International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ - Vistara News

ಕರ್ನಾಟಕ

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

International Yoga Day 2024:  ತನಗಾಗಿ, ಸಮಾಜದ ಸ್ವಾಸ್ತ್ಯಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

VISTARANEWS.COM


on

International Yoga Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಪ್ರತಿ ವರ್ಷ ಜೂನ್ 21ರಂದು ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಹತ್ತು ವರ್ಷಗಳಿಂದ ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದು ಪ್ರತಿಯೊಬ್ಬರೂ ತಮ್ಮ ದೈನಂದಿನ ದಿನಚರಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ವೇಗದ ಜಗತ್ತಿನಲ್ಲಿ ಆಂತರಿಕ ಶಾಂತಿ ಮತ್ತು ಸಮತೋಲನಕ್ಕೆ ದಾರಿಯನ್ನು ತೋರುತ್ತದೆ. ಹಾಗಾದರೆ ಕರ್ನಾಟಕದಲ್ಲಿ ಹೇಗಿತ್ತು ಯೋಗಾಭ್ಯಾಸ ಇಲ್ಲಿದೆ ಅದರ ಸಣ್ಣ ಝಲಕ್‌..

International Yoga Day 2024

ವಿಜಯನಗರದ ಹೊಸಪೇಟೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಯೋಗದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಯೋಗ ಗುರು ಭವರಲಾಲ್ ಆರ್ಯ ಸೇರಿದಂತೆ ನೂರಾರು ಯೋಗಪಟುಗಳು ಭಾಗಿಯಾದರು.

International Yoga Day 2024

ಇತ್ತ ಬಳ್ಳಾರಿಯ ಜಿಂದಾಲ್‌ನಲ್ಲಿ ನೂರಾರು ಜನರು ಏಕಕಾಲಕ್ಕೆ ಯೋಗಾಭ್ಯಾಸ ಮಾಡಿದರು. ಸಿಎಂ ಸಿದ್ದರಾಮಯ್ಯ, ವಚನಾನಂದ ಶ್ರೀ, ಅವಧೂತ ವಿನಯ್ ಗುರೂಜಿ ಸಾಥ್‌ ನೀಡಿದ್ದರು.

ವಿಜಯಪುರದ ಅಂಬೇಡ್ಕರ್ ಮೈದಾನದಲ್ಲಿ ಯೋಗ ದಿನಾಚರಣೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭಾಗಿಯಾದರು. ಜಿಲ್ಲಾಧಿಕಾರಿಗಳು ಟಿ ಬೂಬಾಲನ್, ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ ಸೇರಿ ಸಾವಿರಾರು ವಿದ್ಯಾರ್ಥಿಗಳು ಯೋಗದ ಮಹತ್ವ ಸಾರಿದ್ದರು.

International Yoga Day 2024

ಇತ್ತ ಧಾರವಾಡದ ಆರ್ ಎನ್ ಶೆಟ್ಟಿ ಒಳಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ನಡೆಸಲಾಯಿತು. ಮೊದಲು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ನಿನ್ನೆ ಸಂಜೆ ಸುರಿದ ಮಳೆಯಿಂದಾಗಿ ಒಳಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿ ದಿವ್ಯಾ ಪ್ರಭು ಹಾಗೂ ಜಿಪಂ ಸಿ ಈ ಓ ಡಿಕೆ ಸ್ವರೂಪ ಭಾಗಿಯಾದರು.

International Yoga Day 2024  

ಧಾರವಾಡದ ಎಪಿಎಂಸಿಯಲ್ಲಿ ಸೋಬಾನ ಪದ ಹಾಡಿ ವಿಭಿನ್ನವಾಗಿ ಯೋಗ ದಿನವನ್ನು ಆಚರಿಸಲಾಯಿತು. ಯೋಗವನ್ನು ಬೀಸುವ ಕಲ್ಲಿನ ಬಗೆಯಲ್ಲಿ ಆಚರಿಸಿದರು. ಒಬ್ಬರಿಗೊಬ್ಬರು ಕೈಹಿಡಿದು ಜಾನಪದ ಹಾಡನ್ನು ಹಾಡಿ ಆಚರಿಸಲಾಯಿತು.

