ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ - Vistara News

ಕರ್ನಾಟಕ

ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ

Independence Day 2024: ಇತ್ತೀಚಿನ ದಿನಗಳಲ್ಲಿ ಭೂಕುಸಿತ ಭೀಕರ ಸಮಸ್ಯೆಯಾಗಿ ಕಾಡುತ್ತಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸಿ 100 ಕೋಟಿ ರೂ. ವೆಚ್ಚದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಘೋಷಿಸಿದ್ದಾರೆ.

VISTARANEWS.COM


on

Independence Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ”ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯು ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಒಳಪಡುವ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿನ 250 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಭೂ-ಕುಸಿತ ತಡೆಗಟ್ಟಲು ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು National Institute of Rock Mechanics (NIRM) ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ (Independence Day 2024).

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಅವರು ಈ ವಿಚಾರವನ್ನು ಪ್ರಸ್ತಾವಿಸಿದರು. ʼʼಮಾನವ-ವನ್ಯ ಪ್ರಾಣಿ ಸಂಘರ್ಷ ನಾವು ಎದುರಿಸುವ ಪ್ರಮುಖ ಸವಾಲಾಗಿದೆ. ಇದನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರ್ಕಾರ 120 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುತ್ತಿದೆ. ಇದರೊಂದಿಗೆ 7 ಆನೆ ಟಾಸ್ಕ್ ಫೋರ್ಸ್ ಹಾಗೂ 2 ಚಿರತೆ ಟಾಸ್ಕ್ ಫೋರ್ಸ್ ರಚಿಸಲಾಗಿದೆʼʼ ಎಂದು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಒತ್ತು

ʼʼಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಡಿ ಹೋಬಳಿಗೊಂದು ವಸತಿ ಶಾಲೆ ಪ್ರಾರಂಭಿಸುವ ಗುರಿಯನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 20 ಹೊಸ ವಸತಿ ಶಾಲೆಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಪೂರಕವಾಗಿ ಹೊಸದಾಗಿ ಒಟ್ಟು 295 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆʼʼ ಎಂದಿದ್ದಾರೆ.

ʼʼಪರಿಶಿಷ್ಟ ಪಂಗಡದ ಅತಿ ಹಿಂದುಳಿದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಶೇ. 20ರಷ್ಟು ಮೀಸಲಾತಿ ಹಾಗೂ ನೇರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25ರಿಂದ 40ಕ್ಕೆ ಹೆಚ್ಚಿಸಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಬಾಡಿಗೆ ಕಟ್ಟಡದಲ್ಲಿರುವ 30 ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಅಭಿವೃದ್ಧಿಗಾಗಿ 100 ಹೊಸ ಮೌಲಾನಾ ಆಜಾದ್ ಶಾಲೆಗಳ ಪ್ರಾರಂಭಿಸಲಾಗಿದೆ ಹಾಗೂ 50 ಸಂಖ್ಯಾ ಬಲವುಳ್ಳ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ವಂತ ಕಟ್ಟಡ ಹೊಂದಿರುವ
25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗಿದೆʼʼ ಎಂದು ಸಿಎಂ ಹೇಳಿದ್ದಾರೆ.

ʼʼಮಧ್ಯಾಹ್ನದ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಸಹಯೋಗದೊಂದಿಗೆ ಮೊಟ್ಟೆ ಅಥವಾ ಚಿಕ್ಕಿ ಮತ್ತು ಬಾಳೆಹಣ್ಣಿನ ವಿತರಣೆಯನ್ನು ವಾರದಲ್ಲಿ ಎರಡು ದಿನಗಳಿಂದ ಆರು ದಿನಗಳಿಗೆ ಹೆಚ್ಚಿಸಲಾಗಿದೆ ಹಾಗೂ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಭಾಗಿತ್ವದಲ್ಲಿ ವಾರದಲ್ಲಿ 3 ದಿನ ರಾಗಿ ಮಾಲ್ಟನ್ನು ನೀಡಲಾಗುತ್ತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 11,494 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಬಾಕಿ ಇರುವ ಹುದ್ದೆಗಳನ್ನೂ ಹಂತ ಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭಿಸುತ್ತೇವೆʼʼ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ʼʼಮುಕ್ತ, ನಿರ್ಭೀತ ಸಮಾಜದ ನಿರ್ಮಾಣ ಹಾಗೂ ವೈಜ್ಞಾನಿಕ ತಳಹದಿಯ ಮೇಲೆ ಉನ್ನತ ಶಿಕ್ಷಣ ವ್ಯವಸ್ಥೆ ರೂಪಿಸಲು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಇದಕ್ಕಾಗಿ ಸರ್ಕಾರವು ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಆಧಾರದಲ್ಲಿ ಪದವಿ ಶಿಕ್ಷಣದ ಅವಧಿ ಹಾಗೂ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆʼʼ ಎಂದೂ ತಿಳಿಸಿದ್ದಾರೆ.

