Indigo Negligence : ಇಂಡಿಗೋ ವಿಮಾನ ಎಡವಟ್ಟು, ಮಂಗಳೂರಿಗೆ ಬರಬೇಕಿದ್ದ 12 ಪ್ರಯಾಣಿಕರು ಮುಂಬೈನಲ್ಲೇ ಬಾಕಿ! - Vistara News

ಉಡುಪಿ

Indigo Negligence : ಇಂಡಿಗೋ ವಿಮಾನ ಎಡವಟ್ಟು, ಮಂಗಳೂರಿಗೆ ಬರಬೇಕಿದ್ದ 12 ಪ್ರಯಾಣಿಕರು ಮುಂಬೈನಲ್ಲೇ ಬಾಕಿ!

ಇಂಡಿಗೋ ವಿಮಾನಯಾನ ಸಂಸ್ಥೆ ಮಾಡಿದ ಎಡವಟ್ಟಿನಿಂದಾಗಿ (Indigo Negligence) ಮಂಗಳೂರಿಗೆ ಬರುತ್ತಿದ್ದ 12 ಪ್ರಯಾಣಿಕರು ಮುಂಬಯಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

IndiGo Flight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಇಂಡಿಗೋ ವಿಮಾನಯಾನ ಸಂಸ್ಥೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ (Indigo Negligence) ಮಂಗಳೂರಿಗೆ ಗುರುವಾರ ಬೆಳಗ್ಗೆ ತಲುಪಬೇಕಾಗಿದ್ದ ಸುಮಾರು 12 ಮಂದಿ ಪ್ರಯಾಣಿಕರು ಮುಂಬಯಿಯಲ್ಲೇ ಬಾಕಿಯಾಗಿದ್ದಾರೆ. ಹಲವು ಪ್ರಮುಖ ಕೆಲಸಗಳನ್ನು ಇಟ್ಟುಕೊಂಡು ಬಂದಿದ್ದವರು ಈಗ ಮುಂಬಯಿಯಲ್ಲಿ ಸಿಕ್ಕಿಬಿದ್ದಿದ್ದು, ಸಂಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಬೆಹರೈನ್‌ನಿಂದ ಬಂದಿದ್ದ ವಿಮಾನದ ಸಂಚಾರದಲ್ಲಿ ತಡವಾಗಿದ್ದು ಮತ್ತು ಮುಂಬಯಿಯಿಂದ ಮಂಗಳೂರಿಗೆ ಬರುವ ಕನೆಕ್ಟಿಂಗ್‌ ಫ್ಲೈಟ್‌ 12 ಮಂದಿ ಪ್ರಯಾಣಿಕರನ್ನು ಬಿಟ್ಟೇ ಹಾರಾಟ ನಡೆಸಿದ್ದು ಈ ಸಮಸ್ಯೆಗೆ ಮೂಲ ಕಾರಣ.

ಹಾಗಿದ್ದರೆ ಒಟ್ಟಾರೆ ಆಗಿದ್ದೇನು?

ಕರಾವಳಿಯ ಹನ್ನೆರಡು ಮಂದಿ ಪ್ರಯಾಣಿಕರು ಬೆಹರಿನ್‌ನಿಂದ ಬುಧವಾರ ರಾತ್ರಿ ಹೊರಡುವ ವಿಮಾನದಲ್ಲಿ ಟಿಕೆಟ್‌ ಬುಕ್‌ ಮಾಡಿದ್ದರು. ಎಲ್ಲರೂ ವಿಮಾನವನ್ನು ಹತ್ತಿ ಕುಳಿತಿದ್ದರೂ ಒಬ್ಬ ಪ್ರಯಾಣಿಕ ಮಾತ್ರ ಇನ್ನೂ ವಿಮಾನ ಏರಿರಲಿಲ್ಲ. ಬೋರ್ಡಿಂಗ್‌ನಲ್ಲಿ ಚೆಕ್‌ ಇನ್‌ ಮಾಡಿ ಲಗೇಜನ್ನು ದಾಟಿಸಿದ್ದರೂ ಆತ ಮಾತ್ರ ಕಾಣಿಸಿರಲಿಲ್ಲ.