ಬೆಳಗಾವಿಯಲ್ಲಿ 10ನೇ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೆಪಿಟಿಸಿಎಲ್ ಭವನದಲ್ಲಿ ನಡೆಸಲಾಯಿತು. ಮಳೆಯಿಂದ ಕೆಪಿಟಿಸಿಎಲ್ ಭವನದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಸಾಥ್‌ ನೀಡಿದ್ದರು.

ಕೊಡಗಿನಲ್ಲೂ ಯೋಗ ಗುರು ಮಹೇಶ್ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಕೊಡಗು ಡಿಸಿ, ಎಸ್‌ಪಿ, ಸಿಇಓ ಸೇರಿ ಯೋಗಾಭ್ಯಾಸ ಮಾಡಿದರು.

International Yoga Day 2024

ಬಾಗಲಕೋಟೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಯೋಗ ದಿನಾಚರಣೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್ ಭಾಗಿಯಾದರು. ವಿವಿಧ ಯೋಗ ಭಂಗಿಗಳ ಮೂಲಕ‌ ಯೋಗ ಪಟುಗಳು ಗಮನ ಸೆಳೆದರು. ಯೋಗದಲ್ಲಿ ಎಲ್ಲ ವಯೋಮಾನದವರು ಭಾಗಿಯಾಗಿದ್ದರು. ಡಿಸಿ ಜಾನಕಿ ಕೆ.ಎಮ್, ಸಿಇಒ ಶಶಿಧರ್ ಕುರೇರ, ಎಸ್ಪಿ ಅಮರನಾಥ್ ರೆಡ್ಡಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

International Yoga Day 2024

ಕೊಪ್ಪಳ ಜಿಲ್ಲಾಡಳಿತ, ಪತಂಜಲಿ ಯೋಗ ಸಮಿತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಯೋಗ ದಿನನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್, ಜಿ.ಪಂ. ಸಿಇಓ ರಾಹುಲ್ ರತ್ನಂ ಪಾಂಡೆಯ ಸೇರಿದಂತೆ ಹಲವರು ಭಾಗಿಯಾಗಿದ್ದರು. ಯೋಗಪಟುಗಳು, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಯೋಗ ಪ್ರದರ್ಶಿಸಿದರು.

ತುಮಕೂರಿನಲ್ಲಿ ಯೋಗ ದಿನಾಚರಣೆಗೆ ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ ನೀಡಿದರು. ತುಮಕೂರಿನ ಡಿಎಆರ್ ಪೊಲೀಸ್ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ‌ ಸಿಇಓ ಜಿ.ಪ್ರಭು, ಎಸ್ ಪಿ ಅಶೋಕ್ ಸೇರಿದಂತೆ ಹಲವರು ಸಾಥ್ ನೀಡಿದ್ದರು.

International Yoga Day 2024

ಯಾದಗಿರಿಯ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಮೈದಾನದಲ್ಲಿ ಯೋಗ ದಿನಾಚರಣೆ ಹಿನ್ನೆಲೆ ಗಿಡಕ್ಕೆ ನೀರುಣಿಸುವ ಮೂಲಕ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಚಾಲನೆ ನೀಡಿದರು. ಡಿಸಿ ಡಾ.ಸುಶೀಲಾ, ಎಸ್ಪಿ ಸಂಗೀತಾ ಭಾಗಿಯಾಗಿದ್ದರು. ಯೋಗದಲ್ಲಿ ನೂರಾರು ವಿದ್ಯಾರ್ಥಿಗಳು ಮಗ್ನರಾಗಿದ್ದರು. ಕೊಡಗು, ಚಿಕ್ಕಮಗಳೂರು, ಗದಗದಲ್ಲೂ ಯೋಗಾಭ್ಯಾಸ ನಡೆದಿದೆ.

International Yoga Day 2024

ಕಲಬುರಗಿಯ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಯೋಗಾ ದಿನಾಚರಣೆಯಲ್ಲಿ ಸಾವಿರಾರು ಜನರು ಭಾಗಿಯಾಗಿದರು. ಇತ್ತ ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಎಸ್ಪಿ ಬಿ ಎಸ್ ನೇಮಗೌಡ, ಎಡಿಸಿ ಅನ್ನಪೂರ್ಣಾ, ನಗರಸಭೆ ಅಧ್ಯಕ್ಷೆ ಉಷಾ ದಾಸರ್ ಭಾಗಿಯಾಗಿದ್ದರು.

