ಬೆಂಗಳೂರು: 77ರ ಸ್ವಾತಂತ್ರ್ಯ ದಿನದ (Independence Day 2023) ಅಂಗವಾಗಿ ಬೆಂಗಳೂರಿನ ಮಾಣಿಕ್‌ಷಾ ಪೆರೇಡ್ ಮೈದಾನದಲ್ಲಿ ರಾಜ್ಯ ಸರ್ಕಾರದಿಂದ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಗ್ಟ್ 15 ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಕಬ್ಬನ್‌ಪಾರ್ಕ್‌ನಿಂದ ಬಿಆರ್‌ವಿ ಜಂಕ್ಷನ್, ಕಾಮರಾಜರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಯಾವೆಲ್ಲ ಮಾರ್ಗದಲ್ಲಿ ಸಂಚಾರ ಬದಲಾವಣೆ?
- ಇನ್ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ಫೆಂಟ್ರಿರಸ್ತೆ – ಸಫೀನಾ ಪ್ಲಾಜಾದಲ್ಲಿ ಎಡ ತಿರುವು ಪಡೆದು ಮೈನ್ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿರಸ್ತೆ- ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜರಸ್ತೆ, ಕಬ್ಬನ್ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
- ಕಬ್ಬನ್ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳ ನಿರ್ಬಂಧಿಸಲಾಗಿದೆ. ಹೀಗಾಗಿ ಈ ವಾಹನಗಳು ವೆಬ್ಸ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೇ ವೃತ್ತದಲ್ಲಿ ಬಲ ತಿರುವು ಪಡೆಯಬೇಕು.
- ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆಯಬಹುದು. ಇನ್ಫೆಂಟ್ರಿರಸ್ತೆ- ಸಫೀನಾ ಪ್ಲಾಜಾ ಎಡಕ್ಕೆ ತಿರುವು ಪಡೆದು ಮೈನ್ಗಾರ್ಡ್ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿರಸ್ತೆ- ಕಾಮರಾಜರಸ್ತೆ ಮತ್ತು ಡಿಕನ್ನನ್ ರಸ್ತೆಜಂಕ್ಷನ್ ಬಲಕ್ಕೆ ತಿರುವು ಪಡೆಯಬೇಕು. ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಹೋಗಬಹುದು.
ವಾಹನಗಳ ನಿಲುಗಡೆ ನಿಷೇಧ
1) ಸೆಂಟ್ರಲ್ ಸ್ಟ್ರೀಟ್
2) ಅನಿಲ್ ಕುಂಬ್ಳೆ ವೃತ್ತ
3) ಶಿವಾಜಿನಗರ ಬಸ್ ನಿಲ್ದಾಣ
4) ಕಬ್ಬನ್ ರಸ್ತೆ
5) ಸಿಟಿಓ ವೃತ್ತ
6) ಕೆಆರ್ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ವರೆಗೆ
7) ಎಂಜಿ ರಸ್ತೆ
8) ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