಗಮಗೊಳಿಸಿ ಜನರ ಕೈಗೆಟುಕುವಂತೆ ಕ್ರಿಯಾಯೋಜನೆಗಳನ್ನು ರೂಪಿಸುತ್ತಿದ್ದೇವೆ.
  26. “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ.
  27. ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡು ಸರ್ಕಾರವು ಪ್ರತಿ ಪ್ಲೇಟ್‍ಗೆ 5 ರಿಂದ 10 ರೂ. ಗಳಷ್ಟು ಹೆಚ್ಚುವರಿ ಮೊತ್ತ ನೀಡಿ, ಜನರಿಗೆ ಹಿಂದಿನ ದರದಲ್ಲಿಯೆ ಉತ್ತಮ ಆಹಾರವನ್ನು ಒದಗಿಸಲು ತೀರ್ಮಾನಿಸಿದೆ.
  28. ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು.
  29. ನಗರ ಪ್ರದೇಶದ ಕೆರೆಗಳು ಮತ್ತಿತರ ಜಲಮೂಲಗಳ ಸಂರಕ್ಷಣೆ ಮಾಡುವುದರೊಂದಿಗೆ ಜನರಿಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಿದೆ.
  30. ಬೆಂಗಳೂರು ಮೆಟ್ರೋ ಪ್ರಸ್ತುತ 69.66 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿದಿನ 6.1 ಲಕ್ಷ ಪ್ರಯಾಣಿಕರು ಮೆಟ್ರೋ ರೈಲು ಸೇವೆಯನ್ನು ಪಡೆಯುತ್ತಿದ್ದಾರೆ. 2023ರ ಸೆಪ್ಟೆಂಬರ್‍ನಲ್ಲಿ ಬೈಯಪ್ಪನಹಳ್ಳಿ-ಕೃಷ್ಣರಾಜಪುರ ಮಾರ್ಗ, ಕೆಂಗೇರಿ-ಚಲ್ಲಘಟ್ಟ ವಿಸ್ತರಣೆ, ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರ ವಿಸ್ತರಣೆ, ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. 2026ರ ವೇಳೆಗೆ ಬೆಂಗಳೂರಿನಲ್ಲಿ 175.55 ಕಿ.ಮೀ. ಮೆಟ್ರೋ ಜಾಲ ಕಾರ್ಯಾಚರಣೆ ನಡೆಸಲಿದೆ. ಈಗ ಬೆಂಗಳೂರಿನ ಮೆಟ್ರೋ ಜಾಲವು ದೇಶದಲ್ಲಿ ಎರಡನೆ ಸ್ಥಾನದಲ್ಲಿದೆ.
  31. ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುವ ಸುಮಾರು 70 ರಿಂದ 80 ಲಕ್ಷ ಅಸಂಘಟಿತ ಅದರಲ್ಲೂ ವಿಶೇಷವಾಗಿ ಸಾರಿಗೆ ವಲಯದ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ.
  32. ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ.
  33. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993 ಜಾರಿ ಹಾಗೂ ಸಂವಿಧಾನದ 73ನೇ ವಿಧಿಯ ತಿದ್ದುಪಡಿ ಮಾಡಿದ 30ನೇ ವರ್ಷದಲ್ಲಿ ನಾವಿದ್ದೇವೆ. ಪ್ರಜಾಪ್ರಭುತ್ವದ ವಿಕೇಂದ್ರೀಕರಣದಲ್ಲಿ ಕರ್ನಾಟಕ ಎಂದಿಗೂ ಮುಂಚೂಣಿಯಲ್ಲಿದೆ. ಪಂಚಾಯತ್‍ರಾಜ್ ಸಂಸ್ಥೆಗಳ ಮೂಲಕ ಸ್ಥಳೀಯಾಡಳಿತ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.
  34. ರಾಜ್ಯದ ಜನತೆಗೆ ಜೀವನೋಪಾಯವನ್ನು ಕಲ್ಪಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಕಾರ್ಯತಂತ್ರಗಳನ್ನು ನಮ್ಮ ಸರ್ಕಾರವು ಅಳವಡಿಸಿಕೊಳ್ಳಲಿದೆ. ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯ ತರಬೇತಿ, ಸಾಲ ಸೌಲಭ್ಯದ ಲಭ್ಯತೆ ಮತ್ತು ಸ್ವ-ಸಹಾಯ ಸಂಘಗಳು ಹಾಗೂ ಜಂಟಿ ಬಾಧ್ಯತಾ ಗುಂಪುಗಳನ್ನು ಬಲಪಡಿಸುವ ಮೂಲಕ ಗ್ರಾಮೀಣ ಉದ್ಯಮಶೀಲತೆಗೆ ಪೆÇ್ರೀತ್ಸಾಹ ನೀಡಲಾಗುವುದು. ಹೊಸ ಉದ್ಯಮ ಸ್ಥಾಪನೆಯ ಪ್ರಕ್ರಿಯೆಗಳನ್ನು ಸರಳಗೊಳಿಸುವುದರೊಂದಿಗೆ ಪ್ರತಿ ತಾಲ್ಲೂಕಿನಲ್ಲಿ ಇದಕ್ಕಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗುವುದು.
