ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಮುಂದುವರಿಯಲಿದೆ ಎಂದು ಎರಡೆರಡು ಬಾರಿ ಒತ್ತಿ ಹೇಳಿದರು.

VISTARANEWS.COM


on

Independence Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಅವರು, ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡಿದರು (Independence Day 2024).

ʼʼಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಕೂಡಾ ಅಷ್ಟೇ ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ಬೆಳವಣಿಗೆ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವುದರ ಜತೆಗೆ ಈ ನೆಲದ ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆಯನ್ನು ಮುಂದುವರಿಸಿ ಕರ್ನಾಟಕವನ್ನು ನಿಜ ಅರ್ಥದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನಾಗಿ ರೂಪಿಸಲು ನಾವು ಕಾರ್ಯತತ್ಪರಾಗಿದ್ದೇವೆʼʼ ಎಂದು ಅವರು ತಿಳಿಸಿದರು.

ʼʼನಮ್ಮ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದಾಗಿ ಮಾಸಿಕ ಸರಾಸರಿ 4,000-5,000 ರೂ.ಗಳಷ್ಟು ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಇದು ಹಲವು ಕಾರಣಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ನೀಡುವ Universal Basic Income ಪರಿಕಲ್ಪನೆ. ಮುಂದುವರಿದ ರಾಷ್ಟ್ರಗಳಲ್ಲಿ ಆರ್ಥಿಕವಾಗಿ ಅಶಕ್ತ ವರ್ಗಗಳಿಗೆ ನೆರವಾಗಲು ಜಾರಿಗೊಳಿಸಲಾಗುತ್ತಿರುವ ಇಂತಹ ಯೋಜನೆಯೊಂದನ್ನು ಅತೀ ದೊಡ್ಡ ಮಟ್ಟದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ. ಈ ಬಗ್ಗೆ ನಮಗೆ ಹೆಮ್ಮೆ ಇದೆʼʼ ಎಂದು ಸಿಎಂ ಹೇಳಿದರು.

ʼʼಈ ಯೋಜನೆಗಳು ಮುಂದುವರಿಯಲಿವೆ. ಮಾತ್ರವಲ್ಲ, ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಲಿದ್ದೇವೆ. ಈ ಯೋಜನೆಗಳ ವ್ಯಾಪ್ತಿಯೊಳಗೆ ಹೊಸ ಆವಿಷ್ಕಾರಗಳನ್ನು ನಡೆಸಿ ಅವುಗಳು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾವು ಉದ್ಯುಕ್ತರಾಗಿದ್ದೇವೆ. ಉದಾಹರಣೆಗೆ ʼಗೃಹಲಕ್ಷ್ಮೀʼ ಯೋಜನೆಯಡಿ ಫಲಾನುಭವಿ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ಈಗ ಮಾಸಿಕ 2,000 ರೂ. ನೆರವು ನೀಡುತ್ತಿದ್ದೇವೆ. ಈ ಫಲಾನುಭವಿಗಳನ್ನು ಸ್ತ್ರೀ-ಶಕ್ತಿ ಮಹಿಳಾ ಸ್ವಸಹಾಯ ಸಂಘಗಳಾಗಿ ಸಂಘಟಿಸುವ ಮೂಲಕ ಅವರಿಗೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸುವ ಯೋಚನೆ ಇದೆ. ಅದೇ ರೀತಿ ಯುವನಿಧಿಯ ಫಲಾನುಭವಿಗಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಕ್ರಮ ವಹಿಸಲಾಗುತ್ತಿದೆʼʼ ಎಂದು ಸಿದ್ದರಾಮಯ್ಯ ವಿವರಿಸಿದರು.

“ಶಕ್ತಿ ಯೋಜನೆʼಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆಯುವ ಮೂಲಕ 6,541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ‘ಗೃಹಲಕ್ಷ್ಮೀ ಯೋಜನೆ’ಯಡಿ 1.20 ಕೋಟಿ ಮಹಿಳೆಯರಿಗೆ ಈ ವರೆಗೆ 25,259 ಕೋಟಿ ರೂ.ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ‘ಅನ್ನಭಾಗ್ಯ ಯೋಜನೆ’ಯಡಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ವರೆಗೆ 1.16 ಕೋಟಿ ಪಡಿತರ ಚೀಟಿಗಳ 4.08 ಕೋಟಿ ಫಲಾನುಭವಿಗಳಿಗೆ 7,763 ಕೋಟಿ ರೂ. ನೆರವನ್ನು ನೇರವಾಗಿ ವರ್ಗಾಯಿಸಲಾಗಿದೆ. ಉಚಿತವಾಗಿ 200 ಯೂನಿಟ್ ವರೆಗೆ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯ ಸೌಲಭ್ಯವನ್ನು 1.60 ಕೋಟಿ ಕುಟುಂಬಗಳು ಪಡೆದುಕೊಳ್ಳುತ್ತಿವೆ. ಈ ಯೋಜನೆಗಾಗಿ 8,844 ಕೋಟಿ ರೂ. ವೆಚ್ಚ ಮಾಡಲಾಗಿದೆ. ‘ಯುವನಿಧಿ ಯೋಜನೆ’ಯಡಿ 1.31 ಲಕ್ಷ ಪದವಿ/ಡಿಪ್ಲೊಮಾ ಪಡೆದ ನಿರುದ್ಯೋಗಿಗಳಿಗೆ ನೆರವು ನೀಡಲಾಗುತ್ತಿದ್ದು ಇದಕ್ಕಾಗಿ 91 ಕೋಟಿ ರೂ.ಗಳನ್ನು ಭರಿಸಲಾಗಿದೆʼʼ ಎಂದು ಸಿದ್ದರಾಮಯ್ಯ ತಿಳಿಸಿದರು.

ʼʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡು ಮುಂಗಾರು ಹಂಗಾಮುಗಳಲ್ಲಿ ರಾಜ್ಯ ಸಂಪೂರ್ಣ ವಿಭಿನ್ನ ಪರಿಸ್ಥಿತಿಯನ್ನು ಎದುರಿಸಿದೆ. ಕಳೆದ ವರ್ಷ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾದರೆ, ಈ ಬಾರಿ ಅತಿವೃಷ್ಟಿಗೆ ಒಳಗಾಗಿದೆ. ಕೇಂದ್ರ ಸರ್ಕಾರವು ಬರ ಪರಿಹಾರದ ಮೊತ್ತವನ್ನು ತಡವಾಗಿ ನೀಡಿದರೂ, ರಾಜ್ಯದಲ್ಲಿ ಬರದಿಂದಾಗಿ ಜನರಿಗೆ ಹೆಚ್ಚಿನ ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಯಿತು. ಎನ್‍ಡಿಆರ್‌ಎಫ್‌ ಅಡಿ ಪರಿಹಾರ ಬಿಡುಗಡೆಯಾಗುವ ಮೊದಲೇ ರಾಜ್ಯ ಸರ್ಕಾರ ಬರಗಾಲದಿಂದ ಬಾಧಿತರಾದ ಪ್ರತಿ ರೈತರಿಗೆ 2,000 ರೂ. ವರೆಗೆ ಒಟ್ಟು 636.45 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ವಿತರಿಸಿದೆ. ಒಟ್ಟಾರೆಯಾಗಿ ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ 3454.66 ಕೋಟಿ ರೂ. ಬೆಳೆಹಾನಿ ಪರಿಹಾರವನ್ನು ಎನ್‍ಡಿಆರ್‌ಎಫ್‌ ಅಡಿ ವಿತರಿಸಲಾಗಿದೆ. ಇದರೊಂದಿಗೆ 17.88 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಒಟ್ಟು 512.83 ಕೋಟಿ ರೂ. ಗಳಷ್ಟು ಜೀವನೋಪಾಯ ಪರಿಹಾರ ವಿತರಿಸಲಾಗಿದೆʼʼ ಎಂದು ಸಿದ್ದರಾಮಯ್ಯ ವಿವರಿಸಿದರು.

ʼʼಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾನು ಸ್ವತಃ ಭೇಟಿ ನೀಡಿದ್ದೇನೆ. ನಮ್ಮ ಸಚಿವರೂ ಜಿಲ್ಲೆಗಳಲ್ಲಿದ್ದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಜೀವಹಾನಿ, ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮ ವಹಿಸುತ್ತಿದ್ದೇವೆʼʼ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಮಾಡುವುದಲ್ಲದೇ (Bike Wheeling) ಬೈಕ್‌ನಲ್ಲಿ ಓಡಾಡುವ ಕೀಟಲೆ ಮಾಡಿ ಪುಂಡರು ರ‍್ಯಾಗಿಂಗ್‌ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ವ್ಹೀಲಿಂಗ್‌ ಮಾಡುತ್ತಾ ಕಿರಿಕಿರಿ ಮಾಡುತ್ತಿದ್ದಾರೆ.

VISTARANEWS.COM


on

By

bike wheeling
Koo

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಪುಂಡರ ವ್ಹೀಲಿಂಗ್‌ ಹಾವಳಿ (Bike Wheeling) ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್‌ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡು ಬರುತ್ತಿದೆ. ಅದರಲ್ಲೂ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಡುವೆಯೂ ಡೆಡ್ಲಿ ವ್ಹೀಲಿಂಗ್‌ ಮತ್ತು ರೇಸಿಂಗ್ ಮಾಡುತ್ತಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ ರಸ್ತೆ ಮತ್ತು ದೇವನಹಳ್ಳಿ ಹೈವೇಯ ನಂದಿ ಹಿಲ್ಸ್ ರಸ್ತೆಯಲ್ಲಿ ಪುಂಡರು ಡಿಯೋ ಮತ್ತು ಆರ್ ಎಕ್ಸ್ ಬೈಕ್‌ನಲ್ಲಿ ಬಂದು ಅಡ್ಡಾದಿಡ್ಡಿಯಾಗಿ ವ್ಹೀಲಿಂಗ್‌ ಮಾಡುತ್ತಿದ್ದಾರೆ. ದೊಡ್ಡಬಳ್ಳಾಪುರ ಸುತ್ತ ಮುತ್ತ ಇರುವ ಹೆದ್ದಾರಿಯಲ್ಲೂ ವ್ಹೀಲಿಂಗ್‌ ಮಾಡಿ, ಸಹ ಸವಾರರಿಗೆ ತೊಂದರೆಯುಂಟು ಮಾಡುತ್ತಿದ್ದಾರೆ.

ಇನ್ನೂ ಪುಂಡರ ವ್ಹೀಲಿಂಗ್‌ ದೃಶ್ಯ ಸೆರೆ ಹಿಡಿಯಲು ಹೋದವರ ಮೇಲು ದಾಳಿಗೆ ಮುಂದಾಗಿದ್ದಾರೆ. ಕೋಲಿನಿಂದ ಮೊಬೈಲ್ ಹೊಡೆದು ಎಸ್ಕೇಪ್‌‌ ಆಗಿದ್ದಾರೆ. ಸ್ಥಳೀಯ ಪತ್ರಕರ್ತರು ಮತ್ತು ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪುಂಡರ ಅಟ್ಟಹಾಸಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗುಂಪು ಗುಂಪಾಗಿ ಬಂದು ಹೆದ್ದಾರಿಯಲ್ಲಿ ವ್ಹೀಲಿಂಗ್ ಮತ್ತು ರೇಸ್ ಮಾಡಿ ಭಯ ಹುಟ್ಟಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Independence Day 2024: ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ; Live ಇಲ್ಲಿ ವೀಕ್ಷಿಸಿ

ಮತ್ತೆ ಮತ್ತೆ ಬಿಸಿ ಮಾಡಿ ಸೇವಿಸುವುದರಿಂದ ಇವು ದೇಹಕ್ಕೆ ವಿಷವಾಗಬಹುದು ಎಚ್ಚರ!