ಆತ ಎಲ್ಲಿ ಹೋದ ಎಂದು ಎಲ್ಲ ಕಡೆ ತಪಾಸಣೆ ನಡೆಸಿ, ಮೈಕ್‌ನಲ್ಲಿ ಘೋಷಿಸಿದರೂ ಸಿಗಲಿಲ್ಲ. ಸುಮಾರು ಎರಡು ಗಂಟೆ ಕಾದ ಬಳಿಕ ಆತನ ಲಗೇಜನ್ನು ಕೆಳಗಿಳಿಸಿ ವಿಮಾನವನ್ನು ಹಾರಿಸಲಾಯಿತು. ಅಲ್ಲೇ ಎರಡು ಗಂಟೆ ತಡವಾಗಿದ್ದ ಹಿನ್ನೆಲೆಯಲ್ಲಿ ಮುಂಬಯಿಗೆ ಬೆಳಗ್ಗೆ 5.30ಕ್ಕೆ ತಲುಪಬೇಕಾಗಿದ್ದ ವಿಮಾನ ಲ್ಯಾಂಡ್‌ ಆಗುವಾಗ 7.30ಕ್ಕೆ ತಲುಪಿದೆ.

ಈ ನಡುವೆ ಮುಂಬಯಿಯಿಂದ ಮಂಗಳೂರಿಗೆ ಬರುವ ಇಂಡಿಗೋ ಕನೆಕ್ಟಿಂಗ್‌ ಫ್ಲೈಟ್‌ 7.45ಕ್ಕೆ ಹೊರಡಬೇಕಿತ್ತು. ಅಲ್ಲಿ ಎರಡು ಗಂಟೆ ವಿಳಂಬವಾಗಿದೆ. ವಿಮಾನ ತಡವಾಗಿ ಬಂದಿದೆ ಎನ್ನುವ ವಿಷಯ ತಿಳಿದಿದ್ದರೂ ಕನೆಕ್ಟಿಂಗ್‌ ವಿಮಾನವನ್ನು ಮಾತ್ರ ಸರಿಯಾದ ಸಮಯಕ್ಕೇ ಹಾರಿಸಲಾಗಿದೆ. ಹೀಗಾಗಿ ಬೆಹರೈನ್‌ನಿಂದ ಬಂದಿರುವ ಯಾವ ಕರಾವಳಿ ಪ್ರಯಾಣಿಕರಿಗೂ ಕನೆಕ್ಟಿಂಗ್‌ ಫ್ಲೈಟ್‌ ಸಿಗಲೇ ಇಲ್ಲ. ಅವರೆಲ್ಲ ಮುಂಬೈ ವಿಮಾನ ನಿಲ್ದಾಣದಲ್ಲಿ ಪರದಾಡಬೇಕಾದ ಸ್ಥಿತಿ ನಿರ್ಮಾಣವಾಯಿತು.

