ಬೆಂಗಳೂರು: ರಾಜ್ಯಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day 2024) ಗುರುವಾರ ಸಂಭ್ರಮದಿಂದ ಆಚರಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯದ ಹಬ್ಬ ಆಚರಿಸಲಾಗಿದೆ. ಅಲ್ಲದೇ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಸ್ಮರಿಸುವ ಮೂಲಕ ಗೌರವ ಅರ್ಪಿಸಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ, ಸ್ವಾತಂತ್ರ್ಯ ಯೋಧರ ಕೊಡುಗೆಗಳನ್ನು ಸ್ಮರಿಸಿದರು. ಇನ್ನು ವಿದ್ಯಾರ್ಥಿಗಳು ಮಹಾತ್ಮ ಗಾಂಧಿ, ಸುಭಾಷ್ ಚಂದ್ರಬೋಸ್, ಭಗತ್ ಸಿಂಗ್, ಡಾ.ಬಿ.ಆರ್.ಅಂಬೇಡ್ಕರ್, ಜವಾಹರ್‌ಲಾಲ್ ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿ ಗಮನ ಸೆಳೆದರು. ಮೆರವಣಿಗೆ ನಡೆಸಿ, ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ಇನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿದ್ದಾರೆ.
ದುಬೈನಲ್ಲೂ ಸ್ವಾತಂತ್ರ್ಯ ಹಬ್ಬದ ಸಂಭ್ರಮ
ದುಬೈನಲ್ಲೂ ಭಾರತೀಯರಿಂದ ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದ ಫರ್ವೆಜ್ ಹಾಗೂ ಕುಟುಂಬದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ.
ಇದನ್ನೂ ಓದಿ | ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ
ಇದನ್ನೂ ಓದಿ | Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!