ತನಗಾಗಿ, ಸಮಾಜದ ಸ್ವಾಸ್ತ್ಯಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಮಂಡ್ಯ ನಗರದ ಪಿಇಟಿ ಕ್ರೀಡಾಂಗಣದಲ್ಲಿ ಯೋಗಾ ಪಂತಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬೇಬಿ ಮಠದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಆದಿಚುಂಚನಗಿರಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಡಿಸಿ ಡಾ. ಕುಮಾರ,ಎಸ್ಪಿ ಎನ್.ಯತೀಶ್, ಸಿಇಓ ವೇದಿಕೆ ಮೇಲೆ ವಿವಿಧ ಬಗೆಯ ಯೋಗ ಪ್ರದರ್ಶಿಸಿದರು.

ಮೈಸೂರು ಜಿಲ್ಲಾಡಳಿತ ಮತ್ತು ಆಯುಷ್ ಇಲಾಖೆ ವತಿಯಿಂದ ಅರಮನೆ ಮುಂಭಾಗದಲ್ಲಿ ಯೋಗಾ ದಿನಾಚರಣೆ ಆಚರಿಸಲಾಯಿತು. ಅರಮನೆ ಆವರಣದಲ್ಲಿ ಯೋಗಪಟುಗಳು ಮತ್ತು ಸಾರ್ವಜನಿಕರು ಯೋಗ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಶಾಸಕ ಶ್ರೀವತ್ಸ, ಸಂಸದ ಯದುವೀರ್ ಒಡೆಯರ್, ಎಂಎಲ್ಸಿ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಪಂ ಸಿಇಒ ಗಾಯಿತ್ರಿ ಮತ್ತಿತರರು ಭಾಗಿಯಾಗಿದ್ದರು.

ಚಿಕ್ಕಮಗಳೂರಿನ ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆದಿದೆ. ಶಾಲಾ ಮಕ್ಕಳು, ಯೋಗಪಟುಗಳು,ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಸಿರಿಗೆರೆ ಪೀಠದ ಡಾ, ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ವೆಂಕಟೇಶ್, ಎಸ್ ಪಿ ಉಮಾ ಪ್ರಶಾಂತ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿದರು.

ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ‌ ನಡೆಯುತ್ತಿರುವ ಯೋಗ ದಿನಾಚರಣೆಯಲ್ಲಿ ನೂತನ ಸಂಸದ ಮಲ್ಲೇಶ್ ಬಾಬು ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಭಾಗಿಯಾದರು. ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಶಾಸಕ‌ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ‌ಯೋಗ ದಿನವನ್ನು ಆಚರಿಸಲಾಯಿತು. ನೃಪತುಂಗ ಬೆಟ್ಟದ ತಪ್ಪಲಿನಲ್ಲಿ‌ ಯೋಗಾಸನ‌ ಮಾಡಲಾಯಿತು.

ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗಿಯಾದರು. ಹಾವೇರಿಯಲ್ಲಿ ಇನ್ನರ್ ವೀಲ್ ಕ್ಲಬ್ ನಿಂದ ಯೋಗ ದಿನಾಚರಣೆಯಲ್ಲಿ ನೂರಾರು ಮಹಿಳಾ ಯೋಗಪಟುಗಳು ಭಾಗಿಯಾದರು. ಹಾಸನದಲ್ಲಿಯೂ ಯೋಗ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಎಂಪಿ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ ಸಾಥ್‌ ನೀಡಿದರು. ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ‌ ವಿವಿಧ ಯೋಗ ಭಂಗಿಗಳ ಮೂಲಕ ಯೋಗಪಟುಗಳು ಕಣ್ಮನ ಸೆಳೆದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್‌ನ ಎರಡು ಉತ್ಪನ್ನಗಳಾದ ಪಂಚ್ ಮತ್ತು ನೆಕ್ಸಾನ್ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಾಗಿ ಹೊರಹೊಮ್ಮಿರುವುದರಿಂದ ಆರ್ಥಿಕ ವರ್ಷ 24 ಅನ್ನು ಅತ್ಯುತ್ತಮ ರೀತಿಯಲ್ಲಿ ಆರಂಭಿಸಿದೆ. ಟಾಟಾ ನೆಕ್ಸಾನ್ ರೇಸ್‌ನಲ್ಲಿ ಇದ್ದಂತೆ ಪೋಲ್ ಪೊಸಿಷನ್ ಅನ್ನು ಪಡೆದುಕೊಂಡಿದ್ದು, ಈ ವಿಭಾಗದಲ್ಲಿ ಸತತ ಮೂರು ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದೆ.

