indira-canteen Menu now includes Mangalore buns, Bread jam Indira Canteen: ಬದಲಾಗಲಿದೆ ಇಂದಿರಾ ಕ್ಯಾಂಟೀನ್‌ ಮೆನು; ಸಿಗಲಿದೆ ಬನ್ಸ್‌, ಬ್ರೆಡ್‌ ಜಾಮ್! - Vistara News

ಕರ್ನಾಟಕ

Indira Canteen: ಬದಲಾಗಲಿದೆ ಇಂದಿರಾ ಕ್ಯಾಂಟೀನ್‌ ಮೆನು; ಸಿಗಲಿದೆ ಬನ್ಸ್‌, ಬ್ರೆಡ್‌ ಜಾಮ್!

Indira Canteen: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳ ಮೆನುವಿನಲ್ಲಿ ಬದಲಾವಣೆ ಮಾಡಿ ಹೊಸ ಆಹಾರ ಸೇರಿಸಲಾಗಿದೆ. ಏನಿದೆ ಹೊಸತು.. ನೀವೇ ನೋಡಿ

VISTARANEWS.COM


on

Indira Canteen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳನ್ನು (Indira canteen) ಬಲಪಡಿಸುವ ವಾಗ್ದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಈಡೇರಿಸುವ ಹಾದಿಯಲ್ಲಿದ್ದಾರೆ. ಇದರ ಮೊದಲ ಹಂತವಾಗಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಗುಣಮಟ್ಟದ ಶುಚಿ-ರುಚಿ ಊಟ ನೀಡಲು ನಿರ್ಧರಿಸಲಾಗಿದೆ.

ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಐಟಂಗಳ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದ್ದು ಬೆಳಗ್ಗಿನ ತಿಂಡಿಯ ಮೆನುವಿನಲ್ಲಿ ಬ್ರೆಡ್ ಜಾಮ್ ಹಾಗೂ ಮಂಗಳೂರು ಬನ್ಸ್ ಸೇರ್ಪಡೆಯಾಗಿದೆ. ಮಧ್ಯಾಹ್ನದ ಊಟದಲ್ಲಿ ದಕ್ಷಿಣ ಕರ್ನಾಟಕ ಶೈಲಿ ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ಪ್ರಸಿದ್ಧವಾದ ಮುದ್ದೆ, ಸೊಪ್ಪು ಸಾರು ನೀಡಲು ಸೇರಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ ಊಟಕ್ಕೆ ಸಿಗಲಿದೆ ಒಂದು ಸಿಹಿ ಪಾಯಸ ಅಥವಾ ಸಿಹಿ ತಿಂಡಿ ನೀಡಲು ತೀರ್ಮಾನಿಸಲಾಗಿದೆ.

ಮಧ್ಯಾಹ್ನದ ಊಟಕ್ಕೆ ಸಿಗಲಿದೆ ಪಾಯಸ

ಇಂದಿರಾ ಕ್ಯಾಂಟಿನ್‌ನಲ್ಲಿ ಮಧ್ಯಾಹ್ನದ ಊಟಕ್ಕೆ ಪಾಯಸವನ್ನು ನೀಡಲು ಬಿಬಿಎಂಪಿ ಮೆನು ಪಟ್ಟಿಯಲ್ಲಿ ಹೊಸದಾಗಿ ಪಾಯಸವನ್ನು ಸೇರ್ಪಡೆ ಮಾಡಿದೆ. ಒಂದು ದಿನ ಬಿಟ್ಟು ದಿನ ಮುದ್ದೆ ಊಟ ಒದಗಿಸುವ ಕುರಿತು ನಿರ್ಧಾರ ಮಾಡಲಾಗಿದೆ. ಮುದ್ದೆ ಇಲ್ಲದ ದಿನ ಚಪಾತಿ, ಸಾಗು ಊಟ ನೀಡಲು ಹೊಸ ಮೆನು ಮೂಲಕ ಯೋಜನೆ ಮಾಡಲಾಗಿದೆ. ಊಟ ಒದಗಿಸುವ ಏಜೆನ್ಸಿಗಳು ಈ ಹೊಸ ಮೆನುವಿನಲ್ಲಿರುವ ಊಟವನ್ನು ಕೊಡಲು ಫೈನಲ್ ಆಗುತ್ತಿದ್ದಂತೆ ಹೊಸ ಮೆನು ಪ್ರಕಾರ ಊಟ ಜಾರಿಗೆ ಬರಲಿದೆ ಎನ್ನಲಾಗಿದೆ.

ಹಾಗಿದ್ದರೆ ಮೂರೂ ಹೊತ್ತಿನ ಮೆನುವಿನಲ್ಲಿ ಏನೇನು ಇರುತ್ತದೆ?

ಬೆಳಗ್ಗಿನ ತಿಂಡಿಗಳು ಇವು ನೋಡಿ, ರೇಟೂ ಜಾಸ್ತಿಯಾಗಿದೆ.
ಇಡ್ಲಿ, ಪುಳಿಯೊಗರೆ, ಖಾರಾಬಾತ್, ಪೊಂಗಲ್‌ ರವಾ ಕಿಚಡಿ, ಚಿತ್ರಾನ್ನ, ವಾಂಗಿಬಾತ್‌, ಕೇಸರಿಬಾತ್‌ ನೀಡಲಾಗುತ್ತಿತ್ತು. ಬ್ರೆಡ್‌ ಜಾಮ್‌ ಮತ್ತು ಮಂಗಳೂರು ಬನ್ಸ್‌ ಹೆಚ್ಚುವರಿ ಸೇರ್ಪಡೆ ಆಗಲಿದೆ. ಈ ನಡುವೆಮ ಈವರೆಗೆ ಬೆಂಗಳೂರಿನಲ್ಲಿ ಬೆಳಗ್ಗಿನ ತಿಂಡಿಗೆ ಕೇವಲ 5 ರೂ. ಇದ್ದು, ಅದನ್ನು ರೂ.10ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.

ಮಧ್ಯಾಹ್ನದ ಊಟದಲ್ಲಿ ಏನೇನಿರುತ್ತದೆ?
ಮಧ್ಯಾಹ್ನ ಊಟದಲ್ಲಿ ಅನ್ನ, ತರಕಾರಿ ಸಾಂಬಾರ್‌ ಮತ್ತು ಮೊಸರನ್ನ ಮಾತ್ರ ನೀಡಲಾಗುತ್ತಿತ್ತು. ಈಗ ಅದರ ಜೊತೆಗೆ ಹೊಸದಾಗಿ ಸಿಹಿ ಪಾಯಸ ಮತ್ತು ದಿನ ಬಿಟ್ಟು ದಿನ ಮುದ್ದೆ, ಸೊಪ್ಪುಸಾರು ಊಟ ಹಾಗೂ ಮುದ್ದೆ ಇಲ್ಲ ದಿನ ಚಪಾತಿ, ಸಾಗು ನೀಡಲು ಮೆನು ಸಿದ್ಧಪಡಿಸಲಾಗಿದೆ.

ರಾತ್ರಿ ಊಟಕ್ಕೆ ಏನೇನು ಇರಲಿದೆ?
ಟೊಮೆಟೋ ಬಾತ್‌, ಮೊಸರನ್ನ, ವಾಂಗಿಬಾತ್‌, ಬಿಸಿಬೆಳೆ ಬಾತ್, ಮೆಂತ್ಯೆ ಪಲಾವ್‌, ಪುಳಿಯೊಗರೆ, ಪಲಾವ್‌ ನೀಡಲಾಗುತ್ತಿದೆ. ಅದನ್ನೇ ಮುಂದುವರೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಇದು ಹಿಂದಿನದೇ ಮೆನು ಆಗಿದೆ.

ಇದನ್ನೂ ಓದಿ: Indira Canteen : ಇನ್ನು ಮುಂದೆ ಇಂದಿರಾ ಕ್ಯಾಂಟೀನ್‌ನಲ್ಲಿ ಮಾಂಸಾಹಾರಕ್ಕೂ ಅವಕಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಗೆದ್ದಿರುವುದರಿಂದ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರದೀಪ್‌ ಈಶ್ವರ್‌ ಅವರು ಸಲ್ಲಿಸಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಅದು ನಕಲಿ ಎಂಬುದು ಗೊತ್ತಾಗಿದೆ.