ಬೆಳಗ್ಗೆ ಮಾಡಿರುವ ಅನ್ನ, ಸಾಂಬಾರ್ ಬಿಸಿಬಿಸಿಯಾಗಿರಬೇಕು ಎಂದು ಹಲವಾರು ಮನೆಗಳಲ್ಲಿ ಪದೇಪದೇ ಬಿಸಿ ಮಾಡುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇನ್ನು ಕೆಲವರು ರಾತ್ರಿ ಉಳಿದ ಅಡುಗೆಯನ್ನು (food) ಬಿಸಿ ಮಾಡಿ (reheat) ಮರುದಿನ ಸೇವಿಸುತ್ತಾರೆ. ಹೀಗೆ ಆಹಾರ ಬಿಸಿ ಮಾಡಿ ತಿನ್ನುವುದು ಅದರಲ್ಲೂ ವಿಶೇಷವಾಗಿ ಕೆಲವೊಂದು ಆಹಾರಗಳನ್ನು ಎರಡನೇ ಬಾರಿ ಬಿಸಿ ಮಾಡುವುದು ಆರೋಗ್ಯಕ್ಕೆ (Health Tips) ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು.

ಕೆಲವು ಆಹಾರವನ್ನು ಬಿಸಿ ಮಾಡಿದಾಗ ಅದು ವಿಷವಾಗಬಹುದು. ಇನ್ನು ಕೆಲವು ಆಹಾರಗಳಲ್ಲಿರುವ ಪೌಷ್ಟಿಕಾಂಶ ನಷ್ಟವಾಗಬಹುದು ಎನ್ನುತ್ತಾರೆ ಆಹಾರ ಪರಿಣತರು. ಕೆಲವು ಆಹಾರ ಪದಾರ್ಥಗಳನ್ನು ಎರಡನೇ ಬಾರಿ ಬಿಸಿ ಮಾಡಲೇಬಾರದು. ಅವು ಯಾವುದು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

Health Tips
Health Tips


ಚಹಾ

ಚಹಾದಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ಪಾಲಿಫಿನಾಲ್‌ಗಳಂತಹ ಸೂಕ್ಷ್ಮ ಸಂಯುಕ್ತಗಳಿರುತ್ತವೆ. ಇದು ಚಹಾಕ್ಕೆ ಸುವಾಸನೆ ಮತ್ತು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಚಹಾವನ್ನು ಆರಂಭದಲ್ಲಿ ತಯಾರಿಸಿದಾಗ ಇದು ಟ್ಯಾನಿನ್‌ ಮತ್ತು ಕ್ಯಾಟೆಚಿನ್‌ಗಳನ್ನು ಒಳಗೊಂಡಂತೆ ವಿವಿಧ ಸಂಯುಕ್ತಗಳನ್ನು ಬಿಡುಗಡೆ ಮಾಡುತ್ತದೆ. ಚಹಾವನ್ನು ಮತ್ತೆ ಬಿಸಿ ಮಾಡುವುದರಿಂದ ಈ ಸಂಯುಕ್ತಗಳು ನಷ್ಟವಾಗುತ್ತದೆ. ಇದರಿಂದ ಚಹಾ ಸುವಾಸನೆಯನ್ನು ಕಳೆದುಕೊಳ್ಳುತ್ತದೆ ಮತ್ತು ಅದರಲ್ಲಿರುವ ಒಳ್ಳೆಯ ಅಂಶಗಳು ನಷ್ಟವಾಗುತ್ತದೆ.

ಚಹಾವು ಕೆಫೀನ್ ಅನ್ನು ಹೊಂದಿರುತ್ತದೆ. ಇದನ್ನು ಪುನಃ ಬಿಸಿ ಮಾಡುವುದರಿಂದ ಇದು ಹೆಚ್ಚಾಗಿ ಜಿಗುಪ್ಸೆ, ನಿದ್ರಾಹೀನತೆಯಂತಹ ಅಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ. ಚಹಾವನ್ನು ಮತ್ತೆ ಬಿಸಿ ಮಾಡಿ ಸೇವಿಸುವುದು ಆಮ್ಲೀಯತೆಯನ್ನು ಹೆಚ್ಚಿಸಬಹುದು.

ಇದಲ್ಲದೇ ಚಹಾವನ್ನು ಕುದಿಸಿದ ಬಳಿಕ ದೀರ್ಘಕಾಲದವರೆಗೆ ಇಡುವುದು ಕೂಡ ಒಳ್ಳೆಯದಲ್ಲ. ಚಹಾವನ್ನು ಮಾಡಿ ಹತ್ತು ನಿಮಿಷಗಳ ಒಳಗೆ ಸೇವಿಸಬೇಕು. ಇಲ್ಲವಾದರೆ ಅದು ಹೆಚ್ಚು ಆಮ್ಲೀಯವಾಗಬಹುದು. ಇದು ಹೊಟ್ಟೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ.


ಪಾಲಕ್

ಪಾಲಕ್ ಸೊಪ್ಪು ನೈಟ್ರೇಟ್‌ಗಳನ್ನು ಹೊಂದಿರುತ್ತದೆ. ಇದನ್ನು ಮತ್ತೆ ಬಿಸಿ ಮಾಡಿದಾಗ ನೈಟ್ರೈಟ್‌ಗಳಾಗಿ ಪರಿವರ್ತನೆಯಾಗುತ್ತದೆ. ನೈಟ್ರೈಟ್‌ಗಳು ಅನಂತರ ಅಮೈನೋ ಆಮ್ಲಗಳೊಂದಿಗೆ ಪ್ರತಿಕ್ರಿಯಿಸಿ ನೈಟ್ರೊಸಮೈನ್‌ ಗಳಾಗುತ್ತವೆ. ಅವುಗಳು ಕ್ಯಾನ್ಸರ್ ಜನಕಗಳಾಗಿವೆ. ಪಾಲಕ್ ಅನ್ನು ಮತ್ತೆ ಬಿಸಿ ಮಾಡುವುದರಿಂದ ವಿಟಮಿನ್ ಸಿ ಮತ್ತು ಬಿ ವಿಟಮಿನ್‌ಗಳು ನಷ್ಟವಾಗುತ್ತದೆ. ಅದರ ಪೌಷ್ಟಿಕಾಂಶದ ಮೌಲ್ಯ ಕುಗ್ಗುತ್ತದೆ.

