ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಲ್ಲಿ ಇರುತ್ತಲೇ ಇದ್ದು, 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ (Independence Day) ಹಿನ್ನೆಲೆಯಲ್ಲಿ ಗ್ರಾಪಂ ಒಂದರಲ್ಲಿ ನಡೆದ ಕಾರ್ಯಕ್ರಮವು ವಿವಾದದ ಕೇಂದ್ರಬಿಂದುವಾಗಿದೆ.
ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾವರ್ಕರ್ ಫೋಟೊ ಹಿಡಿದು ನೃತ್ಯ ಮಾಡಿದ್ದೇ ಗೊಂದಲಕ್ಕೆ ಕಾರಣವಾಗಿದೆ. ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಂದ ಪ್ರದರ್ಶನವಾಗುತ್ತಿದ್ದ ನೃತ್ಯ ಕಾರ್ಯಕ್ರಮಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನೃತ್ಯದ ವೇಳೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೊ ಹಿಡಿದಿದ್ದಾರೆಂದು ತಗಾದೆ ತೆಗೆಯಲಾಗಿದೆ. ಈ ಕಾರಣಕ್ಕಾಗಿ ಪಂಚಾಯಿತಿ ಆಡಳಿತದವರು ಹಾಗೂ ಎಸ್‌ಡಿಪಿಐ ಮುಖಂಡರ ಜಟಾಪಟಿ ನಡೆದಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಇದನ್ನೂ ಓದಿ | Independence Day | ಫ್ರೀಡಂ ಪಾರ್ಕ್ ದಾಟಿ ಮುಂದೆ ಸಾಗಿದ ಕಾಂಗ್ರೆಸ್ ʻಫ್ರೀಡಂ ಮಾರ್ಚ್ʼ