IPL 2023: 'ಕ್ರಿಕೆಟ್ ನನ್ನ ಇಷ್ಟದ ಆಟ'; ಆರ್​ಸಿಬಿ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

IPL 2023: ‘ಕ್ರಿಕೆಟ್ ನನ್ನ ಇಷ್ಟದ ಆಟ’; ಆರ್​ಸಿಬಿ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂಬೈ ಇಂಡಿಯನ್ಸ್​ ಮತ್ತು ರಾಯಲ್​ ಚಾಂಲೆಂಜರ್ಸ್​ ಬೆಂಗಳೂರು ವಿರುದ್ಧದ ಭಾನುವಾರದ ಐಪಿಎಲ್(IPL 2023) ಪಂದ್ಯವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ವೀಕ್ಷಿಸಿದ್ದಾರೆ.

VISTARANEWS.COM


on

IPL 2023: 'Cricket is my favorite game'; Former CM Siddaramaiah watched the RCB match
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬೈ ಇಂಡಿಯನ್ಸ್​ ಮತ್ತು ರಾಯಲ್​ ಚಾಂಲೆಂಜರ್ಸ್​ ಬೆಂಗಳೂರು ವಿರುದ್ಧದ ಭಾನುವಾರದ ಐಪಿಎಲ್(IPL 2023) ಪಂದ್ಯವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ವೀಕ್ಷಿಸಿದ್ದಾರೆ. ಚಿನ್ನಸ್ವಾಮಿಯಲ್ಲಿ ಪಂದ್ಯ ವೀಕ್ಷಿಸುತ್ತಿರುವ ಫೋಟೊವನ್ನು ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದಾರೆ. ಈ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.

ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ.. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜತೆಗಿದೆ.. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ತಂಡಕ್ಕೆ ಎಂದು ಟ್ವೀಟ್​ ಮೂಲಕ ಆರ್​ಸಿಬಿ ತಂಡಕ್ಕೆ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ. ಚುನಾವಣ ಪ್ರಚಾರದ ಮಧ್ಯೆಯೂ ಬಿಡುವು ಮಾಡಿಕೊಂಡು ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿಗೆ ಓರ್ವ ಅಪ್ಪಟ ಕನ್ನಡಿಗನಾಗಿ ಸಿದ್ದರಾಮಯ್ಯ ಅವರು ಬೆಂಬಲ ಸೂಚಿಸಿದ್ದಾರೆ. ಅವರ ಈ ನಡೆಗೆ ಇದೀಗ ನೆಟ್ಟಿಗರು ಭಾರಿ ಮೆಚ್ಚುಗೆ ವ್ಯಕ್ಯಪಡಿಸಿದ್ದಾರೆ.

ಅಜೇಯ ಅರ್ಧಶತಕ ಬಾರಿಸಿ ಮಿಂಚಿದ ತಿಲಕ್​ ವರ್ಮ

ನಂಬುಗೆಯ ಬ್ಯಾಟರ್​ಗಳೆಲ್ಲ ಔಟಾದಾಗ ಟೊಂಕ ಕಟ್ಟಿ ನಿಂತ ತಿಲಕ್​ ವರ್ಮ ಮುಂಬೈ ತಂಡಕ್ಕೆ ಆಸರೆಯಾದರು. ಇವರಿಗೆ ಯುವ ಆಟಗಾರ ನಿಹಾಲ್​ ವಧೀರಾ ಕೆಳ ಕ್ರಮಾಂಕದಲ್ಲಿ ಉತ್ತಮ ಸಾಥ್​ ನೀಡಿದರು. ಬಿರುಸಿನ ಬ್ಯಾಟಿಂಗ್​ ನಡೆಸಿದ ವಧೀರಾ ಅವರು ಕರಣ್​ ಶರ್ಮ ಅವರಿಗೆ ಸತತ ಸಿಕ್ಸರ್​ ಸಿಡಿಸಿ ಮಿಂಚಿದರು. ಇದರಲ್ಲೊಂದು ಸಿಕ್ಸ್​ ಸ್ಟೇಡಿಯಂನಿಂದ ಹೊರಕ್ಕೆ ಚಿಮ್ಮಿತು. ಈ ವೇಳೆ ಅವರು ಅಪಾಯಕಾರಿಯಾಗುವ ಸೂಚನೆಯೊಂದು ಲಭಿಸಿತು. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದ ಕರಣ್​ ಶರ್ಮ ಮುಂದಿನ ಎಸೆತದಲ್ಲಿ ವಿಕೆಟ್​ ಉಡಾಯಿಸುವಲ್ಲಿ ಯಶಸ್ವಿಯಾದರು. ವಧೀರಾ 21 ರನ್​ ಗಳಿಸಿದರು.