VISTARANEWS.COM


on

Pradeep Eshwar
Koo

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ (Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಸುಧಾಕರ್‌ ಅವರಿಗೆ ಈ ಗೆಲುವು ರಾಜಕೀಯದಲ್ಲಿ ಪುನರ್ಜನ್ಮ ಸಿಕ್ಕಂತಾಗಿದೆ. ಇದರ ಬೆನ್ನಲ್ಲೇ, ಸುಧಾಕರ್‌ ಅವರು ಒಂದೇ ಒಂದು ಮತದಿಂದ ಗೆದ್ದರೂ ರಾಜೀನಾಮೆ ನೀಡುತ್ತೇನೆ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ವಿರುದ್ಧ ಆಕ್ರೋಶ, ಟ್ರೋಲ್‌, ಮೀಮ್‌ಗಳು ಹರಿದಾಡುತ್ತಿವೆ. ಇದರ ಮಧ್ಯೆಯೇ, ಪ್ರದೀಪ್‌ ಈಶ್ವರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಇದು ನಕಲಿ ಪೋಸ್ಟ್‌ ಎಂಬುದು ಬಳಿಕ ಗೊತ್ತಾಗಿದೆ.

ಪತ್ರದಲ್ಲಿ ಏನಿದೆ?

“ಬಾಲ್ಯದಿಂದಲೇ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು, ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ.ಸುಧಾಕರ್‌ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್‌ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್‌ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ, ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ” ಎಂಬ ಪತ್ರವು ವೈರಲ್‌ ಆಗಿದೆ.

ವೈರಲ್‌ ಆಗಿರುವ ರಾಜೀನಾಮೆ ಪತ್ರ

ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಿರುವ ಕುರಿತು ವೈರಲ್‌ ಆದ ಪತ್ರವನ್ನು ಪರಿಶೀಲನೆ ನಡೆಸಲಾಗಿದ್ದು, ಅದು ನಕಲಿ ರಾಜೀನಾಮೆ ಪತ್ರ ಎಂಬುದಾಗಿ ತಿಳಿದುಬಂದಿದೆ. ಆದಾಗ್ಯೂ, ಪ್ರದೀಪ್‌ ಈಶ್ವರ್‌ ಅವರು ಸುಧಾಕರ್‌ ಕುರಿತು ಹೇಳಿದ್ದ ಹಳೆಯ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿದ ಮಾತಿನಂತೆ ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಬೇಕು ಎಂದು ಜನರು, ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಸುಧಾಕರ್‌ ಗೆಲುವಿನ ಕುರಿತು ಪ್ರದೀಪ್‌ ಈಶ್ವರ್‌ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Continue Reading

ಕರ್ನಾಟಕ

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

Dr C N Manjunath: ಬಿಜೆಪಿ ಅಭ್ಯರ್ಥಿಗೆ (Dr C N Manjunath) ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ ಕೆ ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ ಸಿ ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

VISTARANEWS.COM


on

Dr C N Manjunath
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ (Bangalore Rural Election Result 2024) ಮೂರು ಬಾರಿ ಸಂಸದರಾಗಿ ಭಾರಿ ಅಂತರದಿಂದ ಆಯ್ಕೆಯಾಗಿದ್ದ ಡಿ.ಕೆ. ಸುರೇಶ್‌ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ (Dr C N Manjunath) ಅವರ ವಿರುದ್ಧ ಭಾರಿ ಅಂತರದಿಂದ ಸೋತಿದ್ದಾರೆ. ವಿಶೇಷ ಅಂದರೆ ಡಿ.ಕೆ. ಸುರೇಶ್‌ ಅವರಿಗೆ ಅವರ ಹುಟ್ಟೂರು ಕನಕಪುರದಲ್ಲಿ ಮಾತ್ರ 25,677 ಮತಗಳ ಲೀಡ್‌ ಸಿಕ್ಕಿದೆ. ರಾಮನಗರದಲ್ಲಿ ಸಿಕ್ಕಿರುವುದು ಕೇವಲ 145 ಮತಗಳ ಮುನ್ನಡೆ.‌ ಇವೆರಡು ಕ್ಷೇತ್ರಗಳನ್ನು ಬಿಟ್ಟರೆ ಉಳಿದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಡಾ. ಸಿ ಎನ್‌ ಮಂಜುನಾಥ್‌ ಅವರಿಗೇ ಲೀಡ್‌ ಸಿಕ್ಕಿದೆ.

