Site icon Vistara News

Gauribidanur Election Results: ಗೌರಿಬಿದನೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್. ಪುಟ್ಟಸ್ವಾಮಿಗೌಡಗೆ ಭರ್ಜರಿ ಜಯ

Gauribidanur Election Results K H Puttaswamy Gowda wins

Gauribidanur Election Results K H Puttaswamy Gowda wins

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭಾ ಚುನಾವಣೆ (Gauribidanur Election Results) ಫಲಿತಾಂಶ ಬಿಡುಗಡೆಯಾಗಿದ್ದು, ಜಿಲ್ಲೆಯ ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್‌.ಪುಟ್ಟಸ್ವಾಮಿಗೌಡ ಗೆಲುವು ಪಡೆದಿದ್ದಾರೆ. ಇವರು 37,286 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಎನ್.ಎಚ್. ಶಿವಶಂಕರರೆಡ್ಡಿ‌ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

ಗೌರಿಬಿದನರಿನಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್.ಪುಟ್ಟಸ್ವಾಮಿಗೌಡ 83,837 ಮತಗಳು, ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಎಚ್‌.ಶಿವಶಂಕರರೆಡ್ಡಿ 46,551 ಮತಗಳು, ಜೆಡಿಎಸ್‌ ಅಭ್ಯರ್ಥಿ ಸಿ.ಆರ್.ನರಸಿಂಹಮೂರ್ತಿ 11,125 ಮತಗಳು, ಬಿಜೆಪಿ ಅಭ್ಯರ್ಥಿ ಎಚ್‌.ಎಸ್‌.ಶಶಿಧರ್ ಮೂರ್ತಿ 8,132 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ ಡಾ. ಕೆಂಪರಾಜು. ಕೆ 24,202 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ | Chikkaballapur Election Results : ಚಿಕ್ಕಬಳ್ಳಾಪುರದಲ್ಲಿ ಡಾ. ಕೆ ಸುಧಾಕರ್‌ರನ್ನು ಹೀನಾಯವಾಗಿ ಸೋಲಿಸಿದ ಪ್ರದೀಪ್‌ ಈಶ್ವರ್‌

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎನ್.ಎಚ್.ಶಿವಶಂಕರ ರೆಡ್ಡಿ 69,000 ಮತಗಳನ್ನು ಪಡೆದು ವಿಜಯಿಯಾಗಿದ್ದರು. ಜೆಡಿಎಸ್‌ ಅಭ್ಯರ್ಥಿ ಸಿ.ಆರ್.ನರಸಿಂಹಮೂರ್ತಿ 59,832 ಮತ, ಬಿಜೆಪಿಯ ಕೆ.ಜೈಪಾಲ್ ರೆಡ್ಡಿ 34,759 ಮತಗಳನ್ನು ಗಳಿಸಿದ್ದರು.

Exit mobile version