ತಿಲಕ್​ ವರ್ಮ ಮತ್ತೊಂದು ಬದಿಯಲ್ಲಿ ಆರ್​ಸಿಬಿ ದಾಳಿಯನ್ನು ಸಮರ್ಥವಾಗಿ ಎದುರಿಸಿ ಅರ್ಧಶತಕ ಬಾರಿಸಿ ತಂಡದ ಪಾಲಿಗೆ ಆಪದ್ಬಾಂಧವರಾದರು. ಇವರ ಈ ಏಕಾಂಗಿ ಹೋರಾಟದಿಂದ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ಸು ಕಂಡಿತು. 46 ಎಸೆತ ಎದುರಿಸಿದ ಅವರು ಬರೋಬ್ಬರಿ ನಾಲ್ಕು ಸಿಕ್ಸರ್​ ಮತ್ತು 9 ಬೌಂಡರಿ ನೆರವಿನಿಂದ ಅಜೇಯ 84 ರನ್​ ಬಾರಿಸಿದರು.

ಬ್ಯಾಟಿಂಗ್​ ಆಹ್ವಾನ ಪಡೆದ ಮುಂಬೈ ಆರಂಭದಲ್ಲೇ ಸತತ ವಿಕೆಟ್​ ಕಳೆದುಕೊಂಡಿತು. ಮೊಹಮ್ಮದ್​ ಸಿರಾಜ್​ ಅವರು ಇಶಾನ್​ ಕಿಶನ್​ ವಿಕೆಟ್​ ಕಿತ್ತು ಆರ್​ಸಿಬಿಗೆ ಮೊದಲ ಮುನ್ನಡೆ ತಂದುಕೊಟ್ಟರು. ಮುಂದಿನ ಓವರ್​ನಲ್ಲಿ ರೇಸ್ ಟಾಪ್ಲಿ ಕ್ಯಾಮರೂನ್​ ಗ್ರೀನ್​ ವಿಕೆಟ್​ ಉರುಳಿಸಿದರು. ಗ್ರೀನ್​ 5 ರನ್​ ಗಳಿಸಿದರೆ ಇಶಾನ್​ ಕಿಶನ್​ 11 ರನ್​ ಬಾರಿಸಿದರು. ಸಿರಾಜ್​ ಓವರ್​ನಲ್ಲಿ ಜೀವದಾನ ಪಡೆದ ರೋಹಿತ್​ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ಆಕಾಶ್​ ದೀಪ್​ ಅವರ ಮುಂದಿನ ಓವರ್​ನಲ್ಲಿ ವಿಕೆಟ್​ ಕೀಪರ್​ ದಿನೇಶ್​ ಕಾರ್ತಿಕ್​ ಅವರಿಗೆ ಕ್ಯಾಚ್​ ನೀಡಿ ಒಂದು ರನ್​ಗೆ ಸೀಮಿತರಾದರು. ತಂಡದ ಮೊತ್ತ 50 ಆಗುವ ಮುನ್ನವೇ ನಾಲ್ಕು ವಿಕೆಟ್​ ಕಳೆದುಕೊಂಡು ಮುಂಬೈ ಶೋಚನೀಯ ಸ್ಥಿತಿ ಕಂಡಿತು. ಟಿ20 ನಂ.1 ಬ್ಯಾಟರ್​ ಸೂರ್ಯಕುಮಾರ್​ ಯಾದವ್​ ಅವರ ಬ್ಯಾಟ್​ ಈ ಪಂದ್ಯದಲ್ಲಿ ಸದ್ದು ಮಾಡಲಿಲ್ಲ. ರನ್​ ಗಳಿಸಲು ಪರದಾಡಿದ ಅವರು 16 ಎಸೆತ ಎದುರಿಸಿ 15 ರನ್​ ಬಾರಿಸಲಷ್ಟೇ ಶಕ್ತರಾದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