  35. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಜನೆ ಮಾಡಲು ಹಾಗೂ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು ಕೃಷಿ ಸಂಸ್ಕರಣೆ ಉದ್ಯಮಗಳ ಸ್ಥಾಪನೆಗೆ ಬೆಂಬಲ ನೀಡಲಾಗುವುದು. ಇದರಿಂದ ರೈತರ ಆದಾಯ ಹೆಚ್ಚುವುದಲ್ಲದೆ ಗ್ರಾಮೀಣ ಪ್ರದೇಶದ ಬೆಳವಣಿಗೆಗೆ ನೆರವಾಗಲಿದೆ.
  36. ಕರ್ನಾಟಕವನ್ನು ಭವಿಷ್ಯದ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಉತ್ಪಾದನಾ ವಲಯದಲ್ಲಿ ಸಮಾನ ಹಾಗೂ ಸುಸ್ಥಿರ ಬೆಳವಣಿಗೆಯ ಮೂಲಕ ಏμÁ್ಯದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಗುರಿ ನಮ್ಮದಾಗಿದೆ. ಕಳೆದ
    10 ವರ್ಷಗಳಲ್ಲಿ ರಾಜ್ಯದ ಕೈಗಾರಿಕಾ ವಲಯವು ಶೇ. 9.3 ರ ದರದಲ್ಲಿ ಬೆಳವಣಿಗೆ ದಾಖಲಿಸಿದೆ. ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ದರವನ್ನು ಶೇ. 15-16 ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಪ್ರತಿವರ್ಷ ಕನಿಷ್ಠ 1.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 14 ಲಕ್ಷ ಹೊಸ ಉದ್ಯೋಗಗಳ ಸೃಜನೆಯಾಗುವ ಅಗತ್ಯವಿದೆ.
  37. ಕಳೆದ ಎರಡು ತಿಂಗಳಲ್ಲಿ ಫಾಕ್ಸ್‍ಕಾನ್, ಇಂಟರ್‍ನ್ಯಾಷನಲ್ ಬ್ಯಾಟರಿ ಕಂಪೆನಿ, ಟಾಟಾ ಟೆಕ್ನಾಲಜೀಸ್ ಮತ್ತಿತರ ಕಂಪೆನಿಗಳಿಂದ ಗಣನೀಯ ಪ್ರಮಾಣದ ಹೂಡಿಕೆ ಆಕರ್ಷಿಸಲಾಗಿದೆ. ಹೂಡಿಕೆ ಆಕರ್ಷಣೆಯಲ್ಲಿ ಮುನ್ನಡೆ ಸಾಧಿಸುವ ನಿಟ್ಟಿನಲ್ಲಿ ಏರೋಸ್ಪೇಸ್ ಮತ್ತು ರಕ್ಷಣೆ, ಆಟೊಮೊಬೈಲ್, ವಿದ್ಯುತ್ ವಾಹನಗಳು (EV), ಇಲೆಕ್ಟ್ರಾನಿಕ್ಸ್ ಮತ್ತು ಉತ್ಪಾದನಾ ವಲಯ, ಸ್ಟಾರ್ಟಪ್‍ಗಳು, ವಿವಿಧ ಸಂಘಟನೆಗಳು, ಮೂಲ ಸೌಕರ್ಯ ಅಭಿವೃದ್ಧಿ ವಲಯದ ಸಂಸ್ಥೆಗಳೊಂದಿಗೆ ನಿರಂತರ ಸಂವಾದ ನಡೆಸುತ್ತಿದ್ದೇವೆ.
  38. ಜಿಡಿಪಿ ವೇಗವರ್ಧನೆಗೆ ಸಂಬಂಧಿಸಿದಂತೆ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ ಬಿಡಿಭಾಗಗಳು, ಕೋರ್ ಕೈಗಾರಿಕೆಗಳು ಮತ್ತು ವೇರ್ ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
  39. ನಾವೀನ್ಯತೆಯಲ್ಲಿ ಇದೀಗ ಬೆಳಕು ಕಾಣುತ್ತಿರುವ Future Mobility, Green Hydrogen, Drones, Industrial Robots, Semiconductors ಉತ್ಪಾದನೆ,AR/ VR, Med tech ಮತ್ತು Space tech ಮೊದಲಾದ ಉದ್ಯಮಗಳಿಗೆ ಆದ್ಯತೆ ನೀಡಲಾಗುವುದು.
  40. ಆದ್ಯತೆಯ ಈ ವಲಯಗಳ ಉತ್ತೇಜನದ ಉಪಕ್ರಮಗಳಿಗೆ ಬೆಂಬಲವಾಗಿ ಕೈಗಾರಿಕಾ ನೀತಿಯನ್ನು ಇನ್ನಷ್ಟು ಪ್ರಗತಿಪರವಾಗಿ ರೂಪಿಸಿ ಪುನರ್ ರಚಿಸುವುದು, ವಿಶ್ವ ದರ್ಜೆಯ ಕೈಗಾರಿಕಾ ಮೂಲಸೌಕರ್ಯ, ಡಿಜಿಟಲ್ ಸೇವಾ ಪೂರೈಕೆ, ಅತ್ಯುತ್ತಮ ಹೂಡಿಕೆ ಉತ್ತೇಜನ ಸಂಸ್ಥೆ, ಕರ್ನಾಟಕದಲ್ಲಿ ಭವಿಷ್ಯದ ಉದ್ಯಮಕ್ಕೆ ಸಿದ್ಧವಿರುವ ಪ್ರತಿಭೆಗಳ ಲಭ್ಯತೆ ಮತ್ತು ವಿವಿಧ ಸಂಸ್ಥೆಗಳೊಂದಿಗೆ ಸಹಯೋಗ ಮತ್ತು ಮುಂಗಾಣ್ಕೆಯುಳ್ಳ ನೀತಿಗಳನ್ನು ಅನುμÁ್ಠನಗೊಳಿಸಲಾಗುವುದು.