ಬೆಹರೈನ್‌ನಲ್ಲಿ ಎರಡು ಗಂಟೆ ಕಾಲ ಒಬ್ಬ ಪ್ರಯಾಣಿಕನಿಗಾಗಿ ಕಾದಿದ್ದ ಸಂಸ್ಥೆ, ಇಲ್ಲಿ ಒಂದರ್ಧ ಗಂಟೆ ಕಾದಿದ್ದರೆ ಏನಾಗುತ್ತಿತ್ತು ಎಂದು ಪ್ರಯಾಣಿಕರು ಪ್ರಶ್ನಿಸಿ ಜಗಳ ಮಾಡಿದರು. ಕೇವಲ 15 ನಿಮಿಷದಲ್ಲಿ ಒಂದು ವಿಮಾನದಿಂದ ಇನ್ನೊಂದು ವಿಮಾನಕ್ಕೆ ಶಿಫ್ಟ್‌ ಮಾಡುವುದು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ನಡುವೆ, ಮುಂಬಯಿಯಿಂದ ಮಂಗಳೂರಿಗೆ ಇಂಡಿಗೋ ಸಂಸ್ಥೆಯ ಮುಂದಿನ ವಿಮಾನ ಇರುವುದು ಸಂಜೆ 7 ಗಂಟೆಗೆ. ಅಲ್ಲಿವರೆಗೆ ಪ್ರಯಾಣಿಕರನ್ನು ಒಂದು ಹೋಟೆಲ್‌ನಲ್ಲಿ ಉಳಿಸಲಾಗಿದೆ. ನಾನಾ ಕಾರ್ಯಕ್ರಮಗಳನ್ನು ಗುರಿಯಾಗಿಟ್ಟುಕೊಂಡು ಊರಿಗೆ ಬಂದಿದ್ದವರಿಗೆ ಈ ವಿಮಾನ ಸಮಸ್ಯೆ ಭಾರಿ ತೊಂದರೆಯನ್ನು ಉಂಟು ಮಾಡಿದೆ. ಹೀಗಾಗಿ ಅವರೆಲ್ಲ ಇಂಡಿಗೊ ಸಂಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ಓದಿ : ಮದ್ಯದ ಬಾಟಲಿ ಹಿಡಿದು ವಿಮಾನದಲ್ಲಿ ಓಡಾಡುತ್ತ, ಅವ್ಯವಸ್ಥೆ ಸೃಷ್ಟಿಸಿದ ಇಬ್ಬರು ಪ್ರಯಾಣಿಕರು; ಈ ವರ್ಷದ 7ನೇ ಅಶಿಸ್ತಿನ ಕೇಸ್​ ಇದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain : ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮನೆ ಕುಸಿತ, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಗುಡ್ಡ ಕುಸಿತಕ್ಕೆ ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್ ಆಗಿದ್ದರಿಂದ ಇತ್ತ ಯಕ್ಷಗಾನ ಕಲಾವಿದನ ಮನೆಗೆ ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಕಾರವಾರ/ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ (Karnataka Rain) ಪ್ರಕರಣ ಹೆಚ್ಚಾಗುತ್ತಿದೆ. ರಸ್ತೆ ಮೇಲೆ ಗುಡ್ಡ ಕುಸಿದ ಪರಿಣಾಮ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಬಂದ್ ಆಗಿದೆ. ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ದೊಡ್ಡ ಮರ ಹಾಗೂ ಮಣ್ಣು ಬಿದ್ದಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರಿ ಮಳೆಗೆ ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್‌ ಶೆಟ್ಟಿ ಅವರ ಮನೆ ಕುಸಿದು ಬಿದ್ದಿದೆ. ನಂದನ ಶೆಟ್ಟಿ‌ ಮಂದಾರ್ತಿ ಮೇಳದಲ್ಲಿ ಯಕ್ಷಗಾನ ಕಲಾವಿದರಾಗಿದ್ದಾರೆ. ಮನೆ ಕುಸಿಯುವಾಗ ಅದೃಷ್ಟ ವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡು ಕಂಗಲಾಗಿರುವ ಕಲಾವಿದನ ಕುಟುಂಬವು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

karnataka Rain

ಕೊಡಗಿನಲ್ಲಿ ಇಲ್ಲೆಲ್ಲ ನಿಷೇಧ

ಮಹಾರಾಷ್ಟ್ರ ಫಾಲ್ಸ್ ದುರಂತದ ಬೆನ್ನೆಲ್ಲೆ ಪ್ರವಾಸಿ ತಾಣಗಳ ಬಗ್ಗೆ ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ಪ್ರವಾಸಿಗರು ಜಲಪಾತಗಳು, ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ನೀರಿನಲ್ಲಿ ಇಳಿದು ಕ್ರೀಡೆ, ಫೋಟೋ ತೆಗೆಯುವ ದುಸ್ಸಾಹಕ್ಕೆ ಕಡಿವಾಣ ಹಾಕಲಾಗಿದೆ. ಮಳೆಗಾಲದಲ್ಲಿ ಹೆಚ್ಚುತ್ತಿರುವ ಜಲ ಸಂಬಂಧಿ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. ನದಿಗಳಲ್ಲಿ ನಡೆಯುವ ರ‍್ಯಾಫ್ಟಿಂಗ್ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದಿದ್ದಾರೆ.

ಮನೆ ಮೇಲೆ ಬಿದ್ದ ರಸ್ತೆ ಬದಿಯ ತಡೆಗೋಡೆ; ಜೀಪ್ ಸಂಪೂರ್ಣ ಜಖಂ

ಚಿಕ್ಕಮಗಳೂರಿನಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮನೆಯ ಮೇಲೆ ರಸ್ತೆ ಬದಿಯ ತಡೆಗೋಡೆ ಬಿದ್ದು,
ಮನೆಯಂಗಳದಲ್ಲಿ ನಿಲ್ಲಿಸಿದ್ದ ಜೀಪ್ ಸಂಪೂರ್ಣ ಜಖಂಗೊಂಡಿದೆ. ಕಳಸ ತಾಲೂಕಿನ ಕಚ್ಚಿ ಗಾನೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಂಗನಾಥ್ ಎಂಬುವರ ಮನೆಗೆ ಹಾನಿಯಾಗಿದ್ದು, ಧರೆ ಇನ್ನಷ್ಟು ಕುಸಿಯುವ ಆತಂಕ ಹೆಚ್ಚಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಈ ತಾಣಗಳಿಗೆ ಹೋಗಬೇಡಿ

ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

ಶಾಲೆಗಳಿಗೆ ರಜೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Heart Attack: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಎಳೇ ಜೀವ ಬಲಿ; ಈ ಸಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

Heart Attack: ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

VISTARANEWS.COM


on

heart attack death
Koo

ಉಡುಪಿ: ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ (Heart Attack Death) ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು (SSLC Student Death) ಸಾವನ್ನಪ್ಪಿರುವ ಘಟನೆ ಉಡುಪಿ (Udupi news) ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಇತ್ತೀಚೆಗೆ ಕೊಡಗಿನಲ್ಲಿ ಯುವತಿಯೊಬ್ಬಳು ಹೀಗೇ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕ ಪೊನ್ನಪ್ಪ (24) ಮೃತ ದುರ್ದೈವಿ. ಕರ್ತವ್ಯಕ್ಕೆಂದು ಮನೆಯಿಂದ ಹೊರಟಾಗ ಹೃದಯ ಬಡಿತವೇ ನಿಂತು ಹೋಗಿದೆ. ಎದೆ ನೋವೆಂದು ಒದ್ದಾಡಿದ ನಿಲಿಕ ಕುಸಿದು ಬಿದ್ದಿದ್ದಳು. ಕೂಡಲೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ದೃಢಪಡಿಸಿದ್ದರು.

ಶ್ರೀಶೈಲ ಪಾದಯಾತ್ರೆ‌ಗೆ (Srisailam Padayatra) ಹೊರಟ್ಟಿದ್ದ ಯುವಕನೊಬ್ಬ ದಾರಿ ಮಧ್ಯೆ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದು ಕೂಡ ಇತ್ತೀಚೆಗೆ ವರದಿಯಾಗಿತ್ತು. ರಾಯಚೂರಿನ ಮಾನ್ವಿ ತಾಲೂಕಿನ ಚಿಕ್ಕ ಕೊಟ್ನೆಕಲ್ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಮೂಲದ 22 ವರ್ಷದ ಪಾದಯಾತ್ರಾರ್ಥಿ ವಿಶ್ರಾಂತಿಗಾಗಿ ತಂಗಿದ್ದಾಗ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಮ್ಮಡ ಗ್ರಾಮದ ಶ್ರೀಶೈಲ ದಡೂತಿ ಮೃತ ದುರ್ದೈವಿ.

ಇತ್ತೀಚೆಗೆ ಯುವಜನತೆಯಲ್ಲೇ ಇಂಥ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗುತ್ತಿದ್ದು, ಆತಂಕ ಮೂಡಿಸಿದೆ. ಹೃದಯವು ಯಾವ ಕ್ಷಣದಲ್ಲಿ ಆಘಾತಕ್ಕೆ (Heart Attack) ಒಳಗಾಗುತ್ತದೆ ಎಂದು ಅಂದಾಜಿಸಲೂ ಸಾಧ್ಯವಿಲ್ಲದಾಗಿದೆ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿ ಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಹೃದಯ ಸ್ತಬ್ಧವಾಗುವುದು. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ಕಾಣಲಾಗುತ್ತಿದೆ. ಕೊರೊನಾ ವೈರಸ್‌ ದಾಳಿಯ ಬಳಿಕ ಇಂಥ ಪ್ರಕರಣಗಳು ಹೆಚ್ಚಿವೆ ಎಂಬುದನ್ನು ವೈದ್ಯಲೋಕ ಕೂಡ ದೃಢಪಡಿಸಿದೆ.

ಇದನ್ನೂ ಓದಿ: Silent Heart Attack: ಏನಿದು ಸೈಲೆಂಟ್‌ ಹಾರ್ಟ್‌ ಅಟ್ಯಾಕ್‌? ಇದರ ಲಕ್ಷಣಗಳೇನು?

Continue Reading
Advertisement
Rohit Sharma
ಕ್ರಿಕೆಟ್39 seconds ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ55 mins ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ59 mins ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Team India
ಪ್ರಮುಖ ಸುದ್ದಿ2 hours ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ2 hours ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ2 hours ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ2 hours ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ2 hours ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ2 hours ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು2 hours ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ6 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ7 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ9 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ9 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ11 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ11 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