VISTARANEWS.COM


on

Tata Motors has taken the lead in the SUV market with Nexon Punch
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕರಲ್ಲಿ ಒಂದಾದ ಟಾಟಾ ಮೋಟಾರ್ಸ್ (Tata Motors) ಅದರ ಎರಡು ಉತ್ಪನ್ನಗಳಾದ ಪಂಚ್ ಮತ್ತು ನೆಕ್ಸಾನ್ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಾಗಿ ಹೊರಹೊಮ್ಮಿರುವುದರಿಂದ ಆರ್ಥಿಕ ವರ್ಷ 24 ಅನ್ನು ಅತ್ಯುತ್ತಮ ರೀತಿಯಲ್ಲಿ ಮುಕ್ತಾಯಗೊಳಿಸಿದೆ. ಟಾಟಾ ನೆಕ್ಸಾನ್ ರೇಸ್‌ನಲ್ಲಿ ಇದ್ದಂತೆ ಪೋಲ್ ಪೊಸಿಷನ್ ಅನ್ನು ಪಡೆದುಕೊಂಡಿದ್ದು, ಈ ವಿಭಾಗದಲ್ಲಿ ಸತತ ಮೂರು ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದೆ. ವಿಭಾಗದಲ್ಲಿ ಭಾರಿ ಸ್ಪರ್ಧೆಯ ಹೊರತಾಗಿಯೂ ಪಂಚ್ ಎರಡನೇ ಸ್ಥಾನದಲ್ಲಿದೆ.

Tata Punch

ಟಾಟಾ ನೆಕ್ಸಾನ್ ಇತ್ತೀಚೆಗೆ ತನ್ನ 7ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ 7 ಲಕ್ಷ ಯುನಿಟ್ ಮಾರಾಟದ ಮೈಲಿಗಲ್ಲನ್ನು ಸಾಧಿಸಿದ್ದು, ಇದು ಭಾರತದ ಅತ್ಯಂತ ಪ್ರೀತಿಪಾತ್ರ ಎಸ್‌ಯುವಿ ಆಗಿದೆ.

ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಇತ್ತೀಚಿನ ವರ್ಷಗಳಲ್ಲಿ ಗಮನಾರ್ಹ ಬೆಳವಣಿಗೆಯನ್ನು ಪ್ರದರ್ಶಿಸಿದೆ. ಈ ವಿಭಾಗವು ಅತ್ಯಂತ ಸ್ಪರ್ಧಾತ್ಮಕ ಮತ್ತು ತೀವ್ರ ಪೈಪೋಟಿಯ ವಿಭಾಗವಾಗಿದೆ ಮತ್ತು ಟಾಟಾ ಮೋಟಾರ್ಸ್ ಈ ವಿಭಾಗದಲ್ಲಿರುವ ನಾಯಕರಲ್ಲಿ ಒಬ್ಬರಾಗಿದೆ. ನೆಕ್ಸಾನ್ ಮತ್ತು ಪಂಚ್‌ಗಾಗಿ ವಿವಿಧ ಆವಿಷ್ಕಾರಗಳನ್ನು ಪರಿಚಯಿಸಲು ಕಂಪನಿಯು ಮಾಡಿರುವ ಪ್ರಯತ್ನಗಳನ್ನು ಗಮನಿಸಬಹುದಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