ಪಾಲಕ್ ಕಬ್ಬಿಣದ ಸಮೃದ್ಧ ಮೂಲವಾಗಿದೆ. ಪಾಲಕ್ ಸೊಪ್ಪನ್ನು ಬೇಯಿಸಿ ಮತ್ತೆ ಬಿಸಿ ಮಾಡಿದಾಗ ಕಬ್ಬಿಣವು ಗಾಳಿಯಲ್ಲಿ ಆಮ್ಲಜನಕದ ಸಂಪರ್ಕಕ್ಕೆ ಬಂದಾಗ ರಾಸಾಯನಿಕ ಕ್ರಿಯೆಯು ಸಂಭವಿಸಿ ಕಬ್ಬಿಣದ ಆಕ್ಸೈಡ್‌ಗಳ ರಚನೆಗೆ ಕಾರಣವಾಗಬಹುದು. ಇದು ಪಾಲಕ್ ನ ಬಣ್ಣ ಮತ್ತು ರುಚಿಯನ್ನು ಬದಲಾಯಿಸುತ್ತದೆ.

ಪಾಲಕ್ ನಲ್ಲಿರುವ ಕಬ್ಬಿನಾಂಶದ ಆಕ್ಸಿಡೀಕರಣವು ಅದರ ಪೌಷ್ಟಿಕಾಂಶದ ಮೌಲ್ಯದ ಮೇಲೆ ಪರಿಣಾಮ ಬೀರಬಹುದು. ಆಕ್ಸಿಡೀಕೃತ ಕಬ್ಬಿಣವು ದೇಹದಲ್ಲಿ ಸುಲಭವಾಗಿ ಹೀರಲ್ಪಡುವುದಿಲ್ಲ. ಮತ್ತೆ ಮತ್ತೆ ಪಾಲಕ್ ಅನ್ನು ಬಿಸಿ ಮಾಡುವುದು ಲೋಳೆಯ ರಚನೆ ಮತ್ತು ಕಹಿ ರುಚಿಯನ್ನು ಉಂಟು ಮಾಡುತ್ತದೆ. ಹೀಗಾಗಿ ಪಾಲಕ್‌ನಲ್ಲಿರುವ ಪೋಷಕಾಂಶಗಳನ್ನು ಪಡೆಯಲು ಅದನ್ನು ತಾಜಾ ಆಗಿ ಸೇವಿಸುವುದು ಉತ್ತಮ.


ಅಡುಗೆ ಎಣ್ಣೆ

ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡಿದಾಗ ಅದರ ಗುಣಮಟ್ಟ ಮತ್ತು ಸುರಕ್ಷತೆ ಕೆಡಿಸುವ ರಾಸಾಯನಿಕ ಬದಲಾವಣೆಗಳಿಗೆ ಒಳಗಾಗುತ್ತದೆ. ಇದು ಟ್ರಾನ್ಸ್ ಕೊಬ್ಬುಗಳು ಮತ್ತು ಅಲ್ಡಿಹೈಡ್‌ಗಳಂತಹ ಹಾನಿಕಾರಕ ಸಂಯುಕ್ತಗಳ ರಚನೆಗೆ ಕಾರಣವಾಗಬಹುದು. ಇದು ಉರಿಯೂತ ಮತ್ತು ಹೃದಯರಕ್ತನಾಳದ ಕಾಯಿಲೆಯನ್ನು ಉಂಟು ಮಾಡುತ್ತದೆ. ಅಡುಗೆ ಎಣ್ಣೆಯ ಸಮಗ್ರ ಪ್ರಯೋಜನ ಪಡೆಯಲು ಪ್ರತಿ ಬಾರಿಯೂ ತಾಜಾ ಎಣ್ಣೆಯನ್ನು ಬಳಸುವುದು ಮತ್ತು ತೈಲವನ್ನು ಅನೇಕ ಬಾರಿ ಬಿಸಿ ಮಾಡುವುದನ್ನು ತಪ್ಪಿಸುವುದು ಒಳ್ಳೆಯದು.


ಅಣಬೆ

ಅಣಬೆಗಳು ಮತ್ತೆ ಬಿಸಿ ಮಾಡುವುದರಿಂದ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಆಹಾರದಿಂದ ಹರಡುವ ಅನಾರೋಗ್ಯದ ಅಪಾಯವನ್ನು ಹೆಚ್ಚಿಸುತ್ತದೆ. ಅಣಬೆಗಳು ಪಾಲಿಸ್ಯಾಕರೈಡ್‌ಗಳಂತಹ ಕೆಲವು ಸಂಯುಕ್ತಗಳನ್ನು ಹೊಂದಿರುತ್ತವೆ. ಇದು ಮತ್ತೆ ಬಿಸಿ ಮಾಡಿದಾಗ ಕಿಣ್ವಕ ಪ್ರತಿಕ್ರಿಯೆಗಳಿಗೆ ಒಳಗಾಗಬಹುದು. ಅವುಗಳ ರುಚಿ ಮತ್ತು ವಿನ್ಯಾಸವನ್ನು ಬದಲಾಯಿಸುತ್ತದೆ.