ವಸತಿ ಯೋಜನೆಗಳ ಮೂಲಕ ಸ್ವಂತ ಸೂರಿನ ಕನಸು ನನಸು

ʼʼನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 3,690 ಕೋಟಿ ರೂ. ವೆಚ್ಚದಲ್ಲಿ 2.38 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಫಲಾನುಭವಿಗಳಿಗೆ ಆರ್ಥಿಕವಾಗಿ ಹೊರೆಯಾಗಿದ್ದ ವಂತಿಗೆಯಲ್ಲಿ ತಲಾ 4 ಲಕ್ಷ ರೂ. ರಾಜ್ಯ ಸರ್ಕಾರವೇ ಭರಿಸಲು ತೀರ್ಮಾನಿಸಿ, ಅರ್ಧಕ್ಕೆ ನಿಂತಿದ್ದ ಮನೆಗಳ ನಿರ್ಮಾಣ ಮತ್ತೆ ಪ್ರಾರಂಭವಾಗಿದೆ. ಈಗಾಗಲೇ 36,781 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವ ಮೂಲಕ ಬಡ ಜನರ ಸ್ವಂತ ಸೂರಿನ ಕನಸನ್ನು ಸಾಕಾರಗೊಳಿಸಿದ್ದೇವೆ. ಹಾಗೆಯೇ ಇನ್ನುಳಿದ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡಿದ್ದೇವೆʼʼ ಎಂದು ಸಿಏಂ ತಿಳಿಸಿದ್ದಾರೆ.

ಜನರಿಗೆ ಸರಳವಾಗಿ, ಪಾರದರ್ಶಕವಾಗಿ ನಾಗರಿಕ ಸೇವೆಗಳನ್ನು ದೊರಕಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪಹಣಿಗೆ ಆಧಾರ್ ಜೋಡಣೆ, ಆಟೋಮ್ಯುಟೇಷನ್ ಸೌಲಭ್ಯ, ಬಗರ್‌ಹುಕುಂ ಸಾಗುವಳಿ ತಂತ್ರಾಂಶ, ಕಂದಾಯ ದಾಖಲೆಗಳ ಡಿಜಿಟಲೀಕರಣ, ನಗರಾಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ ಮೊದಲಾದವುಗಳು ರೈತರ, ಜನ ಸಾಮಾನ್ಯರ ಸಮಯ ಹಾಗೂ ಶ್ರಮ ಉಳಿತಾಯ ಮಾಡುವತ್ತ ಮಹತ್ವದ ಕ್ರಮಗಳಾಗಿವೆ. ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮ ಪಂಚಾಯಿತಿಯಲ್ಲಿಯೇ ಸಕಾಲದಲ್ಲಿ ಜನನ ಮರಣ ನೋಂದಣಿ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲ 5,950 ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆʼʼ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ʼʼನೋಂದಣಿ ಮತ್ತು ಮುದ್ರಾಂಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸೆಲಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ತಾಯಂದಿರ ಅನುಕೂಲಕ್ಕಾಗಿ 4,000 ಪಂಚಾಯಿತಿಗಳಲ್ಲಿ ‘ಕೂಸಿನ ಮನೆʼ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Palestine Flag: ಕುಣಿಗಲ್‌ನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ!

Palestine Flag: ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮತ್ತೊಂದು ಕಡೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದೆ. ಇದಕ್ಕೆ ಮತ್ತೊಂದು ಯುವಕರ ಗುಂಪು ವಿರೋಧ ವ್ಯಕ್ತಪಡಿಸಿದೆ.