CET Exam: ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ (CET Exam) ಪ್ರಶ್ನೆಪತ್ರಿಕೆ (Question Paper) ಕಂಡು ವಿದ್ಯಾರ್ಥಿಗಳು ಕಕ್ಕಾಬಿಕ್ಕಿಯಾಗಿದ್ದು, ಔಟ್‌ ಆಫ್‌ ಸಿಲೆಬಸ್‌ ಪ್ರಶ್ನೆಗಳನ್ನು ಕಂಡು ದಂಗಾಗಿದ್ದರು. ಈ ಪ್ರಮಾದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹಾಗೂ ಪಿಯು ಮಂಡಳಿ (PU board) ನಡುವೆ ಆರೋಪ ಪ್ರತ್ಯಾರೋಪ ನಡೆದಿದ್ದು, ಗ್ರೇಸ್‌ ಮಾರ್ಕ್ಸ್‌ (Grace marks) ನೀಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪಿಯು ಮಂಡಳಿ ನೀಡಿದ ಪಠ್ಯಪುಸ್ತಕವೇ ಒಂದಾಗಿದ್ದರೆ, ಕೆಇಎ ನೀಡಿದ ಪ್ರಶ್ನೆಪತ್ರಿಕೆಯೇ ಮತ್ತೊಂದಾಗಿದೆ. ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕಂಡು ವಿದ್ಯಾರ್ಥಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಗಣಿತ, ಜೀವಶಾಸ್ತ್ರ, ರಸಾಯನವಿಜ್ಞಾನ ಹಾಗೂ ಭೌತವಿಜ್ಞಾನ ಪರೀಕ್ಷೆಯಲ್ಲಿ 50ಕ್ಕೂ ಅಧಿಕ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು ಕಂಡುಬಂದಿವೆ.

ಜೀವಶಾಸ್ತ್ರದ 60 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ ಪಠ್ಯಕ್ರಮದಲ್ಲಿ ಇಲ್ಲದ 10 ಪ್ರಶ್ನೆಗಳನ್ನು ಕೇಳಲಾಗಿದೆ. ಗಣಿತ ಪರೀಕ್ಷೆಯಲ್ಲಿ 9 ಪ್ರಶ್ನೆಗಳು, ರಾಸಾಯನಿಕ ಹಾಗೂ ಭೌತಶಾಸ್ತ್ರ ಪರೀಕ್ಷೆಯಲ್ಲಿ 30ಕ್ಕೂ ಅಧಿಕ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿದೆ. ನಿಗದಿತ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾದರು. ಹೀಗಾಗಿ ಮರು ಪರೀಕ್ಷೆ ಮಾಡುವಂತೆ ಅಥವಾ ಗ್ರೇಸ್ ಮಾರ್ಕ್ಸ್ ನೀಡುವಂತೆ ವಿದ್ಯಾರ್ಥಿಗಳಿಂದ ಒತ್ತಾಯ ಬಂದಿದೆ.

ಈ ವರ್ಷ ಪಠ್ಯದಲ್ಲಿ ಇಲ್ಲದ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಪ್ರಾಧಿಕಾರ ಪ್ರಶ್ನೆ ಕೇಳಿದೆ. ಪಿಯು ಮಂಡಳಿ ನಿಗದಿ ಪಡಿಸಿರುವ ಪಿಯು ಪಠ್ಯಪುಸ್ತಕದ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸಬೇಕು. ಆದರೆ ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

ಈ ಬಗ್ಗೆ ಪರೀಕ್ಷಾ ಪ್ರಾಧಿಕಾರ ಹಾಗೂ ಪಿಯು ಮಂಡಳಿ ನಡುವೆ ಆರೋಪ ಪ್ರತ್ಯಾರೋಪ ನಡೆದಿದೆ. ಪಿಯು ಮಂಡಳಿ ನೀಡಿದ ಪಠ್ಯ ಪುಸ್ತಕದ ಆಧಾರದ ಮೇಲೆಯೇ ಸಿಇಟಿ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ ಎಂದು ಕೆಇಎ‌ ಹೇಳಿದೆ. ತಾವು ನೀಡಿದ ಪರಿಷ್ಕೃತ ಪಠ್ಯಪುಸ್ತಕ ಕೆಇಎ ಅನುಸರಿಸಿಲ್ಲ ಎಂದು ಪಿಯು ಮಂಡಳಿ ಆರೋಪಿಸಿದೆ. ಎರಡು ಇಲಾಖೆ ನಡುವೆ ಪತ್ರವ್ಯವಹಾರ ನಡೆದಿದೆ. ಪಠ್ಯಪುಸ್ತಕ ಪರಿಷ್ಕರಣೆ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸುವಂತೆ ಪಿಯು ಬೋರ್ಡ್ ಮೊದಲೇ ಪತ್ರ ಬರೆದಿತ್ತು. ಪಿಯು ಬೋರ್ಡ್ ಪತ್ರಕ್ಕೆ ಉತ್ತರವನ್ನೂ ಕೆಇಎ ನೀಡಿತ್ತು. ಪರಿಷ್ಕೃತ ಪಠ್ಯಪುಸ್ತಕ ಅನುಸರಿಸಲಾಗಿದೆ ಎಂದಿದೆ. ಕೊನೆಗೆ ಪಿಯು ಬೋರ್ಡ್ ನೀಡಿದ ಪರಿಷ್ಕೃತ ಪಠ್ಯಪುಸ್ತಕವನ್ನು ಕೆಇಎ ನಿರ್ಲಕ್ಷ್ಯ ಮಾಡಿದೆ.