ಮತ್ತೆ ಬಿಸಿ ಮಾಡಿದ ಅಣಬೆಗಳನ್ನು ಸೇವಿಸುವುದರಿಂದ ತಾಜಾತನ ಮತ್ತು ರುಚಿಯನ್ನು ಕಳೆದುಕೊಳ್ಳಬಹುದು. ಅಣಬೆಗಳು ಕಿಣ್ವ, ರಚನಾತ್ಮಕ ಪ್ರೋಟೀನ್‌ಗಳನ್ನು ಒಳಗೊಂಡಂತೆ ವಿವಿಧ ಪ್ರೋಟೀನ್‌ಗಳನ್ನು ಹೊಂದಿರುತ್ತವೆ. ಇದು ಅವುಗಳ ವಿನ್ಯಾಸ ಮತ್ತು ಪೌಷ್ಟಿಕಾಂಶದ ಪ್ರೊಫೈಲ್‌ಗೆ ಕೊಡುಗೆ ನೀಡುತ್ತದೆ. ಅಣಬೆಗಳನ್ನು ಬೇಯಿಸಿದಾಗ, ಈ ಪ್ರೋಟೀನ್ ಗಳು ಡಿನಾಟರೇಶನ್ ಎಂಬ ಪ್ರಕ್ರಿಯೆಯ ಮೂಲಕ ರಚನಾತ್ಮಕ ಬದಲಾವಣೆಗಳಿಗೆ ಒಳಗಾಗುತ್ತವೆ. ಅಣಬೆಗಳನ್ನು ಮತ್ತೆ ಬಿಸಿ ಮಾಡಿದ ಅನಂತರ ಪ್ರೋಟೀನ್ ಸಂಯೋಜನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ಉಂಟುಮಾಡುತ್ತದೆ.

ಇದು ಅಣಬೆಗಳ ವಿನ್ಯಾಸ, ಸುವಾಸನೆ ಮತ್ತು ಪೌಷ್ಟಿಕಾಂಶದ ಗುಣಲಕ್ಷಣಗಳಲ್ಲಿ ವ್ಯತ್ಯಾಸವನ್ನು ಉಂಟು ಮಾಡುತ್ತದೆ. ಅಣಬೆಗಳನ್ನು ಮತ್ತೆ ಬಿಸಿ ಮಾಡುವುದರಿಂದ ಜಲವಿಚ್ಛೇದನೆಯಂತಹ ಪ್ರಕ್ರಿಯೆಗಳ ಮೂಲಕ ಸಣ್ಣ ಪೆಪ್ಟೈಡ್‌ಗಳು ಮತ್ತು ಅಮೈನೋ ಆಮ್ಲಗಳಾಗಿ ಕೆಲವು ಪ್ರೋಟೀನ್ ಅಣುಗಳ ವಿಭಜನೆಗೆ ಕಾರಣವಾಗಬಹುದು. ಇದು ಅಣಬೆಗಳ ಒಟ್ಟಾರೆ ಪ್ರೋಟೀನ್ ಅಂಶ ಮತ್ತು ಸಂಯೋಜನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಅವುಗಳ ರುಚಿ ಮತ್ತು ಜೀರ್ಣಸಾಧ್ಯತೆಯ ಮೇಲೆ ಪರಿಣಾಮ ಬಿರುವುದು. ಅಣಬೆಗಳ ಗುಣಮಟ್ಟವನ್ನು ಕಾಪಾಡಲು, ಅವುಗಳನ್ನು ದೀರ್ಘಕಾಲದವರೆಗೆ ಬಿಸಿ ಮಾಡದೇ ಇರುವುದು ಒಳ್ಳೆಯದು ಎನ್ನುತ್ತಾರೆ ಆಹಾರ ತಜ್ಞರು.


ಅಕ್ಕಿ

ಅಕ್ಕಿಯಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಸಿಲಸ್ ಸೆರಿಯಸ್ ಎಂಬ ಬ್ಯಾಕ್ಟೀರಿಯಂ ಅಡುಗೆ ಪ್ರಕ್ರಿಯೆಯಲ್ಲಿ ಬದುಕುಳಿಯುತ್ತದೆ. ಅನ್ನ ಮಾಡಿ ಅದನ್ನು ದೀರ್ಘಕಾಲದವರೆಗೆ ಇಟ್ಟರೆ ಅದು ದ್ವಿಗುಣವಾಗುತ್ತಾ ಹೋಗುತ್ತದೆ. ಅನ್ನವನ್ನು ಮತ್ತೆ ಬಿಸಿ ಮಾಡುವುದರಿಂದ ಯಾವಾಗಲೂ ಬ್ಯಾಕ್ಟೀರಿಯಾ ಮತ್ತು ಅವುಗಳ ವಿಷಕಾರಿ ಅಂಶಗಳು ಹೋಗುವುದಿಲ್ಲ. ಇದು ಆಹಾರವನ್ನು ವಿಷವಾಗಿಸುತ್ತದೆ. ಬಿಸಿ ಮಾಡಿದ ಅನ್ನ ತೇವಾಂಶ, ಪೌಷ್ಟಿಕಾಂಶ ಕಳೆದುಕೊಳ್ಳುತ್ತದೆ. ಆಹಾರದಿಂದ ಹರಡುವ ಅನಾರೋಗ್ಯವನ್ನು ತಡೆಗಟ್ಟಲು ಬೇಯಿಸಿದ ಅನ್ನವನ್ನು ರೆಫ್ರಿಜರೇಟರ್ ನಲ್ಲಿ ಸರಿಯಾಗಿ ಸಂಗ್ರಹಿಸುವುದು ಮತ್ತು ಒಂದೆರಡು ದಿನಗಳಲ್ಲಿ ಅದನ್ನು ಸೇವಿಸುವುದು ಮುಖ್ಯವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅನುದಾನ ವಿತರಿಸುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಧೀರಣೆ ತಾಳಿದೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Independence Day 2024
Koo

ಬೆಂಗಳೂರು: ”ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಜನಕಲ್ಯಾಣ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದ್ದು, ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ (Independence Day 2024).

ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ʼʼಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ, ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಕೇಂದ್ರ ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಪರಿಹಾರದ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿರುವುದು ಜನಹಿತಕ್ಕೆ ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಾದರೂ ಕೇಂದ್ರ ಸರ್ಕಾರವು, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ರಾಜ್ಯಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆʼʼ ಎಂದು ಸಿಎಂ ಹೇಳಿದ್ದಾರೆ.

ʼʼಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾಡಿನ ಮಹಾ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ವಿರೋಧಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕೆಂಬುದನ್ನು ಎಲ್ಲರೂ ನಿರೀಕ್ಷಿಸುತ್ತಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿರುವ ಮತದಾರರು, ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ” ಎಂದು ಬಿಜೆಪಿ ವಿರುದ್ಧ ಹಾರಿಹಾಯ್ದರು.

ದೇಶದ ಚಲನಶೀಲ, ಸ್ಪಂದನಾಶೀಲ ಪ್ರಜಾಪ್ರಭುತ್ವಕ್ಕೆ ನಮ್ಮ ಸಂವಿಧಾನವೇ ಶ್ರೀರಕ್ಷೆಯಾಗಿದೆ. ದೇಶದಲ್ಲಿ ನಮ್ಮ ಪ್ರಜಾಪ್ರಭುತ್ವವು ಕ್ರಿಯಾಶೀಲವಾಗಲು, ಜನ ಜೀವನದ ಸಹಜ ಮತ್ತು ಅವಿಭಾಜ್ಯ ಭಾಗವಾಗಿರಲು ಎದುರಾಗಬಹುದಾದ ಅಡ್ಡಿ-ಆತಂಕಗಳ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ಅವರು ಅಂದೇ ಮುನ್ನೆಚ್ಚರಿಕೆ ನೀಡಿದ್ದರು. ಮೊದಲನೆಯದಾಗಿ, ಜಾತಿ-ಮತದ ಆಧಾರದ ವಿಭಜನೆಯ ರಾಜಕಾರಣ ಮಾಡುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು. ಎರಡನೆಯದಾಗಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಆಶಯಗಳನ್ನು ಬುಡಮೇಲು ಮಾಡುವ ಮನಸ್ಥಿತಿಯ ವ್ಯಕ್ತಿಗಳನ್ನು ಅಧಿಕಾರದಿಂದ ಮುಲಾಜಿಲ್ಲದೆ ದೂರ ಇಡಬೇಕು. ಅಂತಿಮವಾಗಿ ಸಾಮಾಜಿಕ ಪ್ರಜಾಪ್ರಭುತ್ವ ಇಲ್ಲದ ರಾಜಕೀಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದರುʼʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ʼʼನಾಡಿನ ಸಮಸ್ತ ಜನರು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮೂಲ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಗೌರವವಾಗಿರುತ್ತದೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಮತ್ತು ಹುತಾತ್ಮರಾದ ಅವರ ಕ್ರಾಂತಿಕಾರಿ ಸ್ನೇಹಿತರು, ನಮಗೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಡಾ: ಬಿ.ಆರ್.ಅಂಬೇಡ್ಕರ್, ವೈಜ್ಞಾನಿಕ ಹಾಗೂ ಜ್ಯಾತ್ಯಾತೀತ ತಳಹದಿಯಲ್ಲಿ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಜವಾಹರಲಾಲ್‌ ನೆಹರೂ ಮುಂತಾದ ಮಹನೀಯರನ್ನು ನಾವು ಸ್ಮರಿಸಬೇಕು ಹಾಗೂ ಅವರ ಆಶಯಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ನೆರೆಹೊರೆಯ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಇಲ್ಲಿಯೂ ಎದುರಾಗಿ ಬಿಡಬಹುದು ಎಂಬ ಎಚ್ಚರಿಕೆ ನಮ್ಮೆಲ್ಲರಲ್ಲಿ ಇರಬೇಕಾಗುತ್ತದೆʼʼ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ʼʼಎಲ್ಲ ಜಾತಿ ಹಾಗೂ ಮತಗಳ ಜನರು ಒಟ್ಟುಗೂಡಿ ಸ್ವಾತಂತ್ರ್ಯ ಗಳಿಸಿದ್ದೇವೆ. ಎಲ್ಲರೂ ಒಟ್ಟುಗೂಡಿ ಈ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ.
ಮತದ ಬಿರುಕುಗಳನು ತೊರೆವೆ
ನುಡಿಗಳೊಡಕುಗಳನು ಮರೆವೆ
ತೊತ್ತ ತೊಡಕುಗಳನು ಬಿರಿವೆ
ಸ್ವಾತಂತ್ರ್ಯದ ಸ್ವರ್ಗಕೇರೆ
ಪುಣ್ಯದೇಣಿ ಮೆಟ್ಟಿಲು
ರಾಷ್ಟ್ರಕವಿ ಕುವೆಂಪು ಅವರ ಕವನದ ಈ ಸಾಲುಗಳಂತೆ ಜಾತಿ, ಮತ, ಧರ್ಮ, ಭಾಷೆ ಆಧಾರದ ಭೇದ-ಭಾವಗಳನ್ನು ಮರೆತು ದೇಶದ ವೈವಿಧ್ಯತೆಯನ್ನು ಗೌರವಿಸುತ್ತ, ಅಖಂಡತೆಯನ್ನು ಪಾಲಿಸುತ್ತ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಾಗಿದೆ. ಎಲ್ಲರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ದೊರಕಿಸುವ ಮೂಲಕ ರಾಜಕೀಯ ಸ್ವಾತಂತ್ರ್ಯ ಅಬಾಧಿತವಾಗುವಂತೆ ಶ್ರಮಿಸಬೇಕುʼʼ ಎಂದು ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Continue Reading

ಕರ್ನಾಟಕ

Independence Day 2024: ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ರಾಜ್ಯ ಬದ್ಧ; ಸಿದ್ದರಾಮಯ್ಯ

Independence Day 2024: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭ್ಯುದಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ವಿವಿಧ ಯೋಜನೆಗಳನ್ನು ವಿವರಿಸಿದರು. ಆ ಮೂಲಕ ಪ್ರತಿಪಕ್ಷಗಳ ಆರೋಪಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದರು.