  41. ಬೆಂಗಳೂರಿನಿಂದ ಹೊರಗೆ ಹೆಚ್ಚು ಉದ್ಯೋಗಾವಕಾಶ ಸೃಜಿಸುವ ಮೂಲಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮತ್ತು ಸುಸ್ಥಿರ ಬದುಕು ರೂಪಿಸಲು ಸರ್ಕಾರವು ಮಿಲಿಯನ್ ಪ್ಲಸ್ ನಗರಗಳೆಂದು ಗುರುತಿಸಲಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ನಗರಗಳ ಉಪನಗರಗಳಾಗಿ ಕೈಗಾರಿಕಾ ಟೌನ್‍ಶಿಪ್‍ಗಳÀನ್ನು ಅಭಿವೃದ್ಧಿಪಡಿಸಲಿದೆ. ಕೈಗಾರಿಕೆಗಳ ಸ್ಥಾಪನೆಯನ್ನು ಕೇಂದ್ರವಾಗಿಸಿಕೊಂಡ ಈ ಉಪನಗರಗಳು ಸುಸ್ಥಿರತೆಯನ್ನು ಹೊಂದಿದ್ದು, ನಾಗರಿಕ ಸೌಲಭ್ಯಗಳು, ಶಾಲೆ, ಆರೋಗ್ಯ ಸೇವಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸಲಾಗುವುದು.
  42. ರಸ್ತೆ, ವಿಮಾನ ನಿಲ್ದಾಣ ಹಾಗೂ ಬಂದರುಗಳ ಅಭಿವೃದ್ಧಿಗೂ ಆಯವ್ಯಯದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳು ಹಾಗೂ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
  43. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು, ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ಪ್ರವಾಸಿ ತಾಣಗಳ ರಸ್ತೆಗಳನ್ನು ಗುರುತಿಸಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ
    Hybrid Annuity Model ನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು.
  44. ಹುಮನಾಬಾದ್-ಕಲಬುರಗಿ ಮತ್ತು ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿ ನಡುವೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಎಕ್ಸಪ್ರೆಸ್-ವೇ ನಿರ್ಮಿಸುವ ಮೂಲಕ ಕಲ್ಯಾಣ ಕರ್ನಾಟಕ ಮತ್ತು ಬೆಂಗಳೂರು ನಡುವಣ ರಸ್ತೆ ಸಂಪರ್ಕ ಇನ್ನಷ್ಟು ಉತ್ತಮ ಪಡಿಸಲಾಗುವುದು.
  45. ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಹಂಚಿಕೆ ಮಾಡಿರುವ ಪ್ರತಿ ಹನಿ ನೀರನ್ನು ಬಳಸಿಕೊಳ್ಳಲು ನಾವು ತಯಾರಿದ್ದೇವೆ. ಇದಕ್ಕೆ ಅಗತ್ಯವಿರುವ ಸಂಪನ್ಮೂಲ ಕ್ರೋಢೀಕರಿಸಿ ವಿನಿಯೋಗಿಸುತ್ತೇವೆ.
  46. ನಮ್ಮ ಸರ್ಕಾರವು ಪ್ರಾದೇಶಿಕ ಅಸಮಾನತೆ ನಿವಾರಿಸಿ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ.
  47. ಪ್ರವಾಸೋದ್ಯಮ ಕೂಡ ಆರ್ಥಿಕತೆ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಜನೆಗೆ ಮಹತ್ತರ ಕೊಡುಗೆ ನೀಡುತ್ತದೆ. ಈ ಹಿನ್ನೆಲೆಯಲ್ಲಿ ನಾಡಿನ ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿಯನ್ನು ಕೈಗೊಳ್ಳಲು ಒತ್ತು ನೀಡಲಾಗುವುದು.
