Site icon Vistara News

Yoga day | ಮಂಗಳವಾರ ಅರ್ಧ ದಿನ ಶಾಲೆಗೆ ರಜೆ; ಇನ್ನರ್ಧ ದಿನ ಶಾಲೆಯಲ್ಲಿ ಮಾಡ್ಬೇಕಿರೋದೇನು?

teacher transfer

teacher

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು (Yoga day) ಆಚರಿಸಲಾಗುತ್ತಿದ್ದು, ಮಕ್ಕಳಲ್ಲೂ ಯೋಗದ ಮಹತ್ವ ಸಾರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ 8ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವಂತೆ ಆದೇಶಿಸಿದೆ.

ಇದನ್ನೂ ಓದಿ | ರಾಜ್ಯಕ್ಕೆ ಮೋದಿ ಆಗಮನ ಬೆನ್ನಲೇ ಕಾಂಗ್ರೆಸ್‌ ಪ್ರತಿತಂತ್ರ, ದೆಹಲಿಗೆ ತೆರಳಲಿರುವ ಡಿಕೆಶಿ

ಇದಕ್ಕಾಗಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಎಸ್‌.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಸೇರಿದಂತೆ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಿಳಿಸಿದೆ.

ಶಿಕ್ಷಣ ಇಲಾಖೆಯ ಸುತ್ತೋಲೆ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಯೋಗ ದಿನ ಆಚರಣೆ ಹಿನ್ನೆಲೆ ನಾಳೆ ಅರ್ಧ ದಿನ ಮಾತ್ರ ಶಾಲೆಯನ್ನು ನಡೆಸಲು ತಿಳಿಸಿದೆ. ಈ ದಿನದ ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನಗಳ ಅಭ್ಯಾಸಗಳನ್ನು ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಿ ಎಂದು ತಿಳಿಸಿದೆ. ಮಂಗಳವಾರದ ತರಗತಿ ಅವಧಿಯನ್ನು ಸರಿದೂಗಿಸಲು ಮುಂದಿನ ಶನಿವಾರಂದು ಪೂರ್ಣ ದಿನದ ಶಾಲೆಯನ್ನು ನಡೆಸಲು ಸೂಚಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗೆ ಇಂದು ರಜೆ ಘೋಷಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ರಾಜಧಾನಿಗೆ ಆಗಮಿಸಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೀಗಾಗಿ ಅವರು ಸಂಚರಿಸಲಿರುವ ಮಾರ್ಗದಲ್ಲಿ, ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಸರಕಾರ ಆದೇಶ ಹೊರಡಿಸಿದ್ದು, ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ. ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಇಂದು ಅನ್ವಯವಾಗಲಿದೆ.

ಇದನ್ನೂ ಓದಿ | ಅರಮನೆ ಅಂಗಳದಲ್ಲಿ ಯೋಗ ದಿನ ಪೂರ್ವಾಭ್ಯಾಸ; ಭರ್ಜರಿ ಸಿದ್ಧತೆ

Exit mobile version