ಇಂದು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೆಇಎ ಸೂಚನೆ ನೀಡಿದೆ. ಆಕ್ಷೇಪಣೆಗಳ ಆಧಾರದ ಮೇಲೆ ಪರಿಶೀಲನೆಗೆ ಸಮಿತಿ ರಚಿಸುವ ಭರವಸೆಯನ್ನು ಕೆಇಎ ನೀಡಿದ್ದು, ಸಮಿತಿ ನೀಡುವ ವರದಿಯ ಆಧಾರದ ಮೇಲೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಎ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್;‌ ಕೊನೇ ಅವಕಾಶ ಕೊಟ್ಟ KEA!

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Modi in Karnataka: ನಾಳೆ (ಏಪ್ರಿಲ್‌ 20) ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka today Massive rally in Chikkaballapur and roadshow in Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಕರ್ನಾಟಕ

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Water Crisis: ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ ಮೂಲಕ ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಪೂರೈಕೆ ಮಾಡಲು ಜಲಮಂಡಳಿ ಕ್ರಮ ಕೈಗೊಂಡಿದೆ. ಹೆಸರಘಟ್ಟ ಕೆರೆಯಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ನೀರು ಹರಿಸಲಾಗುತ್ತದೆ.

VISTARANEWS.COM


on

Koo

ಬೆಂಗಳೂರು: ಬೇಸಿಗೆ ನೀರಿನ ಸಮಸ್ಯೆ ನಡುವೆ(Water Crisis) ಬೆಂಗಳೂರಿನ 110 ಹಳ್ಳಿಗಳ ಜನಕ್ಕೆ ಜಲಮಂಡಳಿ ಗುಡ್ ನ್ಯೂಸ್ ಕೊಟ್ಟಿದೆ. ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ (Soladevanahalli pumping station) ಪುನಶ್ಚೇತನ ಮಾಡಿ, ಮುಂದಿನ ವಾರದಿಂದ ಹೆಸರಘಟ್ಟ ಕೆರೆ ನೀರು ಸಂಸ್ಕರಿಸಿ ಪೂರೈಕೆ ಮಾಡಲು ಜಲಮಂಡಳಿ ಮುಂದಾಗಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ನೀರು ಪೂರೈಕೆಗೆ ಜಲಮಂಡಳಿ ಹೊಸ ಯೋಜನೆಗಳನ್ನು ಕೈಗೊಳ್ಳುತ್ತಾ ಇದೆ. ಅದರಲ್ಲಿ ಪ್ರಮುಖವಾಗಿ ಜಲಮಂಡಳಿ ಹೊಸ ಸಾಹಸಕ್ಕೆ ಮುಂದಾಗಿದ್ದು, ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ ಮೂಲಕ ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಪೂರೈಕೆ ಮಾಡಲು ಕ್ರಮ ಕೈಗೊಂಡಿದೆ. ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಿಂದ 1896ರಲ್ಲಿ ಬೆಂಗಳೂರು ನಗರದ ಹಲವು ಭಾಗಕ್ಕೆ ಅರ್ಕಾವತಿ ನದಿ ನೀರನ್ನು ಹೆಸರಘಟ್ಟ ಕೆರೆ ಮೂಲಕ ಪೂರೈಕೆ ಮಾಡಲಾಗಿತ್ತು. ನಂತರ ಪಂಪ್ ಸ್ಟೇಷನ್ ಶಿಥಿಲಾವಸ್ಥೆ ತಲುಪಿತ್ತು. ಈಗ ಜಲಮಂಡಳಿ ಸೋಲದೇವನಹಳ್ಳಿಯ ಪಂಪಿಂಗ್ ಸ್ಟೇಷನ್ ಅನ್ನು ಪುನಶ್ಚೇತನ ಮಾಡಿ ಹೆಸರಘಟ್ಟದ ಕೆರೆ ನೀರನ್ನು ಸಂಸ್ಕರಿಸಿ ಬೆಂಗಳೂರಿನ 110 ಹಳ್ಳಿಗಳು ಸೇರಿದಂತೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೂ ನೀರಿನ ಭಾಗ್ಯ ನೀಡೋದಕ್ಕೆ ಮುಂದಾಗಿದೆ.