  48. ಆಯವ್ಯಯದಲ್ಲಿ ಘೋಷಿದಂತೆ ಕೃಷಿಯೇತರ ಉದ್ದೇಶಕ್ಕೆ ಜಮೀನಿನ ಬಳಕೆಗೆ ಸ್ವಯಂ ಘೋಷಣೆಯ ಮೂಲಕ ಭೂ-ಪರಿವರ್ತನೆ ಮಾಡಲು ಅನುಕೂಲವಾಗುವಂತೆ ಕರ್ನಾಟಕ ಭೂ-ಕಂದಾಯ ಕಾಯ್ದೆಯ ಸೆಕ್ಷನ್-95ಕ್ಕೆ ತಿದ್ದುಪಡಿ ತಂದು ಪ್ರಕ್ರಿಯೆಗಳನ್ನು ಸರಳೀಕರಣ ಮಾಡಲಾಗುತ್ತಿದೆ.
  49. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡುವ, ಸಾಮರಸ್ಯ ಕದಡುವ ಯತ್ನ ಮತ್ತು ‘ಮತೀಯ ಗೂಂಡಾಗಿರಿ ಅಥವಾ ನೈತಿಕ ಪೊಲೀಸ್ ಗಿರಿʼ ಹೆಸರಿನಲ್ಲಿ ನಡೆಯುವ ಅನೈತಿಕ ದಬ್ಬಾಳಿಕೆಯನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಸರ್ಕಾರದ ಪ್ರಧಾನ ಧ್ಯೇಯ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಆಶಯವನ್ನು ಈಡೇರಿಸುವುದೇ ಆಗಿದೆ. ನಾಡ ಜನರು, ವಿಶೇಷವಾಗಿ ಯುವಜನರು ಇಂತಹ ವಿಚ್ಛಿದ್ರಕಾರಿ ಶಕ್ತಿಗಳ ಪ್ರಚೋದನೆಗೆ ಒಳಗಾಗದೆ ಸಾಮರಸ್ಯ, ಸಹಬಾಳ್ವೆಯ ಮಹತ್ವವನ್ನು ಎತ್ತಿ ಹಿಡಿಯಬೇಕೆಂದು ಮನವಿ ಮಾಡುತ್ತೇನೆ.
  50. ನಮ್ಮ ಸರ್ಕಾರವು ಯುವ ಶಕ್ತಿಯನ್ನು ರಾಜ್ಯದ ಸಂಪತ್ತು ಎಂದು ಭಾವಿಸಿದೆ. ನಿರುದ್ಯೋಗ ನಿವಾರಣೆಗೆ ನಾವು ಸ್ಪಷ್ಟ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತೇವೆ. ಇದರ ಜೊತೆಗೆ ರಾಜ್ಯ ಸರ್ಕಾರವು ಡ್ರಗ್ಸ್ ಪಿಡುಗನ್ನು ನಿಯಂತ್ರಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಈಗಾಗಲೇ ಕ್ರಮ ಕೈಗೊಂಡಿದೆ. ಜೊತೆಗೆ ಡ್ರಗ್ಸ್ ಎಂಬ ಮಹಾಮಾರಿಯ ವಿರುದ್ಧ ಜನಜಾಗೃತಿಯನ್ನೂ ಹಾಗೂ ಯುವಜನರೊಂದಿಗೆ ಸಂವಾದಗಳನ್ನೂ ನಾವು ಏರ್ಪಡಿಸುತ್ತೇವೆ.
  51. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಉದ್ದೇಶದಿಂದ ದಿವಂಗತ ರಾಜೀವ್ ಗಾಂಧಿಯವರು ಸಂವಹನ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದರು. ತಂತ್ರಜ್ಞಾನದ ಅಸೀಮ ಸಾಧ್ಯತೆಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್‍ರವರ ನೇತೃತ್ವದ ಯುಪಿಎ ಸರ್ಕಾರ “ಆಧಾರ್” ವ್ಯವಸ್ಥೆಯನ್ನು ಜಾರಿಗೆ ತಂದಿತು. “ಆಧಾರ್” ಬಂದ ನಂತರ ಫಲಾನುಭವಿಗಳಿಗೆ ಸವಲತ್ತನ್ನು ನೇರವಾಗಿ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಯಿತು. ಈಗ ನಾವು ನಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಇದೇ ವ್ಯವಸ್ಥೆಯನ್ನೇ ಬಳಸುತ್ತಿದ್ದೇವೆ. ವರ್ಷಕ್ಕೆ 50 ಸಾವಿರ ಕೋಟಿಗೂ ಹೆಚ್ಚಿನ ಮೊತ್ತವನ್ನು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ನಯಾಪೈಸೆಯಷ್ಟು ಭ್ರಷ್ಟಾಚಾರದ ಸೋಂಕು ಇಲ್ಲದೆ ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ.
