Site icon Vistara News

Independence Day 2024: ಹಾಸನದಲ್ಲಿ 2500 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ

Independence Day 2024

ಹಾಸನ: 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನದಲ್ಲಿ 2500 ಅಡಿ ಉದ್ದ ಧ್ವಜ ಪ್ರದರ್ಶನ ಮಾಡಿರುವುದು ಗಮನಸೆಳೆಯಿತು. ಜಿಲ್ಲಾಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಯೋಜಿಸಿದ್ದ ಕಾರ್ಯಕ್ರಮಲ್ಲಿ ಬೃಹತ್ ಧ್ವಜ ಹಿಡಿದು 3000 ಸಾವಿರ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.

ಹಾಸನ ನಗರದ ಪ್ರಮುಖ ರಸ್ತೆಗಳಲ್ಲಿ ಬಾವುಟ ಹಿಡಿದು ವಿದ್ಯಾರ್ಥಿಗಳು ಸಾಗಿದರು. ಡಿಸಿ ಕಚೇರಿ ಮುಂಭಾಗದಿಂದ ಎನ್‌.ಆರ್‌.ವೃತ್ತ, ಹೇಮಾವತಿ ಪ್ರತಿಮೆ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ಧ್ವಜ ಹಿಡಿದು ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಗಿದರು.

ಇದನ್ನೂ ಓದಿ | Independence Day 2024: ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ: ಹೆಬ್ಬಾಳಕರ್

ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

ಚಿಕ್ಕಬಳ್ಳಾಪುರ/ರಾಯಚೂರು: 78ರ ಸ್ವಾತಂತ್ರ್ಯೋತ್ಸವ (Independence Day 2024) ದಿನದ ಧ್ವಜಾರೋಹಣದ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದು ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಸರ್‌. ಎಂ. ವಿ ಕ್ರೀಡಾಂಗಣದಲ್ಲಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು (Independence Day 2024) ಕುಸಿದು ಬಿದ್ದಿದ್ದಾರೆ.

ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮಕ್ಕಳನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಹಿಳಾ ತುಕಡಿಯ ನೇತೃತ್ವ ವಹಿಸಿದ್ದ ಪಿಎಸ್ಐ ನಾಗಮ್ಮ ಅವರು ವಿಪರೀತ ಬಿಸಿಲಿನ ತಾಪಕ್ಕೆ ನಿತ್ರಾಣವಾಗಿ ಬಿದ್ದರು. ಸ್ಟೇಡಿಯಂನಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಓಡಿಹೋಗಿ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಯಚೂರಿನಲ್ಲೂ ಕುಸಿದು ಬಿದ್ದ ಮಕ್ಕಳು

ರಾಯಚೂರಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಕಾರ್ಯಕ್ರಮದ ವೇಳೆ ಬಿಸಿಲಿನ ತಾಪಕ್ಕೆ ಮಕ್ಕಳಿಬ್ಬರು ಕುಸಿದು ಬಿದ್ದಿದ್ದರು. ಕೂಡಲೇ ಇಬ್ಬರು ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು. ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ

ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಪ್ರಶಸ್ತಿ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವಾಗ ಬಿಸಿಲಿನ ತಾಪಕ್ಕೆ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

Exit mobile version