ಬಿಜೆಪಿ ಅಭ್ಯರ್ಥಿಗೆ ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ.ಕೆ. ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿ. ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ | Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

ಬೆಂಗಳೂರು ಹೊರಗಿನ ಮಾಗಡಿ, ಚನ್ನಪಟ್ಟಣ, ಕುಣಿಗಲ್‌, ಆನೇಕಲ್‌ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಡಾ.ಸಿ. ಎನ್‌. ಮಂಜುನಾಥ್‌ ಅವರೇ 25 ರಿಂದ 35 ಸಾವಿರದ ತನಕ ಮುನ್ನಡೆ ಸಾಧಿಸಿದ್ದಾರೆ. ಆದರೆ ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್‌ ಅವರಿಗೆ ಭಾರೀ ಹಿನ್ನಡೆಯಾಗಿದೆ. ಡಾ.ಸಿ. ಎನ್‌. ಮಂಜುನಾಥ್‌ ಅವರಿಗೆ ರಾಜರಾಜೇಶ್ವರಿ ನಗರದಲ್ಲಿ 98,997 ಮತಗಳ ಭಾರಿ ಲೀಡ್‌ ಸಿಕ್ಕಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 97,129 ಮತಗಳ ಮುನ್ನಡೆ ಸಿಕ್ಕಿದೆ. ಹೀಗೆ ಬೆಂಗಳೂರು ನಗರದಲ್ಲೇ ಬಿಜೆಪಿ ಅಭ್ಯರ್ಥಿಗೆ ಸುಮಾರು 2 ಲಕ್ಷ ಮತಗಳ ಮುನ್ನಡೆ ಸಿಕ್ಕಂತಾಗಿದೆ. ಇದರ ಪರಿಣಾಮವಾಗಿ ಡಿ.ಕೆ. ಸುರೇಶ್‌ ಅವರು ಭಾರಿ ಅಂತರದಿಂದ ಸೋತಿದ್ದಾರೆ. ಡಾ. ಮಂಜುನಾಥ್‌ ಅವರಿಗೆ ಶೇ.56.2ರಷ್ಟು ಮತಗಳು ಸಿಕ್ಕಿದ್ದರೆ, ಡಿ ಕೆ ಸುರೇಶ್‌ ಅವರಿಗೆ ಶೇ.42.2ರಷ್ಟು ಮತಗಳು ಲಭಿಸಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತಗಳ ವಿಧಾನಸಭೆ ಕ್ಷೇತ್ರವಾರು ಪಟ್ಟಿ ಈ ಕೆಳಗಿನಂತಿದೆ.

ಒಟ್ಟು ಮತ ಗಳಿಕೆ
ಡಾ. ಮಂಜುನಾಥ್: 1078914
ಡಿ.ಕೆ.ಸುರೇಶ್: 809324
ಗೆಲುವಿನ ಅಂತರ: 2,69,590

ರಾಮನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 91,945
ಡಿ.ಕೆ.ಸುರೇಶ್: 92,090
ಕ್ಷೇತ್ರದ ಲೀಡ್: 145 (ಕಾಂಗ್ರೆಸ್)

ಮಾಗಡಿ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,13,911
ಡಿ.ಕೆ.ಸುರೇಶ್: 83,938
ಕ್ಷೇತ್ರದ ಲೀಡ್: 29973(ಬಿಜೆಪಿ)

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್:106971
ಡಿ.ಕೆ.ಸುರೇಶ್: 85357
ಕ್ಷೇತ್ರದ ಲೀಡ್: 21,614 (ಬಿಜೆಪಿ)

ಕನಕಪುರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 83,303
ಡಿ.ಕೆ.ಸುರೇಶ್: 1,08,980
ಕ್ಷೇತ್ರದ ಲೀಡ್: 25677 (ಕಾಂಗ್ರೆಸ್)

ಕುಣಿಗಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 97,248
ಡಿ.ಕೆ.ಸುರೇಶ್: 73,410
ಕ್ಷೇತ್ರದ ಲೀಡ್: 23,838 (ಬಿಜೆಪಿ)

ಅನೇಕಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,37,693
ಡಿ.ಕೆ.ಸುರೇಶ್: 1,15,328
ಕ್ಷೇತ್ರದ ಲೀಡ್: 22,365 (ಬಿಜೆಪಿ)

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 2,55,756
ಡಿ.ಕೆ.ಸುರೇಶ್: 1,58,627
ಕ್ಷೇತ್ರದ ಲೀಡ್: 97,129 (ಬಿಜೆಪಿ)

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,88,726
ಡಿ.ಕೆ.ಸುರೇಶ್: 89,729
ಕ್ಷೇತ್ರದ ಲೀಡ್: 98,997 (ಬಿಜೆಪಿ)

ಇದನ್ನೂ ಓದಿ | ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

Continue Reading

ಕೊಪ್ಪಳ

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

World Environment Day: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾರಟಗಿ ತಾಲೂಕು ಪಂಚಾಯಿತಿ ಆವರಣದಲ್ಲಿ ತಾ.ಪಂ ಹಾಗೂ ಸಾಮಾಜಿಕ ಅರಣ್ಯ ವಲಯ ಗಂಗಾವತಿ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

VISTARANEWS.COM


on

World Environment Day celebration in karatagi
Koo

ಕಾರಟಗಿ: ಪರಿಸರವನ್ನು (World Environment Day) ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ತಿಳಿಸಿದರು.

ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ತಾ.ಪಂ. ಹಾಗೂ ಸಾಮಾಜಿಕ ಅರಣ್ಯ ವಲಯ ಗಂಗಾವತಿ ಅವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಇದನ್ನೂ ಓದಿ: World Environment Day: ಇಂದು ವಿಶ್ವ ಪರಿಸರ ದಿನ; ಭೂಮಿಯನ್ನು ಉಳಿಸಲು ಈ 5 ಸೂತ್ರ ಪಾಲಿಸೋಣ

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ. ಈ ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಇತ್ಯಾದಿಗಳು ಎಂದೆಂದಿಗೂ ಉಳಿಯಬೇಕು. ನಾವೆಲ್ಲರೂ ಅವಲಂಬಿತರಾಗಿರುವುದು ಈ ಪರಿಸರ, ಅದಕ್ಕಾಗಿ ಪರಿಸರವನ್ನು ಸಂರಕ್ಷಿಸಲು ‌ಮುಂದಾಗಬೇಕು ಎಂದು ಹೇಳಿದರು.

ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಮಾತನಾಡಿ, ಪರಿಸರದ ಕಾಳಜಿ ಹಾಗೂ ಪರಿಸರದ ಮಹತ್ವವನ್ನು ತಿಳಿಸಿ ನಾವೆಲ್ಲರೂ ಪರಿಸರ ಸ್ನೇಹಿಯಾಗಿ ಬಾಳೋಣ ಎಂದು ತಿಳಿಸಿದರು.

ನಂತರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ಸಸಿಗಳನ್ನು ನೆಡಲಾಯಿತು.

ಇದನ್ನೂ ಓದಿ: SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

ಈ ಸಂದರ್ಭದಲ್ಲಿ ತಾ.ಪಂ‌ ಸಹಾಯಕ ನಿರ್ದೇಶಕಿ ವೈ. ವನಜಾ, ಉಪ ವಲಯ ಅರಣ್ಯ ಅಧಿಕಾರಿ ಕವಿತಾ ನಾಯಕ, ತಾಲೂಕಿನ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ. ವಿವಿಧ ಯೋಜನೆಗಳ ವಿಷಯ ನಿರ್ವಾಹಕರು, ನರೇಗಾ, ತಾ.ಪಂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವು, ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು 2024-25ನೇ ಸಾಲಿನಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ ಇಡಲು ಮುಂದಾಗಿದೆ.