  52. ಭ್ರಷ್ಟಾಚಾರವು ಸಾಂಸ್ಥೀಕರಣಗೊಳ್ಳುವ ಮಟ್ಟಿಗೆ ಬೆಳೆದಿದೆ. ಇದನ್ನು ಹಂತ ಹಂತವಾಗಿ ನಿವಾರಿಸುವ ಕೆಲಸ ಮಾಡಲು ಪಣತೊಟ್ಟಿದ್ದೇವೆ. ಈಗಾಗಲೆ ಸರ್ಕಾರವು ಭ್ರಷ್ಟಾಚಾರವನ್ನು ನಿವಾರಿಸಲು ಅಗತ್ಯವಿರುವ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿಂದೆ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಆದೇಶಗಳನ್ನು ಹೊರಡಿಸಿದೆ. ತಪ್ಪಿತಸ್ಥರ ವಿರುದ್ಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ದೃಢ ನಿಲುವು ತಾಳಿದೆ.
  53. ಇಂದು ನಾವು ವಿಲಕ್ಷಣವಾದ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ. ಒಂದೆಡೆ ವಿಜ್ಞಾನ ಮತ್ತು ತಂತ್ರಜ್ಞಾನಗಳು ಮನುಷ್ಯನ ಬದುಕನ್ನು ಹಸನುಗೊಳಿಸುವ ಹೊಸ ಅವಕಾಶಗಳನ್ನು ಮತ್ತು ಸಾಧ್ಯತೆಗಳನ್ನು ತೆರೆಯುತ್ತಿವೆ. ಸಂವಹನ ತಂತ್ರಜ್ಞಾನವು ಜಗತ್ತನ್ನು ಪ್ರತಿದಿನವೂ ಕಿರಿದಾಗಿಸುತ್ತಿದೆ. ಆದರೆ ಇದರಿಂದ ಮನುಷ್ಯನ ಸ್ವಾರ್ಥ ಮತ್ತು ಕ್ರೌರ್ಯಗಳು ತೀವ್ರಗೊಳ್ಳುತ್ತಿವೆ. ಆಧುನಿಕ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆಯು ಮನುಷ್ಯರ ಘನತೆಯನ್ನು ಕುಗ್ಗಿಸದಂತೆ, ಅವರ ಉದ್ಯೋಗಾವಕಾಶಗಳನ್ನು ಕಿತ್ತುಕೊಳ್ಳದಂತೆ ಮಾಡಬೇಕಾದ ಅನಿವಾರ್ಯತೆ ಇದೆ. ಇದಕ್ಕಾಗಿ ನಾವು ಕಾರ್ಯಯೋಜನೆಯನ್ನು ರೂಪಿಸುತ್ತಿದ್ದೇವೆ.
  54. ಕಳೆದ ಕೆಲವು ವರ್ಷಗಳಿಂದೀಚೆಗೆ ದೇಶವು ವಿಪರೀತ ಆತಂಕಿತಗೊಂಡಿದೆ. ಸಮಾಜಗಳಲ್ಲಿ ವಿನಾಕಾರಣ ದ್ವೇಷ, ಹಿಂಸೆ, ಗುಮಾನಿ, ಶತ್ರುತ್ವ ಭಾವ, ಅಸಹನೆಗಳು ಬೆಳೆಯುತ್ತಿವೆ. ಕೆಟ್ಟದ್ದನ್ನು ಉತ್ಪಾದಿಸಿ ಅದಕ್ಕೆ ಎಲ್ಲರ ಒಪ್ಪಿಗೆ ಇದೆ ಎಂಬ ಭಾವನೆಯನ್ನು ಸೃಷ್ಟಿಸಲು ಸಮಾಜದ ಕೆಲವು ವರ್ಗಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಈ ರೀತಿಯ ನಕಾರಾತ್ಮಕ ಧೋರಣೆಯನ್ನು ನಾವು ಹಿಮ್ಮಟ್ಟಿಸಲೇಬೇಕು. ಶಾಂತಿ ಸುವ್ಯವಸ್ಥೆಗಳಿದ್ದರೆ ಸಮಾಜವು ಅಭಿವೃದ್ಧಿಯತ್ತ ಸಾಗುತ್ತದೆ. ಹಿಂಸೆ, ಗೊಂದಲಗಳು ಇರುವ ಸಮಾಜಗಳು, ಕಾನೂನು ಸುವ್ಯವಸ್ಥೆ ಕುಸಿದು ಬಿದ್ದ ವ್ಯವಸ್ಥೆಗಳಲ್ಲಿ ಬಡತನ ಹೆಚ್ಚುತ್ತದೆ. ಪ್ರತಿ ವರ್ಷ ಲಕ್ಷಾಂತರ ಪ್ರತಿಭಾವಂತರು ನಮ್ಮ ಹೆಮ್ಮೆಯ ದೇಶದ ನಾಗರಿಕತ್ವವನ್ನು ತೊರೆದು ಹೋಗುತ್ತಿದ್ದಾರೆ. ನಮ್ಮ ವಿಶ್ವವಿದ್ಯಾಲಯಗಳು ಅಪ್ರತಿಮ ಪ್ರತಿಭಾವಂತರನ್ನು, ವೈಜ್ಞಾನಿಕ, ವೈಚಾರಿಕ ಸ್ಫೂರ್ತಿಯುಳ್ಳ ಜ್ಞಾನಿಗಳನ್ನು ಸೃಷ್ಟಿಸಬೇಕಾದ ಅನಿವಾರ್ಯತೆ ಇದೆ.
  55. ನಾಡಿನ ನೆಲ, ಜಲ, ಭಾಷೆ ಹಾಗೂ ಅಸ್ಮಿತೆಯನ್ನು ಕಾಪಾಡಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಹಾಗೆಯೇ ಮಹಾನ್ ಮಾನವತಾವಾದಿಗಳಾದ ಬುದ್ಧ, ಗಾಂಧೀಜಿ, ಬಸವಣ್ಣ, ಅಂಬೇಡ್ಕರ್, ಕುವೆಂಪು ಮೊದಲಾದವರು ಪ್ರತಿಪಾದಿಸಿದ ಮಾನವೀಯತೆಯ ತಳಹದಿಯ ಅಭಿವೃದ್ಧಿಯ ಮಾದರಿಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದನ್ನು ‘ಕರ್ನಾಟಕ ಮಾದರಿ ಅಭಿವೃದ್ಧಿʼ ಎಂದು ಕರೆಯಲಾಗುತ್ತದೆ.
  56. “ಅನ್ನವನು ಕೊಡು ಮೊದಲು, ಬಟ್ಟೆಯನು ಕೊಡು ಉಡಲು,
    ಕಟ್ಟಿಕೊಡು ಮನೆಗಳನು

