Site icon Vistara News

Independence Day Shivamogga | ಸಾವರ್ಕರ್ ಫ್ಲೆಕ್ಸ್ ಧ್ವಂಸ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

Independence Day Shivamogga

ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನದಂದು (Independence Day Shivamogga) ಸಾವರ್ಕರ್​​ ಫ್ಲೆಕ್ಸ್ ಹಾಕಿದ್ದಕ್ಕೆ ಮತ್ತೊಮ್ಮೆ ಜಿಲ್ಲೆಯಲ್ಲಿ ಗಲಾಟೆ ನಡೆದಿದೆ. ಸಾವರ್ಕರ್ ಫ್ಲೆಕ್ಸ್ ಹಾಕಿದ್ದನ್ನು ಅನ್ಯ ಕೋಮಿನ ಯುವಕರು ವಿರೋಧ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ. ಈ ನಡೆಯನ್ನು ಹಿಂದುಪರ ಸಂಘಟನೆಗಳು ಖಂಡಿಸಿದ್ದು, ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Independence Day Shivamogga

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಹಸೀಲ್ದಾರ್ ನಾಗರಾಜ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಸೋಮವಾರ ಹಾಗೂ ಮಂಗಳವಾರ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ | ಶಿವಮೊಗ್ಗ ಸಾವರ್ಕರ್‌ ಫೋಟೊ ವಿವಾದ: ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಎಂ.ಡಿ ಷರೀಫ್‌ ಬಂಧನ

ಏನಿದು ಸಾವರ್ಕರ್‌ ಫ್ಲೆಕ್ಸ್‌ ವಾರ್‌?

75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್‌ ಹಾಕಲಾಗಿತ್ತು. ಫ್ಲೆಕ್ಸ್‌ಗೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಯುವಕರು ದಾಂಧಲೆ ನಡೆಸಿ ಅದನ್ನು ಕಿತ್ತು ಹಾಕಿದ್ದರು. ಅಲ್ಲದೆ, ಟಿಪ್ಪು ಸುಲ್ತಾನ್‌ ಫೋಟೋ ಇಡಲು ಮುಂದಾಗಿದ್ದಾರೆ. ಈ ವೇಳೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ಶುರುವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಅಲ್ಲದೆ, ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ವೀರ ಸಾವರ್ಕರ್‌ ಫೋಟೋ ತೆರವು ಮಾಡುತ್ತಿರುವ ಯುವಕರು

ಫ್ಲೆಕ್ಸ್‌ ತೆರವುಗೊಳಿಸಿದ ಬೆನ್ನಲ್ಲೇ ಹಿಂದುಪರ ಸಂಘಟನೆಗಳು ಸ್ಥಳಕ್ಕೆ ಆಗಮಿಸಿ ಅಸಮಾಧಾನ ವ್ಯಕ್ತಪಡಿಸಿದರು. ಜತೆಗೆ ಧರಣಿ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು. ಈ ಪ್ರದೇಶದಲ್ಲಿ ಹಿಂದೆಲ್ಲ ಟಿಪ್ಪು ಸುಲ್ತಾನ್ ಫೋಟೋ ಇರಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ವೀರ ಸಾವರ್ಕರ್ ಫೋಟೊ ಹಾಕಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಪೊಲೀಸರ ಲಾಠಿ ಚಾರ್ಜ್‌

ಇದನ್ನೂ ಓದಿ | ಟಿಪ್ಪು ಬ್ಯಾನರ್‌ಗಳಿಗೆ ಹಾನಿ ಪುನೀತ್‌ ಕೆರೆಹಳ್ಳಿ ಟೀಮ್‌ ಕೃತ್ಯ, ಶಿವಮೊಗ್ಗದಲ್ಲಿ ಸಾವರ್ಕರ್‌ ವಿರೋಧಿಸಿದ್ದಕ್ಕೆ ಪ್ರತೀಕಾರ

Exit mobile version