ಇನ್ನು ನಗರಕ್ಕೆ ನೀರು ಹರಿಸಲು ಸದ್ಯ ಹೆಸರಘಟ್ಟ ಕೆರೆಯಲ್ಲಿ ಸುಮಾರು 1.3 ಟಿಎಂಸಿ ಯಷ್ಟು ನೀರು ಲಭ್ಯವಿದೆ. ಇದಕ್ಕೆ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಲ್ಲಿ ಸಂಸ್ಕರಣೆ ಮಾಡಿ, ಎಂ.ಇ.ಐ ಲೇಔಟ್‌ನಲ್ಲಿರುವ ಜಲಸಂಗ್ರಾಹಾರಕ್ಕೆ ಪಂಪ್‌ ಮಾಡಲಾಗುವುದು. ಇಲ್ಲಿನಿಂದ ಅಗತ್ಯವಿರುವಂತಹ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ಹಾಗೂ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡುವುದು ಇದರ ಉದ್ದೇಶವಾಗಿದೆ. ಸದ್ಯ ಇತರೆ ಕೆಲಸ ಕಾರ್ಯಗಳಿಗೆ ಮೊದಲ ಹಂತದಲ್ಲಿ ನೀರು ನೀಡಲಾಗುತ್ತೆ. ನಂತರ ನೀರಿನು ಲ್ಯಾಬ್ ಟೆಸ್ಟ್ ಗೆ ಕಳುಹಿಸಿ ವರದಿ ಬಂದ ನಂತರ ಕೂಡಿಯೋದಕ್ಕೂ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ತಿಳಿಸಿದ್ದಾರೆ.

ಇದನ್ನೂ ಓದಿ | Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

ಇನ್ನು ಮುಂದಿನ ವಾರದೋಳಗೆ ಸಿದ್ಧತೆ ಪೂರ್ಣಗೊಳಿಸಲು ಸೂಚಿಸಿದ್ದು, ಇದಕ್ಕೆ ಬೇಕಾದ ಅಗತ್ಯ ತಯಾರಿಗಳನ್ನು ಅಧಿಕಾರಿಗಳು ಮಾಡಿಕೊಳ್ಳುತ್ತಾ ಇದ್ದಾರೆ. ಈಗಾಗಿ ಏಪ್ರಿಲ್ 20 ಬಳಿಕ ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್‌ನಿಂದ ನೀರು ಪೂರೈಕೆ ಆಗಲಿದ್ದು, ಇದ್ದು ನಗರದ ಯಾವೆಲ್ಲ ಏರಿಯಾಗಳಿಗೆ ನೀರು ಪೂರೈಕೆ ಆಗಲಿದೆ ಕಾದು ನೋಡಬೇಕಿದೆ.

Continue Reading
Advertisement
IPL 2024
ಕ್ರೀಡೆ50 seconds ago

IPL 2024 : ಸೋಲಿನ ಬಳಿಕ ಚೆನ್ನೈ ತಂಡದ ಅಂಕಪಟ್ಟಿಯಲ್ಲಿನ ಸ್ಥಾನವೆಷ್ಟು? ಇಲ್ಲಿದೆ ಎಲ್ಲ ವಿವರ

cet exam karnataka exam authority
ಪ್ರಮುಖ ಸುದ್ದಿ9 mins ago

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Ancient snake vasuki indicus
ವೈರಲ್ ನ್ಯೂಸ್37 mins ago

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

charlie chaplin rajamarga
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Karnataka Weather Forecast
ಮಳೆ2 hours ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Modi in Karnataka today Massive rally in Chikkaballapur and roadshow in Bengaluru
Lok Sabha Election 20242 hours ago

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Kids Sleep
ಲೈಫ್‌ಸ್ಟೈಲ್2 hours ago

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ8 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ17 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