Site icon Vistara News

Independence Day | ಧ್ವಜಾರೋಹಣ ಮುಗಿಸಿ ಮನೆಗೆ ತೆರಳುವಾಗ ಅಪಘಾತ; ಮೆಡಿಕಲ್‌ ವಿದ್ಯಾರ್ಥಿ ಸಾವು

bike accident

ವಿಜಯಪುರ: ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು (Independence Day) ನೆರವೇರಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗಳಿಬ್ಬರಿದ್ದ ಬೈಕ್‌ ಅಪಘಾತಕ್ಕೀಡಾಗಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. 

ವಿಜಯಪುರದ ಸಾಯಿ ಪಾರ್ಕ್ ಸಂತ ಜೋಸೆಫ್ ಶಾಲೆ ಬಳಿ ಅಪಘಾತ ನಡೆದಿದ್ದು, ಸೌರಭ ಸಾರವಾಡ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

ಇವರು ಸರ್ಕಾರಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೈಕ್‌ನಲ್ಲಿ ವಾಪಸಾಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಆಗ ಸೌರಭ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Independence day | ತಡವಾಗಿ ಬಂದ ಸಾಲುಮರದ ತಿಮ್ಮಕ್ಕರನ್ನು ವಾಪಸ್‌ ಕಳುಹಿಸಿದ ಪೊಲೀಸರು

Exit mobile version