ಬೆಂಗಳೂರು: ರಾಜ್ಯ ಸರ್ಕಾರ ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ (IPS officers transfers) ಮಾಡಿದೆ. ಚುನಾವಣೆ ಘೋಷಣೆಗೆ ಮುನ್ನ ಹಲವು ವರ್ಗಾವಣೆ ನಡೆಯುವ ಸಾಧ್ಯತೆ ಇದ್ದು, ಅದಕ್ಕೆ ಇದು ಮುನ್ನುಡಿ ಎಂದು ಹೇಳಲಾಗಿದೆ.
ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ನೇಮಕ ಮಾಡಲಾಗಿದೆ. ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿ ಮೊಹಮ್ಮದ್ ಸುಜೀತ, ಬೆಂಗಳೂರು ನಗರ ಸಿಎಆರ್ನ ಡಿಸಿಪಿಯಾಗಿ ಅರುಣಾಂಗ್ಷು ಗಿರಿ ಅವರನ್ನು ನೇಮಕ ಮಾಡಲಾಗಿದೆ. ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಯಾಗಿ ಯಶೋಧಾ ವಂಟಗೋಡಿ ಅವರನ್ನು ನೇಮಕ ಮಾಡಲಾಗಿದೆ. ಇನ್ನು, KSRP 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ಡಾ.ಕೋನ ವಂಶಿಕೃಷ್ಣ ಅವರಿಗೆ ವೈರ್ಲೆಸ್ ಎಸ್‌ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಲಾಗಿದೆ.
ಎಸ್‌ಪಿಯಾಗಿ ಬಂದ ಒಂದೇ ವರ್ಷಕ್ಕೆ ವರ್ಗಾವಣೆ
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣಾಂಗ್ಷು ಗಿರಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಕೊಪ್ಪಳಕ್ಕೆ ಎಸ್‌ಪಿಯಾಗಿ ಬಂದು 13 ತಿಂಗಳಲ್ಲೇ ವರ್ಗಾವಣೆ ಮಾಡಲಾಗಿದೆ. ಅರುಣಾಂಗ್ಷು ಗಿರಿ ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ, ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಿದ್ದರು.
ಇದನ್ನೂ ಓದಿ: Viral Video: ಹೇ ಅಲ್ಲಾ, ನಮಗೆ ಮೋದಿಯನ್ನು ಕೊಡು, ಅವರೇ ಈ ದೇಶವನ್ನು ಸರಿ ಮಾಡಲಿ ಎಂದು ಬೇಡಿಕೊಂಡ ಪಾಕಿಸ್ತಾನಿ ಯುವಕ
ಈ ಮೊದಲೇ ಅರುಣಾಂಗ್ಷು ಗಿರಿ ವರ್ಗಾವಣೆಗೊಳ್ಳುತ್ತಾರೆ ಎಂಬ ವದಂತಿ ಹರಿದಾಡಿತ್ತು. ಎಸ್‌ಪಿ ವರ್ಗಾವಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ರಾಜ್ಯ ಸರಕಾರದ ಮೇಲೆ ಒತ್ತಡ ಹಾಕಿದ್ದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪಶ್ಚಿಮ ಬಂಗಾಳದ ಅರುಣಾಂಗ್ಶು ಗಿರಿ ಅವರು 2015ರ ಐಪಿಎಸ್ ಅಧಿಕಾರಿಯಾಗಿದ್ದರು. ಸದ್ಯ ಕೊಪ್ಪಳ ನೂತನ ಎಸ್‌ಪಿ ಆಗಿ ಯಶೋಧಾ ವಂಟಿಗೋಡೆ ಅವರು ನೇಮಕಕೊಂಡಿದ್ದಾರೆ. 2015ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