ಬೆಂಗಳೂರು: ಹಿಟ್ಟುವಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಅದ್ಧೂರಿಯಾಗಿ ಆಚರಿಸಲಾಗಿದ್ದು, ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಸಾಥ್ ನೀಡಿದೆ.
ಅಗಸ್ತ್ಯ ಸಂಚಾರಿ ಪ್ರಯೋಗಾಲಯವು ಈ ವೇಳೆ ಶಾಲೆಯಲ್ಲಿ ಮಕ್ಕಳಿಗೆ ಹಲವು ಕ್ರಿಯಾತ್ಮಕ ಚಟುವಟಿಕೆಯನ್ನು ನೀಡಿದೆ. ನಾಯಕತ್ವ ಗುಣ ಸೇರಿದಂತೆ ವೈಜ್ಞಾನಿಕವಾಗಿ ಕೆಲವು ವಿಷಯಗಳ ಕುರಿತು ಉಪಯುಕ್ತ ಮಾಹಿತಿಯನ್ನು ಈ ಸಂದರ್ಭದಲ್ಲಿ ಮಕ್ಕಳಿಗೆ ನೀಡಲಾಯಿತು.
ಮಕ್ಕಳನ್ನೂ ಸಹ ಕೆಲವು ಚಟುವಟಿಕೆಯಲ್ಲಿ ಭಾಗಿಯಾಗಿಸಿಕೊಂಡು ಅವರಿಗೆ ವಿಜ್ಞಾನದ ಕೌತುಕಗಳ ಬಗ್ಗೆ ಪ್ರಾಕ್ಟಿಕಲ್ ಮಾದರಿಯಲ್ಲಿ ಅರಿವು ಮೂಡಿಸಲಾಯಿತು. ಅಲ್ಲದೆ, ಮಕ್ಕಳು ಸಹ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಅಗಸ್ತ್ಯ ಪ್ರತಿಷ್ಠಾನದ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಇದನ್ನೂ ಓದಿ | Independence Day | ನ್ಯೂಯಾರ್ಕ್ ಆಲ್ಬನಿಯಲ್ಲಿ 75ನೇ ಭಾರತ ಸ್ವಾತಂತ್ರ್ಯೋತ್ಸವದ ಅದ್ಧೂರಿ ಆಚರಣೆ