VISTARANEWS.COM


on

500 Rs deposit in the name of new admission children by old students of Government Kannada School Lingasugur
Koo

ರಾಯಚೂರು: ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಮುಂದಾಗಿರುವ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವು, 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ ಇಡುವುದರ ಜತೆಗೆ ಶಾಲಾ ಬ್ಯಾಗ್ ವಿತರಿಸಿ ಗಮನ ಸೆಳೆದಿದೆ. ಈ ಮೂಲಕ ಸರ್ಕಾರಿ ಶಾಲೆಯತ್ತ ಮಕ್ಕಳನ್ನು ಸೆಳೆಯಲು ವಿನೂತನ ಪ್ರಯತ್ನಕ್ಕೆ (Raichur News) ಮುಂದಾಗಿದೆ.

ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವು, ಈ ವಿನೂತನ ಕಾರ್ಯಕ್ಕೆ ಮುಂದಾಗಿದೆ. ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಘದಿಂದ ವಿನೂತನ ಯೋಜನೆಗಳನ್ನು ಹಾಕಿಕೊಳ್ಳಲಾಯಿತು.

ಇತ್ತೀಚೆಗೆ ಕುಸಿದಿದ್ದ ಮಕ್ಕಳ ದಾಖಲಾತಿ ಸಂಖ್ಯೆ

70ರ ದಶಕದಲ್ಲಿ ಸ್ಥಾಪನೆಯಾದ ದೇವರಭೂಪುರ ಸರ್ಕಾರಿ ಕನ್ನಡ ಶಾಲೆಯಲ್ಲಿ ಆರಂಭದಲ್ಲಿ ಇದ್ದಂತಹ ಉತ್ಸಾಹ ಬಳಿಕ ಕಳೆ ಗುಂದಿತ್ತು. 1ನೇ ತರಗತಿಯಿಂದ 8ನೇ ತರಗತಿವರೆಗೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ‌ ಶಾಲೆಯು ಶಿಕ್ಷಕರು ಮತ್ತು ಮೂಲಸೌಕರ್ಯ ಕೊರತೆಯಿಂದಾಗಿ ಮಕ್ಕಳ ದಾಖಲಾತಿ ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಕುಸಿದಿದೆ. ಮತ್ತೊಂದು ಕಡೆ ಶಾಲೆಗೆ ದಾಖಲಾದರೂ ಮಕ್ಕಳು ತರಗತಿಗಳ ಕಡೆಗೆ ಮುಖ ಮಾಡುತ್ತಿಲ್ಲ.

ಇದನ್ನೂ ಓದಿ: Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

ಹೀಗಾಗಿ ಅವನತಿಯತ್ತ ಸಾಗುತ್ತಿರುವ ಸರ್ಕಾರಿ ಶಾಲೆ ಉಳಿವಿಗೆ ಅದೇ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು “ಹಳೇ ಬೇರು ಹೊಸ ಚಿಗುರು” ಎಂಬ ಹೆಸರಿನಲ್ಲಿ ಸಂಘವೊಂದನ್ನು ಸ್ಥಾಪಿಸಿಕೊಂಡು ಮರಳಿ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಮತ್ತು ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಳ ಮಾಡಲು ನಾನಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಅದರ ಭಾಗವಾಗಿ ಇಂದು ಹೊಸದಾಗಿ ಒಂದನೇ ತರಗತಿಗೆ ದಾಖಲಾತಿ ಪಡೆದ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡಿ, ಒಂದೊಂದು ಮಗುವಿನ ಹೆಸರಲ್ಲಿ 500 ರೂಪಾಯಿ ಠೇವಣಿ ಇಡುವ ಕೆಲಸ ಮಾಡಲಾಯಿತು.

