ದೇವನಹಳ್ಳಿ: ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ (Independence Day) ನಿಮಿತ್ತ ಧ್ವಜಾರೋಹಣ ನೆರವೇರಿಸಿದ ಸಚಿವ ಡಾ.ಕೆ.ಸುಧಾಕರ್ ಭಾಷಣ ಮಾಡುತ್ತಿದ್ದ ವೇಳೆ ತೀವ್ರ ವಿರೋಧ ವ್ಯಕ್ತಪಡಿಸಿದ ರೈತರು, ತ್ರಿವರ್ಣ ಧ್ವಜವಿಡಿದು ರೈತರಿಂದ ಪ್ರತಿಭಟನೆ ನಡೆಸಿದ್ದಾರೆ.
ಕೆಐಎಡಿಬಿಗೆ ಭೂಮಿ ನೀಡದಂತೆ ಒತ್ತಾಯಿಸಿ ರೈತರು ಹೋರಾಟ ಮಾಡುತ್ತಿದ್ದು, ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು. ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅನ್ನದಾತರು ಆಗ್ರಹಿಸಿದ್ದಾರೆ. ಕಳೆದ ಹಲವು ದಿನಗಳಿಂದ ರೈತರು ಈ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಭಾರಿ ರೈತರಿಂದ ಆಕ್ರೋಶ ವ್ಯಕ್ತವಾಗಿದ್ದು, ದೇವನಹಳ್ಳಿ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ತಳ್ಳಾಟ, ನೂಕಾಟಗಳು ನಡೆದಿವೆ.
ವೇದಿಕೆಯತ್ತ ನುಗ್ಗಲು ಮುಂದಾದ ರೈತರು
ತ್ರಿವರ್ಣ ಧ್ವಜ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರೈತರು ಒಂದು ಸಂದರ್ಭದಲ್ಲಿ ವೇದಿಕೆಯತ್ತ ನುಗ್ಗಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರು ತಡೆದಿದ್ದು, ಬಹಳಷ್ಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Independence Day 2022 | ದೇಶದ ಜನರಿಗೆ ದ್ರೌಪದಿ ಮುರ್ಮು ಸ್ವಾತಂತ್ರ್ಯ ದಿನದ ಶುಭಾಶಯ