ಇದು ಮೊದಲು, ಆಮೇಲೆ ಉಳಿದುದೆಲ್ಲ.”
ಎಂದು ಎಂ. ಗೋಪಾಲಕೃಷ್ಣ ಅಡಿಗರು ಹೇಳುತ್ತಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಪ್ರೇರಣೆ ಇದೇ ಚಿಂತನೆಯಾಗಿದೆ.

  1. ಆಧುನಿಕ ಭಾರತದ ನಿರ್ಮಾತೃ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯದ ಮುನ್ನಾ ದಿನ ಆಗಸ್ಟ್ 14, 1947 ರಂದು ಮಾಡಿರುವ ಅತ್ಯಂತ ಜನಪ್ರಿಯ ಭಾಷಣ “Tryst with destiny” ಎಂದೇ ಹೆಸರಾಗಿದೆ. ಇದರಲ್ಲಿ ನೆಹರು ಅವರು, “ಭವಿಷ್ಯ ಸುಲಭವಲ್ಲ ಅಥವಾ ನಿರಾಳವೂ ಅಲ್ಲ; ಬದಲಿಗೆ ನಾವು ಈ ವರೆಗೆ ಕೈಗೊಂಡಿರುವ ಹಾಗೂ ಇಂದು ಕೈಗೊಳ್ಳುವ ಪ್ರತಿಜ್ಞೆಗಳನ್ನು ಈಡೇರಿಸುವ ನಿರಂತರ ಪ್ರಯತ್ನಗಳನ್ನೊಳಗೊಳ್ಳುವುದು. ಭಾರತದ ಸೇವೆಯೆಂದರೆ ನೋವನುಭವಿಸುತ್ತಿರುವ ಲಕ್ಷಾಂತರ ಜನರ ಸೇವೆ ಮಾಡುವುದು. ಬಡತನ, ಮೂಢನಂಬಿಕೆ, ರೋಗರುಜಿನಗಳು ಹಾಗೂ ಅವಕಾಶಗಳಲ್ಲಿನ ಅಸಮಾನತೆಯನ್ನು ನಿವಾರಿಸುವುದು.” ಎಂದಿದ್ದಾರೆ. ನಾವು ನೆಹರೂ ಅವರ ಆಶಯಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.
  2. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ. ಸುಮಾರು 4 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ, ಸುಂಕ, ಮೇಲ್ತೆರಿಗೆಗಳನ್ನು ಕೇಂದ್ರಕ್ಕೆ ಪಾವತಿಸುತ್ತಿದೆ. ಅದರೆ ನಮಗೆ ವಾಪಸ್ಸು ಬರುತ್ತಿರುವುದು 50 ಸಾವಿರ ಕೋಟಿ ರೂ. ಮಾತ್ರ. ನಮಗೆ ನ್ಯಾಯಯುತವಾಗಿ ಬರಬೇಕಾದಷ್ಟು ಸಂಪನ್ಮೂಲಗಳು ಕೇಂದ್ರದಿಂದ ಮರಳಿ ಬಂದರೆ ರಾಜ್ಯವು ಅತ್ಯಂತ ಶ್ರೀಮಂತ ರಾಜ್ಯವಾಗುವುದು. ಇಷ್ಟರ ನಡುವೆಯೂ ನಾವು ಆರ್ಥಿಕ ಶಿಸ್ತನ್ನು ಸರಿಯಾಗಿ ಪಾಲಿಸುತ್ತಿದ್ದೇವೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ನೈಜ ದೇಶಪ್ರೇಮಿಗಳಿಗೆ ಇದು ಅರ್ಥವಾಗುತ್ತದೆ.
  3. ಕರ್ನಾಟಕದ ಜನರು ಒಡೆದಾಳುವವರ ವಿರುದ್ಧ ನಿಂತಿದ್ದಾರೆ. ಇವನಾರವನೆನ್ನದೆ ಒಳಗೊಂಡು ಆಡಳಿತ ಮಾಡುವ ನಮ್ಮನ್ನು ಆರಿಸಿದ್ದಾರೆ. ಈ ಸ್ವಾತಂತ್ರ್ಯ ದಿನದಂದು ನಾನು ನೀಡುವ ಭರವಸೆಯಲ್ಲಿ ಬಹಳ ಮುಖ್ಯವಾದುದು ಈ ಒಳಗೊಂಡು ಬಾಳುವ, ಎಲ್ಲರ ಅಭಿವೃದ್ಧಿಯನ್ನು ಬಯಸುವ ಕರ್ನಾಟಕದ ಹೊಸ ಮಾದರಿಗಳನ್ನು ಪ್ರಬಲಗೊಳಿಸುವ ಭರವಸೆಯೇ ಆಗಿದೆ.
  4. ಪಂಡಿತ್ ನೆಹರೂ ಅವರು ಹೇಳಿದಂತೆ ಎಲ್ಲರೂ ಒಟ್ಟುಗೂಡಿ ದುಡಿಯೋಣ, ರಾಜ್ಯದ ಅಭಿವೃದ್ಧಿಯ ಹೊಸ ಮನ್ವಂತರವನ್ನು ಪ್ರಾರಂಭಿಸೋಣ. ನಮ್ಮ ನಾಡಿನಲ್ಲಿ ಶಾಂತಿ, ಸೌಹಾರ್ದ, ಸಮೃದ್ಧಿಗಳು ನೆಲೆಸಲಿ. ಬಲಿಷ್ಠವಾಗಿ ನಿಂತಿರುವ ನಮ್ಮ ದೇಶದ ಸೈನ್ಯ, ದೇಶದ ಸಂಪತ್ತನ್ನು ಹೆಚ್ಚಿಸುತ್ತಿರುವ ಯುವಜನತೆ ಮತ್ತು ದೇಶವು ಹಸಿವಿನಿಂದ ಕಂಗೆಡದಂತೆ ನಿರಂತರ ಅನ್ನ ಉತ್ಪಾದಿಸುತ್ತಿರುವ ಅನ್ನಬ್ರಹ್ಮನೆಂದು ಕರೆಯಲಾಗುವ ರೈತರನ್ನು ಸ್ಮರಿಸೋಣ. ಕಾರ್ಮಿಕರು, ವಿಜ್ಞಾನಿಗಳು, ತಂತ್ರಜ್ಞಾನಿಗಳು… ಮುಂತಾದವರನ್ನು ಹುರಿದುಂಬಿಸೋಣ. ಶ್ರದ್ಧೆಯಿಂದ ದುಡಿದು ಸುಭದ್ರ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಸುಭದ್ರ ಕರ್ನಾಟಕ ಹಾಗೂ ಸುಭದ್ರ ಭಾರತವನ್ನು ನಿರ್ಮಿಸೋಣ. ಇದು ಎಲ್ಲರ ಭಾರತ. ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ. ಇದನ್ನು ಪ್ರತಿ ಕ್ಷಣವೂ ನೆನಪಿಸಿಕೊಳ್ಳೋಣ. ಅಂತಿಮವಾಗಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಪಂಪನ ಮಾತುಗಳು ಸಮಸ್ತ ಜನಕೋಟಿಯ ಘೋಷ ವಾಕ್ಯವಾಗಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