2017ರಲ್ಲಿ ಪ್ರಾರಂಭವಾದಾಗಿನಿಂದಲೂ ನೆಕ್ಸಾನ್ ತನ್ನ ವಿಶಿಷ್ಟತೆ ಮತ್ತು ಔಟ್ ಆಫ್ ದಿ ಬಾಕ್ಸ್ ಗುಣ ಅಂದರೆ ವಿಭಿನ್ನತೆಯನ್ನು ಬಯಸುವ ಗ್ರಾಹಕರನ್ನು ಆಕರ್ಷಿಸಿದೆ ಮತ್ತು ಇದು ಅತ್ಯುತ್ತಮವಾದ ಕಾರ್ಯಕ್ಷಮತೆ ಮತ್ತು ಸೌಕರ್ಯವನ್ನು ಒದಗಿಸುತ್ತದೆ. ನೆಕ್ಸಾನ್‌ನ ಭವಿಷ್ಯಕ್ಕೆ ಸಲ್ಲುವ ವಿನ್ಯಾಸ, ಉನ್ನತ ಸುರಕ್ಷತಾ ಫೀಚರ್‌ಗಳು ಮತ್ತು ಸ್ಥಿರವಾದ ಬೆಳವಣಿಗೆಯಿಂದ ಇದು ಭಾರತೀಯ ಗ್ರಾಹಕರ ಜನಪ್ರಿಯ ಆಯ್ಕೆಯಾಗಿದೆ ಮತ್ತು ವಿಶ್ವಾಸಾರ್ಹತೆಯ ಖ್ಯಾತಿಯನ್ನು ಗಳಿಸಿದೆ.

ನೆಕ್ಸಾನ್ 2018 ರ ಭಾರತದ ಮೊದಲ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಪಡೆದ ವಾಹನವಾಗಿದೆ, ಆ ಮೂಲಕ ಇದು ಎಲ್ಲಾ ಭಾರತೀಯ ಆಟೋಮೊಬೈಲ್‌ಗಳಿಗೆ ಅನುಸರಿಸಲು ಮಾನದಂಡವನ್ನು ಸ್ಥಾಪಿಸಿದೆ. ಅಂದಿನಿಂದ ಇಂದಿನವರೆಗೂ ಪರಂಪರೆ ಮುಂದುವರಿದಿದೆ. 2024ರ ಫೆಬ್ರವರಿಯಲ್ಲಿ ಹೊಸ ಜನರೇಷನ್‌ನ ನೆಕ್ಸಾನ್ ವರ್ಧಿತ 2022 ಪ್ರೋಟೋಕಾಲ್ ಪ್ರಕಾರ ತನ್ನ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿತು. ಅದರ ಬೆನ್ನಲ್ಲೇ ನೆಕ್ಸಾನ್.ಇವಿ ಈ ತಿಂಗಳು ಭಾರತ್- ಎನ್‌ಸಿಎಪಿಯಿಂದ ಪ್ರತಿಷ್ಠಿತ 5-ಸ್ಟಾರ್ ರೇಟಿಂಗ್ ಅನ್ನು ಪಡೆಯಿತು.