VISTARANEWS.COM


on

Independence Day 2024
Koo

ಬೆಂಗಳೂರು: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆ (Independence Day 2024)ಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಭಾಷಣ ಮಾಡಿದರು. ಈ ಬಾರಿ ಅವರು ಬುಲೆಟ್ ಪ್ರೂಫ್ ಕವಚ ಇಲ್ಲದೆ ಭಾಷಣ ಮಾಡಿದ್ದು ವಿಶೇಷ. ಈ ವೇಳೆ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭ್ಯುದಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ವಿವಿಧ ಯೋಜನೆಗಳನ್ನು ವಿವರಿಸಿದರು.

ʼʼಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭ್ಯುದಯಕ್ಕಾಗಿ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಕಾಯ್ದೆ 2013ರ ಸೆಕ್ಷನ್ 7(ಡಿ) ಅನ್ನು ಕೈ ಬಿಡುವ ಮೂಲಕ ಅನುದಾನ ಪರಿಶಿಷ್ಟ ಸಮುದಾಯಗಳಿಗಾಗಿಯೇ ಬಳಕೆಯಾಗುವುದನ್ನು ಖಾತರಿಪಡಿಸುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ಹಿಂದುಳಿದ ವರ್ಗದವರಿಗೆ 1 ಕೋಟಿ ರೂ.ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ, ಸರ್ಕಾರಿ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ನೇಮಕಾತಿಯಲ್ಲಿ ಮೀಸಲಾತಿ, ಮಹಿಳಾ ಉದ್ಯಮಿಗಳಿಗೆ ಕೆ.ಎಸ್.ಎಫ್.ಸಿ.ಯಲ್ಲಿ ಶೇ. 4ರ ಬಡ್ಡಿ ದರದಲ್ಲಿ ನೀಡುವ ಸಾಲದ ಮಿತಿ 5 ಕೋಟಿ ರೂ.ಗಳಿಗೆ ಹೆಚ್ಚಳ ಮುಂತಾದ ಉಪಕ್ರಮಗಳು ದುರ್ಬಲ ವರ್ಗಗಳ ಕುರಿತ ನಮ್ಮ ಕಾಳಜಿಗೆ ಸಾಕ್ಷಿಯಾಗಿವೆʼʼ ಎಂದು ಸಿದ್ದರಾಮಯ್ಯ ಹೇಳಿದರು.

ವಿವಿಧ ಜನ ಕಲ್ಯಾಣ ಯೋಜನೆಗಳು

ʼʼನಮ್ಮ ಸರಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ. ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ವಿವಿಧ ಮಾಸಿಕ ಪಿಂಚಣಿಗಳಡಿ 78.64 ಲಕ್ಷ ಫಲಾನುಭವಿಗಳು ನೇರ ನಗದು ವರ್ಗಾವಣೆಯ ರೂಪದಲ್ಲಿ ನೆರವು ಪಡೆಯುತ್ತಿದ್ದಾರೆ. ಮೈತ್ರಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಪಿಂಚಣಿ ಮೊತ್ತವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹಾಗೂ ಮಾಜಿ ದೇವದಾಸಿಯರಿಗೆ ನೀಡಲಾಗುತ್ತಿರುವ ಮಾಸಾಶನವನ್ನು 1,500 ರೂ.ಗಳಿಂದ 2,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವೃದ್ಧಾಪ್ಯ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಮೊದಲಾದ ಸಾಮಾಜಿಕ ಭದ್ರತೆ ಯೋಜನೆಗಳಡಿ 13,027 ಕೋಟಿ ರೂ. ವೆಚ್ಚ ಮಾಡಲಾಗಿದೆʼʼ ಎಂದು ಸಿಎಂ ತಿಳಿಸಿದರು.

ʼʼಇದರ ಜತೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲು ಉತ್ಪಾದಕರ ಖಾತೆಗಳಿಗೆ 1,822.28 ಕೋಟಿ ರೂ.ಗಳ ಪ್ರೋತ್ಸಾಹಧನವನ್ನು ಡಿ.ಬಿ.ಟಿ. ಮೂಲಕ ವರ್ಗಾವಣೆ ಮಾಡಲಾಗಿದೆ. ಸಹಕಾರ ಸಂಸ್ಥೆಗಳಿಂದ ನೀಡಲಾದ ಬೆಳೆಸಾಲ, ಸ್ವ-ಸಹಾಯ ಸಂಘಗಳ ಸಾಲ ಹಾಗೂ ಮತ್ತಿತರ ಸಾಲಗಳಿಗೆ 1,642 ಕೋಟಿ ರೂ. ಬಡ್ಡಿ ಸಹಾಯಧನ ನೀಡಲಾಗಿದೆ ಹಾಗೂ 20,029 ಕೋಟಿ ರೂ. ವೆಚ್ಚ ಭರಿಸಿ ನೀರಾವರಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಒದಗಿಸಲಾಗಿದೆʼʼ ಎಂದರು.

ಕೊಬ್ಬರಿಗೆ ಸಹಾಯಧನ

ʼʼಕೊಬ್ಬರಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂ. ಪ್ರೋತ್ಸಾಹಧನ ಘೋಷಿಸಿದ್ದಲ್ಲದೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರದ ನಾಫೆಡ್‍ನಿಂದ ಬರಬೇಕಾದ ಪೂರ್ಣ ಅನುದಾನ ಬಿಡುಗಡೆಯನ್ನು ನಿರೀಕ್ಷಿಸಿ ರಾಜ್ಯ ಸರ್ಕಾರ ಘೋಷಿಸಿದ ನೆರವೂ ಸೇರಿದಂತೆ ಒಟ್ಟು 870 ಕೋಟಿ ರೂ. ಗಳನ್ನು ನೇರವಾಗಿ 58,893 ರೈತರ ಖಾತೆಗಳಿಗೆ ವರ್ಗಾಯಿಸಿದೆʼʼ ಎಂದು ಸಿಎಂ ಮಾಹಿತಿ ನೀಡಿದರು.