ಅಲ್ಲದೇ ಇನ್ನು ಮುಂದೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ತರಬೇತಿ ಕಾರ್ಯಾಗಾರ ಸಂಘಟಿಸುವುದು. ಶಾಲೆಯ ಸ್ಮಾರ್ಟ್ ಕ್ಲಾಸ್‌ಗೆ ಸಿದ್ಧತೆ, ಡಿಜಿಟಲ್ ಗ್ರಂಥಾಲಯ ಸೌಕರ್ಯ, ಸುಸಜ್ಜಿತ ಆಟದ ಮೈದಾನ ಸೇರಿದಂತೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಆ ಮೂಲಕ ದಾನಿಗಳ ನೆರವಿನೊಂದಿಗೆ ಶಾಲೆ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು ಶ್ರಮಿಸುತ್ತಿದ್ದಾರೆ. ಇದರೊಂದಿಗೆ ಒಂದನೇ ತರಗತಿಯಿಂದಲೇ ದಾಖಲಾತಿ ಹೆಚ್ಚಿಸುವ ಪ್ರಯತ್ನಕ್ಕೂ ಕೈಹಾಕಿದ್ದಾರೆ. ಇದೇ ವೇಳೆ ವಿಶ್ವ ಪರಿಸರ ದಿನಾಚರಣೆ ಹಿನ್ನಲೆ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ಇದನ್ನೂ ಓದಿ: Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

6 ಮಕ್ಕಳ ಪ್ರವೇಶ

ಈ ಬಾರಿ ಶಾಲೆ ಆರಂಭೋತ್ಸವ ದಿನವೇ 6 ಮಕ್ಕಳು ಪ್ರವೇಶ ಪಡೆದಿದ್ದಾರೆ. ಠೇವಣಿ ಇರಿಸುವುದು ಸಣ್ಣ ಪ್ರಯತ್ನವಷ್ಟೇ. ನಮಗೆ ಲಭ್ಯವಿರುವ ಸೌಕರ್ಯ ಬಳಸಿಕೊಂಡು ಒಂದು ವರ್ಷದ ಅವಧಿಯಲ್ಲಿ ಕೈಗೊಂಡ ಶೈಕ್ಷಣಿಕ ಕಾರ್ಯಕ್ರಮ ಮೆಚ್ಚಿ ಮಕ್ಕಳು ನಮ್ಮ ಶಾಲೆಗೆ ಬರುತ್ತಿದ್ದಾರೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘ ತಿಳಿಸಿದೆ.

ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪಾ ಮಾತನಾಡಿ, ಶಾಲೆಯ ಶಿಕ್ಷಕರೆಲ್ಲ ಸೇರಿಕೊಂಡು ದಾಖಲಾತಿ ಅಭಿಯಾನ ನಡೆಸುತ್ತಿದ್ದೇವೆ. ವಿವಿಧ ತರಗತಿಗಳ ಪ್ರವೇಶಕ್ಕೂ ಹಲವರು ಸಂಪರ್ಕಿಸಿದ್ದು, ಈ ವಾರ ಮಕ್ಕಳ ದಾಖಲಾತಿ 40 ದಾಟಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಅಮರೇಶ್ವರ ಗುರು ಗಜದಂಡ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

ಈ ವೇಳೆ ಬಿಇಒ ಹುಂಬಣ್ಣ ರಾಠೋಡ, ಇಸಿಒ ಬಸವರಾಜ ಕರಡಿ, ಸಿಆರ್‌ಪಿ ಮಂಜುನಾಥ ಹೂಗಾರ, ಎಸ್‌ಡಿಎಂಸಿ ಅಧ್ಯಕ್ಷ ಶಂಕರಗೌಡ, ಹಿರಿಯರಾದ ಅಮರೇಗೌಡ, ಪಿಡಿಒ ಬಸವರಾಜ ವಸ್ತ್ರದ ಸೇರಿದಂತೆ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದವರು ಉಪಸ್ಥಿತರಿದ್ದರು.

Continue Reading
Advertisement
Odisha
ದೇಶ29 mins ago

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Pradeep Eshwar
ಕರ್ನಾಟಕ1 hour ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ2 hours ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ2 hours ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ2 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ3 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ3 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

500 Rs deposit in the name of new admission children by old students of Government Kannada School Lingasugur
ಕರ್ನಾಟಕ3 hours ago

Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Koti Movie
ಸಿನಿಮಾ3 hours ago

Koti Movie: ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್; ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ

Belagavi Election Result 2024
ಬೆಳಗಾವಿ3 hours ago

ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