ಬೆಂಗಳೂರು: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ನಿಗಮವು ಗುಡ್ ನ್ಯೂಸ್‌ವೊಂದನ್ನು (KSRTC) ನೀಡಿದೆ. ಪ್ರತಿ ತಿಂಗಳ 1ನೇ ತಾರೀಖಿಗೆ ಸಂಬಳ ಸಿಬ್ಬಂದಿ ಕೈ ಸೇರಲಿದೆ. ಅಕ್ಟೋಬರ್ 1ರಿಂದ ಚಾಚೂ ತಪ್ಪದೇ ಆದೇಶ ಪಾಲಿಸುವಂತೆ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಸೂಚನೆ ನೀಡಿದ್ದಾರೆ.
ಪ್ರಥಮ ಬಾರಿಗೆ ಚಾಲಕ, ನಿರ್ವಾಹಕ, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಪ್ರತಿ ನೌಕರರಿಗೂ ಪ್ರತಿ ತಿಂಗಳ 01ರಂದೇ ವೇತನವನ್ನು ಪಾವತಿ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಈ ಸಂಬಂಧ ಸಿಬ್ಬಂದಿ ವೇತನ ಬಿಲ್ಲುಗಳನ್ನು ತಯಾರಿಸುವಾಗ ಹಾಜರಾತಿ, ರಜೆ ಮಂಜೂರಾತಿ ಆದೇಶ, ಹೆಚ್ಚುವರಿ ಭತ್ಯೆ (OT) ಮುಂತಾದ ದಾಖಲಾತಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ವೇತನದ ಬಿಲ್ಲನ್ನು ಸಿದ್ಧಪಡಿಸುವಂತೆ ಡಿಪೋ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ.
ಕೋವಿಡ್ ಕಾರಣದಿಂದಾಗಿ ನಿಗಮದ ಆರ್ಥಿಕ ಪರಿಸ್ಥಿತಿಯು ಕ್ಲಿಷ್ಟಕರವಾಗಿದ್ದಾಗ್ಯೂ ಸಹ, ನಿಗಮದ ಕಾರ್ಮಿಕ ಸಿಬ್ಬಂದಿ ಹಿತದೃಷ್ಟಿಯಿಂದ ಈ ನೂತನ ಉಪಕ್ರಮವನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ವಿಭಾಗಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ ಸಿಬ್ಬಂದಿ ಪ್ರತಿ ತಿಂಗಳ 01ರಂದೇ ವೇತನವನ್ನು ಪಡೆಯಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಲಾಗಿದೆ.
ಇದನ್ನೂ ಓದಿ | Heavy Rain | ಭಾರಿ ಮಳೆಗೆ ನಾಗಮಂಗಲದಲ್ಲಿ 20ಕ್ಕೂ ಕೆಎಸ್‌ಆರ್‌ಟಿಸಿ ಬಸ್ ಮುಳುಗಡೆ