Assault Case : ಮೂರು ವರ್ಷದ ಬಾಲಕಿ ಮೇಲೆ ಎರಗಿದ ಮಲತಂದೆ ಕ್ರೌರ್ಯವನ್ನೇ ಮೆರೆದಿದ್ದಾನೆ. ಬಾಲಕಿಯ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿದ್ದಾನೆ. ಸದ್ಯ ಮಲತಂದೆ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

VISTARANEWS.COM


on

By

assault Case
ವಿಕೃತಿ ಮೆರೆದಿದ್ದ ಮಲತಂದೆ
Koo

ಬೆಂಗಳೂರು/ಚಿಕ್ಕಬಳ್ಳಾಪುರ: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ದೌರ್ಜನ್ಯ (Assault Case) ನಡೆಸಿದ್ದಾನೆ. ಮಹಿಳೆಯ ಮೂರನೇ ಗಂಡನ ವಿಕೃತಿ ಅದ್ಯಾವ ಪರಿ ಇದೆ ಎಂದರೆ ಮಗುವಿನ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ಮೃಗೀಯ ರೀತಿ ವರ್ತಿಸಿದ್ದಾನೆ.

ಗೌರಿಬಿದನೂರಿನಲ್ಲಿ ಮಲತಂದೆಯೊಬ್ಬ ಅಟ್ಟಹಾಸ ತೋರಿದ್ದಾನೆ. ಜರೀನಾ ತಾಜ್‌ ಎಂಬಾಕೆ ಒಟ್ಟು ಮೂರು ಮದುವೆ ಆಗಿದ್ದು, ಅದರಲ್ಲಿ ಎರಡನೇ ಗಂಡನ ಮಗುವಿಗೆ ಮೂರನೇ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಅಜ್ಮಂತ್‌ ಎಂಬಾತ ಮಗುವಿಗಷ್ಟೇ ಅಲ್ಲದೇ ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ.

ಮೂರು ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು, ಮಗುವಿನ ಗುಪ್ತಾಂಗ ಕಚ್ಚಿ, ಮನಬಂದಂತೆ ಥಳಿಸಿದ್ದಾನೆ. 15 ವರ್ಷದ ಮತ್ತೊಬ್ಬ ಮಗಳ ಕೈ ಮುರಿದು ವಿಕೃತಿ ಮೆರೆದಿದ್ದಾನೆ.

ಜರೀನಾ ತಾಜ್‌ಗೆ ಮೂರು ಮದುವೆಯಾಗಿದ್ದು, ಮೊದಲ ಪತಿಯಿಂದ 2 ಹೆಣ್ಮಕ್ಕಳು ಆಗಿದ್ದವು. 2ನೇ ಪತಿಯಿಂದ ಮತ್ತೊಂದು ಹೆಣ್ಣು ಮಗು ಜನಿಸಿತ್ತು. ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ಅಜ್ಮಂತ್‌ ಜತೆಗೆ ಮೂರನೇ ಮದುವೆಯಾಗಿದ್ದಳು. ಎರಡನೇ ಪತಿಯಿಂದ ಜನಿಸಿದ್ದ ಹೆಣ್ಣು ಮಗುವಿನ ಮೇಲೆ ಅಜ್ಮಂತ್‌ ಕಿರುಕುಳ ನೀಡಿದ್ದಾನೆ.

ತೀವ್ರ ಗಾಯಗೊಂಡಿರುವ ಮೂರು ವರ್ಷದ ಮಗುವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ತಂದೆಯ ವಿಕೃತಿಯಿಂದ ಪುತ್ರಿ ಶಾಕ್‌ಗೆಗೊಳಗಾಗಿದ್ದಾಳೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

ಪುಣೆ : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಈಗ ಹೆಚ್ಚು ಟ್ರೆಂಡ್ ಆಗುತ್ತಿದೆ. ಹಾಗಾಗಿ ಯುವಕ-ಯುವತಿಯರು ತಮ್ಮ ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ಹಾಗೂ ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಅನೇಕರು ಸಾವನಪ್ಪಿರುವುದು, ಗಾಯಗೊಂಡಿರುವುದು ನಾವು ಆಗಾಗ ನೋಡಿದ್ದೇವೆ. ಆದರೂ ಜನರಿಗೆ ರೀಲ್ಸ್ ಹುಚ್ಚು ಬಿಡುವುದಿಲ್ಲ. ಇದೀಗ ಪುಣೆಯಲ್ಲಿ ಹುಡುಗಿಯೊಬ್ಬಳು, ಹುಡುಗನೊಬ್ಬನ ಕೈಯನ್ನು ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ವಿಡಿಯೊ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಹುಡುಗನೊಬ್ಬ ಕಟ್ಟಡದ ತುದಿಯಲ್ಲಿ ಮಲಗಿದ್ದಾನೆ. ಹುಡುಗಿ ಆತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿಯುತ್ತಿರುವುದನ್ನು ಕಾಣಬಹುದು. ಇನ್ನೊಂದು ಬದಿಯಲ್ಲಿ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೊವನ್ನು ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ತೆಗೆಯಲಾಗಿದೆ. ಜೂನ್ 19ರಂದು ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಇದಕ್ಕೆ 55,000ಕ್ಕೂ ಹೆಚ್ಚು ವೀವ್ಸ್ ಸಿಕ್ಕಿದೆ ಮತ್ತು ಅನೇಕರು ಅವರ ಮೂರ್ಖತನಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಈ ವಿಡಿಯೊವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಹಲವಾರು ಘಟನೆಗಳು ವರದಿಯಾದ ಮೇಲೂ ಇಂತಹ ಬೇಜವಾಬ್ದಾರಿ ಕೆಲಸ ನಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯ. ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ತನ್ನ ಕುಟುಂಬವನ್ನು ಜೀವನಪರ್ಯಂತ ನರಳುವಂತೆ ಮಾಡುವ ಮನೋಭಾವ ಇದು ಎಂದು ಮತ್ತೊಬ್ಬ ಬಳಕೆದಾರರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Actor Darshan: ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