VISTARANEWS.COM


on

Koo

ತುಮಕೂರು: ಸ್ವಾತಂತ್ರ್ಯ ದಿನಾಚರಣೆ (Independence Day 2024) ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಕುಣಿಗಲ್‌ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ (Palestine Flag) ಹಾರಿಸಲು ಯತ್ನಿಸಿರುವುದು ಕಂಡುಬಂದಿದೆ. ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.

ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮತ್ತೊಂದು ಕಡೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದೆ. ಅದಕ್ಕೆ ಮತ್ತೊಂದು ಯುವಕರ ತಂಡ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಇವತ್ತು ಪ್ಯಾಲೇಸ್ತೀನ್‌ ಧ್ವಜ ಹಾರಿಸುತ್ತಾರೆ, ನಾಳೆ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಹಾರಿಸುವುದರೆ ಭಾರತ ಧ್ವಜ ಹಾರಿಸಿ, ಇಲ್ಲದಿದ್ದರೆ ವಿವಾದವಾಗಲಿದೆ ಎಂದು ಯುವಕರಿಗೆ ಬುದ್ಧಿ ಹೇಳಿದ್ದಾರೆ.

ಇದನ್ನೂ ಓದಿ | Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!

ಮಸ್ಕಿ ಶಾಲೆಯಲ್ಲಿ ಎಡವಟ್ಟು; ಧ್ವಜ ಉಲ್ಟಾ ಹಾರಿಸಿ ಅಪಮಾನ

independence day 2024

ರಾಯಚೂರು: ತಲೆಕೆಳಗಾಗಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಮಸ್ಕಿ ಪಟ್ಟಣದ ದನಗರವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಾಡಿದ್ದಕ್ಕೆ ಶಾಲಾ ಮುಖ್ಯಶಿಕ್ಷಕಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿವಾಸಿಗಳು ಪ್ರಶ್ನಿಸುತ್ತಿದ್ದಂತೆಯೇ ಸರಿಪಡಿಸಿ ಮತ್ತೊಮ್ಮೆ ಧ್ವಜಾರೋಹಣ ಮಾಡಲಾಗಿದೆ.

ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

independence day 2024
independence day 2024

ಚಿಕ್ಕಬಳ್ಳಾಪುರ/ರಾಯಚೂರು: 78ರ ಸ್ವಾತಂತ್ರ್ಯೋತ್ಸವ (Independence Day 2024) ದಿನದ ಧ್ವಜಾರೋಹಣದ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದು ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಸರ್‌. ಎಂ. ವಿ ಕ್ರೀಡಾಂಗಣದಲ್ಲಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು (Independence Day 2024) ಕುಸಿದು ಬಿದ್ದಿದ್ದಾರೆ.

ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮಕ್ಕಳನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಹಿಳಾ ತುಕಡಿಯ ನೇತೃತ್ವ ವಹಿಸಿದ್ದ ಪಿಎಸ್ಐ ನಾಗಮ್ಮ ಅವರು ವಿಪರೀತ ಬಿಸಿಲಿನ ತಾಪಕ್ಕೆ ನಿತ್ರಾಣವಾಗಿ ಬಿದ್ದರು. ಸ್ಟೇಡಿಯಂನಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಓಡಿಹೋಗಿ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಯಚೂರಿನಲ್ಲೂ ಕುಸಿದು ಬಿದ್ದ ಮಕ್ಕಳು

ರಾಯಚೂರಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಕಾರ್ಯಕ್ರಮದ ವೇಳೆ ಬಿಸಿಲಿನ ತಾಪಕ್ಕೆ ಮಕ್ಕಳಿಬ್ಬರು ಕುಸಿದು ಬಿದ್ದಿದ್ದರು. ಕೂಡಲೇ ಇಬ್ಬರು ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು. ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ.

ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಪ್ರಶಸ್ತಿ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವಾಗ ಬಿಸಿಲಿನ ತಾಪಕ್ಕೆ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

ವಿಜಯಪುರದಲ್ಲಿ ಧ್ವಜಾರೋಹಣ ವೇಳೆ ಹೊಡೆದಾಟ

ಧ್ವಜಾರೋಹಣ ವೇಳೆ ಹುಡುಗರ ನಡುವೆ ಗಲಾಟೆ ನಡೆದಿದೆ. ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಂ ಬಿ ಪಾಟೀಲ್ ಭಾಷಣ ವೇಳೆ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಧ್ವಜಾರೋಹಣ ನೋಡಲು ಬಂದಿದ್ದ ಹುಡುಗರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಹೊಡೆದಾಡಿಕೊಳ್ಳುತ್ತಿದ್ದ, ಓರ್ವನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lakshmi Hebbalkar: ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ; ಲಕ್ಷ್ಮೀ ಹೆಬ್ಬಾಳಕರ್ ಆರೋಪ

Lakshmi Hebbalkar: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ-ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

VISTARANEWS.COM


on

Lakshmi Hebbalkar
Koo

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಆರೋಪಿಸಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Independence Day 2024: ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ: ಹೆಬ್ಬಾಳಕರ್

ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ? ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೈಂದೂರು ಶಾಸಕರ ವಿರುದ್ಧ ಅಸಮಾಧಾನ

ಬೈಂದೂರಿನಲ್ಲಿ ಕಾಂಗ್ರೆಸ್-ಬಿಜೆಪಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಹಕ್ಕುಚ್ಯುತಿ ಎಂದರೇನು ಎಂದು ಎರಡು ಬಾರಿ ಶಾಸಕಿಯಾದ ನನಗೂ ಗೊತ್ತು. ಅಧಿಕಾರದ ಲಾಭ ದುರ್ಲಾಭದ ಬಗ್ಗೆ ನನಗೂ ಸಾಮಾನ್ಯ ಜ್ಞಾನ ಇದೆ. ಯಾರ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಅಧಿಕಾರಿಗಳ ಸಭೆ ಎಲ್ಲಿ ಕರೆಯಬೇಕು, ಅಲ್ಲಿಯೇ ಕರೆಯಬೇಕು, ಏನೂ ತೊಂದರೆ ಆಗಲ್ಲ. ತನ್ನ ಖಾಸಗಿ ಸ್ಥಳದಲ್ಲಿ ಅಧಿಕಾರಿಗಳನ್ನು ಸಭೆಗೆ ಕರೆದರೆ ತೊಂದರೆಯಾಗುತ್ತದೆ. ಸರ್ಕಾರಿ ಕಾರ್ಯಕ್ರಮಗಳು ಸರ್ಕಾರಿ ಕಚೇರಿಯಲ್ಲಿ ಆಗುವುದೇ ಒಂದು ಪ್ರೊಟೋಕಾಲ್ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸಿಎಂ ಹುಲಿ ಇದ್ದಂತೆ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣದ ವೇಳೆ ಬುಲೆಟ್ ಪ್ರೂಫ್ ತೆಗೆಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಕರ್ನಾಟಕ ರಾಜ್ಯ ಶಾಂತಿ ಪ್ರಿಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಬುಲೆಟ್ ಪ್ರೂಫ್ ಬೇಕಾ? ನಮ್ಮ ಸಿದ್ದರಾಮಯ್ಯನವರು ಯಾವತ್ತೂ ಸ್ಟ್ರಾಂಗ್. ಅದರಲ್ಲಿ ಎರಡು ಮಾತಿಲ್ಲ‌, ಸಿದ್ದರಾಮಯ್ಯ ಅವರಿಗೆ ಹುಲಿ ಎಂದು ಹೆಸರು ಬಂದಿರುವುದು ಇದಕ್ಕೆ ಎಂದು ತಿಳಿಸಿದರು.

ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ

ಕಂಚಿನಡ್ಕ ಬಳಿ ಟೋಲ್‌ ಗೇಟ್‌ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್‌ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್‌ಪಿ, ಇತರ ಅಧಿಕಾರಿಗಳ ಜತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

ಸೋಮೇಶ್ವರ ಬೀಚ್ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಮರವಂತೆ-ಸೋಮೇಶ್ವರ ಬೀಚ್ ಬಂದರು ಕಾಮಗಾರಿ ವಿಳಂಬವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಗುತ್ತಿಗೆದಾರ ಬಿರಾದಾರ್ ಜತೆ ಮಾತನಾಡಿದ್ದೇನೆ. ಕಾಮಗಾರಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ. ನಿರ್ದಿಷ್ಟ ಅವಧಿಯಲ್ಲಿ ಕೆಲಸ ಮುಗಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Continue Reading

ಬೆಂಗಳೂರು

Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

Physical Abuse : ಬೆಂಗಳೂರಿನ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಚಳಿ ಶುರುವಾಗಿದೆ. ಸದ್ಯ ಭೀಮಾ ಸಿನಿಮಾ ನೋಡಲು ಹೋದ ಅಭಿಮಾನಿಗೂ ಇಂತಹದ್ದೇ ಅನುಭವ ಕಸಿವಿಸಿ ಮಾಡಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೊನ್ನೆಯಷ್ಟೇ ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿತ್ತು. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿತ್ತು. ಕೆಫೆಯ ಸಿಬ್ಬಂದಿಯೇ ಮೊಬೈಲ್‌ ಇಟ್ಟು ಮಹಿಳೆಯರ ವಿಡಿಯೊ ಸೆರೆಹಿಡಿದಿದ್ದ. ಈ ಘಟನೆ ಮಾಸುವ ಮುನ್ನವೇ ಇದೀಗ ಭೀಮಾ ಸಿನಿಮಾ ನೋಡಲು ಬಂದ ವ್ಯಕ್ತಿಯೊಬ್ಬ ಲೇಡಿಸ್‌ ವಾಶ್‌ರೂಮ್‌ನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ (Physical Abuse) ಮಾಡಿದ್ದಾನೆ.

ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಮಹಿಳಾ ಅಭಿಮಾನಿಗೆ ಫಿಲ್ಮಂ ಥಿಯೇಟರ್‌ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್‌ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 23 ವರ್ಷದ ಯುವತಿಯೊಬ್ಬಳು ಕಳೆದ ಆಗಸ್ಟ್‌ 10 ರಂದು ಊರ್ವಶಿ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್‌ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ.

ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ ಹೊರಗೆ ಓಡಿ ಬಂದಿದ್ದಾಳೆ. ಸದ್ಯ ಯುವತಿ ಕೊಟ್ಟ ದೂರಿನನ್ವಯ ಅಪ್ರಾಪ್ತ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.

ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Tungabhadra Dam: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋಗಿರುವ 19ನೇ ನಂಬರ್‌ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಆರಂಭವಾಗಿದೆ. ಇದೀಗ ಕ್ರೇನ್ ಮೂಲಕ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅನ್ನು ಅಳವಡಿಸಲು ಜಿಂದಾಲ್ ಎಂಜಿನಿಯರ್‌ಗಳು ಮುಂದಾಗಿದ್ದಾರೆ. 5 ಎಲಿಮೆಂಟ್‌ಗಳ ಜೋಡಿಸಲು ಯೋಜನೆ ರೂಪಿಸಲಾಗಿದ್ದು, ತಲಾ ಒಂದು ಎಲಿಮೆಂಟ್ ಅಳವಡಿಕೆಯಿಂದ 25 ಟಿಎಂಸಿ ನೀರು ತಡೆಯಲು ಸಾಧ್ಯವಿದೆ.

VISTARANEWS.COM


on

Tungabhadra Dam
Koo

ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋಗಿರುವ 19ನೇ ನಂಬರ್‌ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಡ್ಯಾಂ ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಆರಂಭವಾಗಿದೆ. ಇದೀಗ ಕ್ರೇನ್ ಮೂಲಕ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅನ್ನು ಅಳವಡಿಸಲು ಜಿಂದಾಲ್ ಎಂಜಿನಿಯರ್‌ಗಳು ಮುಂದಾಗಿದ್ದಾರೆ.

5 ಎಲಿಮೆಂಟ್‌ಗಳ ಜೋಡಿಸಲು ಯೋಜನೆ ರೂಪಿಸಲಾಗಿದ್ದು, ತಲಾ ಒಂದು ಎಲಿಮೆಂಟ್ ಅಳವಡಿಕೆಯಿಂದ 25 ಟಿಎಂಸಿ ನೀರು ತಡೆಯಲು ಸಾಧ್ಯವಿದೆ. ಈ ಸಂಬಂಧ ನೂರಾರು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಇಂದು ಮಳೆ ಕೊಂಚ ಬಿಡುವು ನೀಡಿದ್ದು, ಕಾಮಗಾರಿಗೆ ಅನುಕೂಲವಾಗಿ ಪರಿಣಮಿಸಿದೆ.