ಅಸಂಘಟಿತ ಕಾರ್ಮಿಕರಿಗೆ ನೆರವು

ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಮೋಟಾರು ಮತ್ತು ಇತರ ಸಂಬಂಧಿತ ಕಾರ್ಮಿಕರಿಗೆ ಹಾಗೂ ಸಿನೆಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಕಲ್ಯಾಣಕ್ಕೆ ಪ್ರತ್ಯೇಕ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಇದರೊಂದಿಗೆ ಕಾರ್ಮಿಕರಿಗೆ ವಿಮಾ ಸೌಲಭ್ಯ ಯೋಜನೆ ಮತ್ತು ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆʼʼ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Continue Reading

ಬೆಂಗಳೂರು

Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Independence Day 2024: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದರು. ʼʼರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದೆ. ಕಾಂಗ್ರೆಸ್‌ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯʼʼ ಎಂದು ತಿಳಿಸಿದರು.

VISTARANEWS.COM


on

Independence Day 2024
Koo

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂ‍ಭ್ರಮ ಮನೆ ಮಾಡಿದೆ (Independence Day 2024). ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದರು.

ʼʼರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದೆ. ಕಾಂಗ್ರೆಸ್‌ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಮತ್ತೊಮ್ಮೆ ನಾನು ಘೋಷಣೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿ ಈ ಬಗ್ಗೆ ಭರವಸೆ ನೀಡಿದ್ದಾರೆ. ಹಾಗಾಗಿ ಈ ಘೋಷಣೆ ಮಾಡುತ್ತಿದ್ದೇನೆʼʼ ಎಂದು ಡಿಕೆಶಿ ತಿಳಿಸಿದರು.

ʼʼಸ್ವಾತಂತ್ರ್ಯೋತ್ಸವ ಎಂದರೆ ಹಿಂದೆ ಹೇಗಿದ್ವಿ ಈಗ ಹೇಗಿದ್ದೇವೆ ಎನ್ನುವುದನ್ನು ತಿಳಿಸುವ ದಿನ. ಸ್ವಾತಂತ್ರ್ಯ ಹಿನ್ನೆಲೆಯನ್ನು ನಾವು ಚರ್ಚೆ ಮಾಡದೇ ಇದ್ದರೆ ತಪ್ಪಾಗುತ್ತದೆ. ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಿ ಪಡೆಯಲು ಸಾಧ್ಯವಿಲ್ಲ. ದ್ವೇಷ ಅಸೂಯೆಯಿಂದ ಕೂಡಿದರೆ ಅದು ಸ್ವಾತಂತ್ರ್ಯ ಅಲ್ಲ ಅಂತ ನೆಹರೂ ಹೇಳಿದ್ದರು. ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷದಲ್ಲಿ ನಾವೆಲ್ಲ ಇದ್ದೇವೆ ಎಂಬುದೇ ಹೆಮ್ಮೆʼʼ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ʼʼನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುವವರು ನಮ್ಮ ನಡುವೆ ಇದ್ದಾರೆ. 6.50 ಲಕ್ಷ ಜನ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಸ್ವಾತಂತ್ರ್ಯವನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ. ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು 100 ವರ್ಷ ಆಗಿದೆ. ಇದಕ್ಕಾಗಿ ಸರ್ಕಾರ ಮತ್ತು ಪಕ್ಷ ಎರಡೂ ಸೇರಿ ವಿವಿಧ ಕಾರ್ಯಕ್ರಮ ರೂಪಿಸಲಿದೆʼʼ ಎಂದು ವಿವರಿಸಿದರು.

ʼʼದೇಶಕ್ಕೆ ಕಾಂಗ್ರೆಸ್‌ನ ಕೊಡುಗೆ ಏನು ಎಂದು ಹಲವರು ಕೇಳುತ್ತಾರೆ. ಆದರೆ ದೇಶಕ್ಕಾಗಿ ಕಾಂಗ್ರೆಸ್ ಕೊಡುಗೆ ನೀಡಿದ ಸಂಸ್ಥೆಗಳನ್ನು ಅವರೇ ಮಾರಾಟ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ದೇಶದ್ರೋಹಿಗಳ ಪರವಾಗಿ ನಿಂತು ದೇಶಪ್ರೇಮ ಪಾಠ ಮಾಡುವವರು ನಮ್ಮ ನಡುವೆ ಇದ್ದಾರೆʼʼ ಎಂದು ಡಿಕೆಶಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: Independence Day 2024: ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ; Live ಇಲ್ಲಿ ವೀಕ್ಷಿಸಿ

Continue Reading
Advertisement
Gold Rate Today
ಚಿನ್ನದ ದರ9 mins ago

Gold Rate Today: ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಿಲ್ಲ; ಇಂದಿನ ದರ ಇಷ್ಟಿದೆ

jyothi poorvaaj jyothi rai says she blocked 1 thousand accounts
ಸ್ಯಾಂಡಲ್ ವುಡ್23 mins ago

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

bike wheeling
ಬೆಂಗಳೂರು ಗ್ರಾಮಾಂತರ27 mins ago

Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

Independence Day 2024
ಕರ್ನಾಟಕ34 mins ago

Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

Independence Day 2024
ಕರ್ನಾಟಕ1 hour ago

Independence Day 2024: ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ರಾಜ್ಯ ಬದ್ಧ; ಸಿದ್ದರಾಮಯ್ಯ

Laughing Buddha Trailer out Pramod Shetty Diganth Rishab Shetty
ಸ್ಯಾಂಡಲ್ ವುಡ್2 hours ago

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Independence Day 2024
ಕರ್ನಾಟಕ2 hours ago

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024
ದೇಶ2 hours ago

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Golden Star Ganesh Krishnam Pranaya Sakhi review
ಸ್ಯಾಂಡಲ್ ವುಡ್2 hours ago

Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

Independence Day 2024
ಬೆಂಗಳೂರು3 hours ago

Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