ram mohan raju actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ. ಈ ಮೋಹನ್‌ ರಾಜು 2019ರಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ. ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದ. ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾನೆ.

ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷವೆಂದರೆ, 2018ರಲ್ಲಿ ಇದೇ ಮೋಹನ್ ರಾಜ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ, ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Continue Reading

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಕ್ರೈಂ

‌Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸರು ವಶಪಡಿಸಿಕೊಂಡದ್ದೇನು?

‌Actor Darshan: ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

VISTARANEWS.COM


on

Actor Darshan Please leave Pavitra Darshan request to police
Koo

ಬೆಂಗಳೂರು: ಆರ್‌ಆರ್‌ ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ, ನಟ ದರ್ಶನ್‌ (Actor Darshan) ಹಾಗೂ ಈತನ ಗ್ಯಾಂಗ್‌ (D boss Gang) ವಿರುದ್ಧ ಸಾಕ್ಷಿಯಾಗಿ (evidence) 139ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 28 ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ.

ಆರೋಪಿಗಳು ಧರಿಸಿದ್ದ ಬಟ್ಟೆ, ಶೆಡ್‌ನಲ್ಲಿ ಹಲ್ಲೆಗೆ ಬಳಸಿದ್ದ ಲಾಠಿ, ಮರದ ರಿಪೀಸ್ ವಸ್ತುಗಳು, ತುಳಿದ ಶೂಗಳು, ಆರೋಪಿಗಳು ತಂಗಿದ್ದ ಹೋಟೆಲ್ ಲೆಡ್ಜರ್ ಬುಕ್, ಸಿಸಿಟಿವಿ ರೆಕಾರ್ಡ್, ಕೃತ್ಯದ ವೇಳೆ ಹಾಗೂ ಶವ ಬಿಸಾಡಲು ಬಳಸಿದ್ದ ಕಾರುಗಳು‌, ಆರೋಪಿಗಳು ಪಡೆದುಕೊಂಡಿದ್ದ ಹಣ, ಆರೋಪಿಗಳ ಮೊಬೈಲ್ ಪೋನ್, ಕಾರ್ ಶೆಡ್ ಕಡೆ ಹೋಗುವ ಸಿಸಿಟಿವಿ ರೆಕಾರ್ಡ್‌, ಮೃತದೇಹದ ಮೇಲಿಂದ ಕಳುವಾಗಿದ್ದ ‍ಚಿನ್ನಾಭರಣ ಸೇರಿದಂತೆ ಒಟ್ಟು 139 ವಸ್ತು ಸೀಜ್ ಮಾಡಲಾಗಿದೆ.

ಪ್ರಕರಣದಲ್ಲಿ ಇದುವರೆಗೂ 28 ಕಡೆ ಮಹಜರ್ ಮಾಡಲಾಗಿದೆ. ದರ್ಶನ್ ಸೇರಿ ಎಲ್ಲ 17 ಆರೋಪಿಗಳ ನಿವಾಸ ಹಾಗೂ ಬೇರೆ 11 ಸ್ಥಳಗಳಲ್ಲೂ ಮಹಜರ್ ನಡೆಸಲಾಗಿದೆ. ರೇಣುಕಾಸ್ವಾಮಿ ಕರೆತಂದು ಹಲ್ಲೆ ಕೃತ್ಯ ನಡೆಸಿದ ಪಟ್ಟಣಗೆರೆ ಶೆಡ್, ರೇಣುಕಾಸ್ವಾಮಿಯ ಶವ ಬಿಸಾಡಿದ ರಾಜಕಾಲುವೆ, ಶವ ಬಿಸಾಡಿದ್ದ ಆರೋಪಿಗಳು ತಂಗಿದ್ದ ಆರ್.ಆರ್.ನಗರದ ಹೋಟೆಲ್, ಪಾರ್ಟಿ ಮಾಡಿದ್ದ ಸ್ಟೋನಿಬ್ರೂಕ್ ರೆಸ್ಟೋರೆಂಟ್, ಕಿಡ್ನಾಪ್ ಮಾಡಿದ್ದ ಚಿತ್ರದುರ್ಗದ ಸ್ಥಳ, ಮೈಸೂರಿನ ಖಾಸಗಿ ಹೋಟೆಲ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

ವಿಡಿಯೋ ಮಾಡಿದ ಮೂವರು ಪೊಲೀಸ್‌ ವಶಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Continue Reading
Advertisement
assault Case
ಕ್ರೈಂ4 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ8 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್12 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest27 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest30 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ35 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