13ರಿಂದ 14 ಟನ್ ತೂಕದ ತಾತ್ಕಾಲಿಕ ಗೇಟ್ ಹಾಕಿ ಡ್ಯಾಂ ನೀರು ತಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ತುಂಡಾಗಿರುವ ಗೇಟ್ ಬಳಿ ಇರುವ ಚೈನ್ ಲಿಂಕ್ ಜೋಡನೆಯನ್ನು ತಂತ್ರಜ್ಞರು ಆರಂಭಿಸಿದ್ದಾರೆ. ಗೇಟ್‌ನಲ್ಲಿ ಸಿಲುಕಿದ್ದ ಕಟ್ ಆಗಿರೋ ಚೈನ್ ಲಿಂಕ್ ತೆರವು ಕಾರ್ಯವೂ ಪ್ರಗತಿಯಲ್ಲಿದೆ. ಡ್ಯಾಂ ಸಿಬ್ಬಂದಿ ಕ್ರೇನ್ ಮೂಲಕ ಹಳೆ ಚೈನ್ ಲಿಂಕ್ ತೆರವು ಮಾಡಲು ಮಂದಾಗಿದ್ದಾರೆ.

ತಪ್ಪಿದ ದುರಂತ

ಜಲಾಶಯದ ಮೇಲ್ಬಾಗಕ್ಕೆ ಗುರುವಾರ ಗೇಟ್ ರವಾನಿಸಲಾಗುತ್ತಿದ್ದು, ಟ್ರಕ್‌ನಿಂದ ಪ್ಲೇಟ್‌ಗಳನ್ನು ಇಳಿಸುವಾಗ ಒಮ್ಮೆ ಬ್ಯಾಲೆನ್ಸ್ ತಪ್ಪಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಲಿಲ್ಲ. ನಂತರ ಕ್ರೇನ್ ಮೂಲಕ ಬೆಲ್ಟ್ ಹಾಕಿ ಕಬ್ಬಿಣ ಪೇಲ್ಟ್‌ಗಳನ್ನು ಜಲಾಶಯದ ಮೇಲ್ಭಾಗಕ್ಕೆ ಸಾಗಿಸಲಾಯಿತು.

ಪ್ರವೇಶವಿಲ್ಲ

78ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಜಲಾಶಯ ಗೇಟ್ ಕಿತ್ತು ಹೋಗಿರುವುದರಿಂದ ಮತ್ತು ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಜಲಾಶಯ ವೀಕ್ಷಣೆಗೆ ಬಂದವರು ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಕ್ಕಿರಿದು ಸೇರಿದ್ದಾರೆ. ಕಾರು, ಬೈಕ್ ಕಾಲ್ನಡಿಗೆ ಮೂಲಕ ಬಂದ ಪ್ರವಾಸಿಗರು ರಸ್ತೆ ಬದಿ ನಿಂತೇ ಜಲ ವೈಭವವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರವಾಸಿಗರು ನಿಂತಿರುವ ಕಾರಣ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ವೇಗವಾಗಿ ಬರುತ್ತಿರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರನ್ನ ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುವಂತಾಗಿದೆ.

ದುರ್ದೈವದ ಸಂಗತಿ

ರಾಯಚೂರು: ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್‌ ಗೇಟ್‌ ಕಟ್ ಆಗಿದ್ದು ಬಹಳ ದುರ್ದೈವದ ವಿಷಯ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ರಾಯಚೂರಿನಲ್ಲಿ ಹೇಳಿದ್ದಾರೆ. ʼʼಈ ಬಾರಿ ನಮ್ಮ ಡ್ಯಾಂ ಸಂಪೂರ್ಣವಾಗಿ ತುಂಬಿತ್ತು. ಆದರೆ ಗೇಟ್ ತುಂಡಾಗಿರೋದರಿಂದ ನೀರನ್ನ ಬೀಡಬೇಕಾಗಿದೆ. ಆ ಗೇಟ್‌ನ ರಿಪೇರಿ ಕಾರ್ಯ ಕೂಡ ನಡೆಯುತ್ತಿದೆ‌. ನಾನು ಕೂಡ ಅಲ್ಲಿಯೇ ಹೋಗಿ ಮಾರ್ನಿಟರ್ ಮಾಡುತ್ತೇನೆʼʼ ಎಂದು ತಿಳಿಸಿದ್ದಾರೆ.

ʼʼಹವಾಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಕೊನೆಯ ವಾರದಲ್ಲಿ ಮಳೆಯಾಗುವ ಅಂದಾಜಿದೆ. ಅದರಿಂದ ಮತ್ತೆ ನಮ್ಮ ಡ್ಯಾಂ ತುಂಬುತ್ತೆ ಅನ್ನೋ ನೀರಿಕ್ಷೆಯಿದೆ. ಸದ್ಯಕ್ಕೆ ರೈತರಿಗೆ ಆತಂಕ ಕಾಡೋದು ಸಹಜ. ಮಳೆಯಾದ್ರೆ ಮತ್ತೊಮ್ಮೆ ಡ್ಯಾಂ ತುಂಬುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳೋಣ. ಗೇಟ್‌ ತುಂಡಾಗಲು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. 105 ಟಿಎಂಸಿ ತುಂಬಿರುವ ಡ್ಯಾಂನಿಂದ ಅರ್ಧ ನೀರು ಖಾಲಿ ಮಾಡಬೇಕಿದ್ದು, ಈ ಬಗ್ಗೆ ನಮಗೂ ಬೇಸರವಿದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Tungabhadra Dam: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ; ತಜ್ಞ ಕನ್ನಯ್ಯ ನಾಯ್ಡು ಸಾಹಸ

Continue Reading
Advertisement
Viral Video
Latest55 seconds ago

Viral Video: ಮನೆಯ ಗೇಟ್ ಬಳಿ ಸಿಂಹಗಳು ಮತ್ತು ಸಾಕು ನಾಯಿಗಳ ಕಾದಾಟ; ಎದೆ ನಡುಗಿಸುವ ವಿಡಿಯೊ

ಕರ್ನಾಟಕ4 mins ago

Palestine Flag: ಕುಣಿಗಲ್‌ನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ!

Thangalaan Movie Review Pa Ranjith's Thangalaan
ಟಾಲಿವುಡ್4 mins ago

Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

Lakshmi Hebbalkar
ಕರ್ನಾಟಕ5 mins ago

Lakshmi Hebbalkar: ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ; ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಬೆಂಗಳೂರು16 mins ago

Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

Tungabhadra Dam
ಕರ್ನಾಟಕ47 mins ago

Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Honey trap gang arrested in Bengaluru
ಬೆಂಗಳೂರು53 mins ago

Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

Lakshmi Hebbalkar
ಕರ್ನಾಟಕ60 mins ago

Lakshmi Hebbalkar: ಯೋಜನೆಗಳು ನಿಲ್ಲದೆ ಮುಂದುವರಿಯಲಿವೆ; ಲಕ್ಷ್ಮೀ ಹೆಬ್ಬಾಳಕರ್ ‘ಗ್ಯಾರಂಟಿ’

Jasmin Walia From Lip Lock to Breakups Her Boyfriend List is Spectacular
ಕ್ರಿಕೆಟ್1 hour ago

Hardik Pandya: ಬ್ರಿಟಿಷ್​ ಸಿಂಗರ್ ಜತೆ ಹಾರ್ದಿಕ್​ ಪಾಂಡ್ಯ​ ಡೇಟಿಂಗ್​​? ಜಾಸ್ಮಿನ್ ವಾಲಿಯಾ ಬ್ರೇಕಪ್‌ ಲಿಸ್ಟ್‌ ಇಲ್ಲಿದೆ

Viral Video
Latest1 hour ago

Viral Video: ಪಿಸ್ತೂಲ್ ಹಿಡಿದು ಚಿನ್ನ ದೋಚಲು ಬಂದವರನ್ನು ಕೋಲು ಹಿಡಿದು ಓಡಿಸಿದ ಅಂಗಡಿ ಮಾಲೀಕ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