ಭಾರತೀಯ ರಸ್ತೆಗಳಲ್ಲಿ 7 ಲಕ್ಷ ನೆಕ್ಸಾನ್‌ ಇವೆ ಮತ್ತು ನೆಕ್ಸಾನ್ 41 ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿವೆ. ಅದರ ಅತ್ಯದ್ಭುತ ಕಾರ್ಯಕ್ಷಮತೆ ಅದರ ಮಾರಾಟದ ಬೆಳವಣಿಗೆಯಲ್ಲಿ ಪ್ರಮುಖ ಕೊಡುಗೆ ನೀಡಿರುವುದು ಎಲ್ಲರೂ ಗಮನಿಸಬಹುದಾಗಿದೆ. ಕಳೆದ ಎರಡು ವರ್ಷಗಳಲ್ಲಿ (2022 ಮತ್ತು 2023) ನೆಕ್ಸಾನ್ ನ 3 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟವಾಗಿವೆ. ನೆಕ್ಸಾನ್ ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ನ ಬಹು ಪವರ್‌ಟ್ರೇನ್‌ಗಳಲ್ಲಿ ಲಭ್ಯವಿದೆ. ನೆಕ್ಸಾನ್ ಕಾಲ ಕಾಲಕ್ಕೆ ದೃಢವಾಗಿ ಬೆಳೆದಿದೆ ಮತ್ತು ಅದರ ವಿಭಾಗ ಪ್ರಮುಖ ವಿನ್ಯಾಸ, ವಿಭಾಗದ ಅತ್ಯುತ್ತಮ ಫೀಚರ್ ಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದಾಹಿ ನಿಷ್ಠಾವಂತ ಅಭಿಮಾನಿಗಳನ್ನು ಗಳಿಸಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಟಾಟಾ ಪಂಚ್: ಮತ್ತೊಂದೆಡೆ ಟಾಟಾ ಪಂಚ್ ಎಸ್‌ಯುವಿ ಗುಣಲಕ್ಷಣಗಳನ್ನು ಎಲ್ಲರೂ ಮೆಚ್ಚುವಂತೆ ಮಾಡಿದೆ. ಪಂಚ್‌ನ ಅದ್ಭುತ ವಿನ್ಯಾಸ, ಸೌಕರ್ಯ ಮತ್ತು ಅಪ್ರತಿಮ ಸಾಮರ್ಥ್ಯವು ಈಗಾಗಲೇ ಕಾರು ಹೊಂದಿರುವ ಮತ್ತು ಮೊದಲ ಬಾರಿಯ ಕಾರು ಖರೀದಿದಾರರಿಗೂ ಆಸಕ್ತಿ ಹುಟ್ಟುವಂತೆ ಮಾಡುತ್ತದೆ.

ಪಂಚ್ ಎಸ್‌ಯುವಿಯು ಅದ್ಭುತ ನಿಲುವು, ವಿಶಾಲವಾದ ಇಂಟೀರಿಯರ್‌ಗಳು ಮತ್ತು ವಿಭಾಗದಲ್ಲಿಯೇ ಅತ್ಯುನ್ನತ ಸುರಕ್ಷತಾ ರೇಟಿಂಗ್ (ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್) ಅನ್ನು ಹೊಂದಿದ್ದು, ನಿಸ್ಸಂದೇಹವಾಗಿ ಸಮಗ್ರ ಪ್ಯಾಕೇಜ್ ಹೊಂದಿರುವ ಕಾರ್ ಆಗಿದೆ. ಅದಲ್ಲದೆ, ಪಂಚ್.ಇವಿ ಇತ್ತೀಚೆಗೆ 5-ಸ್ಟಾರ್ ಬಿ ಎನ್ ಸಿ ಎ ಪಿ ರೇಟಿಂಗ್ ಅನ್ನು ಪಡೆದುಕೊಂಡಿದೆ, ಆ ಮೂಲಕ ಇದು ಭಾರತದ ಸುರಕ್ಷಿತ ಇವಿ ವಾಹನ ಎಂಬ ಹೆಗ್ಗಳಿಕೆ ಗಳಿಸಿದೆ.

