ಬೆಂಗಳೂರು: ದೇಶದಲ್ಲೀಗ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಫೀವರ್ ಶುರುವಾಗಿದೆ. ಒಂದು ಕಡೆ ಕ್ರೀಡಾ ಪ್ರೇಮಿಗಳು ಚುಟುಕು ಪಂದ್ಯವನ್ನು ಕಣ್ಣು ಮಿಟುಕಿಸದಂತೆ ವೀಕ್ಷಿಸುತ್ತಿದ್ದರೆ, ಮತ್ತೊಂದು ಕಡೆ ಐಪಿಎಲ್ ಬೆಟ್ಟಿಂಗ್ ದಂಧೆ (IPL Betting) ಕೂಡ ಜೋರಾಗಿದೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ 160 ಮಂದಿಯನ್ನು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ. ಐಪಿಎಲ್ ಬೆಟ್ಟಿಂಗ್ ಸಂಬಂಧ 35 ಪ್ರಕರಣ ದಾಖಲಾಗಿದ್ದು, ಬಂಧಿತರಿಂದ 62 ಲಕ್ಷ ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ: IPL 2023: ಡೆಲ್ಲಿಗೆ ಸತತ 2ನೇ ಗೆಲುವು; ಐಪಿಎಲ್ ಅಂಕಪಟ್ಟಿ ಹೇಗಿದೆ?
ಆನ್‌ಲೈನ್ ಮತ್ತು ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಬಾಲ್ ಟು ಬಾಲ್ ಬೆಟ್ಟಿಂಗ್ ಕಟ್ಟುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ನಿಗಾ ವಹಿಸಿದ್ದರು. ಇದೀಗ ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ 160 ಜನರನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಬೆಟ್ಟಿಂಗ್ ಸಂಬಂಧ ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಹಲವು ಗ್ಯಾಂಬ್ಲರ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ.