ipl-betting habit kills a young man, he killed while went to ask betting money IPL Betting: ಐಪಿಎಲ್‌ ಬೆಟ್ಟಿಂಗ್‌ ದಂಧೆಗೆ ಯುವಕ ಬಲಿ, ಹಣ ಕೇಳಲು ಹೋದಾಗ ಕೊಲೆ - Vistara News

ಕರ್ನಾಟಕ

IPL Betting: ಐಪಿಎಲ್‌ ಬೆಟ್ಟಿಂಗ್‌ ದಂಧೆಗೆ ಯುವಕ ಬಲಿ, ಹಣ ಕೇಳಲು ಹೋದಾಗ ಕೊಲೆ

IPL 2023: ಮನರಂಜನೆಯ ಕ್ರೀಡೆಯಾದ ಐಪಿಎಲ್‌ನ್ನು ಜೂಜನ್ನಾಗಿ ಮಾಡಿಕೊಂಡು ಬೆಟ್ಟಿಂಗ್‌ ದಂಧೆಯಲ್ಲಿ ಮುಳುಗಿದ ಯುವಕನೊಬ್ಬ ಕೊಲೆಯಾಗಿದ್ದಾನೆ. ಹಾಗಿದ್ದರೆ ಏನಾಯಿತು?

VISTARANEWS.COM


on

ipl-betting habit kills a young man, he killed while went to ask betting money
ಕೊಲೆಯಾದ ಯುವಕ ಪುನೀತ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಕಳೆದ ಕೆಲವು ತಿಂಗಳುಗಳಿಂದ ಜನರಲ್ಲಿ ಭಾರಿ ಆಸಕ್ತಿ ಮೂಡಿಸಿರುವ ಐಪಿಎಲ್ ಕ್ರಿಕೆಟ್‌ (IPL Cricket) ಸೀಸನ್‌ಗೆ ಕ್ರೀಡಾಸಕ್ತಿ ಮುಖ ಒಂದೆಡೆಯಾದರೆ ಇನ್ನೊಂದು ಕಡೆ ಅದು ಬೆಟ್ಟಿಂಗ್‌ ದಂಧೆಯ (IPL Betting) ಕರಾಳತೆಯನ್ನೂ ಹೊಂದಿರುವುದು ಹಲವು ಬಾರಿ ಬಯಲಾಗಿದೆ. ಆದರೆ, ಸಾಮಾನ್ಯವಾಗಿ ಇದು ಕೆಲವರಿಗೆ ಲಾಭ ಮತ್ತು ಹಲವರಿಗೆ ನಷ್ಟ ಉಂಟುಮಾಡಿರುವುದು ನಿಜ. ಆದರೆ, ಈ ಬೆಟ್ಟಿಂಗ್‌ ದಂಧೆ ಒಬ್ಬ ಯುವಕನ ಪ್ರಾಣವನ್ನೇ ಕಸಿದಿದೆ.

ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕನ ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಸಿ.ಎ.ಕೆರೆ ಗ್ರಾಮದ ಪುನೀತ್ ಕೊಲೆಯಾದ ದುರ್ದೈವಿ.

ಪುನೀತ್‌ ಮತ್ತು ಇತರ ಕೆಲವು ಯುವಕರು ಈ ಸೀಸನ್‌ನ ಆರಂಭದಿಂದಲೂ ಯಾವ ತಂಡ ಗೆಲ್ಲುತ್ತದೆ, ಸೋಲುತ್ತದೆ ಮತ್ತಿತರ ಅಂಶಗಳನ್ನು ಆಧರಿಸಿ ಬೆಟ್ಟಿಂಗ್‌ ಕಟ್ಟುತ್ತಿದ್ದರು. ಪ್ಲೇ ಆಫ್‌ ಪ್ರವೇಶಿಸುವ ತಂಡಗಳು ಯಾವುದು ಎನ್ನುವುದೂ ಸೇರಿದಂತೆ ಹಲವು ಆಸಕ್ತಿಕರ ವಿಚಾರಗಳಲ್ಲಿ ಬೆಟ್ಟಿಂಗ್‌ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಈ ನಡುವೆ, ಪುನೀತ್‌ ಬೆಟ್ಟಿಂಗ್‌ನಲ್ಲಿ ಒಂದು ಹಂತದಲ್ಲಿ ಗೆದ್ದಿದ್ದ. ಇದರ ಹಣವನ್ನು ಕೊಡುವಂತೆ ಕೇಳಿದಾಗ ತಾವಿದ್ದಲ್ಲಿಗೆ ಬರುವಂತೆ ಇನ್ನೊಂದು ತಂಡ ಹೇಳಿತ್ತು. ಹೀಗೆ ಬೆಟ್ಟಿಂಗ್ ಹಣ ಪಡೆಯುಲು ಹೋಗಿದ್ದ ವೇಳೆ ಪುನೀತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪುನೀತ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿಗಳು ಆತನಿಗೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಬಲೂನ್‌ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮೂರ್ತೆದಾರರ ಮುಖಂಡ

ಮಂಗಳೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದ ರೈತರೊಬ್ಬರು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ನದಿಗೆ ಹಾರುವಾಗ ಬಲೂನು ಕಟ್ಟಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ಘಟನೆ ನಡೆದಿದ್ದು, ಆಲಂಕಾರು ನಿವಾಸಿ ಚಂದ್ರಶೇಖರ (60) ಆತ್ಮಹತ್ಯೆ ಮಾಡಿಕೊಂಡವರು.

ಬಲೂನು ಕಟ್ಟಿಕೊಂಡು ನದಿಗೆ ಹಾರಿದ ಚಂದ್ರಶೇಖರ್‌

ಅವರು ಶುಕ್ರವಾರ ಬೆಳಗ್ಗೆ ಶಾಂತಿಮೊಗರು ಸೇತುವೆಯಿಂದ ಕುಮಾರಧಾರಾ ನದಿಗೆ ಹಾರಿದ್ದಾರೆ. ಅವರು ಎರಡು ಬಲೂನುಗಳನ್ನು ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ. ನೀರಿಗೆ ಜಿಗಿದ ಅವರು ಅಲ್ಲೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆದರೆ, ಬಲೂನು ಕಟ್ಟಿಕೊಂಡಿದ್ದ ಕಾರಣ ಅವರ ಶವವನ್ನು ಪತ್ತೆ ಹಚ್ಚಲು ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ. ಅಗ್ನಿಶಾಮಕ ಸಿಬ್ಬಂದಿ ನದಿಗೆ ಇಳಿದು ಶವವನ್ನು ಮೇಲಕ್ಕೆ ಎತ್ತಿದ್ದಾರೆ.

ಚಂದ್ರಶೇಖರ ಅವರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ʻʻನನ್ನ ಸಾವಿಗೆ ನಾನೇ ಕಾರಣʼ ಎಂದು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟೇ ಅವರು ಸೇತುಗೆ ಬಳಿಗೆ ಹೋಗಿದ್ದಾರೆ. ಆದರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಲಿದ್ದಾರೆ.

ಇದನ್ನೂ ಓದಿ: Murder Case: ಅನೈತಿಕ ಸಂಬಂಧಕ್ಕೆ ಹಾರಿಹೋದ ಪ್ರಾಣಪಕ್ಷಿ; ಚೈಲ್ಡ್‌ ಎಂದು ಕರೆದವನ ಮೇಲೆ ಮಾರಣಾಂತಿಕ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Book Release: ಶಿವಮೊಗ್ಗ ಜಿಲ್ಲೆಯ ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಲೋಕಾರ್ಪಣೆಗೊಳಿಸಿದರು.

VISTARANEWS.COM


on

Koo

ಶಿವಮೊಗ್ಗ: ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ, ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಪುಸ್ತಕದ (Book Release) ಲೇಖಕರಾದ ಡಾ. ಕೆ. ಎಸ್. ಕಣ್ಣನ್, ಶ್ರೀ ಭಾರತೀ ಪ್ರಕಾಶನದ ಕವಿತಾ ಜೋಯ್ಸ್, ನಾಗೇಂದ್ರ ಕೊಪ್ಪಲು ಉಪಸ್ಥಿತರಿದ್ದರು.

ಆದಿಕಾವ್ಯವೆಂದೇ ಪ್ರಸಿದ್ಧವಾದ ಕಾವ್ಯ ವಾಲ್ಮೀಕಿ ರಾಮಾಯಣ. ಅದು ಚಿತ್ರಿಸುವುದು ರಾಮನ ಕಥೆಯನ್ನು, ಅರ್ಥಾತ್ ರಾಮನು ನಡೆದ ಹಾದಿಯನ್ನು. ರಾಮನು ಎಲ್ಲಿಂದ ಎಲ್ಲಿಗೆ ನಡೆದದ್ದು? ಅಯೋಧ್ಯೆಯಿಂದ ಹೊರಟು ಕೊನೆಗೆ ಅಯೋಧ್ಯೆಗೇ ಬಂದು ಸೇರಿದನಲ್ಲವೇ? ಅದುವೇ ರಾಮಾಯಣವಾಯಿತು. ಇನ್ನೂ ಮುಖ್ಯವಾದ ರಾಮಾಯನವೊಂದಿದೆ. ದಿವಿಯಿಂದ ಹೊರಟು ಭುವಿಯಲ್ಲಿ ಇದ್ದು ಮತ್ತೆ ದಿವಿಗೆ ಬಂದು ಸೇರಿದನಲ್ಲವೇ? ಅದುವೇ ನಿಜವಾದ ರಾಮಾಯಣ! ನಾವೂ ನಮ್ಮ ಮೂಲವನ್ನು ಸೇರಿಕೊಳ್ಳಲು ಹಿಡಿಯಬೇಕಾದ ಹಾದಿಯನ್ನು ಅರುಹುವ ಅಮರಕೃತಿ ʼರಾಮನೇನು ದೇವನೇ?ʼ ಪುಸ್ತಕವಾಗಿದೆ.

‘ರಾಮನೂ ನಮ್ಮ-ನಿಮ್ಮಂತೆ ಮನುಷ್ಯ, ನಮಗಿಂತ ಹೆಚ್ಚು ಸಾಧನೆ ಮಾಡಿ ಪುರುಷೋತ್ತಮನಾದವ’ ಎನ್ನುವ ವಾದವೊಂದು ಪ್ರಚಲಿತವಾಗಿದೆ. ಈ ವಾದ ಮಾಡುವವರು ‘ರಾಮಾಯಣದಲ್ಲಿ ವಾಲ್ಮೀಕಿಗಳು ರಾಮ ದೇವರು ಎಂದಿಲ್ಲ’ ಎಂದು ಹೇಳುತ್ತಾರೆ. ಆದರೆ ವಸ್ತುಸ್ಥಿತಿ ಹಾಗಿಲ್ಲ. ರಾಮಾಯಣ, ಹೆಜ್ಜೆ ಹೆಜ್ಜೆಗೆ ರಾಮನ ದಿವ್ಯತೆಯನ್ನು ಗುರುತಿಸುತ್ತದೆ. ಕೆಲವೊಮ್ಮೆ ಪ್ರತ್ಯಕ್ಷವಾಗಿ, ಇನ್ನು ಕೆಲವೊಮ್ಮೆ ಪರೋಕ್ಷವಾಗಿ ಅದು ಕಾಣಸಿಗುತ್ತದೆ. ಅದನ್ನು ಸಾಧಿಸುವ ಸತ್ಕಾರ್ಯವನ್ನು ಈ ಕೃತಿ ಮಾಡಿದೆ.

ರಾಮಾಯಣದ ಶ್ಲೋಕಗಳನ್ನು ಉಲ್ಲೇಖಿಸುತ್ತಾ, ಅದರ ಆಶಯವನ್ನು ವಿವರಿಸುತ್ತಾ, ತರ್ಕಬದ್ಧವಾಗಿ ಸಾಗುವ ಈ
ಕೃತಿ, ಶಾಸ್ತ್ರೀಯ ಕ್ರಮದ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಇಲ್ಲಿ ಕಲ್ಪನೆಯಿಲ್ಲ, ಮನಸ್ಸಿಗೆ ಅನ್ನಿಸಿದ್ದನ್ನೆಲ್ಲ ರಾಮಾಯಣದಲ್ಲಿದೆ ಎನ್ನುವ ಅಪಭ್ರಂಶವಿಲ್ಲ, ತನಗನ್ನಿಸಿದ್ದೇ ಸತ್ಯ ಎಂದುಕೊಳ್ಳುವ ಅಹಂಕಾರವೂ ಇಲ್ಲ. ಋಷಿಹೃದಯದ ಒಳಹೊಕ್ಕು, ಆ ಆರ್ಷತನವನ್ನು ಆಸ್ವಾದಿಸುತ್ತಾ, ಸತ್ಯವನ್ನು ಮಾತ್ರ ಹೇಳುತ್ತೇನೆ ಎನ್ನುವ ವಿನಯಪೂರ್ವಕವಾದ ದಿಟ್ಟತನ ಕೃತಿಯಲ್ಲಿದೆ.

ಇದನ್ನೂ ಓದಿ | Sunday Read: ಹೊಸ ಪುಸ್ತಕ: ರಾಮನೇನು ದೇವನೇ?

ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ 39ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ, ಮದ್ರಾಸು ಐಐಟಿಯಲ್ಲಿ ಪೀಠಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ, ಬಹುಶ್ರುತ ವಿದ್ವಾಂಸರಾದ ಡಾ. ಕೆ. ಎಸ್. ಕಣ್ಣನ್ ಅವರು ರಚಿಸಿರುವ, ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕದ ಪ್ರತಿಗಳಿಗಾಗಿ ಶ್ರೀಪುಸ್ತಕಮ್ (9591542454) ಸoಪರ್ಕಿಸಬಹುದಾಗಿದೆ.

“ಶ್ರೀರಾಮ, ಶ್ರೀಮನ್ನಾರಾಯಣನ ಅವತಾರ. ವಾಲ್ಮೀಕಿ ರಾಮಾಯಣ ಇದನ್ನು ಬಗೆಬಗೆಯಾಗಿ ತೋರಿಸಿಕೊಡುತ್ತದೆ. ವ್ಯಕ್ತವಾಗಿಯಲ್ಲದೇ ರಾಮಾಯಣದ ಅಂತಃಸೂತ್ರವೇ ಇದಾಗಿದೆ. ವೈಕುಂಠದಿಂದ ಆರಂಭವಾಗಿ ಮತ್ತೆ ವೈಕುಂಠವನ್ನು ಸೇರುವುದೇ ರಾಮನ ಅಯನ. ಈ ಅಯನ ಜೀವಿಗಳೆಲ್ಲರದ್ದೂ ಆಗಬೇಕೆನ್ನುವುದೇ ರಾಮಾಯಣದ ಸಂದೇಶ, ಶ್ರೀರಾಮನ ಅವತಾರವೂ, ಶ್ರೀಮದ್ರಾಮಾಯಣದ ಅವತಾರವೂ ಈ ಉದ್ದೇಶದ್ದೇ ಆಗಿದೆ. ಇದೀಗ ರಾಮನೇನು ದೇವನೇ? ಕೃತಿ ವಾಲ್ಮೀಕಿಗಳು ರಾಮಾಯಣದಲ್ಲಿ ಎಲ್ಲೆಲ್ಲಿ ಈ ಅಂಶವನ್ನು ಪ್ರಸ್ತುತಪಡಿಸಿದ್ದಾರೆ ಎನ್ನುವುದನ್ನು ಸಾಧಾರವಾಗಿ ನಿರೂಪಿಸಿದೆ.
| ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಶ್ರೀರಾಮಚಂದ್ರಾಪುರ ಮಠ

Continue Reading

ಬೆಂಗಳೂರು

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Fraud Case : ಜಯನಗರ (Jayanagar Police) ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಎರಡು ವಂಚನೆ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಚಮತ್ಕಾರಿ ಪಾತ್ರೆ ಎಂದು ಉದ್ಯಮಿಗೆ ಚೆಂಬು ಕೊಟ್ಟ ಗ್ಯಾಂಗ್‌ ಹಾಗೂ ನಕಲಿ ದಾಖಲೆ ಸೃಷ್ಟಿಸಿ 22 ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಕುಟುಂಬವೊಂದು ಸೆರೆಯಾಗಿದೆ.

VISTARANEWS.COM


on

By

Fraud Case in Bengaluru
Koo

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

Fraud Case in bengaluru

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Neha Murder Case: ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಆರ್.‌ ಆಶೋಕ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Neha Murder case Congress creates jihadi Karnataka R Ashok
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಕೊಲೆ (Neha Murder Case) ಮಾಡಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಆರ್. ಅಶೋಕ್‌ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು.

ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಲವ್‌ ಜಿಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌

ಲವ್‌ ಜಿಹಾದ್‌, ಕೊಲೆ, ಗಲಭೆ ಮಾಡುವವರಿಗೆ ಮಾಡುವವರಿಗೆ ಪಾಸ್‌ಪೋರ್ಟ್‌ ಹಾಗೂ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್‌ ಸ್ಪೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ರಾಮೋತ್ಸವದಲ್ಲಿ ಜೈ ಶ್ರೀರಾಮ್‌ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು. ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ಕೊಲೆಯಾಗಿದೆ. ಕುಣಿಗಲ್‌ನಲ್ಲಿ ಬಿಜೆಪಿ ಬೆಂಬಲಿಗನ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಚಿತ್ರನಟಿಗೆ ಹಲ್ಲೆ ಮಾಡಲಾಗಿದೆ. ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್‌ ಕಿತ್ತುಹಾಕುವ ಕೆಲಸ ನಡೆದಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ಏನೂ ಮಾಡಿಲ್ಲ. ಓಲೈಕೆ ರಾಜಕಾರಣ ಪರಾಕಾಷ್ಠೆಗೆ ತಲುಪಿದೆ ಎಂದು ದೂರಿದರು.

ಕಾಂಗ್ರೆಸ್‌ನ ಹೊಸ ತೆರಿಗೆ

ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದು, ಒಬ್ಬ ಬಿಲ್ಡರ್‌ 7-8 ಕೋಟಿ ರೂ. ಕಾಂಗ್ರೆಸ್‌ಗೆ ಕೊಡಬೇಕಿದೆ. ಇದೇ ಕಾಂಗ್ರೆಸ್‌ನ ಹೊಸ ತೆರಿಗೆ. ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳನ್ನು ತೆರಿಗೆಯ ಮೂಲಕವೇ ನೀಡಲಾಗುತ್ತಿದೆ. ಯಾವುದೇ ಯೋಜನೆಯನ್ನು ಜೇಬಿನಿಂದ ನೀಡುತ್ತಿಲ್ಲ. ಇದರಿಂದ ಸಂಗ್ರಹವಾದ ಹಣವನ್ನು ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಜೆಸಿಬಿಯಲ್ಲಿ ಅಗೆಯುವಂತೆ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

ಕಾಂಗ್ರೆಸ್‌ ಕೋಟ್ಯಂತರ ಜನರಿಗೆ ಚೊಂಬು ನೀಡಿದೆ. 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿ ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಲಾಗಿದೆ. ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್‌ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ ಎಂದರು.

ಕಾಂಗ್ರೆಸ್‌ಗೆ ಸವಾಲು

ದೇಶ ಆಳಿದ ಹಾಗೂ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್‌ ಸರ್ಕಾರ ಏನು ಕೊಡುಗೆ ನೀಡಿದೆ ಎನ್ನುವುದನ್ನು ತಿಳಿಸಲಿ. ಈ ಬಾರಿ ಕರ್ನಾಟಕದ ಜಿಡಿಪಿ ದೇಶದ ಜಿಡಿಪಿಗಿಂತ ಕಡಿಮೆಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಏನು ಎನ್ನುವುದನ್ನು ಬಜೆಟ್‌ನಲ್ಲಿ ತಿಳಿಸಿಲ್ಲ. ಈ ಬಾರಿಯ ಆದಾಯ ತೀವ್ರವಾಗಿ ಇಳಿಕೆಯಾಗಿದೆ. ಅಭಿವೃದ್ಧಿ ಕಾರ್ಯಗಳು ಇಲ್ಲವಾಗಿರುವುದರಿಂದ ಜಿಡಿಪಿ ಬೆಳೆಯುವುದಿಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

ಕರ್ನಾಟಕ

Group Clash: ರಾಮ ನವಮಿಯಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ; ಇಬ್ಬರಿಗೆ ಚಾಕು ಇರಿತ

Group Clash: ದಾವಣಗೆರೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಇಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Group Clash
Koo

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು, ಇಬ್ಬರು ಹಿಂದು ಯುವಕರಿಗೆ ಚಾಕು ಇರಿದಿರುವ ಘಟನೆ (Group Clash) ನಡೆದಿದೆ. ಕಳೆದ ಎರಡು ದಿನಗಳ‌ ಹಿಂದೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನುಮಂತ, ಗೋಪಾಲ ಗಾಯಾಳುಗಳು. ಗಲಭೆಯಲ್ಲಿ ಅನ್ಯ ಕೋಮಿನ ಒಬ್ಬ ಯುವಕ ಗಾಯಗೊಂಡಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆಗೆ ಪಡೆಯುತ್ತಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಲ್ಲೂರು ಕ್ಯಾಂಪ್‌ನಲ್ಲಿ 2022ರಲ್ಲೂ ಎರಡು ಕೋಮುಗಳ‌ ನಡುವೆ ಜಗಳ ಆಗಿತ್ತು. ಈ ಬಾರಿಯು ರಾಮನವಮಿ ದಿನದಂದು ಎರಡು ಕೋಮಿನ‌ ಯುವಕರ ನಡುವೆ ಗಲಾಟೆ ನಡೆದಿದೆ.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

Pro Pak Slogan

ಮೈಸೂರು: ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಯುವಕ ದೂರು ನೀಡಿದ್ದಾನೆ.

ಮೈಸೂರಿನ ರೋಹಿತ್ ಹಲ್ಲೆಗೊಳಗಾದ ಯುವಕ. ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿಡಿಯೊ ಮೂಲಕ ರೋಹಿತ್ ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿ | Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ಘಟನೆ ಬಗ್ಗೆ ಗಾಯಳು ರೋಹಿತ್‌ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Continue Reading
Advertisement
ಶಿವಮೊಗ್ಗ34 seconds ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Wipro Q4 Results
ವಾಣಿಜ್ಯ4 mins ago

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Fraud Case in Bengaluru
ಬೆಂಗಳೂರು19 mins ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ20 mins ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Narayana Murthy
ಪ್ರಮುಖ ಸುದ್ದಿ21 mins ago

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Neha Murder case Congress creates jihadi Karnataka R Ashok
ರಾಜಕೀಯ23 mins ago

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Group Clash
ಕರ್ನಾಟಕ31 mins ago

Group Clash: ರಾಮ ನವಮಿಯಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ; ಇಬ್ಬರಿಗೆ ಚಾಕು ಇರಿತ

IPL 2024
ಕ್ರಿಕೆಟ್33 mins ago

IPL 2024: ಅಭ್ಯಾಸದ ವೇಳೆ ರಾಹುಲ್​ಗೆ ಪತ್ನಿಯಿಂದ ಸಾಥ್​; ವಿಡಿಯೊ ವೈರಲ್​

Rain in Karnataka
ಮಳೆ48 mins ago

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Tumkur Lok Sabha constituency BJP candidate Somanna election campaign in various places of Koratagare
ತುಮಕೂರು53 mins ago

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ2 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ12 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