ಒಟ್ಟಾರೆಯಾಗಿ, ಪಂಚ್ ಉಪ-ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮುಂಚೂಣಿ ಸಾಧಿಸಿದೆ ಮತ್ತು ಆರ್ಥಿಕ ವರ್ಷ 24ರಲ್ಲಿ ಶ್ಲಾಘನೀಯ 170,076 ಯುನಿಟ್‌ಗಳನ್ನು ಮಾರಾಟ ಮಾಡಿದೆ ಮತ್ತು ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ. ಮಾರ್ಚ್ 2024ರ ಸಮಯದಲ್ಲಿ ಪಂಚ್ ಉದ್ಯಮದಲ್ಲಿ #1 ಮಾರಾಟವಾದ ಕಾರು ಎಂಬ ಮನ್ನಣೆ ಗಳಿಸಿತ್ತು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಭಾರತದಲ್ಲಿನ ಕಾಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆಯು ಕಳೆದ ಕೆಲವು ವರ್ಷಗಳಲ್ಲಿ ಗಣನೀಯ ಬೆಳವಣಿಗೆಯನ್ನು ಕಂಡಿದೆ. ಮಾರುಕಟ್ಟೆಯ ಸ್ಥಿರ ಬೆಳವಣಿಗೆಯಿಂದ ಈ ವಿಚಾರ ವ್ಯಕ್ತವಾಗಿದೆ. ಉದ್ಯಮವು ಈ ವಿಭಾಗದಲ್ಲಿ ಮಾರುಕಟ್ಟೆ ಪಾಲಿನಲ್ಲಿ 4% ರಿಂದ 7%ಗೆ ಏರಿಕೆ ಕಂಡಿದೆ ಮತ್ತು ದೊಡ್ಡ ಎಸ್‌ಯುವಿ ಮಾರುಕಟ್ಟೆಯಲ್ಲಿ, ಮಾರುಕಟ್ಟೆ ಪಾಲು 8% ರಿಂದ 14%ಗೆ ಬೆಳೆದಿದೆ. ಈ ಅಭಿವೃದ್ಧಿಯು ಆಟೋಮೋಟಿವ್ ಕ್ಷೇತ್ರದಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳ ಹೆಚ್ಚುತ್ತಿರುವ ಬೇಡಿಕೆ ಮತ್ತು ಅದರ ಮೇಲೆ ಹೆಚ್ಚುತ್ತಿರುವ ಆಕರ್ಷಣೆಯನ್ನು ಸಾರುತ್ತದೆ ಮತ್ತು ಉದ್ಯಮದಲ್ಲಿ ಪ್ರಮುಖ ಶಕ್ತಿಯಾಗಿ ಅದರ ಸ್ಥಾನವನ್ನು ಗಟ್ಟಿಗೊಳಿಸುತ್ತದೆ.

Continue Reading

ಪ್ರಮುಖ ಸುದ್ದಿ

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

DK Shivakumar: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ ಎಂದಿದ್ದಾರೆ.

VISTARANEWS.COM


on

DCM DK Shivakumar latest statement about CM change issue
Koo

ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

ಸಚಿವ ಸ್ಥಾನ ಬಿಡಲು ಸಿದ್ಧ, ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ

ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

Continue Reading

ಕರ್ನಾಟಕ

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Kannada New Movie: ಟರ್ಬೋ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ: ಎಂಬ ಹೊಸ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದಾರೆ.

VISTARANEWS.COM


on

roopantara Movie First Look Poster released
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ” ಎಂಬ ಹೊಸ ಚಿತ್ರದ (Kannada New Movie) ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ರಾಜ್ ಬಿ. ಶೆಟ್ಟಿ, ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಅವರು ಸಾಬೀತುಪಡಿಸಿದ್ದಾರೆ.

ಮತ್ತೆ ಒಂದಾದ ʼಮೊಟ್ಟೆʼ ತಂಡ

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ʼಒಂದು ಮೊಟ್ಟೆಯ ಕಥೆʼ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ. ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನು ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ “ರೂಪಾಂತರ” ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುದ್ದ ಫಿಲಂಮ್ಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಬಾಲಕೃಷ್ಣ ಅರ್ವನಕರ್ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Hosur Airport: ಹೂಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯಕವಾಗಿದೆ ಎಂಬುದಾಗಿ ತಮಿಳುನಾಡು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ. ಸುಮಾರು 2 ಸಾವಿರ ಎಕರೆಯಲ್ಲಿ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಗುರಿ ಹೊಂದಲಾಗಿದೆ.

VISTARANEWS.COM


on

Hosur Airport
Koo

ಚೆನ್ನೈ: ಕರ್ನಾಟಕದ ಬೆಂಗಳೂರಿನಿಂದ (Bengaluru) ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ (Tamil Nadu) ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Hosur Airport) ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ (MK Stalin) ಘೋಷಣೆ ಮಾಡಿದ್ದಾರೆ. ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂಬುದಾಗಿ ಘೋಷಣೆ ಮಾಡಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು ಆಧುನಿಕ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದನ್ನು ಆರ್ಥಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಇದೆ. ಹೊಸೂರಿಗಾಗಿ ಹೊಸ ಮಾಸ್ಟರ್‌ ಪ್ಲಾನ್‌ ಕೂಡ ಅಂತಿಮ ಹಂತಕ್ಕೆ ಬಂದಿದೆ. ಹೂಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯಕವಾಗಿದೆ” ಎಂಬುದಾಗಿ ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್‌ ತಿಳಿಸಿದರು.

MK Stalin

ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ವರ್ಷಕ್ಕೆ ಸುಮಾರು 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ರೀತಿಯಲ್ಲಿ ಏರ್‌ಪೋರ್ಟ್‌ ನಿರ್ಮಿಸಲಾಗುತ್ತದೆ ಎಂಬುದಾಗಿ ಅವರು ಹೇಳಿದ್ದಾರೆ. ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣವಾದರೆ ಬೆಂಗಳೂರಿನ ಕೋರಮಂಗಲ, ಎಲೆಕ್ಟ್ರಾನಿಕ್‌ ಸಿಟಿ ಸೇರಿ ಹಲವು ನಗರಗಳ ನಾಗರಿಕರಿಗೆ ಭಾರಿ ಅನುಕೂಲವಾಗಲಿದೆ. ಹಾಗಾಗಿ, ಹೊಸೂರು ವಿಮಾನ ನಿಲ್ದಾಣದ ನಿರ್ಮಾಣವು ಪ್ರಮುಖ ಸಂಗತಿಯಾಗಿದೆ.

2033ರ ನಂತರವೇ ಚಾಲನೆ?

ಹೊಸೂರಿನಲ್ಲಿ ಈಗಾಗಲೇ ತನೇಜಾ ಏರೋಸ್ಪೇಸ್‌ ಮತ್ತು ಏವಿಯೇಷನ್‌ ಲಿಮಿಟೆಡ್‌ (TAAL) ಕಂಪನಿಯು ಥಾಲಿ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ವಿಮಾನ ನಿಲ್ದಾಣದ ನಡುವೆ ಒಪ್ಪಂದ ಮಾಡಿಕೊಂಡ ಕಾರಣ ಥಾಲಿ ವಿಮಾನ ನಿಲ್ದಾಣದಿಂದ ವಾಣಿಜ್ಯಿಕ ವಿಮಾನಗಳ ಹಾರಾಟ ಸಾಧ್ಯವಾಗಿಲ್ಲ. ಬೆಂಗಳೂರು ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್‌ ವೈಮಾನಿಕ ಮಾರ್ಗದ ಅಂತರದಲ್ಲಿ 25 ವರ್ಷ ಯಾವುದೇ ಹೊಸ ಏರ್‌ಪೋರ್ಟ್‌ ನಿರ್ಮಾಣ ಮಾಡುವಂತಿಲ್ಲ ಎಂಬುದು ಒಪ್ಪಂದವಾಗಿದೆ. ಹಾಗಾಗಿ ಒಪ್ಪಂದದ ಪ್ರಕಾರ, ಹೊಸೂರಿನಲ್ಲಿ 2033ರ ನಂತರವೇ ವಿಮಾನ ಹಾರಾಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 2008ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸೂರಿಗೆ 86 ಕಿಲೋಮೀಟರ್‌ ಅಂತರ ಇದೆ.

ಇದನ್ನೂ ಓದಿ: Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Continue Reading
Advertisement
NEET Aspirant
ದೇಶ26 mins ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ52 mins ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ53 mins ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ1 hour ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ1 hour ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ2 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ2 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sudipa Chatterjee
ದೇಶ2 hours ago

Sudipa Chatterjee: ಗೋಮಾಂಸ ಸೇವನೆಗೆ ಪ್ರಚಾರ- TMC ನಾಯಕ ಬಬೂಲ್‌ ಸುಪ್ರಿಯೋ ಆಪ್ತೆ, ಬೆಂಗಾಳಿ ನಟಿಗೆ ಜೀವ ಬೆದರಿಕೆ

Kalki 2898AD
ಸಿನಿಮಾ2 hours ago

Kalki 2898AD: ಕಲಿಯುಗದಲ್ಲಿ ʼಕಲ್ಕಿʼಯ ಆಗಮನದ ಚರ್ಚೆ ಹುಟ್ಟು ಹಾಕಿದ ‘ಕಲ್ಕಿ 2898ಎಡಿ’ ಸಿನಿಮಾ!

Agumbe Ghats
ಕರ್ನಾಟಕ2 hours ago

Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು7 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ11 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